Flash News

ಬೆಂಗಳೂರು: ಅತ್ಯಾಚಾರ ಆರೋಪ ಬೆನ್ನಲ್ಲೇ ಡಿಜೆ ಹಳ್ಳಿ ಇನ್ಸ್​ಪೆಕ್ಟರ್ ಸುನೀಲ್​​ ಅಮಾನತು!

ಬೆಂಗಳೂರು: ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ರನ್ನು ಅಮಾನತು ಮಾಡಲಾಗಿದೆ.

36 ವರ್ಷದ ಮಹಿಳೆಯೊಬ್ಬರು ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ಈ ಸಂಬಂಧ ಡಿಜಿ ಮತ್ತು ಐಜಿಪಿ ಕಚೇರಿಗೂ ದೂರು ನೀಡಿದ್ದರು.

ಹಣದ ಮೋಸದ ವಿಚಾರಕ್ಕೆ ಠಾಣೆಗೆ ಬಂದಿದ್ದ 36 ವರ್ಷದ ಮಹಿಳೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡ ಸುನೀಲ್ ರಿಜಿಸ್ಟರ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ನಂತರ 1 ವರ್ಷದಲ್ಲಿ 3 ಬಾರಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಲ್ಲದೇ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು.