ಫರಂಗಿಪೇಟೆ : ಬೃಹತ್ ಗಾತ್ರದ ಮರ ರಸ್ತೆ ಮೇಲೆ ಉರುಳಿ ಬಿದ್ದ ಪರಿಣಾಮ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡ ಘಟನೆ ಇಂದು ಬೆಳಗ್ಗೆ ರಾಷ್ಟೀಯ ಹೆದ್ದಾರಿ 77ರ ಮಾರಿಪಳ್ಳದಲ್ಲಿ ನಡೆದಿದೆ.
ಮರ ರಸ್ತೆಗೆ ಅಡ್ಡವಾಗಿ ಬಿದ್ದಿದ್ದರಿಂದ ಒಂದು ದಿಕ್ಕಿನ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಯಿತು. ವಿಷಯ ತಿಳಿದ ತಕ್ಷಣ SKSSF ಕಾರ್ಯಕರ್ತ ಇಮ್ರಾನ್ ಮಾರಿಪಳ್ಳ ಸ್ಥಳೀಯ ಯುವಕರನ್ನು ಒಗ್ಗೂಡಿಸಿ ಮರವನ್ನು ತೆರವುಗೊಳಿಸಿ ರಸ್ತೆ ಸಂಚಾರವನ್ನು ಪುನಃ ಸುಗಮಗೊಳಿಸಿದರು.
ಸಾರ್ವಜನಿಕರ ಸಮಯೋಚಿತ ಕಾರ್ಯದಿಂದ ಹೆಚ್ಚಿನ ಅನಾಹುತ ತಪ್ಪಿದ್ದು, ಅವರ ಸೇವಾಭಾವಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮರ ಉರುಳಲು ಮಳೆ ಹಾಗೂ ಬಿರುಗಾಳಿಯೇ ಕಾರಣ ಎನ್ನಲಾಗಿದೆ.


