Flash News

ತಿಪಟೂರು | RSS ಪಥಸಂಚಲನದಲ್ಲಿ ಭಾಗಿ: ಯಶಸ್ವಿನಿ ಟ್ರಸ್ಟ್‌ನಿಂದ ಡಾ. ಶ್ರೀಧರ್ ಹೆಸರು ಕೈಬಿಟ್ಟ ಸರ್ಕಾರ

ತಿಪಟೂರು: ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯ ಶ್ರೀಧರ್ ಹೆಸರನ್ನು ಯಶಸ್ವಿನಿ ಟ್ರಸ್ಟ್‌ನಿಂದ ತೆಗೆದುಹಾಕಲಾಗಿದೆ.

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯರಿಗೆ ಸರ್ಕಾರದ ಯಶಸ್ವಿನಿ ಟ್ರಸ್ಟ್‌ ಟ್ರಸ್ಟಿಯಾಗಿ ನೇಮಿಸಲಾಗಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಇದು ಕಾಂಗ್ರೆಸ್‌ ಪಕ್ಷವು ಹೊಂದಿರುವ ಕೋಮುವಾದಿ ವಿರೋಧಿ ಮತ್ತು ಸಾಮರಸ್ಯ ನೀತಿಗೆ ವಿರುದ್ಧವಾಗಿದೆ. ಕ್ಷಣವೇ ಡಾ. ಶ್ರೀಧರ್ ಅವರನ್ನು ಟ್ರಸ್ಟಿಯಾಗಿ ನೇಮಿಸಿ ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಿ.ಬಿ ಶಶಿಧರ್ ಒತ್ತಾಯಿಸಿದ್ದರು.

ತೀವ್ರ ವಿರೋಧಗಳ ಬೆನ್ನಲ್ಲೇ ಯಶಸ್ವಿನಿ ಟ್ರಸ್ಟ್‌ನ ಟ್ರಸ್ಟಿ ಸ್ಥಾನದಿಂದ ವೈದ್ಯ ಶ್ರೀಧರ್ ಹೆಸರನ್ನು ಕೈಬಿಡಲಾಗಿದೆ. ಈ ಸಂಬಂಧ ಸರ್ಕಾರ ಆದೇಶವನ್ನು ಹೊರಡಿಸಿದ್ದು, “ಆಡಳಿತಾತ್ಮಕ ದೃಷ್ಟಿಯಿಂದ ಈ ಹಿಂದಿನ ಆದೇಶವನ್ನು ಮಾರ್ಪಡಿಸಿ, ಡಾ. ಶೀಧರ್ ಅವರ ಹೆಸರನ್ನು ಕೈಬಿಡಲಾಗಿದೆ” ಎಂದು ತಿಳಿಸಿದೆ.