ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಮತ್ತೆ ಪ್ರತೀಕಾರದ ಸಂದೇಶಗಳು ಓಡಾಡುತ್ತಿದ್ದು, Target 900, Team Target Boys, Immu Bai ಇನ್ಸ್ಟಾಗ್ರಾಮ್ ಪೇಜ್ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ.
Revange Is Loading , Target Set One By One ಎಂಬ ಸಂದೇಶ ಇರುವ ಪೋಸ್ಟ್ ಮಾಡಲಾಗಿದ್ದು, ಕೈಯಲ್ಲಿ ತಲವಾರು ಮತ್ತು ಪಿಸ್ತೂಲ್ ಹಿಡಿದು ಮುಖ ಮರೆಮಾಚಿ ಮಾಡಿರುವ ರೀಲ್ಸ್ ಕೂಡ ಪೋಸ್ಟ್ ಮಾಡಲಾಗಿದೆ. ಇತ್ತೀಚೆಗೆ ಕೇರಳದಲ್ಲಿ ಹತ್ಯೆಯಾದ ರೌಡಿಶೀಟರ್ ನೌಫಾಲ್ ಸಾವಿಗೂ ಪ್ರತೀಕಾರದ ಎಚ್ಚರಿಕೆ ನೀಡಲಾಗಿದೆ.
ಪ್ರಚೋದನಾಕಾರಿ ಇನ್ಸ್ಟಾಗ್ರಾಮ್ ಪೋಸ್ಟ್ಗಳ ಮೇಲೆ ಮಂಗಳೂರು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಬಗ್ಗೆ ಸುಮೋಟೊ ಕೇಸ್ ದಾಖಲಿಸಿರುವ ಖಾಕಿ, 16 ಇನ್ಸ್ಟಾಗ್ರಾಮ್ ಖಾತೆಗಳ ವಿರುದ್ಧ ಎಫ್ಐಆರ್ ಮಾಡಿದೆ. ಜೊತೆಗೆ ಆಯಕಟ್ಡಿನ ಜಾಗಗಳ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ನಟೋರಿಯಸ್ ಗ್ಯಾಂಗ್ಗಳ ಚಲನವಲನಗಳನ್ನೂ ಗಮನಿಸಲಾಗುತ್ತಿದೆ.



