Flash News

ಅನಿವಾಸಿ ಕನ್ನಡಿಗರ ‘NRI ಅಪೀಲ್ ಡೇ’ ಅಭಿಯಾನ: ನೀವೂ ಕೈಜೋಡಿಸಿ

ತಮಗಿರುವ ಸಮಸ್ಯೆಗಳ ಬಗ್ಗೆ, ಬಹುಕಾಲದಿಂದ ಈಡೇರದ ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲು 30ಕ್ಕೂ ಹೆಚ್ಚಿನ ದೇಶದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಪ್ರತಿನಿಧಿಸುವ ನೂರಕ್ಕೂ ಹೆಚ್ಚಿನ ಕನ್ನಡ ಪರ ಸಂಘಟನೆಗಳ ಸಹಯೋಗದಲ್ಲಿ ಒಗ್ಗಟ್ಟಾಗಿ ಟ್ವಿಟರ್ ಮತ್ತು ಈಮೇಲ್ ಅಭಿಯಾನ ನಡೆಸಲು ಮುಂದಾಗಿದ್ದು, ಜನವರಿ 2ರಂದು ಮಧ್ಯಾಹ್ನ ಭಾರತೀಯ ಕಾಲಮಾನ ಸಂಜೆ 4ಗಂಟೆಗೆ ಟ್ವಿಟರ್ ಅಭಿಯಾನಕ್ಕೆ ಏಕಕಾಲದಲ್ಲಿ ಚಾಲನೆ ನೀಡಿ ಸರಣಿ ಮನವಿಗಳನ್ನು, ಬೇಡಿಕೆಗಳನ್ನು ಇಡಲಿದ್ದಾರೆ.

ತಮ್ಮ ಕುಟುಂಬದ ಜವಾಬ್ದಾರಿ ಹೊತ್ತು ಉದ್ಯೋಗ ಹರಸಿ ವಿದೇಶಕ್ಕೆ ತೆರಳಿದರೂ ಹುಟ್ಟೂರು ಮತ್ತು ರಾಜ್ಯದ ಆಗುಹೋಗುಗಳ ಬಗ್ಗೆ ಅತಿ ಹೆಚ್ಚು ಕಾಳಜಿ ತೋರಿಸುವವರು ಅನಿವಾಸಿ ಕನ್ನಡಿಗರು, ರಾಜ್ಯದಲ್ಲಿ ನೆರೆ ಬಂದರೂ, ಬರ ಬಂದರೂ, ಯಾವುದೇ ಸಂಕಷ್ಟ ಬಂದೊದಗಿದರೂ ತಕ್ಷಣ ಸಹಾಯಹಸ್ತ ಚಾಚುವವರೇ ಲಕ್ಷಾಂತರ ಅನಿವಾಸಿಗಳು, ಆದರೆ ಆಶ್ಚರ್ಯವೆಂದರೆ ಈ ಅನಿವಾಸಿಗಳ ಬೇಡಿಕೆಗಳಿಗೆ ಸ್ಪಂದಿಸುವವರೇ ಇಲ್ಲ.

ಬಹುಕಾಲದಿಂದ ಅವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಾ ಇದ್ದರೂ ಅಧಿಕಾರಕ್ಕೆ ಬಂದ ಯಾವುದೇ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ, ಕೊರೊನಾ ಸಂಕಷ್ಟ ಸಂದರ್ಭದಲ್ಲಂತೂ ಇವರ ಗೋಳನ್ನು ಕೇಳುವವರೇ ಇರಲಿಲ್ಲ, ಇದೇ ಕಾರಣಕ್ಕೆ ಇದೀಗ ಅನಿವಾಸಿಗಳು ಒಗ್ಗಟ್ಟಾಗಿ ತಮ್ಮ ಬೇಡಿಕೆಗಳ ಮನವಿ ಸಲ್ಲಿಸಲೆಂದೇ ಒಂದು ದಿನವನ್ನು ಆಚರಿಸಲು ನಿರ್ಧರಿಸಿದ್ದು, ಅಭಿಯಾನದ ವಿಶಿಷ್ಟ ರೀತಿಯಲ್ಲಿ ಕರ್ನಾಟಕ ಸರ್ಕಾರದ ಕದತಟ್ಟಿ ಈ ಬಾರಿಯಾದರೂ ತಮ್ಮನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳು, ಮಂತ್ರಿಗಳು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದಾರೆ.

12 ವರ್ಷಗಳ ಹಿಂದೆ ರಾಜ್ಯಸರ್ಕಾರ ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಕ್ಷೇಮಾಭಿವೃದ್ದಿಗಾಗಿ ಸ್ಥಾಪಿತವಾದ ಸಮಿತಿಯೇ ಕನ್ನಡಿಗರ ಅನಿವಾಸಿ ಭಾರತೀಯ ಸಮಿತಿ. ಸಿಎಂರವರ ನೇರ ನಿಯಂತ್ರಣಕ್ಕೆ ಒಳಪಡುವ ಈ ಸಮಿತಿಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಈ ಸಮಿತಿ ಬಂದರೂ ಮುಖ್ಯಮಂತ್ರಿಗಳೇ ಇದರ ಅಧ್ಯಕ್ಷರು, ಮುಖ್ಯಮಂತ್ರಿಗಳಿಗೆ ಸರ್ಕಾರದ ಇತರ ಗಂಭೀರ ಜವಾಬ್ದಾರಿಗಳಿರುವ ಕಾರಣ ಉಪಾಧ್ಯಕ್ಷರಿಗೇ ಈ ಸಮಿತಿಯಗೆ ಬೆನ್ನೆಲುಬು.