Flash News

ಬಂಟ್ವಾಳ | ಪಿಕಪ್‌–ಸ್ಕೂಟರ್ ನಡುವೆ ಭೀಕರ ಅಪಘಾತ ; ಇಬ್ಬರು ಸಾವು

ಬಂಟ್ವಾಳ: ಮೆಲ್ಕಾರ್–ಮುಡಿಪು ರಾಜ್ಯ ಹೆದ್ದಾರಿಯ ಬೋಳಿಯಾರ್ ಪೆಟ್ರೋಲ್ ಬಂಕ್ ಬಳಿ ಪಿಕಪ್ ವಾಹನ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಹೀಂದ್ರಾ ಪಿಕಪ್ ವಾಹನವು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ್ದು, ಕಂಬ ಮುರಿದು ಬಿದ್ದಿದೆ. ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ ಎಂದು ವರದಿಯಾಗಿದೆ.
ಮೃತರನ್ನು ಮೊಹಮ್ಮದ್ ಅಶ್ಶಾಕ್ ಮತ್ತು ಜುನೈದ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಮಂಜನಾಡಿ ಮೂಲದವರು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.