ಅಕ್ರಮ ವಲಸಿಗ ಇದ್ದಾನೆಂದು ಪೊಲೀಸ್ ಠಾಣೆಗೆ ದೂರು ನೀಡಿ ತೆರಳುವಷ್ಟರಲ್ಲಿ ಪುನೀತ್ ಕೆರೆಹಳ್ಳಿ ಬಂಧನ

ನೆಲಮಂಗಲ: ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಆರೋಪದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅಲ್ಲಿಗೆ ತೆರಳಿದ್ದರು. ಹಸನ್ ಎಂಬಾತ ಅಕ್ರಮ ಬಾಂಗ್ಲಾ ವಲಸಿಗ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಲ್ಲದೆ, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿ ಠಾಣೆಯಿಂದ ಹೋಗುತ್ತಿದ್ದ ವೇಳೆ, ಬಾಗಲಗುಂಟೆ ಪೊಲೀಸರು ಪುನೀತ್ […]
ಮಂಗಳೂರು | ‘ರೀಲ್ಸ್ ಸ್ಟಾರ್’ ಆಶಾ ಪಂಡಿತ್ ನಿಧನ

ಮಂಗಳೂರು: ಅಭಿಮಾನಿಗಳನ್ನು ಬೈಯುತ್ತಲೇ ಇನ್‌ಸ್ಟಾಗ್ರಾಮ್‌ನಲ್ಲಿ ಹವಾ ಸೃಷ್ಟಿಸಿದ್ದ ನಾಗುರಿಯ ನಿವಾಸಿ ಆಶಾ ಪಂಡಿತ್, ಜನವರಿ 23 ರ ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು. ಆಶಾ ಪಂಡಿತ್ ತಮ್ಮ ಬೈಗುಳದ ರೀಲ್‌ಗಳಿಂದ ಇನ್‌ಸ್ಟಾಗ್ರಾಮ್‌ನಲ್ಲಿ ಜನಪ್ರಿಯತೆ ಗಳಿಸಿದ್ದರು. ಅವರು ಪಡೀಲ್ ಬಳಿ ಒಂದು ಸಣ್ಣ ಅಂಗಡಿಯನ್ನೂ ನಡೆಸುತ್ತಿದ್ದರು. ಕುಟುಂಬದ ಮೂಲಗಳ ಪ್ರಕಾರ, ಅವರಿಗೆ ನಿನ್ನೆ ರಾತ್ರಿ ವಾಂತಿ ಸಮಸ್ಯೆ ಉಂಟಾಗಿತ್ತು. ಶುಕ್ರವಾರ ಬೆಳಗಿನ ಜಾವ ಅವರಿಗೆ ಹೃದಯಾಘಾತವಾಗಿ ಮನೆಯ ಅಂಗಳದಲ್ಲಿ ಕುಸಿದು ಬಿದ್ದರು ಎಂದು ವರದಿಯಾಗಿದೆ. ಆಕೆಯನ್ನು ಆಸ್ಪತ್ರೆಗೆ […]
ಕೋಮು ದ್ವೇಷ ಭಾಷಣ: ಪ್ರಭಾಕರ ಭಟ್ ಕಲ್ಲಡ್ಕ ವಿರುದ್ಧ ಬಲವಂತದ ಕ್ರಮ ಬೇಡ; ಹೈಕೋರ್ಟ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದಿದ್ದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜ.21ರಂದು ಆರ್‌ಎಸ್‌ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ವಿರುದ್ಧ ದಾಖಲಾಗಿರುವ ಕೇಸ್‌ಗೆ ಸಂಬಂಧಿಸಿ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ಜ.22ರಂದು ಹೈಕೋರ್ಟ್ ಪೊಲೀಸ್ ಇಲಾಖೆಗೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಫೆ.5ಕ್ಕೆ ಹೈಕೋರ್ಟ್ ಮುಂದೂಡಿದೆ. ಪುತ್ತೂರಿನ ವಿವೇಕಾನಂದ ಕಾಲೇಜ್‌ನಲ್ಲಿ ಜ.12ರಂದು ನಡೆದಿದ್ದ ವಿವೇಕ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ನಾಗರಿಕ ಸಮುದಾಯಗಳ ಮಧ್ಯೆ […]
ಧಾರವಾಡ ಝಕಿಯಾ ಮುಲ್ಲಾ ಕೊಲೆ ಕೇಸ್: ಆರೋಪಿ ಯಾರು? ಆತನ ಹಿಸ್ಟರಿ ಏನು ಗೊತ್ತಾ?

ಧಾರವಾಡ: ಕೆಲಸ ಹುಡುಕಲೆಂದು ಮನೆಯಿಂದ ಹೊರಹೋಗಿದ್ದ 19 ವರ್ಷದ ಯುವತಿ ಝಕಿಯಾ ಮುಲ್ಲಾ ಶವ ಧಾರವಾಡ ನಗರದ ಹೊರಹೊಲಯದ ಮನಸೂರು ರಸ್ತೆಯ ಡೈರಿ ಬಳಿ ಪತ್ತೆಯಾಗಿದ್ದು, ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರೀತಿಸುತ್ತಿದ್ದ ಪ್ರಿಯಕರ ಸಾಬೀರ್ ಮುಲ್ಲಾನೇ ಝಕಿಯಾಳನ್ನು ಕೊಲೆ ಮಾಡಿದ್ದಾನೆ ಎನ್ನುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪರಸ್ಪರ ಪ್ರೀತಿಸುತ್ತಿದ್ದರಿಂದ ಮನೆಯವರು ಸಹ ಮದುವೆಗೆ ಒಪ್ಪಿದ್ದು, ಮುಂದಿನ ತಿಂಗಳು ನಿಶ್ಚಿತಾರ್ಥ ಮಾಡಲು ತೀರ್ಮಾನಿಸಿದ್ದರು. ಆದ್ರೆ, ಇದೀಗ ಯುವತಿಯನ್ನು ಮದುವೆಯಾಗಬೇಕಿದ್ದ ಸಾಬೀರ್ ಮುಲ್ಲಾ ಎನ್ನುವವನೇ […]
ಕೆಲಸ ಹುಡುಕಲು ಹೋದ ವಿದ್ಯಾರ್ಥಿನಿಯ ಶವ ಪತ್ತೆ: ಝಕೀಯಾ ಮುಲ್ಲಾ ಕೊಲೆಗೆ ಕಾರಣ ಏನು?

ಧಾರವಾಡ: ಯುವತಿಯೋರ್ವಳು ಕೆಲಸ ಹುಡುಕಲು ಮನೆಯಿಂದ ಹೋಗಿದ್ದವಳು ಶವವಾಗಿ ಪತ್ತೆಯಾಗಿದ್ದಾಳೆ. ಪ್ಯಾರಾಮೆಡಿಕಲ್ ಪೂರ್ಣಗೊಳಸಿದ್ದ ಧಾರವಾಡದ ಗಾಂಧಿ ಚೌಕ್ನ ನಿವಾಸಿ 21 ವರ್ಷ ಝಕಿಲಾ ಮುಲ್ಲಾ, ಕೆಲಸ ಹುಡುಕಲೆಂದು ನಿನ್ನೆ(ಜನವರಿ 20) ಮನೆಯಿಂದ ಹೋಗಿದ್ದವಳು. ಆದ್ರೆ, ಇಂದು (ಜನವರಿ 21) ಧಾರವಾಡದ ಮನಸೂರು ಗ್ರಾಮದ ರಸ್ತೆ ಪಕ್ಕ ಝಕಿಲಾ ಮುಲ್ಲಾ ಮೃತದೇಹ ಪತ್ತೆಯಾಗಿದೆ. ಯುವತಿ ಬಾಯಲ್ಲಿ ರಕ್ತ ಬಂದಿದ್ದು, ಆಕೆಯ ವೇಲ್ನಿಂದಲೇ ಕುತ್ತಿಗೆ ಬಿಗಿದು ಕೊಂದಿರುವ ಸಂಶಯ ಹುಟ್ಟುಕೊಂಡಿದೆ. ಇನ್ನು ಈ ಘಟನೆಯಿಂದ ಧಾರವಾಡ ಜನರೆಲ್ಲ ಬೆಚ್ಚಿ ಬಿದ್ದಿದ್ದಾರೆ. […]
ಧಾರವಾಡ ಪೊಲೀಸರ ಮಿಂಚಿನ ಕಾರ್ಯಾಚರಣೆ: ರಕ್ತದ ಕಲೆ ಒಣಗುವ ಮುನ್ನವೇ ಹಂತಕನ ಬಂಧನ

ಧಾರವಾಡ: ನಗರದ ಹೊರವಲಯದಲ್ಲಿ ನಡೆದಿದ್ದ ಝಕೀಯಾ ಮುಲ್ಲಾ ಎಂಬುವವರ ಭೀಕರ ಹತ್ಯೆ ಪ್ರಕರಣವನ್ನು ಧಾರವಾಡ ಜಿಲ್ಲಾ ಪೊಲೀಸರು ಕೇವಲ ಕೆಲವೇ ಗಂಟೆಗಳಲ್ಲಿ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಚುರುಕುಗೊಳಿಸಿದ್ದಾರೆ. ಧಾರವಾಡದ ಹೊರವಲಯದಲ್ಲಿ ಝಕೀಯಾ ಮುಲ್ಲಾ ಅವರ ಶವ ಪತ್ತೆಯಾದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಜಿಲ್ಲಾ ಪೊಲೀಸ್ ತಂಡ, ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿದೆ. ಕೊಲೆ ಮಾಡಿದ ನಂತರವೂ ಆರೋಪಿಯು ಹತ್ಯೆ ನಡೆದ ಸ್ಥಳದ ಸುತ್ತಮುತ್ತಲೇ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ […]
ಕೇಸರಿ ಕೋಟೆಯಲ್ಲಿ SDPI ಘರ್ಜನೆ: ಮಂಗಳೂರು ಹಸಿರು, ಕೆಂಪು ಮಯ

ರಾಜಕೀಯ ಅಧಿಕಾರ ಪಡೆದಾಗ ದೌರ್ಜನ್ಯ ತಡೆಗಟ್ಟಲು ಸಾಧ್ಯ; ಅಬ್ದುಲ್ ಮಜೀದ್ ಮಂಗಳೂರು: ದ.ಕ ಜಿಲ್ಲೆಯನ್ನು ಕೇಸರಿ ಕೋಟೆ ಎಂದು ಹೇಳುತ್ತಾರೆ. ಆದರೆ ನಿನ್ನೆ ಎಸ್ ಡಿಪಿಐ ನಡೆಸಿದ ಬೃಹತ್ ಮೆರವಣಿಯಲ್ಲಿ ಸೇರಿದ ಸಾವಿರಾರು ಜನಸ್ತೋಮವು ಎಲ್ಲರನ್ನು ಹುಬ್ಬೆರುವಂತೆ ಮಾಡಿದೆ. ಮಂಗಳೂರಿನ ಬೀದಿಬೀದಿಗಳಲ್ಲಿ ಎಸ್ ಡಿಪಿಐ ಹಸಿರು, ಕೆಂಪು ಬಾವುಟ ರಾರಾಜಿಸಿವೆ. ಎಸ್‌ಡಿಪಿಐನ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳಿಗೆ ಅಭಿನಂದನಾ ರ್ಯಾಲಿ ನಗರದ ಜ್ಯೋತಿ ವೃತ್ತದಿಂದ ಪುರಭವನದ ತನಕ ನಡೆಯಿತು. ಬಳಿಕ ಪುರಭವನದಲ್ಲಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ […]
‘ಮುಂದೆ ದ್ವೇಷ ಭಾಷಣ ಮಾಡುವುದಿಲ್ಲ ಎಂಬ ಷರತ್ತು ಉಲ್ಲಂಘಿಸಿದ ಕಲ್ಲಡ್ಕ ಭಟ್’: ಮತ್ತೆ ಕೋಮುದ್ವೇಷ ಭಾಷಣ; FIR ಜಡಿದ ಪೊಲೀಸರು

ಪುತ್ತೂರು: ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವಂತಹ ಮತ್ತು ಕೋಮುದ್ವೇಷ ಪ್ರಚೋದಿಸುವಂತಹ ಭಾಷಣ ಮಾಡಿದ ಆರೋಪದಡಿ ಅವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಳೆದ ಜನವರಿ 12 ರಂದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಪ್ರಭಾಕರ ಭಟ್ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದರು. ಈ ವೇಳೆ ಕಾಲೇಜು ವಿದ್ಯಾರ್ಥಿಗಳು ಮತ್ತು ಪೋಷಕರನ್ನು […]
ಧಾರವಾಡ: ಮುಸ್ಲಿಂ ಯುವತಿಯನ್ನು ಕೊಂದು ಶವ ಬಿಸಾಡಿ ಹೋದ ದುಷ್ಕರ್ಮಿಗಳು!

ಧಾರವಾಡ: ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯೋರ್ವಳು ಬರ್ಬರವಾಗಿ ಹತ್ಯೆಗೀಡಾಗಿದ್ದಾಳೆ. ನಿನ್ನೆ ಲ್ಯಾಬ್‌ಗೆ ಹೋಗಿದ್ದ ಝಕಿಯಾ ಮುಲ್ಲಾ ಶವ ಇಂದು ಬೆಳಗ್ಗೆ ನಗರದ ಹೊರವಲಯದಲ್ಲಿ ಪತ್ತೆಯಾಗಿದೆ. ಮೃತ ವಿದ್ಯಾರ್ಥಿನಿ ಧಾರವಾಡದ ಗಾಂಧಿ ಚೌಕ್ ನಿವಾಸಿಯಾಗಿದ್ದ 19 ವರ್ಷದ ಝಕಿಯಾ ಮುಲ್ಲಾ ಎಂದು ತಿಳಿದುಬಂದಿದೆ. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ವಿದ್ಯಾರ್ಥಿನಿ, ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು. ಇಂದು ಮುಂಜಾನೆ ಮನಸೂರು […]
ಪುತ್ತೂರು | ವಿವೇಕಾನಂದ ಜಯಂತಿಯಲ್ಲಿ ದ್ವೇಷ ಭಾಷಣ ಆರೋಪ; ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ಆವರಣದಲ್ಲಿ ಜ.12ರಂದು ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದ ಸಭೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರು ಸಮಾಜದ ನಾಗರಿಕ ಸಮುದಾಯಗಳ ನಡುವೆ ಪರಸ್ಪರ ದ್ವೇಷ ಉಂಟಾಗುವ ರೀತಿಯಲ್ಲಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಹಾಗೂ ಆ ಭಾಷಣವನ್ನು ಪ್ರಸಾರ ಮಾಡಿದ ಯೂಟ್ಯೂಬ್ ಚಾನೆಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಮಾನವ ಬಂಧುತ್ವ ವೇದಿಕೆಯ ಪುತ್ತೂರು ತಾಲೂಕು […]