Flash News

ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಯುಪಿಐ, ಐಎಂಪಿಎಸ್ ಡಿಜಿಟಲ್ ಬ್ಯಾಂಕಿಂಗ್ ವಿಸ್ತರಿತ ಸೌಲಭ್ಯಕ್ಕೆ ಚಾಲನೆ

ಮಂಗಳೂರು: ಬ್ಯಾಂಕಿಂಗ್ ಸೇವೆ ಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತಮ್ಮ ಗ್ರಾಹಕರಿಗೆ ಪ್ರಸ್ತುತ ಅವಶ್ಯಕತೆಗೆ ಅನುಗುಣ ವಾಗಿ ಡಿಜಿಟಲ್ ಬ್ಯಾಂಕಿಂಗ್ ಅನ್ನು ಕೂಡಾ ಅಳವಡಿಸಿಕೊಂಡಿದೆ ಎಂದು ಎಸ್ ಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.

ನಮ್ಮ ಬ್ಯಾಂಕಿನ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳಾದ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ಗಳಿಗೆ ಅಧಿಕೃತ ಚಾಲನಾ ಕಾರ್ಯಕ್ರಮ ಫೆಬ್ರವರಿ 17, ಮಂಗಳ ವಾರದಂದು ಮಧ್ಯಾಹ್ನ 12 ಗಂಟೆಗೆ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ ಎಂದವರು ತಿಳಿಸಿದ್ದಾರೆ.

ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ನಮ್ಮ ಬ್ಯಾಂಕ್ 16 ಸೆಪ್ಟೆಂಬರ್ 2025 ರಿಂದ ಐಎಂಪಿಎಸ್ (IMPS – Immediate Payment Service) ಸೇವೆಯನ್ನು ಆರಂಭಿಸಿದೆ.ಬ್ಯಾಂಕ್ ಈಗಾಗಲೇ ಕೋರ್ ಬ್ಯಾಂಕಿಂಗ್ ಸೇವೆಯೊಂದಿಗೆ ಆರ್ ಟಿಜಿಎಸ್ / ನೆಫ್ಟ್, ಸಿಟಿಎಸ್, ಎಸ್‌ಎಂಎಸ್, ಎಟಿಎಂ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್ (POS) ಸೌಲಭ್ಯ ಸೇರಿದಂತೆ ಹಲವಾರು ಡಿಜಿಟಲ್ ಸೇವೆಗಳನ್ನು ಯಶಸ್ವಿ ಯಾಗಿ ನೀಡುತ್ತಿದೆ. ಬ್ಯಾಂಕಿಂಗ್ ಕ್ಷೇತ್ರ ಇತ್ತೀಚಿನ ವರ್ಷಗಳಲ್ಲಿ ಪ್ರಮುಖ ಪರಿವರ್ತನೆಗೆ ಒಳಗಾಗಿದೆ, ಡಿಜಿಟಲ್ ಸೇವೆಗಳು ಸಾಂಪ್ರದಾಯಿಕ ಮಾದರಿಯನ್ನು ಬದಲಾಯಿಸಿವೆ. ಇಂದು, ಹೆಚ್ಚಿನ ಗ್ರಾಹಕರು ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ಅಪ್ಲಿಕೇಶನ್‌ಗಳು ಮತ್ತು ತ್ವರಿತ ಪಾವತಿ ವ್ಯವಸ್ಥೆಗಳ ಮೂಲಕ ತಮ್ಮ ಖಾತೆಗಳಿಗೆ ಸುಗಮ ಪ್ರವೇಶವನ್ನು ನಿರೀಕ್ಷಿಸುತ್ತಾರೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತಮ್ಮ ಗ್ರಾಹಕರಿಗೆ ಪ್ರಸ್ತುತ ಅವಶ್ಯಕತೆಗೆ ಅನುಗುಣವಾಗಿ ಡಿಜಿಟಲ್ ಬ್ಯಾಂಕಿಂಗ್ ಅನ್ನು ಕೂಡಾ ಅಳವಡಿಸಿ ಕೊಂಡಿದೆ. ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ನಮ್ಮ ಬ್ಯಾಂಕ್ 16 ಸೆಪ್ಟೆಂಬರ್ 2025 ರಿಂದ ಐಎಂಪಿಎಸ್ (IMPS – Immediate Payment Service) ಸೇವೆಯನ್ನು ಆರಂಭಿಸಿದೆ. ಈ ಸೇವೆಯ ಮೂಲಕ ನಮ್ಮ ಬ್ಯಾಂಕಿನ ಮೊಬೈಲ್ ಅಪ್ಲಿಕೇಶನ್ ಬಳಸಿ ಗ್ರಾಹಕರು ಕ್ಷಣಾರ್ಧದಲ್ಲಿ ಹಣ ವರ್ಗಾವಣೆ ಮಾಡುವ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಐಎಂಪಿಎಸ್ ಎಂಬುದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಅಭಿವೃದ್ಧಿ ಪಡಿಸಿದ ತ್ವರಿತ ಹಣ ವರ್ಗಾವಣೆ ವ್ಯವಸ್ಥೆಯಾಗಿದ್ದು, ಇದು 24×7, ವಾರಾಂತ್ಯ ಮತ್ತು ಸಾರ್ವಜನಿಕ ರಜೆದಿನಗಳಲ್ಲಿಯೂ ಕಾರ್ಯನಿರ್ವಹಿಸುತ್ತದೆ. ಪರ್ಸ್ ನ್ ಟು ಅಕೌಂಟ್ (person to Account) ಮೂಲಕ ಖಾತೆ ಸಂಖ್ಯೆ ಮತ್ತು( IFSC )ಐಎಫ್ ಎಸ್ ಸಿ ಬಳಸಿ ಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬಹುದು.

ಈಗ ಡಿಜಿಟಲ್ ಭಾರತ ಪರಿಕಲ್ಪನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಮ್ಮ ಬ್ಯಾಂಕ್ ಅತ್ಯಂತ ಮಹತ್ವದ ಹೆಜ್ಜೆಯನ್ನು ಇಟ್ಟಿದ್ದು, ಯುಪಿಐ (UPI Unified Payment Interface) ಸೇವೆಯನ್ನು 21ನೇ ಜನವರಿ -2026ರಂದು ಪ್ರಾರಂಭಿಸಿರುವುದು ನಮಗೆ ಅಪಾರ ಸಂತೋಷದ ವಿಷಯ ವಾಗಿದೆ. ಯುಪಿಐ ಸೇವೆಯ ಮೂಲಕ ನಮ್ಮ ಗ್ರಾಹಕರು ಸುಲಭವಾಗಿ ಹಾಗೂ ಸುರಕ್ಷಿತ ವಾಗಿ ಹಣ ವರ್ಗಾವಣೆ ಮಾಡಬಹುದು. ಗ್ರಾಹಕರು ಗೂಗಲ್ ಪೇ (Googl Pay), ಫೋನ್ ಪೇ (Phone Pay). ಭೀಮ್ (BHIM), ವಾಟ್ಸ್ಆಪ್ ಪೇ (WhatsApp Pay), ಪೇಟಿಎಂ (Paytm), ಫ್ರೀಚಾರ್ಜ್ (Freecharge) (Super Money) ಸುಲಭವಾಗಿ ವ್ಯವಹಾರಗಳನ್ನು ನಡೆಸಬಹುದು.ಈ ಸೇವೆಯ ಮೂಲಕ ಗ್ರಾಹಕರು ಬ್ಯಾಂಕ್‌ಗೆ ಭೇಟಿ ನೀಡುವ ಅವಶ್ಯಕತೆ ಇಲ್ಲದೆ. ಮನೆಯಲ್ಲಿಯೇ ಅಥವಾ ಎಲ್ಲಿಂದ ಬೇಕಾದರೂ 24×7 ಸಮಯದಲ್ಲಿ ಹಣ ವರ್ಗಾವಣೆ ಮಾಡಬಹುದು. ಇದು ವೇಗವಾದ, ಸುರಕ್ಷಿತ ಹಾಗೂ ಸುಲಭವಾದ ಡಿಜಿಟಲ್ ಪಾವತಿ ವಿಧಾನವಾಗಿದೆ.

*ಯುಪಿಐ ಮೂಲಕ ಗ್ರಾಹಕರು ತಕ್ಷಣ ಹಣ ಕಳುಹಿಸಬಹುದು ಹಾಗೂ ಸ್ವೀಕರಿಸಬಹುದು

*ಹಣ ಸ್ವೀಕರಿಸುವವರ ಯುಪಿಐ ಐಡಿಗೆ ನೇರವಾಗಿ ಹಣ ಕಳುಹಿಸಬಹುದು

* ಕ್ಯೂಆರ್ (QR) ಕೋಡ್ ಸ್ಕ್ಯಾನ್ ಮಾಡಿ ಪಾವತಿ ಮಾಡಬಹುದು

* ಆನ್‌ಲೈನ್ ಖರೀದಿ ಹಾಗೂ ಬಿಲ್ ಪಾವತಿ ಮಾಡಬಹುದು.ದೇಶದ ಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಬಹುದು

+ ಈ ಎಲ್ಲಾ, ವ್ಯವಹಾರಗಳು ಯುಪಿಐ ಪಿನ್ ಮತ್ತು ಎರಡು ಹಂತದ ಭದ್ರತಾ ವ್ಯವಸ್ಥೆಯಿಂದ ಸುರಕ್ಷಿತವಾಗಿರುತ್ತವೆ.

ಯುಪಿಐ ಸೇವೆಯಿಂದ ಸಣ್ಣ ವ್ಯಾಪಾರಿಗಳು, ರೈತರು, ಅಂಗಡಿ ಮಾಲಿಕರು, ವಿದ್ಯಾರ್ಥಿಗಳು, ಉದ್ಯೋಗಿಗಳು ಎಲ್ಲರೂ ಪ್ರಯೋಜನ ಪಡೆಯಬಹುದು.ಒಬ್ಬ ಚಿಲ್ಲರೆ ವ್ಯಾಪಾರಿಯೂ ಈಗ QR ಕೋಡ್ ಮೂಲಕ ಡಿಜಿಟಲ್ ಪಾವತಿ ಸ್ವೀಕರಿಸಬಹುದು. ಇದು ನಮ್ಮ ಬ್ಯಾಂಕಿನ ಆರ್ಥಿಕತೆಯನ್ನು ಇನ್ನಷ್ಟು ಬಲಪಡಿಸುತ್ತದೆ. ಇದು ದಿನನಿತ್ಯದ ಸಣ್ಣ ಮೊತ್ತದ ಪಾವತಿಗಳಿಗೆ, ಇ-ಕಾಮರ್ಸ್ ವ್ಯವಹಾರಗಳಿಗೆ ಹಾಗೂ ವ್ಯಕ್ತಿಯಿಂದ ವ್ಯಕ್ತಿಗೆ ಹಣ ವರ್ಗಾವಣೆ ಮಾಡಲು ಅತ್ಯಂತ ಅನುಕೂಲಕರವಾಗಿದೆ.

ನಮ್ಮ ಬ್ಯಾಂಕ್ ಸದಾ ಗ್ರಾಹಕರಿಗೆ ಅತ್ಯುತ್ತಮ ಹಾಗೂ ಆಧುನಿಕ ಸೇವೆಗಳನ್ನು ಒದಗಿಸಲು ಬದ್ಧವಾಗಿದೆ. ಯುಪಿಐ ಸೇವೆಯಿಂದ ನಮ್ಮ ಗ್ರಾಹಕರಿಗೆ ಮತಷ್ಟು ಸುಲಭ ಮತ್ತು ವೇಗವಾದ ಬ್ಯಾಂಕಿಂಗ್ ಅನುಭವ ಸಿಗಲಿದೆ ಎಂಬ ವಿಶ್ವಾಸ ನಮಗಿದೆ ಎಂದು ಡಾ ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್ , ಶಶಿಕುಮಾರ್ ರೈ ಬಾಲ್ಯೊಟ್ಟು , ಎಸ್.ಬಿ.ಜಯರಾಮ್ ರೈ , ಸದಾಶಿವ ಉಳ್ಳಾಲ್, ಜೈರಾಜ್ ಬಿ.ರೈ, ಮೋನಪ್ಪ ಶೆಟ್ಟಿ ಎಕ್ಕಾರು,ಸಹಕಾರ ಸಂಘಗಳ ಉಪ ನಿಬಂಧಕರಾದ ರಮೇಶ್ ಎಚ್.ಎನ್, ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.