ಪ್ರಧಾನಿ ಮೋದಿ ಮತ್ತೊಂದು ದಾಖಲೆ: Instagramನಲ್ಲಿ 100 ಮಿ. ಫಾಲೋವರ್ಸ್ ದಾಟಿದ ಮೊದಲ ವಿಶ್ವ ನಾಯಕ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಗುರುವಾರ ಐತಿಹಾಸಿಕ ಮೈಲುಗಲ್ಲು ಸಾಧಿಸಿದ್ದು, ಇನ್ಸ್ಟಾಗ್ರಾಂನಲ್ಲಿ 100 ಮಿಲಿಯನ್ ಅನುಯಾಯಿಗಳನ್ನು ಹೊಂದಿದ ವಿಶ್ವದ ಮೊದಲ ನಾಯಕ ಮತ್ತು ರಾಜಕಾರಣಿಯಾಗಿ ಹೊರಹೊಮ್ಮಿದ್ದಾರೆ. 2014ರಲ್ಲಿ ಇನ್‌ಸ್ಟಾಗ್ರಾಂ ಖಾತೆ ಸೇರಿದ್ದ ಪ್ರಧಾನಿ ಮೋದಿ ಅವರಿಗೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಎರಡು ಪಟ್ಟು ಹೆಚ್ಚು ಅನುಯಾಯಿಗಳಿದ್ದಾರೆ. ಮುಂದಿನ ಐದು ಪ್ರಮುಖ ಜಾಗತಿಕ ನಾಯಕರ ಒಟ್ಟು ಅನುಯಾಯಿಗಳ ಸಂಖ್ಯೆಯೂ ಮೋದಿ ಅವರ ವೈಯಕ್ತಿಕ ಅನುಯಾಯಿಗಳಿಗಿಂತ ಕಡಿಮೆಯಾಗಿದೆ. ಡೊನಾಲ್ಡ್ ಟ್ರಂಪ್ ಅವರಿಗೆ 43.2 ಮಿಲಿಯನ್ ಅನುಯಾಯಿಗಳಿದ್ದು, […]
ಮಂಗಳೂರು | ರೈಲ್ವೇ ಟ್ರಾಕ್ ನಲ್ಲಿ ಕುಳಿತಿದ್ದ ವಿದ್ಯಾರ್ಥಿಗಳ ವಿಡಿಯೋ ತೆಗೆದು ಜಾಲತಾಣದಲ್ಲಿ ವೈರಲ್, ತಂದೆ- ಮಗ ಬಂಧನ

ಮಂಗಳೂರು: ನಗರದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ರೈಲ್ವೇ ಟ್ರ್ಯಾಕ್ ಬಳಿ ಕುಳಿತುಕೊಂಡಿದ್ದ ಕಾಲೇಜು ವಿದ್ಯಾರ್ಥಿ- ವಿದ್ಯಾರ್ಥಿನಿಯ ವಿಡಿಯೋ ಮಾಡಿ, ಹುಡುಗನಿಗೆ ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದ್ದು ಪಾಂಡೇಶ್ವರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪಾಂಡೇಶ್ವರ ಠಾಣೆ ವ್ಯಾಪ್ತಿಯ ಅತ್ತಾವರದ ನಿವಾಸಿಗಳಾದ ಸ್ಟೀವನ್ ಮೊಂತೇರೊ ಮತ್ತು ಆತನ ಮಗ ಅವಿಲ್ ಬಂಧಿತ ಆರೋಪಿಗಳು. ಫೆ.23ರಂದು ಅಪ್ರಾಪ್ತ ಕಾಲೇಜು ವಿದ್ಯಾರ್ಥಿಗಳು ರೈಲ್ವೇ ಟ್ರಾಕ್ ನಲ್ಲಿ ಕುಳಿತು ಮಾತನಾಡುತ್ತಿದ್ದಾಗ ಸ್ಟೀವನ್ ಮೊಬೈಲಿನಲ್ಲಿ ವಿಡಿಯೋ ಚಿತ್ರೀಕರಿಸಿದ್ದು ಅದನ್ನು ಫೇಸ್ಬುಕ್ ನಲ್ಲಿ […]
ಅಜೀಂ ಪ್ರೇಮ್ ಜಿ ಯೂನಿವರ್ಸಿಟಿಗೆ ನುಗ್ಗಿ ಪುಂಡಾಟ ನಡೆಸಿದ 25 ಎಬಿವಿಪಿ ಕಾರ್ಯಕರ್ತರ ವಿರುದ್ಧ FIR
ಬೆಂಗಳೂರು: ಸರ್ಜಾಪುರ ಅಜೀಂ ಪ್ರೇಮ್ ಜಿ ಯೂನಿವರ್ಸಿಟಿಗೆ ನುಗ್ಗಿ ದಾಂಧಲೆ ಮಾಡಿದ ಆರೋಪದ ಮೇಲೆ 25 ಎಬಿವಿಪಿ ಕಾರ್ಯಕರ್ತರ ಮೇಲೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮಂಗಳವಾರ ಸಂಜೆ ಸರ್ಜಾಪುರ ಅಜೀಂ ಪ್ರೇಮ್ ಜಿ ಯೂನಿವರ್ಸಿಟಿ ಮುಂದೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಕಾಶ್ಮೀರದ ಸೈನಿಕರನ್ನು ಅತ್ಯಾಚಾರಿಗಳು ಎಂದು ಬಿಂಬಿಸುವ ಚರ್ಚೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಸಂಘ (AISA) SPARK ವಿದ್ಯಾರ್ಥಿ ವೃಂದದಿಂದ ಆಯೋಜಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಕೂಡಲೇ ಯೂನಿವರ್ಸಿಟಿಯ ಮಾನ್ಯತೆ ರದ್ದುಗೊಳಿಸಲು ಕೋರಿ […]
ರತ್ನಗಿರಿಯಲ್ಲಿ ಭೀಕರ ಅಪಘಾತ: ಮಂಗಳೂರಿನ ಯುವಕ ಮೃತ್ಯು

ಮಂಗಳೂರು: ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಮುಡಿಪು ಸಮೀಪದ ಬೋಳಿಯಾರ್ ನಿವಾಸಿಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಮುಹಮ್ಮದ್ ರಿಝ್ವಾನ್ (28) ಮೃತ ವಿವಾಹಿತ ಯುವಕ ಎಂದು ತಿಳಿದು ಬಂದಿದೆ. ಕಳೆದ ಹಲವಾರು ವರ್ಷಗಳಿಂದ ಕಂಪೆನಿಯೊಂದರ ಮೂಲಕ ಮೀನಿನ ಲಾರಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ರಿಝ್ವಾನ್ ಅವರು ಮಹಾರಾಷ್ಟ್ರಕ್ಕೆ ಮೀನಿನ ಲಾರಿ ಚಲಾಯಿಸುತ್ತಿದ್ದು, ಮಹಾರಾಷ್ಟ್ರದ ರತ್ನಗಿರಿ ಎಂಬಲ್ಲಿ ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಝ್ವಾನ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ, 15 ಲಕ್ಷ ಪರಿಹಾರ ಘೋಷಣೆ

ಶಿವಮೊಗ್ಗ: ಶಿವಮೊಗ್ಗದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಬಾಲಕನ ಕೊಲೆಯಾಗಿದ್ದು, ಆ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಘಟನೆಯ ನಂತರ, ನಗರದಲ್ಲಿ ದೊಡ್ಡ ಪೊಲೀಸ್ ಪಡೆ ನಿಯೋಜಿಸಲಾಗಿತ್ತು. ಉರಗದೂರಿನ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ (16) ಪರೀಕ್ಷೆಗೆ ಮುನ್ನ ವಿಶೇಷ ತರಗತಿಗೆ ಹಾಜರಾದ ನಂತರ ಈ ಘಟನೆ ಸಂಭವಿಸಿದೆ. ಸಂಕೇತ್ ತನ್ನ ಶಾಲೆಯ ಹೊರಗೆ ಹುಡುಗರ ಗುಂಪಿನ ನಡುವೆ ನಡೆದ ವಾಗ್ವಾದದಲ್ಲಿ ಮಧ್ಯಪ್ರವೇಶಿಸಿದ್ದರು. ಈ ವೇಳೆ ವಾಗ್ವಾದ ನಡೆದು ಎಂದು […]
ಮಹಾತ್ಮ ಗಾಂಧಿ ಅವರನ್ನು ರಾಷ್ಟ್ರಪಿತ ಎಂದು ಒಪ್ಪಿಕೊಳ್ಳುವುದಿಲ್ಲ, ನೆಹರೂ ಅಯೋಗ್ಯ ಪ್ರಧಾನಿ : ನಾಲಿಗೆ ಹರಿಯಬಿಟ್ಟ ಯತ್ನಾಳ್

ಯಾದಗಿರಿ : ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಶಿವಾಜಿ ಜಯಂತಿ ಅಂಗವಾಗಿ ಶನಿವಾರ ರಾತ್ರಿ ನಡೆದ ಬಹಿರಂಗ ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ದೇಶದಲ್ಲಿ ಇರಬೇಕಾದರೆ ಒಂದೇ ಮಾತು ಮಾತನಾಡಬೇಕು ಎಂಬ ಮನಸ್ಥಿತಿ ಇದೆ. ನಾನು ಮಹಾತ್ಮ ಗಾಂಧಿ ಅವರನ್ನು ರಾಷ್ಟ್ರಪಿತ ಎಂದು ಒಪ್ಪಿಕೊಳ್ಳುವುದಿಲ್ಲ. ನಮ್ಮ ದೇಶದ ಇತಿಹಾಸವೇ ಬೇರೆ ರೀತಿಯಲ್ಲಿದೆ ಎಂದು ಯತ್ನಾಳ್ ಹೇಳಿದ್ದಾರೆ. ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡಿದ ಯತ್ನಾಳ್, ಮನೆ ಮೇಲೆ ಕಲ್ಲು ಹೊಡೆದರೆ ಬೂಲ್ಡೋಝರ್ ಬರುತ್ತದೆ. […]
ವಿದ್ಯಾರ್ಥಿನಿಯ ಗುಪ್ತಾಂಗಕ್ಕೆ ಸ್ಯಾನಿಟೈಸರ್ ಹಾಕಿ ಬೆಂಕಿ ಹಚ್ಚಿದ ಯುವಕ!

ಗುರುಗ್ರಾಮ್: ಲಿವ್-ಇನ್ ಸಂಗಾತಿ 19 ವರ್ಷದ ವಿದ್ಯಾರ್ಥಿನಿಗೆ ದ್ರೋಹ ಮಾಡಿದ್ದಲ್ಲದೆ ಕ್ರೂರ ಚಿತ್ರಹಿಂಸೆಗೆ ಒಳಪಡಿಸಲಾಗಿದೆ. ಆರೋಪಿ ತನ್ನ ಸಂಗಾತಿಯ ದೇಹದ ಮೇಲೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ್ದಾನೆ. ಗುರುಗ್ರಾಮ್ ಪೊಲೀಸರು ಆರೋಪಿ ಶಿವಮ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ತ್ರಿಪುರ ನಿವಾಸಿಯಾಗಿರುವ ಸಂತ್ರಸ್ತೆಗೆ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಕೆಗೆ ತೀವ್ರ ಸುಟ್ಟಗಾಯಗಳಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ. ತ್ರಿಪುರಾ ಬಾಲಕಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಜೀವಕ್ಕಾಗಿ ಹೋರಾಡುತ್ತಿದ್ದಾಳೆ. ಈ ಮಧ್ಯೆ ಆಕೆಯ ತಾಯಿಗೆ ಸಮಾಧಾನ […]
ಮಂಗಳೂರು | ದೈಹಿಕ ಹಲ್ಲೆ, ಮಾನಸಿಕ ನಿಂದನೆ: ಕಾಂಗ್ರೆಸ್’ಗೆ ನವನೀತ್ ಉಳ್ಳಾಲ್ ರಾಜೀನಾಮೆ

ಮಂಗಳೂರು: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತನಕ್ಕೆ ರಾಜೀನಾಮೆ ಸಲ್ಲಿಸಿದ ಯುವ ನಾಯಕ ನವನೀತ್ ಉಳ್ಳಾಲ್ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆ ಪತ್ರದಲ್ಲಿ. ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನಲ್ಲಿ ಕಳೆದ ಒಂದುವರೆ ವರ್ಷಗಳಿಂದ ಅತ್ಯಂತ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಪ್ರಾಥಮಿಕ ಸದಸ್ಯ ಹಾಗೂ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಆದರೆ ಕಳೆದ ಕೆಲವು ತಿಂಗಳುಗಳಿಂದ ನನ್ನ ವಿರುದ್ಧ ಮಾರಣಾಂತಿಕ ಹಲ್ಲೆಗೆ ಷಡ್ಯಂತ್ರ, ಪಿತೂರಿ, ಕೊಲೆ ಸಂಚನ್ನು ಸ್ವಪಕ್ಷದ ಬ್ಲಾಕ್ ನಾಯಕರುಗಳಾದ ಉಸ್ಮಾನ್ ಕಲ್ಲಾಪು, […]
ಚಿನ್ನಾಭರಣ ಕಳವು ಆರೋಪ: ನಾನು ಚಿನ್ನ ಕದ್ದಿಲ್ಲ, ಕುರಾನ್ ಮೇಲೆ ಕೈಯಿಟ್ಟು ಹೇಳಿದರೂ ಕೇಳುತ್ತಿಲ್ಲ; ಎರಡು ಮಕ್ಕಳ ತಾಯಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ

ಕಾಸರಗೋಡು: ಕಳ್ಳತನ ದೂರಿನಲ್ಲಿ ತನ್ನ ಹೆಸರು ಉಲ್ಲೇಖಿಸಲ್ಪಟ್ಟಿದ್ದರಿಂದ ಮಾನಸಿಕವಾಗಿ ನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರು ಕಾಸರಗೋಡು ಆಲಂಬಾಡಿಯ ನಲ್ತಡುಕ್ಕದ ಜಸೀಲಾ. ಇತ್ತೀಚೆಗೆ ನಡೆದ ಚಿನ್ನ ಕಳ್ಳತನ ದೂರಿನಲ್ಲಿ ಜಸೀಲಾ ಅವರ ಹೆಸರು ಇತ್ತು. ಘಟನೆಯಲ್ಲಿ ವಿಚಾರಣೆಗೆ ಅವರನ್ನು ಕರೆಸಲಾಗಿದ್ದರೂ ಪ್ರಕರಣ ದಾಖಲಾಗಿಲ್ಲ. ಜಸೀಲಾ ಅವರ ಸ್ನೇಹಿತೆ ಮನೆಯಿಂದ ಒಂಬತ್ತು ಪವನ್ ಚಿನ್ನದ ತುಂಡುಗಳು ಕಾಣೆಯಾಗಿವೆ ಎಂದು ದೂರು ದಾಖಲಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಜಸೀಲಾ ಅವರ ಮರಣದ ಹೇಳಿಕೆಯನ್ನು […]
ಮಂಗಳೂರು: Ludo ಆಟದ ಕಾಯ್ನ್ ನುಂಗಿ ಬಾಲಕಿ ಸಾವು

ಉಳ್ಳಾಲ: ಮನೆಯಲ್ಲಿ ಲ್ಯುಡೊ ಆಟದಲ್ಲಿ ತೊಡಗಿದ್ದ ಎಂಟು ವರ್ಷದ ಬಾಲಕಿ ಆಟಕ್ಕೆ ಬಳಸುವ ಶಂಕಾಕೃತಿಯ ಪ್ಲಾಸ್ಟಿಕ್ ಕಾಯ್ನ್ ಅನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ ಎಂಬಲ್ಲಿ ಶನಿವಾರ ನಡೆದಿದೆ. ಕಾಸರಗೋಡು ಜಿಲ್ಲೆಯ ಮಧೂರು ಉಳಿಯತಡ್ಕ ನಿವಾಸಿ ರಾಜೇಶ್ ಗಟ್ಟಿ ಮತ್ತು ರಾಜೇಶ್ವರಿ ದಂಪತಿಯ ಎರಡನೇ ಪುತ್ರಿ ತನುಷ್ಕಾ ಮೃತ ದುರ್ದೈವಿ. ತನುಷ್ಕಾ ತಾಯಿ ಉಳ್ಳಾಲದ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು ಉದ್ಯೋಗಕ್ಕೆ ತೆರಳಲು ಅನುಕೂಲವಾಗುವಂತೆ ಕೊಲ್ಯದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಶನಿವಾರ ಮಧ್ಯಾಹ್ನ ಶಾಲೆಗೆ ರಜೆ […]