Flash News

Mangalore | ಡ್ರಗ್ಸ್ ವಿರುದ್ಧ ಕಮಿಷನರ್ ಸಮರ: ಇಂಜಿನಿಯರಿಂಗ್, ಮೆಡಿಕಲ್ ವಿದ್ಯಾರ್ಥಿಗಳ ದಿಢೀರ್ ತಪಾಸಣೆ

ಸುಹೈಲ್ ಕಂದಕ್ ಪೊಲೀಸರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ನಶೆ ಮುಕ್ತ ಮಂಗಳೂರು’ ಅಭಿಯಾನಕ್ಕೆ ದೊಡ್ಡ ಯಶಸ್ಸು ಮಂಗಳೂರು: ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಇದೇ ಮೊದಲ ಬಾರಿಗೆ ಮೆಡಿಕಲ್, ಇಂಜಿನಿಯರಿಂಗ್ ಓದುತ್ತಿರುವ ಕೇರಳದ ವಿದ್ಯಾರ್ಥಿಗಳನ್ನು ದಿಢೀರ್ ಆಗಿ ಡ್ರಗ್ಸ್ ತಪಾಸಣೆಗೆ ಒಳಪಡಿಸಿದ್ದಾರೆ. ಯಾವುದೇ ಮುನ್ಸೂಚನೆ ನೀಡದೆ ಒಂದೇ ದಿನ 200 ಮಂದಿಯನ್ನು ತಪಾಸಣೆ ನಡೆಸಿದ್ದು ಎಲ್ಲರೂ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. ಇತ್ತೀಚೆಗೆ ಡ್ರಗ್ಸ್ ವಿರುದ್ಧ ಕಠಿಣ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ […]

ಪೌರಾಯುಕ್ತೆಗೆ ಧಮ್ಕಿ ಕೇಸ್‌: ಖಾಕಿ ಕೈಗೆ ಸಿಗದ ಕಾಂಗ್ರೆಸ್ಸಿಗ!

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಆಯುಕ್ತೆ ಅಮೃತಗೌಡ ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡ ಧಮ್ಕಿ ಪ್ರಕರಣ ಸಂಬಂಧ ಪ್ರತ್ಯೇಕವಾಗಿ 2 ದೂರುಗಳು ದಾಖಲಾಗಿ 3 ದಿನ ಕಳೆದರೂ ಇನ್ನೂ ಆತನ ಬಂಧನ ಸಾಧ್ಯವಾಗಿಲ್ಲ. ರಾಜೀವ್‌ಗೌಡ ಬಂಧನಕ್ಕಾಗಿ ಎಸ್ಪಿ ಕುಶಲ್ ಚೌಕ್ಸೆ, ಚಿಂತಾಮಣಿ ಉಪ ವಿಭಾಗದ ಆರಕ್ಷಕ ಉಪಾಧೀಕ್ಷಕ ಪಿ.ಮುರಳೀಧರ್ ಮಾರ್ಗದರ್ಶನದಲ್ಲಿ ಶಿಡ್ಲಘಟ್ಟ ಠಾಣೆ ಸಿಪಿಐ ಆನಂದ್ ಕುಮಾರ್ ನೇತೃತ್ವದಲ್ಲಿ 2 ಪ್ರತ್ಯೇಕ ತಂಡಗಳನ್ನು ರಚಿಸಿ ವಿವಿಧೆಡೆ ಬುಧವಾರದಿಂದಲೇ ಕಾರ್ಯಾಚರಣೆಗೆ ಇಳಿದರೂ ರಾಜೀವ್‌ಗೌಡ ಬಂಧನ ಪೊಲೀಸರಿಗೆ ಸವಾಲಾಗಿದೆ. ಶಿಡ್ಲಘಟ್ಟ ಠಾಣೆಯಲ್ಲಿ ನಗರಸಭೆ […]

ವಲಸೆ ಕಾರ್ಮಿಕರ ಮನೆಗಳಿಗೆ ಅಕ್ರಮ ಪ್ರವೇಶ: ಪುನೀತ್ ಕೆರೆಹಳ್ಳಿ ಬಂಧನ

ಬೆಂಗಳೂರು: ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳಿಗೆ ಬೇಡಿಕೆ ಇಟ್ಟು, ಬೆದರಿಕೆ ಹಾಗೂ ಭೀತಿಯನ್ನುಂಟುಮಾಡುತ್ತಿರುವʼ ಗಂಭೀರ ಆರೋಪದ ಮೇಲೆ ಕೊಲೆ‌ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ‘ದ್ವೇಷದ ಮಾತಿನ ವಿರುದ್ದ ಜನಾಂದೋಲನ/ Campaign Against Hate Speech’ ವತಿಯಿಂದ email ಮೂಲಕ ಮನವಿ ಸಲ್ಲಿಸಲಾಗಿತ್ತು. ʼಸ್ವತಃ ಆತನೇ ಸಾಮಾಜಿಕ […]

ಅಮೆಜಾನ್ ಮಳೆಕಾಡಿನ ಅನ್-ಕಾಂಟ್ಯಾಕ್ಟೆಡ್ ಬುಡಕಟ್ಟು ಜನರ ವಿಡಿಯೋ ವೈರಲ್‌

ಬ್ರೆಜಿಲ್: ಆಧುನಿಕ ನಾಗರಿಕತೆಯ ಯಾವುದೇ ಪರಿಚಯವಿಲ್ಲದೆ, ದಟ್ಟ ಅಮೆಜಾನ್ ಮಳೆಕಾಡಿನ ಮಧ್ಯೆ ಬದುಕುತ್ತಿರುವ ರಹಸ್ಯ ಬುಡಕಟ್ಟು ಜನಾಂಗವೊಂದರ ಇಲ್ಲಿಯವರೆಗೆ ಯಾರೂ ಕಾಣದ ಅತ್ಯಂತ ಸ್ಪಷ್ಟವಾದ ವಿಡಿಯೋ ಈಗ ಬಿಡುಗಡೆಯಾಗಿವೆ. ಖ್ಯಾತ ಪರಿಸರ ಸಂರಕ್ಷಣಾವಾದಿ ಮತ್ತು ಲೇಖಕ ಪಾಲ್ ರೊಸೋಲಿ ಅವರು ಈ ದೃಶ್ಯಗಳನ್ನು ಸಂಶೋಧಕ ಲೆಕ್ಸ್ ಫ್ರಿಡ್‌ಮನ್ ಅವರ ಕಾರ್ಯಕ್ರಮದಲ್ಲಿ ಹಂಚಿಕೊಂಡಿದ್ದು, ಇದು ಜಗತ್ತಿನಲ್ಲೇ ಮೊದಲ ಬಾರಿಗೆ ಸೆರೆಯಾದ ಅತ್ಯಂತ ವಿಶಿಷ್ಟ ದೃಶ್ಯ ಎಂದು ಬಣ್ಣಿಸಿದ್ದಾರೆ. ಸುಮಾರು ಎರಡು ದಶಕಗಳಿಂದ ಅಮೆಜಾನ್ ಕಾಡುಗಳಲ್ಲಿ ಕೆಲಸ ಮಾಡುತ್ತಿರುವ ರೊಸೋಲಿ, […]

₹ 1 ಕೋಟಿ ಲಾಟರಿ ಬಹುಮಾನ ಗೆದ್ದ ಸಾದಿಕ್‌ ಅಪಹರಣ

ಕಣ್ಣೂರು: ಪೆರವೂರ್‌ನಲ್ಲಿ ₹ 1 ಕೋಟಿ ಲಾಟರಿ ಬಹುಮಾನ ಗೆದ್ದ ವ್ಯಕ್ತಿಯನ್ನು ಗುಂಪೊಂದು ಅಪಹರಿಸಿ, ಟಿಕೆಟ್‌ ಕಸಿದುಕೊಂಡಿರುವ ಪ್ರಕರಣ ವರದಿಯಾಗಿದೆ. ಪೆರವೂರ್‌ನ ಸಾದಿಕ್‌ ಎ.ಕೆ. (46) ಎಂಬವರು ಡಿಸೆಂಬರ್‌ 30ರಂದು ನಡೆದ ‘ಲಕ್ಕಿ ಡ್ರಾ’ ವೇಳೆ ಬಹುಮಾನ ಗೆದ್ದಿದ್ದರು. ಅವರನ್ನು ಅಪಹರಿಸಿರುವ ಐವರು ಆರೋಪಿಗಳ ಗುಂಪು ‘ಸ್ತ್ರೀ ಶಕ್ತಿ ಲಾಟರಿ’ ಟಿಕೆಟ್‌ ಅನ್ನು ಕಸಿದುಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆರೋಪಿಗಳ ಗುಂಪಿನ ಒಬ್ಬನನ್ನು ವಶಕ್ಕೆ ಪಡೆದಿರುವ ಪೊಲೀಸರು, ಉಳಿದವರಿಗಾಗಿ ಬಲೆ ಬೀಸಿದ್ದಾರೆ. ‘ಬಹುಮಾನದ ಮೊತ್ತದಲ್ಲಿ ಒಂದಿಷ್ಟು ಹಣ ತೆರಿಗೆ ರೂಪದಲ್ಲಿ ತಕ್ಷಣವೇ […]

ಪುನೀತ್ ಕೆರೆಹಳ್ಳಿ, ಸಹಚರರ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ

ಬೆಂಗಳೂರು : ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ‘ದ್ವೇಷದ ಮಾತಿನ ವಿರುದ್ದ ಜನಾಂದೋಲನ/ Campaign Against Hate Speech’ ವತಿಯಿಂದ email ಮೂಲಕ ಮನವಿ ಸಲ್ಲಿಸಲಾಗಿದೆ. ʼಪುನೀತ್ ಕೆರೆಹಳ್ಳಿ ಎಂಬ ಕೊಲೆ‌ ಆರೋಪಿ ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳಿಗೆ ಬೇಡಿಕೆ ಇಟ್ಟು, ಬೆದರಿಕೆ ಹಾಗೂ ಭೀತಿಯನ್ನುಂಟುಮಾಡುತ್ತಿರುವʼ ಗಂಭೀರ ಆರೋಪಗಳನ್ನು ಮನವಿಯಲ್ಲಿ ವಿವರಿಸಲಾಗಿದೆ. ʼಸ್ವತಃ ಆತನೇ ಸಾಮಾಜಿಕ […]

ಹಿಂದೂ ಹುಡುಗಿಗೆ ಬುರ್ಖಾ ತೊಡಿಸಿದ ಮುಸ್ಲಿಂ ಸ್ನೇಹಿತೆಯರು!

ಮೊರಾದಾಬಾದ್: ಮುಸ್ಲಿಂ ಸ್ನೇಹಿತೆಯರ ಗುಂಪೊಂದು ಹಿಂದೂ ಹುಡುಗಿಗೆ ಬುರ್ಖಾ ತೊಡಿಸಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಈ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನ ಬಿಲಾರಿ ಪ್ರದೇಶದ ಸಾಹುಕುಂಜ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ವಿಡಿಯೋ ಇದೀಗ ವ್ಯಾಪಕ ಸಂಚಲನ ಮೂಡಿಸಿದೆ. ಪ್ರಸ್ತುತ ವೈರಲ್ ಆಗಿರುವ ವಿಡಿಯೋದಲ್ಲಿ ಬುರ್ಖಾ ಧರಿಸಿದ ಕೆಲವು ಹುಡುಗಿಯರು ಸರಳ ಉಡುಪಿನಲ್ಲಿರುವ ಹಿಂದೂ ಹುಡುಗಿಯನ್ನು ಬುರ್ಖಾ ಧರಿಸಲು ಒತ್ತಾಯಿಸುತ್ತಿರುವುದು ಕಂಡುಬರುತ್ತದೆ. ಇದಕ್ಕೆ ಹುಡುಗಿ ನಿರಾಕರಿಸಿದಾಗ, ಅವರು “ಇದನ್ನು ಧರಿಸು, ಚೆನ್ನಾಗಿ […]

ಪುತ್ತೂರು | ಉಪ್ಪಳಿಗೆಯಲ್ಲಿ ದ್ವೇಷ ಭಾಷಣ ಪ್ರಕರಣ; ಸಂಘಟಕ ಚರಣ್’ಗೆ ಜಾಮೀನು

ಪುತ್ತೂರು: ಉಪ್ಪಳಿಗೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿದ್ವೇಷ ಭಾಷಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂಘಟಕ ಚರಣ್ ಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಳಿಗೆಯಲ್ಲಿ ಆಯೋಜಿಸಲಾಗಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಾ| ಕಲ್ಲಡ್ಕ ಪ್ರಭಾಕರ ಭಟ್ ಅವರು ದ್ವೇಷದ ಮತ್ತು ಮಹಿಳೆಯರ ವಿರುದ್ಧ ಅವಮಾನಕಾರಿಯಾದ ಭಾಷಣ ಮಾಡಿದ್ದರೆಂದು ಆರೋಪಿಸಿ ಜನವಾದಿ ಮಹಿಳಾ ಸಂಘಟನೆಯ ಈಶ್ವರಿ ಪದ್ಮುಂಜ ಅವರು ಪುತ್ತೂರು ಗ್ರಾಮಾಂತರ […]

10 ವರ್ಷದ ಕಿರಿಯ ನಟಿಯನ್ನು ಮದುವೆ ಆಗೋಕೆ ರೆಡಿಯಾದ ಸೂಪರ್‌ಸ್ಟಾರ್ ಧನುಷ್?

ತಮಿಳು ಸೂಪರ್‌ಸ್ಟಾರ್ ಧನುಷ್ ಮತ್ತು ಬಾಲಿವುಡ್-ಸೌತ್ ನಟಿ ಮೃಣಾಲ್ ಠಾಕೂರ್ ಮದುವೆಯಾಗಲಿದ್ದಾರೆ. ಇದನ್ನು ನಾವು ಹೇಳುತ್ತಿಲ್ಲ, ಬದಲಿಗೆ ಮಾಧ್ಯಮ ವರದಿಗಳು ಮೂಲಗಳನ್ನು ಉಲ್ಲೇಖಿಸಿ ಈ ಬಗ್ಗೆ ಹೇಳುತ್ತಿವೆ. ಅಷ್ಟೇ ಅಲ್ಲ, ಅವರ ಮದುವೆ ದಿನಾಂಕವನ್ನೂ ವರದಿಗಳಲ್ಲಿ ತಿಳಿಸಲಾಗಿದೆ. ವರದಿಗಳ ಪ್ರಕಾರ, 42 ವರ್ಷದ ಧನುಷ್ ಮತ್ತು 33 ವರ್ಷದ ಮೃಣಾಲ್ ಠಾಕೂರ್ ಫೆಬ್ರವರಿ 14, 2026 ರಂದು ಮದುವೆಯಾಗಬಹುದು. ಇದು ಆಪ್ತರು ಮತ್ತು ಸ್ನೇಹಿತರು ಮಾತ್ರ ಭಾಗವಹಿಸುವ ಖಾಸಗಿ ಸಮಾರಂಭವಾಗಿರಲಿದೆ ಎನ್ನಲಾಗಿದೆ. ‘ಸನ್ ಆಫ್ ಸರ್ದಾರ್ 2’ […]

ಕೊನೆಗೂ ಡೊನಾಲ್ಡ್​ ಟ್ರಂಪ್​ಗೆ ಸಿಕ್ಕೇ ಬಿಡ್ತು ನೊಬೆಲ್ ಶಾಂತಿ ಪುರಸ್ಕಾರ

ವಾಷಿಂಗ್ಟನ್: ಕೊನೆಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಗೆ ನೊಬೆಲ್ ಶಾಂತಿ ಪುರಸ್ಕಾರ ಸಿಕ್ಕಿಬಿಟ್ಟಿದೆ. ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪುರಸ್ಕಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಗೌರವ ಸೂಚಕವಾಗಿ ಪ್ರದಾನ ಮಾಡಿದ್ದಾರೆ. ಮಚಾದೊ ಅವರು ಟ್ರಂಪ್ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ವಾಷಿಂಗ್ಟನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಚಾದೊ, ಅಧ್ಯಕ್ಷ ಟ್ರಂಪ್‌ಗೆ ಪುರಸ್ಕಾರ ಪ್ರಧಾನ ಮಾಡಿರುವುದಾಗಿ ಹೇಳಿದರು. ಟ್ರಂಪ್ ಅದನ್ನು ಸ್ವೀಕರಿಸಿದ್ದಾರೆಯೇ ಎಂದು ಅವರು ಹೇಳಲಿಲ್ಲ. ಈ […]