ಬೆಳ್ತಂಗಡಿ: 2015ರಲ್ಲಿ ಬೆಳ್ತಂಗಡಿ ತಾಲೂಕು ಕಚೇರಿ ಬಳಿ ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ ( ಪಿಎಫ್‌ಐ) ಎಂಬ ಸಂಘಟನೆಯ ವತಿಯಿಂದ ನಡೆಯುತ್ತಿದ್ದ ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಭಾಷಣ ಮಾಡಿದ ಹಿನ್ನೆಲೆಯಲ್ಲಿ ರಿಯಾಝ್ ಫರಂಗಿಪೇಟೆ ವಿರುದ್ಧ ಆರೋಪ ಸಾಬೀತಾಗಿದೆ. ಆದರೆ ಅದೇ ಪ್ರಕರಣಕ್ಕೆ ಇಂದು ಜಾಮೀನು ಆಗಿದೆ ಎಂದು ವರದಿಯಾಗಿದೆ.
ರಿಯಾಝ್ ಫರಂಗಿಪೇಟೆಗೆ ಕಲಂ : 153(A) ಅಡಿಯಲ್ಲಿ 6 ತಿಂಗಳ ಸಾದಾ ಕಾರಾಗೃಹ ವಾಸ ಮತ್ತು 10,000 ರೂ. ದಂಡ ವಿಧಿಸಿ ನ್ಯಾಯಾಲಯ ಅದೇಶ ನೀಡಿತ್ತು.
ಜುಲೈ 23, 2015 ರಂದು ಬೆಳ್ತಂಗಡಿ ತಾಲೂಕು ಕಚೇರಿ ಬಳಿ, ಪಿಎಫ್‌ಐ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ, ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಹಿನ್ನೆಲೆ ರಿಯಾಜ್ ಫರಂಗಿಪೇಟೆ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


