ಉಳ್ಳಾಲ ಮಸೀದಿ ಸ್ಫೋಟಿಸುತ್ತೇನೆಂದು ಎಂದು ಕಮೆಂಟ್: ಆರೋಪಿಯನ್ನು ಹೆಡೆಮುರಿ ಕಟ್ಟಿದ ಪೊಲೀಸರು

ಮಂಗಳೂರು: ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್‌ನಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಾಕಾರಿ ಕಾಮೆಂಟ್ ಮಾಡಿದ್ದ ಭಟ್ಕಳ ಮೂಲದ ವ್ಯಕ್ತಿಯನ್ನು ಮಂಗಳೂರು ನಗರದ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಜಾಲಿ ನಿವಾಸಿ ಶಂಕರ್ ಮಸ್ತಪ್ಪ ಮೊಗೇರ್ (35) ಎಂದು ಗುರುತಿಸಲಾಗಿದೆ. ಮಾರ್ಚ್ 2ರಂದು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಒಂದಕ್ಕೆ ಕಾಮೆಂಟ್ ಮಾಡಿದ್ದ ಆರೋಪಿಯು, “Support madi bro ullal masjid hatra bomb blast madtini” (ಬೆಂಬಲ ನೀಡಿ ಬ್ರೋ, […]
ಯುದ್ಧದ ನಡುವೆಯೇ ಇರಾನ್‌ನಲ್ಲಿ ರಣಭೀಕರ ಭೂಕಂಪ

ಟೆಹರಾನ್: ಇಸ್ರೇಲ್ ಮತ್ತು ಅಮೆರಿಕ ದಾಳಿ ತೀವ್ರಗೊಂಡಿರುವ ಹೊತ್ತಿನಲ್ಲೇ ದಕ್ಷಿಣ ಇರಾನ್ ನ ಗೆರಾಶ್ ಪ್ರಾಂತ್ಯದಲ್ಲಿ 4.3 ತೀವ್ರತೆಯ ಭೂಕಂಪನ ಸಂಭವಿಸಿದೆ. ಆದರೆ, ಈ ಭೂಕಂಪನದಲ್ಲಿ ಯಾವುದೇ ಗಮನಾರ್ಹ ಹಾನಿ ಅಥವಾ ಸಾವು ನೋವು ಆದ ಬಗ್ಗೆ ತಕ್ಷಣದಲ್ಲಿ ಯಾವುದೇ ವರದಿಯಾಗಿಲ್ಲ. ಇರಾನಿನ ಸೇನಾ ನೆಲೆಗಳ ಮೇಲೆ ವಾಯು ದಾಳಿಗಳು ತೀವ್ರಗೊಂಡಿರುವ ವೇಳೆಯೇ ಈ ಭೂಕಂಪನ ಸಂಭವಿಸಿದೆ. ಈಗಾಗಲೇ ಉದ್ವಿಗ್ನಗೊಂಡಿರುವ ಪ್ರಾದೇಶಿಕ ಯುದ್ಧಗಳಿಗೆ ಈ ಕಂಪನವು ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಭೂಕಂಪದಿಂದ ಉಂಟಾದ ನಷ್ಟ, ಸಾವು-ನೋವುಗಳ ಬಗ್ಗೆ […]
ಖಮೇನಿ ಇದ್ದ ನಿಖರವಾದ ಸ್ಥಳ, ಅಮೆರಿಕ ಹಾಗೂ ಇಸ್ರೇಲ್‌ಗೆ ತಿಳಿಸಿದ್ದು ಯಾರು?

ಟೆಹ್ರಾನ್: ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಸಮರ ಸಾರುತ್ತಿವೆ. ಕಳೆದ ಮೂರು ದಿನಗಳಿಂದ ದಾಳಿ, ಪ್ರತಿದಾಳಿಗಳು ನಡೆಯುತ್ತಿವೆ. ಅಮೆರಿಕ ಹಾಗೂ ಇಸ್ರೇಲ್ ಸೇನೆಯು ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲ ಅಲಿ ಖಮೇನಿಯನ್ನು ಹತ್ಯೆ ಮಾಡಿದೆ. ಹಾಗಾದರೆ ಖಮೇನಿ ಇದ್ದ ಜಾಗ ಅಮೆರಿಕ ಹಾಗೂ ಇಸ್ರೇಲ್ ಪಡೆಗಳಿಗೆ ಅಷ್ಟು ನಿಖರವಾಗಿ ಹೇಗೆ ತಿಳಿಯಿತು ಎನ್ನುವುದಕ್ಕೆ ಉತ್ತರ ಇಲ್ಲಿದೆ. ಇಸ್ರೇಲ್ ಸುಪ್ರೀಂ ನಾಯಕ ಅಲಿ ಖಮೇನಿ ಮತ್ತು ಅವರ ಭದ್ರತಾ ಸಿಬ್ಬಂದಿಯ ಚಲನವಲನಗಳನ್ನು ಮೇಲ್ವಿಚಾರಣೆ ಮಾಡಲು ಇರಾನ್‌ನ […]
ಜೀವ ಉಳಿಸಿಕೊಳ್ಳಬೇಕಾದರೆ ನಿಮ್ಮ ದೇಶಕ್ಕೆ ಹಿಂತಿರುಗಿ: ರಿಯಾದ್ ಮೇಲೆ ಇರಾನ್ ಭೀಕರ ದಾಳಿ, ಬೆಚ್ಚಿಬಿದ್ದ ಅಮೆರಿಕಾ

ಇಸ್ರೇಲ್ ಮತ್ತು ಅಮೆರಿಕ ದಾಳಿಗಳನ್ನು ನಡೆಸುತ್ತಿದ್ದರೆ, ಅದರ ಬೆನ್ನಲ್ಲೇ ಇರಾನ್ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಅಟ್ಯಾಕ್ ಮಾಡುತ್ತಿದೆ. ಈಗ, ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿ ಇರಾನ್ ಕೋಲಾಹಲ ಸೃಷ್ಟಿಸಿದೆ. ಅಮೆರಿಕವನ್ನು ಬೆಚ್ಚಿಬೀಳಿಸುತ್ತಾ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಮೇಲೆ ಇರಾನ್ ದಾಳಿ ನಡೆಸಿದೆ. ತನ್ನ ನಾಗರಿಕರು ಅಮೆರಿಕಕ್ಕೆ ಹಿಂತಿರುಗುವಂತೆ ಅದು ತಕ್ಷಣವೇ ಸಲಹೆ ನೀಡಿದೆ. ಏತನ್ಮಧ್ಯೆ, ಇರಾನ್ ಯುದ್ಧದಲ್ಲಿ ಕೊಲ್ಲಲ್ಪಟ್ಟ ಅಮೆರಿಕ ಸೈನಿಕರ ಸಂಖ್ಯೆಯೂ ಹೆಚ್ಚಾಗಿದೆ. ತನ್ನ ಆರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕವೇ ಒಪ್ಪಿಕೊಂಡಿದೆ. […]
ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆಯನ್ನು ಭಾರತ ಖಂಡಿಸಿಲ್ಲ ಯಾಕೆ?

ಭಾರತದ ಮುಸ್ಲಿಮರ ಪರ ಧ್ವನಿ ಎತ್ತಿದ್ದ ಖಮೇನಿ, ಇರಾನ್‌ಗೆ ಮುಳುವಾಯಿತಾ? ನವದೆಹಲಿ: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ ಮಾಡಿದ್ದಕ್ಕೆ ಇಸ್ರೇಲ್, ಅಮೆರಿಕವನ್ನು ಭಾರತ ಯಾಕೆ ಇನ್ನೂ ಖಂಡಿಸಿಲ್ಲ ಎಂಬ ಪ್ರಶ್ನೆ ಈಗ ದೊಡ್ಡ ಚರ್ಚೆಯ ವಿಚಾರ. ಹಾಗೆ ನೋಡಿದರೆ ಭಾರತ ಮತ್ತು ಇರಾನ್ ಸಂಬಂಧ ಚೆನ್ನಾಗಿಯೇ ಇದೆ. ಈ ಹಿಂದೆ ಅಮೆರಿಕ ಇರಾನ್ ಮೇಲೆ ಹಲವು ಆರ್ಥಿಕ ನಿರ್ಬಂಧ ಹೇರಿದ್ದರೂ ಭಾರತ ಇರಾನ್‌ನಿಂದ ಕಚ್ಚಾ ತೈಲವನ್ನು ಖರೀದಿಸುತ್ತಿತ್ತು. ಇರಾನಿನ ಚಾಬಹಾರ್ ಬಂದರನ್ನು 10 ವರ್ಷ […]
ನೆತನ್ಯಾಹು ಹತ್ಯೆ? ಶಕ್ತಿಶಾಲಿ ಖೈಬರ್ ಕ್ಷಿಪಣಿ ಮೂಲಕ ಇಸ್ರೇಲ್ ಪ್ರಧಾನಿ ಕಚೇರಿ ಸರ್ವನಾಶ: ಇರಾನ್ ಹೇಳಿಕೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡಿರುವುದಕ್ಕೆ ಇರಾನ್ ಆಕ್ರೋಶಗೊಂಡಿದೆ. ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇರಾನ್ ಇಸ್ರೇಲ್ ಪ್ರಧಾನಿ ಕಚೇರಿಯನ್ನೇ ಗುರಿಯಾಗಿಸಿಕೊಂಡಿದೆ. ಇರಾನ್ ತನ್ನ ಬತ್ತಳಿಕೆಯ ಶಕ್ತಿಶಾಲಿ ಖೈಬರ್ ಬ್ಯಾಲಿಸ್ಟಿಕ್ ಕ್ಷಿಪಣಿ ಮೂಲಕ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯನ್ನೇ ಹೊಡೆದುರುಳಿಸಿದೆ. ಇದೇ ವೇಳೆ ವಾಯುಪಡೆಯ ಕಮಾಂಡರ್ ಅನ್ನು ಗುರಿಯಾಗಿಸಿಕೊಂಡಿದೆ. ಕ್ರಿಮಿನಲ್ ಪ್ರಧಾನಿಯನ್ನು ಗುರಿಯಾಗಿಸಿಕೊಂಡಿರುವುದಾಗಿ ಇರಾನಿನ ಸೇನೆ ಹೇಳಿಕೆ ನೀಡಿದೆ. ಯಶಸ್ಸಿನ ಸುದ್ದಿಯನ್ನು ಶೀಘ್ರದಲ್ಲೇ ಘೋಷಿಸಲಾಗುವುದು. ಏತನ್ಮಧ್ಯೆ, ಖೈಬರ್ ಕ್ಷಿಪಣಿ ದಾಳಿಯು […]
ಇಸ್ರೇಲ್-ಅಮೆರಿಕಾ ದಾಳಿಯಲ್ಲಿ ಗಾಯಗೊಂಡಿದ್ದ ಖಮೇನಿ ಪತ್ನಿ ಮನ್ಸೌರೆ ಖೋಜಸ್ತೇ ಮೃತ್ಯು

ಟೆಹರಾನ್: ಇರಾನ್‌ನ ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ (79) ಅವರು ಸೋಮವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಟೆಹರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಮನ್ಸೌರೆ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೋಮಾದಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯ ಸಮಯದಲ್ಲಿ ಖಮೇನಿ ಅವರೊಂದಿಗೆ ಮನ್ಸೌರೆ ಇದ್ದರು ಎನ್ನಲಾಗಿದೆ.
ನೆತನ್ಯಾಹು ಯುಗಾಂತ್ಯ?: ಪ್ರತೀಕಾರ ತೀರಿಸಿ ಬಿಟ್ಟ ಇರಾನ್; ಖೈಬರ್ ಕ್ಷಿಪಣಿ ದಾಳಿಗೆ ಇಸ್ರೇಲಿ ಪ್ರಧಾನಿ ಕಚೇರಿ ಉಡೀಸ್!

ಟೆಲ್ ಅವೀವ್: ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಇಂದು ಟೆಲ್ ಅವೀವ್‌ನಲ್ಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಚೇರಿ ಮೇಲೆ ದಾಳಿ ನಡೆಸಿದೆ. ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಇಸ್ರೇಲ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳ ಮೇಲೆ ಇರಾನ್ ತನ್ನ ದಾಳಿಯನ್ನು ತೀವ್ರಗೊಳಿಸಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ, ಹೈಫಾದಲ್ಲಿನ ಭದ್ರತಾ ಮತ್ತು ಮಿಲಿಟರಿ ಕೇಂದ್ರಗಳು ಹಾಗೂ ಪೂರ್ವ ಜೆರುಸಲೆಮ್ ಮೇಲೆ ದಾಳಿ ಮಾಡಲಾಗಿದೆ. ‘ಜಿಯೋನಿಸ್ಟ್ […]
ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ: ಕಠಿಣ ಕ್ರಮಕ್ಕೆ ಯು.ಟಿ.ಖಾದರ್ ಸೂಚನೆ

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆಯೊಡ್ಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕಿಡಿಗೇಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಭಾಧ್ಯಕ್ಷ ಯು.ಟಿ.ಖಾದರ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಪೊಲೀಸ್ ಕಮಿಷನರ್ ಜೊತೆ ಮಾತುಕತೆ ನಡೆಸಿರುವ ಸಭಾಧ್ಯಕ್ಷ ಯು.ಟಿ.ಖಾದರ್,ಉಳ್ಳಾದಲ್ಲಿ ಸರ್ವ ಧರ್ಮೀಯರು ಸೌಹಾರ್ದಯುತ ಸಹಬಾಳ್ವೆ ನಡೆಸುತ್ತಿದ್ದು ಈ ರೀತಿಯ ಬೆದರಿಕೆ ಪೋಸ್ಟ್ ಗಳ ಮೂಲಕ ಕೋಮುಸೌಹಾರ್ದವನ್ನು ಕದಡುವ ಹುನ್ನಾರದ ಬಗ್ಗೆ ಪೋಲೀಸ್ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.
ದುಬೈ: ಸಂಕಷ್ಟದಲ್ಲಿರುವ ಪ್ರವಾಸಿಗರಿಗೆ ಕನ್ನಡಿಗಾಸ್ ಹೆಲ್ಪ್ ಲೈನ್ ನೆರವು, ತುರ್ತು ಸಹಕಾರಕ್ಕಾಗಿ ಸರ್ಕಾರಕ್ಕೆ ಮನವಿ.

ಅನಿವಾಸಿ ಕನ್ನಡಿಗರ ಪೋಷಕರಾದ ರೊನಾಲ್ಡ್ ಕೊಲಸೋ ಅವರ ನೇತೃತ್ವದಲ್ಲಿ ಕನ್ನಡಿಗಾಸ್ ಹೆಲ್ಪ್ ಲೈನ್ ತಂಡವು, ಯುಎಇಯಲ್ಲಿ ಪ್ರಸ್ತುತ ಪರಿಸ್ಥಿತಿಯ ಕುರಿತು ಚರ್ಚಿಸಲು ಹಾಗೂ ಇಲ್ಲಿ ಸಿಲುಕಿರುವ ಪ್ರವಾಸಿ ಕನ್ನಡಿಗರ ಮಾಹಿತಿ ಸಂಗ್ರಹಿಸಲು ಮತ್ತು ಕರ್ನಾಟಕ ಸರ್ಕಾರದೊಂದಿಗೆ ಹಂಚಿಕೊಳ್ಳಲು ಝೂಮ್ ಸಭೆಯನ್ನು ಆಯೋಜಿಸಿತು. ಯುಎಇಯಲ್ಲಿರುವ ಎಲ್ಲಾ ಅನಿವಾಸಿ ಕನ್ನಡಿಗರು ಸುರಕ್ಷಿತವಾಗಿದ್ದು, ಇಲ್ಲಿನ ಸರ್ಕಾರ ಎಲ್ಲ ಅನಿವಾಸಿಗಳ ಸುರಕ್ಷತೆಯನ್ನು ಸಮರ್ಪಕವಾಗಿ ಕಾಪಾಡುತ್ತಿದೆ, ಯಾವುದೇ ಆತಂಕಕ್ಕೆ ಒಳಗಾಗದೆ, ಅನಧಿಕೃತ ಅಥವಾ ಅಪಪ್ರಚಾರದ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳು ಮತ್ತು ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಳ್ಳಬಾರದು […]