Flash News

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ದುರ್ಮರಣ

ಪುಣೆ: ಬಾರಾಮತಿಯಲ್ಲಿ ಡಿಸಿಎಂ ಅಜಿತ್ ಪವಾರ್ ಅವರ ಚಾರ್ಟೆಡ್​ ವಿಮಾನ ಲ್ಯಾಂಡಿಂಗ್​ ವೇಳೆ ಅಪಘಾತಕ್ಕೀಡಾಗಿದೆ.

ವಿಮಾನದಲ್ಲಿದ್ದ ಡಿಸಿಎಂ ಅಜಿತ್ ಪವಾರ್ ಸೇರಿದಂತೆ 6 ಜನರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ ಈ ದುರಂತ ಸಂಭವಿಸಿದೆ.

ಅಜಿತ್​ ಪವಾರ್ ಅವರೊಂದಿಗೆ​ ಅವರ ಭದ್ರತಾ ಸಿಬ್ಬಂದಿ ವಿಮಾನದಲ್ಲಿ ಇದ್ದರು ಎಂದು ಮೂಲಗಳು ದೃಢಪಡಿಸಿವೆ.

ಬಾರಾಮತಿಯಲ್ಲಿ ಇಂದು ನಿಗದಿಯಾಗಿದ್ದ ರ್ಯಾಲಿಯಲ್ಲಿ ಉಪಮುಖ್ಯಮಂತ್ರಿ ಅಜಿತ್​ ಪವಾರ್​ ಪಾಲ್ಗೊಳ್ಳಬೇಕಿತ್ತು. ಅಷ್ಟರಲ್ಲಿ ಈ ಭೀಕರ ಅವಘಡ ಸಂಭವಿಸಿದೆ.