Flash News

ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಫೋಟ: 8 ಸಾವು, ಹಲವರಿಗೆ ಗಾಯ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸ್ಫೋಟ ಸಂಭವಿಸಿದೆ. ಕೆಂಪು ಕೋಟೆ ಚಾಂದಿನಿ ಚೌಕ್ ಬಳಿಯ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟಗೊಂಡಿದೆ. 8 ಮಂದಿ ಸಾವನ್ನಪ್ಪಿದ್ದಾರೆ‌.

ಸ್ಫೋಟದ ರಭಸಕ್ಕೆ ಎರಡು ಕಾರುಗಳು ಭಸ್ಮವಾಗಿದೆ. ಇತರ ಮೂರು ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ದೌಡಾಯಿಸಿದೆ. ಪಾರ್ಕ್ ಮಾಡಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.

ಭಯೋತ್ಪಾದಕರ ಅತೀ ದೊಡ್ಡ ಸಂಚನ್ನು ಪೊಲೀಸರು ವಿಫಲಗೊಳಿಸಿದ ಬೆನ್ನಲ್ಲೇ ಈ ಸ್ಫೋಟ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸ್ಫೋಟದ ಕಾರಣ ಸ್ಪಷ್ಟವಾಗಿಲ್ಲ. ಆದರೆ ದೆಹಲಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಕಾರಿನಲ್ಲಿ ಸ್ಫೋಟಕವಿಟ್ಟು ಬ್ಲಾಸ್ಟ್ ಮಾಡಿರುವ ಅನುಮಾನಗಳು ವ್ಯಕ್ತವಾಗುತ್ತಿದೆ. ಮೇಲ್ನೋಟಕ್ಕೆ ಭಯೋತ್ಪಾದಕರ ಕೃತ್ಯ ಎಂದು ವರದಿಗಳು ಹೇಳುತ್ತಿದೆ. ದೆಹಲಿ ಕಾರು ಸ್ಫೋಟದಲ್ಲಿ ಆರಂಭದಲ್ಲಿ ಓರ್ವ ಮೃತಪಟ್ಟಿರುವುದು ವರದಿಯಾಗಿತ್ತು. ಇದೀಗ ಸಾವಿನ ಸಂಖ್ಯೆ8 ಏರಿಕೆಯಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ. ಪೊಲೀಸರು ಸಂಪೂರ್ಣ ಪ್ರದೇಶ ಸುತ್ತುವರಿದು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳದ ಹಲವು ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.