ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕೆಲಸದ ಅರ್ಧ ಭಾಗ ವಿದೇಶದಲ್ಲೇ ಕಳೆಯುತ್ತಾರೆ ಎಂದು ಬುಧವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸಕ್ಕೆ ಕಿಡಿ ಕಾರಿದ್ದ ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಪ್ರಶ್ನೆಗಳಿಗೆ ಉತ್ತರ ಸಿಗದಾಗ ಬಿಜೆಪಿ ನಾಯಕರು ಇಂತಹ ಆರೋಪಗಳನ್ನು ಮಾಡುತ್ತಾರೆ ಎಂದು ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಮಾತನಾಡಿ, ಚುನಾವಣಾ ಅಕ್ರಮಗಳ ಕುರಿತು ರಾಹುಲ್ ಗಾಂಧಿ ಅವರ ಪ್ರಶ್ನೆಗಳಿಗೆ ಬಿಜೆಪಿ ಮತ್ತು ಪ್ರಧಾನಿ ಮೋದಿ ಬಳಿ ಉತ್ತರವಿಲ್ಲ ಎಂದು ಹೇಳಿದರು. ಆದ್ದರಿಂದಲೇ ಈ ರೀತಿ ದೂಷಿಸುತ್ತಿದ್ದಾರೆ ಎಂದು ಎಂದರು.



