ಜಾತಿ ಸಮೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಸಮಸಮಾಜದ ವಿರೋಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಾಗ್ದಾಳಿ ನಡೆಸಿದ್ದಾರೆ. ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಅವರ ಆರೋಪವು ಬಾಲಿಶವಾದುದ್ದು ಎಂದು ಸಿಎಂ ಹೇಳಿದ್ದಾರೆ. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಉದ್ದೇಶವಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಸುದ್ದಿ ಅಕ್ಟೋಬರ್ 6, 2025 ರಂದು 11:04 IST ಕ್ಕೆ ಪ್ರಕಟವಾಗಿದೆ.



