Flash News

ಮೋದಿ, ಅಮಿತ್‌ ಶಾ ನಿರ್ಧಾರದಿಂದ ನಾವೆಲ್ಲ ನಿರ್ಭೀತರಾಗಿದ್ದೇವೆ: ಸದಾನಂದ ಗೌಡ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ತೆಗೆದುಕೊಂಡ ನಿರ್ಧಾರದಿಂದ ನಾವೆಲ್ಲ ನಿರ್ಭೀತರಾಗಿದ್ದೇವೆ ಎಂದು ಮಾಜಿ ಸಿಎಂ ಡಿ.ವಿ ಸದಾನಂದಗೌಡ ಹೇಳಿದರು. 77ನೇ ಗಣರಾಜ್ಯೋತ್ಸವದ ಅಂಗವಾಗಿ ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಈ ವೇಳೆ, ಪ್ರಧಾನಿ ಮೋದಿ ಹಾಗೂ ಅಮಿತ್‌ ಶಾ ಅವರು ತೆಗೆದುಕೊಂಡ ದಿಟ್ಟ ನಿರ್ಧಾರದಿಂದ ಎಲ್ಲರೂ ಭಯವಿಲ್ಲದೇ ಬದುಕುತ್ತಿದ್ದೇವೆ. ಆದರೆ ನಮಗೆ ಬಾಹ್ಯ ಶಕ್ತಿಗಳಿಂದಲೇ ಹೆಚ್ಚು ಆತಂಕ ಇದೆ. ನಾವು ಯಾರಿಗೆ ಸ್ವತಂತ್ರ ರಾಷ್ಟ್ರ ಆಗಲು […]

ವಿಕಾಸ್‌ ಪುತ್ತೂರಿಗೆ ದ್ವೇಷ ಭಾಷಣ ಮಸೂದೆಯ ಅಡಿ ಪೊಲೀಸರು ನೋಟಿಸ್‌ ನೀಡಿದ್ದು ತಪ್ಪು: ಪರಮೇಶ್ವರ್‌

ಬೆಂಗಳೂರು: ಬಿಜೆಪಿ ಮುಖಂಡ ವಿಕಾಸ್‌ ಪುತ್ತೂರು ಅವರಿಗೆ ದ್ವೇಷ ಭಾಷಣ ಮಸೂದೆಯ ಅಡಿ ಪೊಲೀಸರು ನೋಟಿಸ್‌ ನೀಡಿದ್ದು ತಪ್ಪು ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. ಮಾಧ್ಯಮಗಳು ದ್ವೇಷ ಭಾಷಣ ಮಸೂದೆಯ ಅಡಿಯಲ್ಲಿ ಪೊಲೀಸರು ನೋಟಿಸ್‌ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವಾಗಿ ಮಾಹಿತಿ ತರಿಸಿಕೊಳ್ಳುತ್ತೇನೆ ಎಂದು ಹೇಳಿದರು.  ಈ ಮಸೂದೆಗೆ ಇನ್ನೂ ರಾಜ್ಯಪಾಲರ ಸಹಿ ಬಿದ್ದಿಲ್ಲ. ಭಾರತೀಯ ನ್ಯಾಯ ಸಂಹಿತೆ ಅಡಿ ವಿವಿಧ ಸೆಕ್ಷನ್‌ಗಳ ಅಡಿ ನೋಟಿಸ್‌ ನೀಡಬಹುದು. ಇನ್ನೂ ಇದು […]

ರೇವಣ್ಣ ಕುಟುಂಬ ಮುಗಿಸಲು ಬಳಸಿಕೊಂಡ ಎಸ್‌ಐಟಿಗೆ ಉಡುಗೊರೆ ಕೊಟ್ಟಿದ್ದಾರೆ: ಸರ್ಕಾರದ ವಿರುದ್ಧ ಹೆಚ್‌ಡಿಡಿ ವಾಗ್ದಾಳಿ

ಹಾಸನ: ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಿರುವ ನಮ್ಮ ಎದುರಾಳಿಗಳು, ರೇವಣ್ಣ ಅವರ ಕುಟುಂಬ ಮುಗಿಸಲು ಯಾವ ಎಸ್‌ಐಟಿ ಬಳಸಿಕೊಂಡಿದ್ದರೋ ಅವರಿಗೆ ಉಡುಗೊರೆ ಕೊಟ್ಟಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಹಾಸನದ ಬೂವನಹಳ್ಳಿ ಬಳಿ ನಡೆದ ಜೆಡಿಎಸ್‌ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ವೇಳೆ, ರೇವಣ್ಣ ಅವರ ಕುಟುಂಬವನ್ನು ಮುಗಿಸಲು ಎದುರಾಳಿಗಳು ಪ್ರಯತ್ನಪಟ್ಟರು. ಈ ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲವಾಗಿದೆ. ಜೆಡಿಎಸ್ ಮುಗಿಸಲು ಎರಡು ಬಾರಿ ಸಮಾವೇಶ ಮಾಡಿದ್ರು. ನನಗೆ ಆನಂದ ಆಯಿತು, […]

ಬೆಳ್ತಂಗಡಿ | ಬೈಕ್ ಕಳ್ಳತನಕ್ಕೆ ಯತ್ನ ಆರೋಪ: ಇಬ್ಬರಿಗೆ ಥಳಿಸಿ ಮರಕ್ಕೆ ಕಟ್ಟಿದ ಹಾಕಿದ ಸಾರ್ವಜನಿಕರು

ಬೆಳ್ತಂಗಡಿ : ಬೈಕ್ ಕಳ್ಳತನ ಮಾಡಿ ಪರಾರಿಯಾಗುತ್ತಿರುವ ಆರೋಪದ ಮೇರೆಗೆ ಸಾರ್ವಜನಿಕರು ಸೇರಿ ಇಬ್ಬರು ಆರೋಪಿಗಳನ್ನು ಓಡಿ ಹಿಡಿದುಕೊಂಡು ಬಂದು ಹಿಗ್ಗಾಮುಗ್ಗಾ ಥಳಿಸಿ ಬಳಿಕ ಮರಕ್ಕೆ ಕಟ್ಟಿ ಹಾಕಿ ವೇಣೂರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಈ ಬಗ್ಗೆ ಇಬ್ಬರು ಬೈಕ್ ಕಳ್ಳತನಕ್ಕೆ ಯತ್ನಿಸಿದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ. ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಪಳಾರಗೋಳಿ ಎಂಬಲ್ಲಿ ಜ.20 ರಂದು ಬೆಳಗ್ಗಿನ ಜಾವ 2:10 ಗಂಟೆಯಿಂದ 2.30 ಗಂಟೆಯ ಮಧ್ಯದ ಅವಧಿಯಲ್ಲಿ ಆರೋಪಿಗಳಾದ […]

ಅಂಗವಿಕಲ ಕೋಟಾದಡಿ ಸೀಟು ಪಡೆದು ಡಾಕ್ಟರ್ ಆಗಲು ಕಾಲನ್ನೇ ಕತ್ತರಿಸಿಕೊಂಡ ಭೂಪ!

ಜೌವಣಪುರ: ಮೀಸಲು ಕೋಟಾಗಳ ಅಡಿ ಶಿಕ್ಷಣ ಮತ್ತು ಉದ್ಯೋಗ ಪಡೆಯಲು ಕೆಲವರು ಕುಟಿಲೋಪಾಯಗಳನ್ನು ಮಾಡಿ ಆಮೇಲೆ ಸಿಕ್ಕು ಬಿದ್ದು ಫಜೀತಿ ಅನುಭವಿಸುವುದನ್ನು ಆಗಾಗ ನೋಡುತ್ತಿರುತ್ತೇವೆ. ಆದರೆ, ಇಲ್ಲೊಬ್ಬ ಭೂಪ, ಡಾಕ್ಟರ್ ಆಗುವ ಕನಸು ಕಂಡು ನೀಟ್ ಪರೀಕ್ಷೆಯಲ್ಲಿ ಪದೇ ಪದೇ ವಿಫಲ ಆಗುತ್ತಿದ್ದಕ್ಕೆ ಕಡೆಗೆ ಅಂಗವಿಕಲ ಕೋಟಾದಡಿ ಆದರೂ ಸೀಟು ಗಿಟ್ಟಿಸಿಕೊಳ್ಳಬೇಕೆಂದು ತನ್ನ ಜೀವಕ್ಕೇ ಸಂಚು ತಂದುಕೊಂಡಿದ್ದಾನೆ. ಉತ್ತರ ಪ್ರದೇಶದ ಲಖನೌದಿಂದ 228 ಕಿ.ಮೀ ದೂರದಲ್ಲಿರುವ ಜೌವಣಪುರ ನಗರದ ಸುರಾಜ್ ಭಾಸ್ಕರ್ ಎಂಬ 21 ವರ್ಷದ ಯುವಕ ಅಂಗವಿಕಲ […]

ಅಚಲ್ಪುರ್ ಪುರಸಭೆ: ಅಧ್ಯಕ್ಷರ ಆಯ್ಕೆಗಾಗಿ ಬಿಜೆಪಿ, ಕಾಂಗ್ರೆಸ್, ಎಐಎಂಐಎಂ ಮೈತ್ರಿ!

ನಾಗ್ಪುರ: ತಮ್ಮ ಪಕ್ಷಗಳ ಉನ್ನತ ನಾಯಕತ್ವ ಇಂತಹ ರಾಜಕೀಯ ಹೊಂದಾಣಿಕೆಗಳಿಗೆ ವಿರೋಧ ವ್ಯಕ್ತಪಡಿಸುತ್ತಿದ್ದರೂ, ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಅಚಲ್ಪುರ್ ಪುರಸಭೆಯಲ್ಲಿ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡುವ ಉದ್ದೇಶದಿಂದ ಬಿಜೆಪಿ, ಎಐಎಂಐಎಂ ಮತ್ತು ಕಾಂಗ್ರೆಸ್ ಪರಸ್ಪರ ಮೈತ್ರಿ ಮಾಡಿಕೊಂಡಿವೆ. ಅಚಲ್ಪುರ್ ಪುರಸಭೆಯಲ್ಲಿ ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ 41 ಸ್ಥಾನಗಳ ಪೈಕಿ ಕಾಂಗ್ರೆಸ್ 15 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 9 ಹಾಗೂ ಎಐಎಂಐಎಂ 3 ಸ್ಥಾನಗಳನ್ನು ಪಡೆದಿವೆ. ಸ್ವತಂತ್ರ ಅಭ್ಯರ್ಥಿಗಳು 10 ಸ್ಥಾನಗಳನ್ನು ಗೆದ್ದಿದ್ದು, […]

ಅಕ್ರಮ ವಲಸಿಗ ಇದ್ದಾನೆಂದು ಪೊಲೀಸ್ ಠಾಣೆಗೆ ದೂರು ನೀಡಿ ತೆರಳುವಷ್ಟರಲ್ಲಿ ಪುನೀತ್ ಕೆರೆಹಳ್ಳಿ ಬಂಧನ

ನೆಲಮಂಗಲ: ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಆರೋಪದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅಲ್ಲಿಗೆ ತೆರಳಿದ್ದರು. ಹಸನ್ ಎಂಬಾತ ಅಕ್ರಮ ಬಾಂಗ್ಲಾ ವಲಸಿಗ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಲ್ಲದೆ, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿ ಠಾಣೆಯಿಂದ ಹೋಗುತ್ತಿದ್ದ ವೇಳೆ, ಬಾಗಲಗುಂಟೆ ಪೊಲೀಸರು ಪುನೀತ್ […]

ಮಂಗಳೂರು | ‘ರೀಲ್ಸ್ ಸ್ಟಾರ್‌’ ಆಶಾ ಪಂಡಿತ್ ನಿಧನ

ಮಂಗಳೂರು: ಅಭಿಮಾನಿಗಳನ್ನು ಬೈಯುತ್ತಲೇ ಇನ್‌ಸ್ಟಾಗ್ರಾಮ್‌ನಲ್ಲಿ ಹವಾ ಸೃಷ್ಟಿಸಿದ್ದ ನಾಗುರಿಯ ನಿವಾಸಿ ಆಶಾ ಪಂಡಿತ್, ಜನವರಿ 23 ರ ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು. ಆಶಾ ಪಂಡಿತ್ ತಮ್ಮ ಬೈಗುಳದ ರೀಲ್‌ಗಳಿಂದ ಇನ್‌ಸ್ಟಾಗ್ರಾಮ್‌ನಲ್ಲಿ ಜನಪ್ರಿಯತೆ ಗಳಿಸಿದ್ದರು. ಅವರು ಪಡೀಲ್ ಬಳಿ ಒಂದು ಸಣ್ಣ ಅಂಗಡಿಯನ್ನೂ ನಡೆಸುತ್ತಿದ್ದರು. ಕುಟುಂಬದ ಮೂಲಗಳ ಪ್ರಕಾರ, ಅವರಿಗೆ ನಿನ್ನೆ ರಾತ್ರಿ ವಾಂತಿ ಸಮಸ್ಯೆ ಉಂಟಾಗಿತ್ತು. ಶುಕ್ರವಾರ ಬೆಳಗಿನ ಜಾವ ಅವರಿಗೆ ಹೃದಯಾಘಾತವಾಗಿ ಮನೆಯ ಅಂಗಳದಲ್ಲಿ ಕುಸಿದು ಬಿದ್ದರು ಎಂದು ವರದಿಯಾಗಿದೆ. ಆಕೆಯನ್ನು ಆಸ್ಪತ್ರೆಗೆ […]

ಕೋಮು ದ್ವೇಷ ಭಾಷಣ: ಪ್ರಭಾಕರ ಭಟ್ ಕಲ್ಲಡ್ಕ ವಿರುದ್ಧ ಬಲವಂತದ ಕ್ರಮ ಬೇಡ; ಹೈಕೋರ್ಟ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದಿದ್ದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜ.21ರಂದು ಆರ್‌ಎಸ್‌ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ವಿರುದ್ಧ ದಾಖಲಾಗಿರುವ ಕೇಸ್‌ಗೆ ಸಂಬಂಧಿಸಿ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ಜ.22ರಂದು ಹೈಕೋರ್ಟ್ ಪೊಲೀಸ್ ಇಲಾಖೆಗೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಫೆ.5ಕ್ಕೆ ಹೈಕೋರ್ಟ್ ಮುಂದೂಡಿದೆ. ಪುತ್ತೂರಿನ ವಿವೇಕಾನಂದ ಕಾಲೇಜ್‌ನಲ್ಲಿ ಜ.12ರಂದು ನಡೆದಿದ್ದ ವಿವೇಕ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ನಾಗರಿಕ ಸಮುದಾಯಗಳ ಮಧ್ಯೆ […]

ಧಾರವಾಡ ಝಕಿಯಾ ಮುಲ್ಲಾ ಕೊಲೆ ಕೇಸ್: ಆರೋಪಿ ಯಾರು? ಆತನ ಹಿಸ್ಟರಿ ಏನು ಗೊತ್ತಾ?

ಧಾರವಾಡ: ಕೆಲಸ ಹುಡುಕಲೆಂದು ಮನೆಯಿಂದ ಹೊರಹೋಗಿದ್ದ 19 ವರ್ಷದ ಯುವತಿ ಝಕಿಯಾ ಮುಲ್ಲಾ ಶವ ಧಾರವಾಡ ನಗರದ ಹೊರಹೊಲಯದ ಮನಸೂರು ರಸ್ತೆಯ ಡೈರಿ ಬಳಿ ಪತ್ತೆಯಾಗಿದ್ದು, ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​ ಸಿಕ್ಕಿದೆ. ಪ್ರೀತಿಸುತ್ತಿದ್ದ ಪ್ರಿಯಕರ ಸಾಬೀರ್ ಮುಲ್ಲಾನೇ ಝಕಿಯಾಳನ್ನು ಕೊಲೆ ಮಾಡಿದ್ದಾನೆ ಎನ್ನುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪರಸ್ಪರ ಪ್ರೀತಿಸುತ್ತಿದ್ದರಿಂದ ಮನೆಯವರು ಸಹ ಮದುವೆಗೆ ಒಪ್ಪಿದ್ದು, ಮುಂದಿನ ತಿಂಗಳು ನಿಶ್ಚಿತಾರ್ಥ ಮಾಡಲು ತೀರ್ಮಾನಿಸಿದ್ದರು. ಆದ್ರೆ, ಇದೀಗ ಯುವತಿಯನ್ನು ಮದುವೆಯಾಗಬೇಕಿದ್ದ ಸಾಬೀರ್ ಮುಲ್ಲಾ ಎನ್ನುವವನೇ […]