ಬಜ್ಪೆ: ಸ್ಕೂಟರ್ ನಲ್ಲಿ ತೆರಳುತ್ತಿದ್ದ ಯುವಕನೋರ್ವನಿಗೆ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ಮಾಡಿರುವ ಘಟನೆ ಸೋಮವಾರ ಸಂಜೆ ಇಲ್ಲಿನ ಎಡಪದವು ಎಂಬಲ್ಲಿ ನಡೆದಿದೆ.
ಎಡಪದವು ಪೂಪಾಡಿ ಕಲ್ಲು ನಿವಾಸಿ ಅಖಿಲೇಶ್ ತಲವಾರು ದಾಳಿಗೆ ಒಳಗಾದವರು ಎಂದು ತಿಳಿದು ಬಂದಿದ್ದು, ಇವರ ಬಲಕೈಗೆ ತಲವಾರು ದಾಳಿಯ ಗಂಭೀರ ಗಾಯವಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ.
ಅಖಿಲೇಶ್ ಅವರು ಎಡಪದವು ಕಡೆಯಿಂದ ಮಂಗಳೂರು ಕಡೆಗೆ ತನ್ನ ಆಕ್ಟಿವಾದಲ್ಲಿ ಹೋಗುತ್ತಿದ್ದ ಸಂದರ್ಭ ಎಡಪದವಿನಲ್ಲಿ ಎರಡು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ತಲವಾರಿನಿಂದ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ.
ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ



