ನವದೆಹಲಿ: ಇರಾನ್ ಮೇಲಿನ ಇಸ್ರೇಲ್ ಹಾಗೂ ಅಮೆರಿಕ ಜಂಟಿ ಸೇನಾ ದಾಳಿಯಲ್ಲಿ ಹತ್ಯೆಯಾದ ಇರಾನ್ನ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ಸಂತಾಪ ವ್ಯಕ್ತಪಡಿಸಿದೆ. ಇಂದು ನವದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಯಲ್ಲಿ, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿಯವರು ಸಂತಾಪ ಪುಸ್ತಕಕ್ಕೆ ಸಹಿ ಹಾಕಿದ್ದಾರೆ.
ಇರಾನ್ ರಾಯಭಾರ ಕಚೇರಿಯಲ್ಲಿ ತೆರೆಯಲಾಗಿದ್ದ ಸಂತಾಪ ಪುಸ್ತಕಕ್ಕೆ ಸಹಿ ಹಾಕಿದ ಮಿಶ್ರಿ, ಖಾಮಿನೈ ಅವರ ನಿಧನದ ಹಿನ್ನೆಲೆಯಲ್ಲಿ ಇರಾನ್ ಸರ್ಕಾರ ಮತ್ತು ಜನತೆಗೆ ಭಾರತದ ಪರವಾಗಿ ಸಂತಾಪ ಸೂಚಿಸಿದರು


