Flash News

ಅಡ್ಡೂರು ಸರಕಾರಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಂಗಳೂರು: ಅಡ್ಡೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-2026ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ‘ಸಂಭ್ರಮ’ ಶನಿವಾರ ಶಾಲಾ ಮೈದಾನದಲ್ಲಿ ನಡೆಯಿತು. ಗುರುಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಫರಾ ನಾಸಿರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಿದಾಯತ್ ಶಾಲೆಯ ಭವಿಷ್ಯದ ಬೆಳವಣಿಗೆಯ ಬಗ್ಗೆ ಬೆಳಕು ಚೆಲ್ಲಿದರು. ಮಂಗಳೂರು ಶಿಕ್ಷಣ ವಿಭಾಗದ ಬಿಇಒ ಮತ್ತು ಸಿಆರ್ ಪಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಯು.ಪಿ.ಇಬ್ರಾಹೀಂ ಮತ್ತು ಅಶ್ರಫ್ ನಡುಗುಡ್ಡೆ ಅತಿಥಿಗಳಾಗಿ […]

ಮಂಜೇಶ್ವರ | ಕುಟುಂಬ ಕಲಹದಲ್ಲಿ ಕೊಲೆಗೀಡಾದವರ ಸಂಖ್ಯೆ 2ಕ್ಕೆ ಏರಿಕೆ

ಮಂಜೇಶ್ವರ: ಮಂಜೇಶ್ವರ ತೂಮಿನಾಡುವಿನ ಹಿಲ್ ಟಾಪ್ ನಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿ ನಡೆದ ಕುಟುಂಬ ಕಲಹದಲ್ಲಿ ಕೊಲೆಗೀಡಾದವರ ಸಂಖ್ಯೆ ಎರಡಕ್ಕೇರಿದೆ. ಮಾರಣಾಂತಿಕವಾಗಿ ಇರಿತಕ್ಕೆ ಒಳಗಾಗಿದ್ದ ಶೇಕುಂಞಿ ಎಂಬವರು ಇಂದು(ಫೆ.3) ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರ ಪತ್ನಿಯ ಅಕ್ಕನ ಮಗಳು ಜುಮೈಲಾ(17) ಸೋಮವಾರ ಸಂಜೆ ಕೊಲೆಯಾಗಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞಿ ಇದೀಗ ಕೊನೆಯುಸಿರೆಳೆದಿದ್ದಾರೆ. ಜುಲೈಲಾ ಅವರ ತಂದೆ ಉಮರ್ ಫಾರೂಕ್ ಕೊಲೆ ಆರೋಪಿಯಾಗಿದ್ದಾನೆ. ಕುಟುಂಬ ಕಲಹ, ಆಸ್ತಿ ವಿಚಾರವಾಗಿ ಉಮರ್ ಫಾರೂಕ್ ಮತ್ತು ಆತನ ಪತ್ನಿಯ ತಂಗಿ(ನಾದಿನಿ)ಯ […]

ಮಂಜೇಶ್ವರ | ತಂದೆಯಿಂದ ಮಗಳ ಕೊಲೆ: ಆರೋಪಿ ಉಮ್ಮರ್ ಫಾರೂಕ್ ಬಂಧನ

ಕಾಸರಗೋಡು: 18 ವರ್ಷದ ಮಗಳನ್ನು ತಂದೆಯೇ ಕಡಿದು ಕೊಲೆಗೈದಿದ್ದಾನೆ ಎನ್ನಲಾದ ದಾರುಣ ಘಟನೆ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ ಇಂದು ಸಂಜೆ ನಡೆದಿದೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ತಿಳಿದುಬಂದಿದೆ.ತೂಮಿನಾಡಿನ ಜುಮೈಲಾ ಕೊಲೆಗೀಡಾದ ಯುವತಿ. ಕೃತ್ಯ ನಡೆಸಿದ ಆರೋಪದಲ್ಲಿ ತಂದೆ ಉಮ್ಮರ್ ಫಾರೂಕ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿರುಚಾಟದ ಶಬ್ದ ಕೇಳಿ ಪರಿಸರ ವಾಸಿಗಳು ಸ್ಥಳಕ್ಕೆ ಬಂದಾಗ ಜುಮೈಲಾ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಜೀವ […]

ನನ್ನ ಭಾಷಣದ ಕಾರಣಕ್ಕೆ ಒಂದೇ ಒಂದು ಗಲಾಟೆ, ಸಂಘರ್ಷ ಆಗಿದ್ದು ಇದೆಯಾ?: ಶರಣ್ ಪಂಪ್ವೆಲ್

ಮಂಗಳೂರು : ನನ್ನ ಭಾಷಣದ ಕಾರಣಕ್ಕೆ ಒಂದೇ ಒಂದು ಗಲಾಟೆ, ಸಂಘರ್ಷ ಆಗಿದ್ದು ಇದೆಯಾ..? ನನ್ನ ಭಾಷಣ ಕೇಳಿ ಯಾರು ಕೂಡ ಪೊಲೀಸ್ ಜೀಪಿಗೆ ಬೆಂಕಿ ಹಾಕಲ್ಲ, ಪೊಲೀಸರಿಗೆ ಕಲ್ಲು ಬಿಸಾಕಿದ್ದು ಇಲ್ಲ. ಪಾಕಿಸ್ತಾನಕ್ಕೆ ಜೈಕಾರ ಹಾಕಲ್ಲ, ದೇಶ ವಿರೋಧಿ ಘೋಷಣೆ ಹಾಕುವ ತುಕ್ಡೇ ಗ್ಯಾಂಗ್ ನಿರ್ಮಾಣವಂತೂ ಆಗಲ್ಲ, ಬಜರಂಗದಳ ರೀತಿಯ ದೇಶಭಕ್ತರ ಸಂಘಟನೆ ಸೃಷ್ಟಿಯಾಗಬಹುದು ವಿನಾ ಯಾರೂ ದೇಶ ವಿರೋಧಿ ಘೋಷಣೆ ಕೂಗಲ್ಲ. ನನ್ನ ಭಾಷಣದ ಕಾರಣಕ್ಕೆ ಗಲಾಟೆಯಾಗುತ್ತೆ ಎಂದು ಈಗ ಸರ್ಕಾರ, ಪೊಲೀಸರು ನಿರ್ಬಂಧ […]

ಸಿ.ಟಿ ರವಿಗೆ ಡಾಕ್ಟರೇಟ್ ಪ್ರದಾನ

ಚಿಕ್ಕಮಗಳೂರು: ಮೈಸೂರಿನಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ಅವರಿಂದ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಪಿಎಚ್‌ಡಿ ಪದವಿ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಸಿ.ಟಿ.ರವಿ, ಓದುವುದು ಪ್ರಮುಖ ಆಸಕ್ತಿಯಾಗಿದ್ದು, ಕೆಎಸ್‌ಒಯುನಲ್ಲಿ ರಾಜಕೀಯ ಶಾಸ್ತ್ರದ ಪ್ರಾಧ್ಯಾಪಕ ಡಾ। ಕೆ.ಜೆ. ಸುರೇಶ್ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ನಿರಂತರ 4 ವರ್ಷಗಳ ಅಧ್ಯಯನದ ಬಳಿಕ 2023ರಲ್ಲಿ ಪೂರ್ಣಗೊಳಿಸಿ, ಮಂಡಿಸಿದೆ. ಯುಪಿಎ ಮತ್ತು ಎನ್‌ಡಿಎ ಒಕ್ಕೂಟಗಳ ಮೈತ್ರಿಕೂಟ ಸರ್ಕಾರಗಳನ್ನು ತುಲನಾತ್ಮಕವಾಗಿ ಅಧ್ಯಯನ ಮಾಡಿ ಮಹಾ […]

ರಿಶೇಲ್ ಡಿಸೋಜಾ ಆತ್ಮಹತ್ಯೆ: ಕೊನೆಗೂ JDS ನಾಯಕಿ ಚೈತ್ರಾ ಕೋಠಾರಕರ್ ಪುತ್ರ ಅರೆಸ್ಟ್

ಕಾರವಾರ : ಕಾರವಾರ ತಾಲೂಕಿನ ಕದ್ರಾ ಗ್ರಾಮದ ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಎರಡು ಗ್ರಾಮಗಳ ಮಧ್ಯೆ ವೈಮನಸ್ಸಿಗೂ ಕಾರಣವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜೆಡಿಎಸ್ ಸ್ಥಳೀಯ ನಾಯಕಿ ಚೈತ್ರಾ ಕೋಠಾರಕರ್ ಪುತ್ರ, ಆರೋಪಿತ ಚಿರಾಗ್ ನನ್ನ ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವು ಕ್ರಿಶ್ಚಿಯನ್ ಸಮುದಾಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಯ ಬಂಧನಕ್ಕೆ ಆಗ್ರಹಿಸಿ ಕಾರವಾರದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಇದೀಗ ದೂರು ದಾಖಲಾಗಿ 20 ದಿನಗಳ ಬಳಿಕ ಆರೋಪಿಯನ್ನು ಬಂಧಿಸುವಲ್ಲಿ […]

ಕೊಡಗಿನ ಯುವತಿಯರ ಜೊತೆ ಲವ್ವಿಡವ್ವಿ; ಖಾಸಗಿ ಕ್ಷಣ ಚಿತ್ರೀಕರಿಸಿ ವಿಕೃತಿ, BBA ವಿದ್ಯಾರ್ಥಿ ಸವದ್‌ ಅರೆಸ್ಟ್

ಮಡಿಕೇರಿ:ಕಳೆದ ಕೆಲವು ದಿನದಿಂದ ಕೊಡಗು ಜಿಲ್ಲೆಯಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದ ಕಾಲೇಜು ವಿದ್ಯಾರ್ಥಿನಿಯರ ಜೊತೆಗಿದ್ದ ಖಾಸಗಿ ಕ್ಷಣಗಳ ದೃಶ್ಯ ಚಿತ್ರೀಕರಿಸಿದ್ದ ವಿಡಿಯೋ ವೈರಲ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮೊಹಮ್ಮದ್ ಸವದ್‌ನನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಕೊಡಗು ಜಿಲ್ಲೆಯಾದ್ಯಂತ ಸೋಶಿಯಲ್‌ ಮೀಡಿಯಾದಲ್ಲಿ ಅಸಭ್ಯ ವಿಡಿಯೋ ಹರಿದಾಡುತ್ತಿರುವ ಬಗ್ಗೆ ತನಿಖೆ ಶುರು ಮಾಡಿದ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿ, ಆರೋಪಿ ಮೊಹಮ್ಮದ್ ಸವದ್‌ನನ್ನು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ, ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿರುವ ಕಾಲೇಜಿನಲ್ಲಿ ಮೊಹಮ್ಮದ್ […]

ಇಂದು ಚುನಾವಣೆ ನಡೆದರೆ NDA 352, ಇಂಡಿಯಾ 182 ಸ್ಥಾನ ಗೆಲುವು: ಇಂಡಿಯಾ ಟುಡೇ ಸಮೀಕ್ಷೆ

ಇಂಡಿಯಾ ಟುಡೇ-ಸಿ ವೋಟರ್ ನಡೆಸಿದ ‘ಮೂಡ್ ಆಫ್ ದಿ ನೇಷನ್’ ಸಮೀಕ್ಷೆಯ ಪ್ರಕಾರ, ಇಂದು ಲೋಕಸಭಾ ಚುನಾವಣೆ ನಡೆದರೆ ಎನ್‌ಡಿಎ ಮೈತ್ರಿಕೂಟ 352 ಸ್ಥಾನಗಳನ್ನು ಗೆಲ್ಲಲಿದೆ. ಇದಕ್ಕೆ ಪ್ರತಿಯಾಗಿ, ಇಂಡಿಯಾ ಒಕ್ಕೂಟವು 182 ಸ್ಥಾನಗಳಿಗೆ ಕುಸಿಯಲಿದೆ ಎಂದು ಸಮೀಕ್ಷೆ ತಿಳಿಸಿದೆ. ಇಂದು ಲೋಕಸಭಾ ಚುನಾವಣೆಯೇನಾದರೂ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಒಟ್ಟು 543 ಲೋಕಸಭಾ ಕ್ಷೇತ್ರಗಳ ಪೈಕಿ 352ರಲ್ಲಿ ಭರ್ಜರಿ ಗೆಲುವು ಸಾಧಿಸಲಿದೆ. ಇಂಡಿಯಾ ಒಕ್ಕೂಟ 182 ಸ್ಥಾನಗಳಿಗೆ ತೃಪ್ತಿಪಡಲಿದೆ ಎಂದು ಇಂಡಿಯಾ ಟುಡೇ-ಸಿ ವೋಟರ್ […]

ಅಜಿತ್‌ ಪವಾರ್‌ ವಿಮಾನ ಪತನ ಕೇಸ್‌ನಲ್ಲಿ ಸ್ಫೋಟಕ ಟ್ವಿಸ್ಟ್‌: ಕೊನೇ ಕ್ಷಣದಲ್ಲಿ ಪೈಲಟ್‌ ಬದಲಾಗಿದ್ದೇಕೆ?

ಮುಂಬೈ: ಬಾರಾಮತಿಯಲ್ಲಿ ಅಜಿತ್‌ ಪವಾರ್‌ ಇದ್ದ ವಿಮಾನ ಪತನ ಪ್ರಕರಣದಲ್ಲಿ ಸ್ಫೋಟಕ ಟ್ವಿಸ್ಟ್‌ ಸಿಕ್ಕಿದೆ. ಆ ದಿನ ವಿಮಾನ ಹಾರಿಸಬೇಕಿದ್ದ ಪೈಲಟ್‌ ಬೇರೆ, ಆದ್ರೆ ಪವಾರ್‌ ಜೊತೆಗೆ ಹೋದ ಪೈಲಟ್‌ಗಳೇ ಬೇರೆ ಅನ್ನೋದು ವರದಿಗಳಿಂದ ತಿಳಿದುಬಂದಿದೆ. ಬುಧವಾರ (ಜ.28) ಅಜಿತ್‌ ಪವಾರ್‌ ಅವರು ಪ್ರಯಾಣಿಸಬೇಕಿದ್ದ ವಿಮಾನವನ್ನ ಕ್ಯಾಪ್ಟನ್ ಸುಮಿತ್ ಕಪೂರ್ ಅವರು ಹಾರಿಸಬೇಕಿತ್ತು ಎಂದು ಕಪೂರ್‌ ಅವರ ಸ್ನೇಹಿತರು ತಿಳಿಸಿರೋದಾಗಿ ವರದಿಯಾಗಿದೆ. ಕಪೂರ್ ಮೂಲತಃ ಗುರುಗ್ರಾಮ್‌ನ ನಿವಾಸಿ, ಅವರ ಸಹೋದರ ಉದ್ಯಮಿ ಆಗಿದ್ದಾರೆ. ಕಪೂರ್‌ ಅವರ ಮಗ […]

ಫೆ.1ರಂದು ಬೆಂಗಳೂರಿನಲ್ಲಿ ‘ಬ್ಯಾರಿ ಕೂಟ’: ವಿದ್ಯಾರ್ಥಿ ವೇತನ ವಿತರಣೆ; ಆ್ಯಂಬ್ಯುಲೆನ್ಸ್ ಲೋಕಾರ್ಪಣೆ

“ಕರಾವಳಿ ಭಾಗದ ಬ್ಯಾರಿ ಸಮುದಾಯವರು ಉದ್ಯೋಗ, ವ್ಯಾಪಾರ, ಶಿಕ್ಷಣ ಸೇರಿದಂತೆ ಹಲವು ಕಾರಣಕ್ಕಾಗಿ ಬೆಂಗಳೂರಿನಲ್ಲಿ ಬಂದು ನೆಲೆಸಿದ್ದಾರೆ. ಬ್ಯಾರಿ ಸಮುದಾಯದ ಎಲ್ಲರನ್ನೂ ಒಂದೇ ವೇದಿಕೆಯಡಿ ಒಟ್ಟುಗೂಡಿಸುವ ಉದ್ದೇಶದಿಂದ ಕಳೆದ ಹಲವು ವರ್ಷಗಳ ಪ್ರಯತ್ನದ ಭಾಗವಾಗಿ ‘ಬ್ಯಾರಿಸ್ ಸೆಂಟ್ರಲ್ ಕಮಿಟಿ’ ಎಂಬ ಸಂಸ್ಥೆಯನ್ನು ಯುವಕರೇ ಹುಟ್ಟು ಹಾಕಿದ್ದು, ಸಮುದಾಯದ ನೋವು-ನಲಿವುಗಳಿಗೆ ಸ್ಪಂದಿಸುತ್ತಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಎಲ್ಲ ಬ್ಯಾರಿ ಸಮುದಾಯದ ಜನರನ್ನು ಒಂದುಗೂಡಿಸಿ ಪ್ರತಿ ವರ್ಷ ‘ಬ್ಯಾರಿ ಕೂಟ’ವನ್ನು ಯಶಸ್ವಿಯಾಗಿ ಆಯೋಜಿಸುತ್ತಿದೆ. 2026ರ ಬ್ಯಾರಿ ಕೂಟವನ್ನು 2026ರ ಫೆಬ್ರವರಿ 1ರ […]