ಬೆಂಗಳೂರು: ರಾಜ್ಯದ ಮದರಾಸಗಳಲ್ಲಿ ವಾರದಲ್ಲಿ 2 ದಿನ ಕನ್ನಡ ಕಲಿಕೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
70ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಸಿಎಂ, ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಿಸಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಕೆಲಸ ಮಾಡುತ್ತಿದೆ ಎಂದು ತಿಳಿಸಿದರು
ಮುಂದುವರಿದು.. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಕಲಾವಿದರ ಮಾಸಾಶನ 2,000 ರೂ.ನಿಂದ 2,500 ರೂ.ಗೆ ಹೆಚ್ಚಳ ಮಾಡಿದ್ದೇವೆ. ಕರ್ನಾಟಕದಲ್ಲಿ ತಯಾರಾಗುವ ಮತ್ತು ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯಗೊಳಿಸಿದ್ದೇವೆ. ರಾಜ್ಯದ ಮದರಾಸಗಳಲ್ಲಿ ವಾರದಲ್ಲಿ 2 ದಿನ ಕನ್ನಡ ಕಲಿಕೆ ಆರಂಭಿಸಲಾಗಿದೆ. ಕನ್ನಡ ಭಾಷೆ ಮತ್ತು ಕನ್ನಡಿಗರ ಹಿತವೇ ನಮ್ಮ ಮೊದಲ ಆದ್ಯತೆ ಎಂದು ತಿಳಿಸಿದರು.



