Flash News

ವಲಸೆ ಕಾರ್ಮಿಕರ ಮನೆಗಳಿಗೆ ಅಕ್ರಮ ಪ್ರವೇಶ: ಪುನೀತ್ ಕೆರೆಹಳ್ಳಿ ಬಂಧನ

ಬೆಂಗಳೂರು: ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳಿಗೆ ಬೇಡಿಕೆ ಇಟ್ಟು, ಬೆದರಿಕೆ ಹಾಗೂ ಭೀತಿಯನ್ನುಂಟುಮಾಡುತ್ತಿರುವʼ ಗಂಭೀರ ಆರೋಪದ ಮೇಲೆ ಕೊಲೆ‌ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ‘ದ್ವೇಷದ ಮಾತಿನ ವಿರುದ್ದ ಜನಾಂದೋಲನ/ Campaign Against Hate Speech’ ವತಿಯಿಂದ email ಮೂಲಕ ಮನವಿ ಸಲ್ಲಿಸಲಾಗಿತ್ತು.

ʼಸ್ವತಃ ಆತನೇ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ ವೀಡಿಯೊಗಳಲ್ಲಿ, “ಬಾಂಗ್ಲಾದೇಶಿಗಳು” ಎಂದು ಮುಸ್ಲಿಂ ವಲಸೆ ಕಾರ್ಮಿಕರನ್ನು ಗುರುತಿಸಿ, ರಾತ್ರಿ ಸಮಯದಲ್ಲಿ ಘೋಷಣೆ ಕೂಗಿ, ಧರ್ಮಾಧಾರಿತ ದ್ವೇಷ ಮತ್ತು ಸಮಾಜದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿರುವುದು ದಾಖಲಾಗಿದೆ. ಈತನ ಈ ವರ್ತನೆಯಿಂದ ಕಾರ್ಮಿಕರ ಗೌರವ, ಗೌಪ್ಯತೆ ಮತ್ತು ಜೀವಸುರಕ್ಷೆಗೆ ಗಂಭೀರ ಅಪಾಯವನ್ನುಂಟುಮಾಡುತ್ತದೆʼ ಎಂದು ದೂರಿನಲ್ಲಿ ತಿಳಿಸಲಾಗಿತ್ತು.