Flash News

ಶಬರಿಮಲೆಯಿಂದ ಬಂದ ದಿನವೇ ಪತ್ನಿಯನ್ನ ಕೊಂದು ನದಿಗೆಸೆದ ಪತಿರಾಯ; ಈ ಒಂದು ಪ್ರಶ್ನೆ ಕೇಳಿದ್ದೇ ತಪ್ಪಾಯ್ತಾ?

ಹಾಸನ: ಶಬರಿಮಲೆಗೆ ಹೋಗಿ ಬಂದ ದಿನವೇ ಪತ್ನಿಯನ್ನ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. 4 ವರ್ಷಗಳಿಂದ ಗಂಡನಿಂದ ದೂರವಿದ್ದ ಪತ್ನಿ, ಇದ್ದಕ್ಕಿದ್ದಂತೆ ಗಂಡನ ಬಳಿ ಬಂದು ಎರಡನೇ ಮದುವೆ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಗಂಡನ ಕೋಪ ನೆತ್ತಿಗೇರಿದ್ದು, ಜಗಳ ತಾರಕಕ್ಕೇರಿ ಪತ್ನಿಯನ್ನ ಕೊಲೆಗೈದಿದ್ದಾನೆ ಎನ್ನಲಾಗ್ತಿದೆ. ಎರಡನೇ ಮದುವೆಯಾಗಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ‌ ಮೊದಲ‌ ಪತ್ನಿಯನ್ನೇ ಗಂಡ ಬರ್ಬರವಾಗಿ ಹತ್ಯೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಕುಮಾರ್​ ಎಂಬಾತ […]

ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಕಮೆಂಟ್​: ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಕಿಡಿ

ಚಿಕ್ಕಮಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಬಗ್ಗೆ ಅಶ್ಲೀಲ ಕಮೆಂಟ್ ಹಾಕಿದವರ ವಿರುದ್ಧ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಕಿಡಿಕಾರಿದ್ದಾರೆ. ಇನ್‌ಸ್ಟಾಗ್ರಾಮ್​ನಲ್ಲಿ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಹಾಗೂ ಅವಮಾನಕಾರಿ ಕಮೆಂಟ್‌ ಪ್ರಕರಣ ಸಂಬಂಧ ರಾಮನಗರ ಮೂಲದ ಯಕ್ಷಿತ್ ರಾಜ್ ಎಂಬಾತನನ್ನು ಮೂಡಿಗೆರೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರ್ಸನಲ್ ಮತ್ತು ರಾಜಕೀಯ ವಿಚಾರವಾಗಿ ಎರಡು ಇನ್​​ಸ್ಟಾಗ್ರಾಮ್​​ ಖಾತೆಗಳನ್ನು ಹೊಂದಿದ್ದೇನೆ. ಪರ್ಸನಲ್ ಖಾತೆಗೆ ಕೆಟ್ಟ ಕಮೆಂಟ್ ಮಾಡುತ್ತಿದ್ದಾರೆ. ವ್ಯಾಯಾಮ ಮಾಡಿದ್ರೂ ತಪ್ಪು, […]

‘ಅಜ್ಮೀರ್’ ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

ಅಜ್ಮೀರ್: ರಾಜಸ್ಥಾನದ ಪ್ರಸಿದ್ಧ ಅಜ್ಮೀರ್ ದರ್ಗಾ ಮೂಲತಃ “ಶಿವನ ದೇವಸ್ಥಾನವಾಗಿತ್ತು ಎಂದು ಪ್ರತಿಪಾದಿಸುವ ಅರ್ಜಿಯೊಂದನ್ನು ಸೋಮವಾರ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈ ಸಂಬಂಧ ಬಲಪಂಥೀಯ ಸಂಘಟನೆ ಮಹಾರಾಣಾ ಪ್ರತಾಪ್ ಸೇನೆಯ ರಾಷ್ಟ್ರೀಯ ಅಧ್ಯಕ್ಷ ರಾಜವರ್ಧನ್ ಸಿಂಗ್ ಪರ್ಮಾರ್ ಅವರು ಅಜ್ಮೀರ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಅಲ್ಲಿ ಪುರಾತತ್ವ ಸಮೀಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಅಜ್ಮೀರ್ ದರ್ಗಾ ಶಿವನ ದೇವಸ್ಥಾನವಾಗಿತ್ತು. ನಂತರ ಅದನ್ನು ದರ್ಗಾ ಮಾಡಲಾಯಿತು. ಈ ವಿವಾದದ ಬಗ್ಗೆ ಬಹಳ ಹಿಂದಿನಿಂದಲೂ ಹೋರಾಡುತ್ತಿದ್ದೇನೆ. ಈ ಹಿಂದೆ ರಾಷ್ಟ್ರಪತಿಗಳಿಗೂ ಮನವಿ ಸಲ್ಲಿಸಲಾಗಿತ್ತು. […]

ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!

ಇತ್ತೀಚೆಗೆ ರಿಲೀಸ್‌ ಆಗಿರುವ ನಟ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಚಿತ್ರದ ಟೀಸರ್‌ ವಿರುದ್ಧ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ರಾಜ್ಯ ಮಹಿಳಾ ಆಯೋಗಕ್ಕೆ ಅಧಿಕೃತ ದೂರು ಸಲ್ಲಿಸಿದೆ. ಟೀಸರ್‌ನಲ್ಲಿ ಕಾಣಿಸಿರುವ ಕೆಲವು ದೃಶ್ಯಗಳು ಅಶ್ಲೀಲವಾಗಿದ್ದು ಮಹಿಳೆಯರು ಮತ್ತು ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟು ಮಾಡುತ್ತಿವೆ ಎಂದು ಆರೋಪಿಸಿ ಬೆಂಗಳೂರಿನಲ್ಲಿರುವ ರಾಜ್ಯ ಮಹಿಳಾ ಅಯೋಗದ ಕಚೇರಿಗೆ ದೂರು ನೀಡಿದೆ. ಜೊತೆಗೆ ಆ ದೃಶ್ಯವನ್ನ ತೆಗೆದುಹಾಕುವಂತೆ ಮನವಿ ಮಾಡಿದೆ. ಮಹಿಳಾ ಆಯೋಗದ ಅಧ್ಯಕ್ಷೆ […]

Mangaluru | ಬಾಂಗ್ಲಾ ಪ್ರಜೆ ಎಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ: ಮೂವರು ಆರೋಪಿಗಳ ಬಂಧನ

ಮಂಗಳೂರು: ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಕೂಳೂರು ಗ್ರಾಮ ನಿವಾಸಿಗಳಾದ ರತೀಶ್ ದಾಸ್ ಯಾನೆ ಲಾಲು (32), ಧನುಷ್ (24) ಮತ್ತು ಸಾಗರ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಜ. 11ರಂದು ಸಂಜೆ ಸುಮಾರು 6:05ರ ವೇಳೆಗೆ ನಾಲ್ವರು ಆರೋಪಿಗಳು ಜಾರ್ಖಂಡ್ ಮೂಲದ ದಿಲ್ಜಾನ್ […]

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಆರೋಪಿಗೆ ಜಾಮೀನು

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಅವಹೇಳನಕಾರಿ ಮತ್ತು ಅಶ್ಲೀಲ ಹೇಳಿಕೆ ನೀಡಿರುವ ಆರೋಪದಲ್ಲಿ ಯುವಕನಿಗೆ ಜಾಮೀನು ಮಂಜೂರಾಗಿದೆ. ಶಾರೂಕ್ ಕೊಪ್ಪಳ ಎನ್ನುವವರ ವಿರುದ್ಧ ಬಂಟ್ವಾಳ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಲ್ಲಡ್ಕ ಶ್ರೀರಾಮ ಶಾಲೆಯ ಸಿಬ್ಬಂದಿ ಸೀತಾರಾಮ ಆಚಾರ್ಯ ಅವರ ಮಗ ಕೃಷ್ಣಪ್ಪ ಅನ್ನುವವರು ಕೊಟ್ಟ ದೂರಿನ ಅನ್ವಯ ಬಂಟ್ವಾಳ ಟೌನ್ ಪೊಲೀಸ್ ಠಾಣೆ ಪೊಲೀಸರು FIR ಮಾಡಿ ಕ್ರೈಂ ನಂಬರ್ 129/2025 ರಂತೆ ಕೇಸ್ ಧಾಖಲಿಸಿದ್ದರು. ಈ ಪ್ರಕರಣದಲ್ಲಿ ಆರೋಪಿತರು ಮಂಗಳೂರಿನ ಗೌರವಾನ್ವಿತ […]

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

‘PFI ನಿಷೇಧಿಸುವಾಗ LDF ಮತ್ತು UDF ವಿರೋಧಿಸಿಲ್ಲ, ನಾನು ದೇಶಾದ್ಯಂತ ಎಲ್ಲಿಗೆ ಹೋದರೂ ಸ್ಪಷ್ಟವಾಗಿ ಹೇಳುತ್ತೇನೆ‘ ತಿರುವನಂತಪುರಂ: ಕೇರಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಸದ್ಯಕ್ಕೆ ಶಾಂತವಾಗಿರಬಹುದು ಆದರೆ ಅನೇಕ ಬೆದರಿಕೆಗಳು ನಿಧಾನವಾಗಿ ಹೊರಹೊಮ್ಮುತ್ತಿದ್ದು, ಭವಿಷ್ಯದಲ್ಲಿ ಅಪಾಯಕಾರಿಯಾಗಬಹುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ. ಮಲಯಾಳಂನ ಪ್ರಮುಖ ಪತ್ರಿಕೆ ಕೇರಳ ಕೌಮುದಿ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಕೆಲವು ಸಂಘಟನೆಗಳ ಪಾತ್ರವನ್ನು ಪ್ರಶ್ನಿಸಿದರು ಮತ್ತು ಅವರು ನಿಜವಾಗಿಯೂ ಜನರನ್ನು ಸುರಕ್ಷಿತವಾಗಿರಿಸಲು ಸಾಧ್ಯವೇ? ಸಹಬಾಳ್ವೆಯಲ್ಲಿ ನಂಬಿಕೆಯಿಲ್ಲದವರು […]

ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಸಾವಿನ ಪ್ರಕರಣಕ್ಕೆ ಟ್ವಿಸ್ಟ್: ತನಿಖೆಯಲ್ಲಿ ಕೊಲೆ ರಹಸ್ಯ ಬಯಲು

ಬೆಂಗಳೂರು: ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಸಾಫ್ಟ್‌ವೇರ್​ ಉದ್ಯೋಗಿ ಶರ್ಮಿಳಾ ನಿಗೂಢ ಸಾವು ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಆರಂಭದಲ್ಲಿ ನಿಗೂಢ ಸಾವೆಂದು ಪರಿಗಣಿಸಲಾಗಿದ್ದ ಈ ಪ್ರಕರಣ, ಪೊಲೀಸರ ತನಿಖೆ ವೇಳೆ ಹತ್ಯೆಯೆಂದು ದೃಢಪಟ್ಟಿದೆ. ಶರ್ಮಿಳಾ ಕೊಲೆಯಾಗಿರುವುದು ತನಿಖೆಯಿಂದ ದೃಢಪಟ್ಟಿದ್ದು, 18 ವರ್ಷದ ಯುವಕ ಕರ್ಣಲ್ ಕುರೈ ಈ ಕೃತ್ಯ ಎಸಗಿರುವುದು ಬಯಲಾಗಿದೆ. ಸುಬ್ರಮಣ್ಯ ಲೇಔಟ್‌ನಲ್ಲಿ ಶರ್ಮಿಳಾ ವಾಸವಿದ್ದ ಮನೆಯ ಎದುರು ಮನೆಯಲ್ಲಿ ನೆಲೆಸಿದ್ದ ಕರ್ಣಲ್ ಕುರೈ, ಶರ್ಮಿಳಾರನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದನು. ಆದರೆ, ಈ […]

Mangaluru: ಬಾಂಗ್ಲಾ ಪ್ರಜೆ ಎಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ.. ಪ್ರಕರಣ ದಾಖಲು

ಮಂಗಳೂರು: ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನನ್ನು ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ, ನಾಲ್ವರು ವ್ಯಕ್ತಿಗಳು ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿ ಹಲ್ಲೆ ನಡೆಸಿದ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಆರೋಪಿಗಳನ್ನು ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್, ಮೋಹನ್ ಎಂದು ಗುರುತಿಸಲಾಗಿದೆ. ಜಾರ್ಖಂಡ್ ಮೂಲದ ದಿಲ್‌ಜಾನ್ ಅನ್ಸಾರಿ ಕಳೆದ 10–15 ವರ್ಷಗಳಿಂದ ವಲಸೆ ಕಾರ್ಮಿಕನಾಗಿ ಜೀವನ ನಡೆಸುತ್ತಿದ್ದು, ಸ್ಥಳೀಯರಾದ ಈ ನಾಲ್ವರು ಆರೋಪಿಗಳು ಸತತವಾಗಿ “ನೀನು ಬಾಂಗ್ಲಾದೇಶದ […]

ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬಿಜೆಪಿ ಮಾಜಿ ಕಾರ್ಪೊರೇಟರ್​ ಶವ ಪತ್ತೆ; ಅಸಲಿಗೆ ನಡೆದಿದ್ದೇನು?

ದಾವಣಗೆರೆ: ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬಿಜೆಪಿ‌ ಮಾಜಿ ಕಾರ್ಪೊರೇಟರ್ ಶವ ಪತ್ತೆಯಾಗಿದೆ. ಇದು ದಾವಣಗೆರೆಯ 43ನೇ ವಾರ್ಡ್ ಮಾಜಿ ಕಾರ್ಪೊರೇಟರ್ ಸಂಕೋಳ್ ಚಂದ್ರಶೇಖರ್ (Sankol Chandrasekhar)​ ಮೃತ ದೇಹ ಎಂದು ಗುರುತಿಸಲಾಗಿದೆ. ಚಂದ್ರಶೇಖರ್ ಸಾವು ಹಲವು ಅನುಮಾನಕ್ಕೆ ಕಾರಣವಾಗಿದೆ. ಅತ್ತ ಮಾಜಿ ಕಾರ್ಪೊರೇಟರ್​ನ ಇಬ್ಬರು ಮಕ್ಕಳು ಆತ್ಮಹತ್ಯೆಗೆ (Suicide) ಯತ್ನಿಸಿರುವ ಘಟನೆ ಕೂಡ ನಡೆದಿದೆ. ದಾವಣಗೆರೆ ಹೊರವಲಯ ಹದಡಿ ರಸ್ತೆಯ ಬಳಿಯ ತೋಟದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಾಜಿ ಕಾರ್ಪೊರೇಟರ್ ಮೃತ ದೇಹ […]