Flash News

ಖಮೇನಿ ಕಚೇರಿ ಸಮೀಪ ಇಸ್ರೇಲ್ ದಾಳಿ: ಎಲ್ಲಿದ್ದಾರೆ ಇರಾನ್‌ನ ಪರಮೋಚ್ಚ ನಾಯಕ?

ಅಮೆರಿಕ ಹಾಗೂ ಇಸ್ರೇಲ್ ಸೇರಿ ಇರಾನ್‌ ಮೇಲೆ ಶನಿವಾರ ದಾಳಿ ನಡೆಸಿವೆ, ಇರಾನ್‌ನ ಅಣು ಯೋಜನೆ ಸಂಬಂಧ ಮಾತುಕತೆ ಮುರಿದುಬಿದ್ದ ಕಾರಣ ಈ ದಾಳಿ ನಡೆದಿದೆ. ಇರಾನ್ ರಾಜಧಾನಿ ಟೆಹರಾನ್ ಸೇರಿ ದೇಶದ ವಿವಿಧಡೆ ದಾಳಿ ನಡೆಸಲಾಗಿದೆ. ಇರಾನ್‌ನ ಪರಮೋಚ್ಚ ನಾಯಕ ಆಯತ್‌ಉಲ್ಲಾ ಖಮೇನಿ ಅವರ ನಿವಾಸ, ಕಚೇರಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿವೆ. ಟೆಹ್ರಾನ್‌ನ ಉತ್ತರದ ಶೇಮಿರಾನ್‌ನಲ್ಲಿರುವ ಅಧ್ಯಕ್ಷರ ಅರಮನೆಯ ಸಮೀಪದ ಪ್ರದೇಶ, ಖಮೇನಿ ಅವರ ಕಚೇರಿಗಳ ಸಂಕೀರ್ಣದ ಮೇಲೆ ಏಳು ಕ್ಷಿಪಣಿಗಳು ದಾಳಿ ಮಾಡಿವೆ ಎಂದು […]

ಇರಾನ್ ದಾಳಿ ಬಳಿಕ ಗಲ್ಫ್‌ ನಲ್ಲಿ ಉದ್ವಿಗ್ನತೆ: ಸೌದಿ ಅರೇಬಿಯಾದ ರಿಯಾದ್‌ ನಲ್ಲಿ ಸ್ಫೋಟ, ಅಬುಧಾಬಿಯಲ್ಲಿ ಕನಿಷ್ಠ ಒಬ್ಬ ಮೃತ್ಯು

ಅಂತಾರಾಷ್ಟ್ರೀಯ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದ ಯುಎಇ ರಿಯಾದ್: ಸೌದಿ ಅರೇಬಿಯಾದ ರಾಜಧಾನಿ ರಿಯಾದ್ನಲ್ಲಿ ಸ್ಫೋಟಗಳು ಸಂಭವಿಸಿರುವುದಾಗಿ ಎಎಫ್ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಸ್ಫೋಟಗಳ ಸ್ವರೂಪ, ಹಾನಿ ಮತ್ತು ಕಾರಣಗಳ ಕುರಿತು ತಕ್ಷಣದ ಅಧಿಕೃತ ವಿವರಗಳು ಲಭ್ಯವಾಗಿಲ್ಲ. ಇದೇ ವೇಳೆ ಗಲ್ಫ್ ಪ್ರದೇಶದಲ್ಲಿನ ಪ್ರಮುಖ ಸೈನಿಕ ನೆಲೆಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಇರಾನ್ ದೃಢಪಡಿಸಿದೆ. ಖತರ್ ನಲ್ಲಿರುವ ಅಲ್-ಉದೈದ್ ವಾಯುನೆಲೆ, ಕುವೈತ್ ನ ಅಲ್-ಸಲೇಂ ವಾಯುನೆಲೆ, ಯುಎಇಯ ಅಲ್-ದಫ್ರಾ ವಾಯುನೆಲೆ ಹಾಗೂ ಬಹ್ರೇನ್‌ […]

ಜಗತ್ತಿನಲ್ಲಿ ಮೂರನೇ ಯುದ್ಧ ಆರಂಭ; ಇರಾನ್ ಮೇಲೆ ನಾವೇ ದಾಳಿ ನಡೆಸಿದ್ದೆಂದು ಘೋಷಿಸಿದ ಅಮೆರಿಕ

ನವದೆಹಲಿ, ಫೆಬ್ರವರಿ 28: ಇರಾನ್ ಮೇಲೆ ಯುದ್ಧ (Iran War) ಆರಂಭವಾಗಿದೆ. ಇಸ್ರೇಲ್ ರಕ್ಷಣಾ ಸಚಿವರು ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾವು ಇರಾನ್ ಮೇಲೆ ದಾಳಿ ಆರಂಭಿಸಿದ್ದೇವೆ ಎಂದು ಘೋಷಿಸಿದ್ದಾರೆ. ಇಷ್ಟು ದಿನ ಇಸ್ರೇಲ್​ಗೆ ಬಾಹ್ಯ ಬೆಂಬಲ ನೀಡುತ್ತಿದ್ದ ಅಮೆರಿಕ ಇದೀಗ ನೇರವಾಗಿಯೇ ಅಖಾಡಕ್ಕಿಳಿದಿದೆ. ಹೀಗಾಗಿ, ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್​ನ ಯುದ್ಧ ಆರಂಭವಾಗಿದೆ. ಇದು ಜಗತ್ತಿನಲ್ಲಿ ನಡೆಯುತ್ತಿರುವ ಮೂರನೇ ಯುದ್ಧವಾಗಿದೆ. ರಷ್ಯಾ ಮತ್ತು ಉಕ್ರೇನ್, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ಯುದ್ಧ […]

ಇರಾನ್ ಮೇಲೆ ಇಸ್ರೇಲ್ ದಾಳಿ ಬೆನ್ನಲ್ಲೆ ದುಬೈ, ಬಹರೈನ್, ಕುವೈತ್ ಸ್ಪೋಟ

ಬಹ್ರೇನ್ : ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ಬೆನ್ನಲ್ಲೆ ಬಹ್ರೇನ್, ಕುವೈತ್, ಅಬುಧಾಬಿಯಲ್ಲಿ ಸ್ಫೋಟಗಳು ಸಂಭವಿರುವ ಬಗ್ಗೆ Aljazeera ವರದಿ ಮಾಡಿದೆ. ಬಹ್ರೇನ್‌ನ ಆಂತರಿಕ ಸಚಿವಾಲಯ ತುರ್ತು ಎಚ್ಚರಿಕೆಯನ್ನು ನೀಡಿದೆ. ನಾಗರಿಕರನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆಯನ್ನು ನೀಡಿದೆ. ಬಹ್ರೇನ್‌ನ ಜುಫೈರ್ ಪ್ರದೇಶದಲ್ಲಿರುವ ಯುಎಸ್ ನೌಕಾಪಡೆ ನೆಲೆಯಿಂದ ಹೊಗೆ ಕಾಣಿಸಿಕೊಂಡಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಯುಎಸ್ ನೌಕಾಪಡೆಯ 5ನೇ ಪ್ರಧಾನ ಕಚೇರಿಯನ್ನು ಕ್ಷಿಪಣಿ ದಾಳಿಗೆ ಗುರಿಪಡಿಸಲಾಗಿದೆ ಎಂದು ಬಹ್ರೇನ್ ದೃಢಪಡಿಸಿದೆ. ಯುನೈಟೆಡ್ […]

ಇರಾನ್ ಮೇಲೆ ಇಸ್ರೇಲ್ ದಾಳಿ: ರಾಷ್ಟ್ರಪತಿ ಭವನ ಧ್ವಂಸ, ಗುಪ್ತ ಸ್ಥಳಕ್ಕೆ ಖಮೇನಿ ಶಿಫ್ಟ್!

ನವದೆಹಲಿ: ಇರಾನ್‌ ಮೇಲೆ ಇಸ್ರೇಲ್‌ ಮುಂಜಾಗ್ರತಾ ದಾಳಿ ನಡೆಸಿದ ಬೆನ್ನಲ್ಲಿಯೇ ಅಮೆರಿಕ ಕೂಡ ಇರಾನ್‌ ಮೇಲೆ ದಾಳಿ ಆರಂಭಿಸಿದೆ. ಅಂತಾರಾಷ್ಟ್ರೀಯ ಮಾಧ್ಯಮಗಳ ವರದಿಯ ಪ್ರಕಾರ, ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರ ನಿವಾಸದ ಮೇಲೆ ಭಾರೀ ಪ್ರಮಾಣದ ದಾಳಿ ನಡೆಸಲಾಗಿದೆ. ಇದರ ಜೊತೆಗೆ, ಹಲವಾರು ಮಂತ್ರಿಗಳ ಮನೆಗಳು ಮತ್ತು ಭದ್ರತಾ ಪಡೆಗಳ ನೆಲೆಗಳ ಮೇಲೂ ದಾಳಿ ನಡೆದಿದೆ. ಗುಪ್ತಚರ ಸಂಸ್ಥೆಯ ಕಚೇರಿಗಳ ಮೇಲೂ ದಾಳಿ ನಡೆದಿದೆ. ಇರಾನ್‌ನ 30 ಕ್ಕೂ ಹೆಚ್ಚು ಸ್ಥಳಗಳಲ್ಲಿ ಬಾಂಬ್‌ಸ್ಫೋಟದ ಸದ್ದು ಕೇಳಿಬಂದಿದ್ದುಮ […]

ಮಂಗಳೂರು | ಮಕ್ಕಳ ಕಳ್ಳರಿದ್ದಾರೆ ವದಂತಿ ನಂಬಿದ ಜನರಲ್ಲಿ ಆತಂಕ, ‘ಕಳ್ಳರ ಗ್ಯಾಂಗ್’ ಕತೆಸುಳ್ಳು: ಪೊಲೀಸರಿಂದ ಸ್ಪಷ್ಟನೆ

ಮಂಗಳೂರು: ನಗರದ ಕುಂಟಿಕಾನ ಬಳಿ ಮಕ್ಕಳ ಅಪಹರಣ ತಂಡದ ಬಗ್ಗೆ ಶುಕ್ರವಾರ ಬೆಳಿಗ್ಗೆ ವೈರಲ್ ಆದ ವದಂತಿ ಸಾರ್ವಜನಿಕರಲ್ಲಿ ವ್ಯಾಪಕ ಭೀತಿಯನ್ನುಂಟುಮಾಡಿತು. ಆದರೆ, ಕದ್ರಿ ಪೊಲೀಸರು ಸಮಗ್ರ ತನಿಖೆಯ ನಂತರ, ಈ ವರದಿಗಳು ಸಂಪೂರ್ಣವಾಗಿ ಆಧಾರರಹಿತ ಎಂದು ಸ್ಪಷ್ಟಪಡಿಸಿದ್ದಾರೆ. ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುವ ಸಂದೇಶಗಳು ಸಂಪೂರ್ಣ ಸುಳ್ಳಾಗಿವೆ. ಯಾರೂ ಗಾಬರಿಯಾಗಬೇಡಿ ಎಂದು ಎಲ್ಲಾ ರೀತಿಯ ವದಂತಿಗೆ ತೆರೆ ಎಳೆದಿದ್ದಾರೆ. ಗುರುವಾರ ಸಂಜೆ ಕುಂಟಿಕಾನದ ಬಳಿ ನಡೆದುಕೊಂಡು ಹೋಗುತ್ತಿದ್ದ ಬಾಲಕನೊಬ್ಬ ಅಲ್ಲಿದ್ದ ಆಟೋದಲ್ಲಿ ಮಕ್ಕಳು ಅಳುತ್ತಿರುವುದನ್ನು ಕೇಳಿಸಿಕೊಂಡಿದ್ದ ಸ್ನೇಹಿತನಿಗೆ ಮಕ್ಕಳ […]

‘ಗೋದ್ರಾ ಮೀಟ್ಸ್ ಗಾಝಾ’: ಇಸ್ರೇಲ್ ಭೇಟಿಯ ವೇಳೆ ನೆತನ್ಯಾಹು ತಬ್ಬಿಕೊಂಡ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಕಿಡಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಇಸ್ರೇಲ್ ಭೇಟಿ ಮುಗಿಸಿ ವಾಪಸ್ಸಾಗಿದ್ದಾರೆ. ಫೆ.25ರಂದು ಬುಧವಾರದಂದು ಎರಡು ದಿನಗಳ ಇಸ್ರೇಲ್ ಭೇಟಿಗಾಗಿ ತೆರಳಿದ್ದ ಪ್ರಧಾನಿ ಮೋದಿಯವರನ್ನು ಟೆಲ್ಅವೀವ್ ನ ಬೆನ್ ಗ್ಯುರಿಯನ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವೇಳೆ ಸ್ವಾಗತಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ವಾಗತಿಸಿ ತಬ್ಬಿಕೊಂಡಿರುವ ಫೋಟೋ ವೈರಲ್ ಆಗಿದೆ. ಇಸ್ರೇಲ್ ಭೇಟಿಯ ವೇಳೆ ಮೋದಿಯವರು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಪರಸ್ಪರ ತಬ್ಬಿಕೊಂಡಿರುವ ಫೋಟೋವನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ನಟ ಕಿಶೋರ್ ಕುಮಾರ್ ಅವರು […]

ಪುತ್ತೂರು: ಕಾಮಗಾರಿ ದೂಳಿನ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಕ್ಕೆ ಪ್ರಾಂಶುಪಾಲೆಗೆ ಸಸ್ಪೆಂಡ್ ಶಿಕ್ಷೆ!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಕೆಲವು ದಿನಗಳಿಂದ ವಿದ್ಯಾರ್ಥಿನಿಯರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದರು. ಕಾಲೇಜಿನ ಪಕ್ಕದಲ್ಲೇ ನಡೆಯುತ್ತಿರುವ ಸರ್ಕಾರಿ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಯಿಂದಾಗಿ ತರಗತಿಯೊಳಗೆ ಅತಿಯಾದ ದೂಳು ತುಂಬಿಕೊಳ್ಳುತ್ತಿತ್ತು. ಇದರಿಂದ ಪಾಠ ಕೇಳಲು ಅಸಾಧ್ಯವಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾ ಸ್ಥಳಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದ್ದ ಸಂದರ್ಭದಲ್ಲಿ ಹೈಡ್ರಾಮಾ ನಡೆದಿತ್ತು. […]

ನಾನು ಹುಟ್ಟಿದ ದಿನವೇ ಇಸ್ರೇಲ್ ದೇಶ ಘೋಷಣೆಯಾಯಿತು: ಪ್ರಧಾನಿ ಮೋದಿ

ಜೆರುಸಲೇಂ: ‘ನಾನು ಹುಟ್ಟಿದ ದಿನವೇ ಇಸ್ರೇಲ್ ದೇಶ ಘೋಷಣೆಯಾಯಿತು’ ಎಂದು ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಇಸ್ರೇಲ್‌ ಸಂಸತ್ತು ‘ಕನೆಸೆಟ್’ ಉದ್ದೇಶಿಸಿ ಮಾತನಾಡಿದ ಅವರು, ‘ಒಂಬತ್ತು ವರ್ಷಗಳ ಹಿಂದೆ ಇಸ್ರೇಲ್‌ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿಯಾಗುವ ಅದೃಷ್ಟ ನನಗೆ ಸಿಕ್ಕಿತ್ತು. ನಾನು ಯಾವಾಗಲೂ ಆಕರ್ಷಿತನಾಗುತ್ತಿದ್ದ ಭೂಮಿಗೆ ಮತ್ತೆ ಬಂದಿರುವುದು ನನಗೆ ತುಂಬಾ ಸಂತೋಷವಾಗಿದೆ. ವಿಶೇಷವೆಂದರೆ, 1950ರ ಸೆಷ್ಟಂಬರ್‌ 17ರಂದು ಇಸ್ರೇಲ್ ದೇಶ ಘೋಷಿಸಲ್ಪಟ್ಟ ದಿನವೇ ನಾನು ಜನಿಸಿದ್ದು’ ಎಂದು ಅವರು ಹೇಳಿದ್ದಾರೆ. 2023ರ ಅಕ್ಟೋಬರ್‌ 7ರಂದು […]

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್​​: ತಲೆಮರೆಸಿಕೊಂಡ ಸ್ವಯಂ ಘೋಷಿತ ದೇವಮಾನವ

ಯಾದಗಿರಿ: ಅಪ್ರಾಪ್ತ ಬಾಲಕಿಯ ಜೊತೆ ಅನುಚಿತವಾಗಿ ವರ್ತನೆ ಹಿನ್ನೆಲೆ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಬಂಧನದ ಭೀತಿ ಹಿನ್ನೆಲೆ ಪ್ರಕರಣ ದಾಖಲಾಗುತ್ತಿದ್ದಂತೆ ಮುತ್ಯಾ ನಾಪತ್ತೆಯಾಗಿದ್ದು, ತಲೆಮರೆಸಿಕೊಂಡಿರುವ ಸುದ್ದಿ ಹರಿದಾಡಿವೆ. ಘಟನೆ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗ ಕೂಡ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಕಾರಣ ಸ್ವಯಂ ಘೋಷಿತ ದೇವಮಾನವನಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ ತಾಲೂಕಿನ ಗೋಗಿ ಠಾಣೆಯಲ್ಲಿ ಪೋಕ್ಸೋ ಕೇಸ್ […]