Flash News

ಜೆ.ಪಿ.ಪಾರ್ಕ್‌ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ : ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

ಬೆಂಗಳೂರು, ಅ.12 : “ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ್‌ ಅವರ ಪುತ್ಥಳಿ ಮರು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಉದ್ಯಾನದ ಸೌಂದರ್ಯೀಕರಣ, ಈಜುಕೊಳ, ಯೋಗಶಾಲೆ, ಜಿಮ್ ಹಾಗೂ ಮಕ್ಕಳ ಆಟದ ಮೈದಾನ, ಟಾಯ್ ಟ್ರೈನ್ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದರು. ‘ಬೆಂಗಳೂರು ನಡಿಗೆ’ ಕಾರ್ಯಕ್ರಮದ ಪ್ರಯುಕ್ತ ನಗರದ ಜೆ.ಪಿ ಉದ್ಯಾನದಲ್ಲಿ ಸಾರ್ವಜನಿಕರ ಜೊತೆ ರವಿವಾರ ಹೆಜ್ಜೆ ಹಾಕಿದ ಡಿಸಿಎಂ ಅವರು ಜನರ ಅಹವಾಲುಗಳನ್ನು ಆಲಿಸಿದರು. ಪಾಲಿಕೆ ಆಯುಕ್ತರು ಹಾಗೂ ಜೆ.ಪಿ‌.ಪಾರ್ಕ್ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳಿಂದ ಉದ್ಯಾನದಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. ಟಾಯ್ ಟ್ರೈನ್, ಮಕ್ಕಳ ಆಟಿಕೆಗಳು ಸೇರಿದಂತೆ ಮೂಲಸೌಕರ್ಯಗಳ ಕೊರತೆ ಏಕೆ ಉಂಟಾಗಿದೆ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.