ಮಂಗಳೂರು: ಆರ್ಎಸ್ಎಸ್ ಮುಖಂಡರೊಬ್ಬರ ಭಾಷಣದ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಅನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆಸಲಾಗಿದೆ.
ಇನ್ನು ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ , ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ಹಾಕಿದ್ದ ಆಕ್ಷೇಪಾರ್ಹ ಕಮೆಂಟ್ ಅನ್ನು ಶೇರ್ ಮಾಡಿದ ಕಾರಣಕ್ಕೆ ವಿಎಚ್ಪಿ ಮುಖಂಡ ಶರಣ್ ಶರಣ್ ಪಂಪ್ವೆಲ್ಅನ್ನು ವಿಚಾರಣೆಗೆ ಪೊಲೀಸ್ ಠಾಣೆ ಗೆ ಕರೆಸಲಾಗಿದೆ. ಕದ್ರಿ ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆಸಲಾಗಿದ್ದು, ಶರಣ್ ಪಂಪ್ ವೆಲ್ ಶೇರ್ ಮಾಡಿದ್ದ ಕಮೆಂಟ್ ಈಗಾಗಲೇ ಡಿಲೀಟ್ ಆಗಿದೆ. ವಿಕಾಸ್ ಎಂಬಾತ ಹಾಕಿದ್ದ ಕಮೆಂಟ್ ಅನ್ನು ಶರಣ್ ಪಂಪ್ ವೆಲ್ ಶೇರ್ ಮಾಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದರು.
ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಪೋಸ್ಟ್ ಆಧಾರದ ಮೇಲೆ ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಅವರು ಆ ಪೋಸ್ಟ್ ಅನ್ನು ಅಳಿಸಿ, FIR ಬಗ್ಗೆ ತಿಳಿದ ನಂತರ ಠಾಣೆಗೆ ಬಂದಿದ್ದಾರೆ. ತನಿಖೆಗೆ ಹಾಜರಾಗಲು ಸೋಮವಾರ ಅವರಿಗೆ ನೋಟೀಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.



