►ಉಮರ್ ಖಾಲಿದ್, ಶರ್ಜಿಲ್ ಇಮಾಮ್’ಗೆ ಜಾಮೀನು ನಿರಾಕರಣೆ
ಹೊಸದಿಲ್ಲಿ: 2020 ದಿಲ್ಲಿ ಗಲಭೆಗೆ ಸಂಬಂಧಿಸಿದ ಪಿತೂರಿ ಪ್ರಕರಣದಲ್ಲಿ ಯುಎಪಿಎಯಡಿ ಬಂಧಿತ ಉಮರ್ ಖಾಲಿದ್, ಶರ್ಜಿಲ್ ಇಮಾಮ್ಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ.
ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ನಿರಾಕರಿಸಿದರೆ ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಮೊಹಮ್ಮದ್ ಸಮೀರ್ ಖಾನ್, ಶಾದಾಬ್ ಅಹ್ಮದ್, ಶಿಫಾ ಉರ್ ರೆಹಮಾನ್ ಸುಪ್ರೀಂಕೋರ್ಟ್ 12 ಷರತ್ತು ವಿಧಿಸಿ ಜಾಮೀನು ನೀಡಿದೆ.
ದಿಲ್ಲಿ ಗಲಭೆಗೆ ಸಂಬಂಧಿಸಿದ ಪಿತೂರಿ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಉಮರ್ ಖಾಲಿದ್, ಶರ್ಜಿಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇವರು ಕಳೆದ ಐದು ವರ್ಷಗಳಿಗಿಂತ ಹೆಚ್ಚು ಕಾಲ ಬಂಧನದಲ್ಲಿದ್ದಾರೆ. ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಈ ಕುರಿತು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಡ ಪೀಠವು, ಉಮರ್ ಖಾಲಿದ್, ಶರ್ಜಿಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿದೆ.
2020 ಫೆ.23 ರಿಂದ ಫೆ.29 ರವರೆಗೆ ನಡೆದ ಗಲಭೆಯಲ್ಲಿ 53 ಮಂದಿ ಮೃತಪಟ್ಟಿದ್ದರು. ಈ ಗಲಭೆಗೆ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ ಪ್ರಚೋದನೆ ನೀಡಿದ್ದೇ ಕಾರಣ ಎಂದು ದೆಹಲಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿದ್ದರು.



