ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರ ಸಂಕೀರ್ಣದ ಭದ್ರತಾ ವ್ಯವಸ್ಥೆಗಳನ್ನು ಉಲ್ಲಂಘಿಸಿ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿದ್ದಾಗ ಇಬ್ಬರು ವ್ಯಕ್ತಿಗಳು ಹಾಗೂ ಒಬ್ಬ ಯುವತಿಯನ್ನು ಭದ್ರತಾ ಪಡೆಗಳು ಬಂಧಿಸಿರುವ ಘಟನೆ ನಡೆದಿದೆ.
ಮೂಲಗಳ ಪ್ರಕಾರ, ಒಬ್ಬ ಯುವಕ ರಾಮ ಮಂದಿರ ಸಂಕೀರ್ಣದ ದಕ್ಷಿಣದ ಗೋಡೆಯ ಪ್ರದೇಶದಲ್ಲಿ ನಮಾಜ್ ಮಾಡಲು ಯತ್ನಿಸಿದ್ದ. ಕಾಶ್ಮೀರಿ ಮೂಲದ ಯುವಕ ಎಂದು ಗುರುತಿಸಲಾಗಿದೆ.
ಪ್ರತ್ಯಕ್ಷದರ್ಶಿಗಳು ಮತ್ತು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಲಾಗಿದ್ದು, ಭದ್ರತಾ ಸಿಬ್ಬಂದಿ ಯುವಕನನ್ನು ತಡೆದಾಗ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದ್ದ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲಿಯೇ ಸ್ಥಳದಲ್ಲಿದ್ದ ಭದ್ರತಾ ಪಡೆಗಳು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಗುಪ್ತಚರ ಸಂಸ್ಥೆಗಳು, ಸ್ಥಳೀಯ ಪೊಲೀಸರು ಮತ್ತು ಹಿರಿಯ ಆಡಳಿತ ಅಧಿಕಾರಿಗಳು ಕಾರ್ಯಪ್ರವೃತ್ತರಾದರು. ಯುವಕನನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಅವನ ಉದ್ದೇಶಗಳು ಮತ್ತು ಹಿನ್ನೆಲೆಯನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ.
ಶನಿವಾರ ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೆ, ಜಿಲ್ಲಾಡಳಿತ ಈ ವಿಷಯದ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ. ರಾಮ ಮಂದಿರ ಟ್ರಸ್ಟ್ ಕೂಡ ಇಡೀ ಘಟನೆಯ ಬಗ್ಗೆ ಮೌನ ವಹಿಸಿದೆ. ಈ ವಿಷಯದ ಸೂಕ್ಷ್ಮತೆಯ ದೃಷ್ಟಿಯಿಂದ, ಯಾವುದೇ ರೀತಿಯ ವದಂತಿ ಅಥವಾ ಕಾನೂನು ಸುವ್ಯವಸ್ಥೆ ಉಂಟಾಗದಂತೆ ಭದ್ರತಾ ಸಂಸ್ಥೆಗಳು ಪ್ರತಿಯೊಂದು ಅಂಶವನ್ನೂ ತನಿಖೆ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ.



