Flash News

ದ್ವೇಷ ಭಾಷಣ ತಡೆಗೆ ಹೊಸ ಕಾನೂನು ತನ್ನನ್ನು ಗುರಿಯಾಗಿಸಿಕೊಂಡೇ ಬರುತ್ತಿದೆ ಎಂದ ಯತ್ನಾಳ್

ವಿಜಯಪುರ: ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಚೋದನಕಾರಿ ಭಾಷಣಗಳನ್ನು ನಿಯಂತ್ರಿಸಲು ಹೊಸ ಕಾನೂನನ್ನು ಜಾರಿಗೆ ತರುವ ಸರ್ಕಾರದ ಚಿಂತನೆ ಕುರಿತು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತೀವ್ರವಾಗಿ ವಿರೋಧಿಸಿದ್ದು, ಆ ಕಾಯ್ದೆ ತನ್ನನ್ನು ಗುರಿಯಾಗಿಸಿಕೊಂಡೇ ಬರುತ್ತಿದೆ ಎಂದು ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್ ಅವರು, ಆ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ. ಹಿಂದೂಗಳ ಪರವಾಗಿ ಯಾರು ಮಾತನಾಡುತ್ತಾರೋ ಅವರನ್ನು ಟಾರ್ಗೆಟ್ ಮಾಡಬೇಕು ಅನ್ನೋದು ಅವರ (ಸರ್ಕಾರದ) ಉದ್ದೇಶ. ಅವರು ವಿಜಯೇಂದ್ರ, ಆರ್ ಅಶೋಕ್ ಅವರನ್ನು ಟಾರ್ಗೆಟ್ ಮಾಡುವುದಿಲ್ಲ. ರಾಜ್ಯ ಸರ್ಕಾರಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಅವರದ್ದೇ ಅಂಜಿಕೆ ಇದೆ. ಹೀಗಾಗಿ ನನ್ನನ್ನ ಟಾರ್ಗೆಟ್ ಮಾಡಿ ಈ ಬಿಲ್ ತರಲು ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಆ ಬಿಲ್ ಅನ್ನು ನನಗಾಗಿಯೇ ಜಾರಿಗೆ ತರುತ್ತಿದ್ದಾರೆ. ಹಾಗಾಗಿ ಹೆಚ್‌ಕೆ ಪಾಟೀಲ್ ಅವರಿಗೆ ಧನ್ಯವಾದಗಳು ಎಂದು ವ್ಯಂಗ್ಯವಾಡಿದರು, ನಾನು ಈ ಕಾಯ್ದೆಯನ್ನು ಖಡಾಖಂಡಿತ ವಿರೋಧಿಸುವುದಾಗಿ ಯತ್ನಾಳ್ ಸ್ಪಷ್ಟಪಡಿಸಿದರು. ವಿರೋಧ ಮಾಡದೇ ಸಪೋರ್ಟ್ ಮಾಡಲೇ? ಎಂದು ಪ್ರಶ್ನಿಸಿದರು