ಮಠಾಧೀಶರ ತೀವ್ರ ಆಕ್ಷೇಪ: ಮಥುರಾದಲ್ಲಿ ಆಯೋಜಿಸಿದ್ದ ಸನ್ನಿ ಲಿಯೋನ್ ಕಾರ್ಯಕ್ರಮ ರದ್ದು!

ಮಥುರಾ: ಹೊಸ ವರ್ಷಾಚರಣೆ ಪ್ರಯುಕ್ತ ಉತ್ತರ ಪ್ರದೇಶದ ಮಥುರಾದಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದರೆ, ಸ್ಥಳೀಯ ಮಠಾಧೀಶರ ಆಕ್ಷೇಪಣೆ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. ನಾವು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಪತ್ರ ಬರೆದಿದ್ದೇವೆ. ಇದು ಶ್ರೀಕೃಷ್ಣನ ಜನ್ಮಸ್ಥಳವಾಗಿದೆ. ಇಲ್ಲಿ ಶ್ರೀಕೃಷ್ಣ ಲೀಲೆ ಪ್ರದರ್ಶನ ನಡೆಯುತ್ತದೆ. ಜತೆಗೆ, ಪ್ರಾರ್ಥನೆ ಸಲ್ಲಿಸಲು ಧರ್ಮಗುರುಗಳು ಇಲ್ಲಿಗೆ ಬರುತ್ತಾರೆ. ಇಂತಹ ಸ್ಥಳದಲ್ಲಿ ಸನ್ನಿ ಲಿಯೋನ್ ಅವರನ್ನು ಕರೆಸಿ ಡಿಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಸನ್ನಿ ಲಿಯೋನ್ ಅವರನ್ನು […]
ಯೆಮೆನ್ ಮೇಲೆ ಬಾಂಬ್ ದಾಳಿ ನಡೆಸಿ UAEಗೆ ಸೌದಿ ಅರೇಬಿಯಾ ಎಚ್ಚರಿಕೆ

ಸೌದಿ ಅರೇಬಿಯಾ ಮತ್ತು ಯುಎಇ ನಡುವೆ ಉಲ್ಬಣಿಸಿದ ಬಿಕ್ಕಟ್ಟು ರಿಯಾದ್: ಯೆಮೆನ್ ಬಂದರು ನಗರವಾದ ಮುಕಲ್ಲಾ ಮೇಲೆ ಸೌದಿ ಅರೇಬಿಯಾ ಇಂದು ಏರ್‌ಸ್ಟ್ರೈಕ್ ಮಾಡಿದೆ. ಅಷ್ಟೇ ಅಲ್ಲದೇ ಯೆಮೆನ್‌ನ ಪ್ರತ್ಯೇಕವಾದಿಗಳಿಗೆ ಬೆಂಬಲ ನೀಡುತ್ತಿರುವುದು ಅತ್ಯಂತ ಅಪಾಯಕಾರಿ ಎಂದು ಯುಎಇಗೆ ಎಚ್ಚರಿಕೆ ನೀಡಿದೆ. ಬಾಂಬ್ ದಾಳಿಯ ಬಳಿಕ ಯೆಮೆನ್ ಅಧ್ಯಕ್ಷೀಯ ಮಂಡಳಿಯು ಯುಎಇ ರಕ್ಷಣಾ ಒಪ್ಪಂದವನ್ನು ರದ್ದುಗೊಳಿಸಿದೆ. ಯೆಮೆನ್‌ನ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಡೆಯಬೇಕು ಮತ್ತು ದೇಶದ ಹೊರಗೆ ಕಾರ್ಯನಿರ್ವಹಿಸುವ ಯಾವುದೇ ಸಂಘಟನೆಗಳಿಗೆ ಮಿಲಿಟರಿ ಮತ್ತು ಲಾಜಿಸ್ಟಿಕ್ […]
RSS ಯುವಕರನ್ನು ಭಾರತೀಯ ಪರಂಪರೆಯೊಂದಿಗೆ ಬೆಸೆಯುತ್ತಿದೆ: ಇಸ್ರೇಲ್

ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ತನ್ನ ಚಟುವಟಿಕೆಗಳ ಮೂಲಕ ಯುವಕರನ್ನು ಭಾರತೀಯ ಪರಂಪರೆ, ಇತಿಹಾಸ ಹಾಗೂ ಸಂಸ್ಕೃತಿಯೊಂದಿಗೆ ಬೆಸೆಯುವಂತೆ ಮಾಡಿದೆ ಎಂದು ಇಸ್ರೇಲ್ ರಾಜತಾಂತ್ರಿಕ ಅಧಿಕಾರಿ ಯಾನಿವ್ ರೆವಾಚ್ ತಿಳಿಸಿದ್ದಾರೆ. ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಡಾ. ಕೇಶವ್ ಬಲಿರಾಮ್ ಹೆಡಗೇವಾರ್ ಅವರ ಸ್ಮರಣಾರ್ಥ ನಿರ್ಮಿಸಲಾಗಿರುವ ಸ್ಮೃತಿ ಮಂದಿರಕ್ಕೆ ಯಾನಿವ್ ರೆವಾಚ್ ಅವರು ಸೋಮವಾರ ಭೇಟಿ ನೀಡಿದ್ದರು. ಈ ವೇಳೆ ಅವರಿಗೆ ಹೆಗ್ಡೆವಾರ್ ಅವರ ಜೀವನ ಮತ್ತು ಕೆಲಸಗಳ ಕುರಿತು ಮಾಹಿತಿ ನೀಡಲಾಗಿದೆ ಎಂದು ಆರ್‌ಎಸ್‌ಎಸ್ ತಿಳಿಸಿದೆ. ‘ಆರ್‌ಎಸ್‌ಎಸ್ […]
ಮುಸ್ಲಿಂ ಹುಡುಗಿಯನ್ನು ಸೊಸೆ ಮಾಡಿಕೊಳ್ಳಲು ಮುಂದಾದ ಪ್ರಿಯಾಂಕಾ ಗಾಂಧಿ ವಾದ್ರಾ?

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಬರ್ಟ್ ವಾದ್ರಾ ಅವರ ಪುತ್ರ ರೆಹಾನ್ ವಾದ್ರಾ ಪ್ರಸ್ತುತ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಸುದ್ದಿಯಲ್ಲಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ರೆಹಾನ್ ತಮ್ಮ ದೀರ್ಘಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ಖಾಸಗಿ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕಳೆದ ಏಳು ವರ್ಷಗಳಿಂದ ಸಂಬಂಧದಲ್ಲಿದ್ದ ನಂತರ, ಹೊಸ ಜೋಡಿ ಈಗ ತಮ್ಮ ಸಂಬಂಧಕ್ಕೆ ಹೊಸ ಹೆಸರನ್ನು ನೀಡಲು ನಿರ್ಧರಿಸಿದ್ದಾರೆ. ನಿಕಟ ಕುಟುಂಬ ಸದಸ್ಯರು ಭಾಗವಹಿಸಿದ್ದ ಸರಳ ಸಮಾರಂಭದಲ್ಲಿ ನಿಶ್ಚಿತಾರ್ಥ ನಡೆದಿದೆ […]
ಪ್ರಿಯಾಂಕಾ ಗಾಂಧಿ ಪುತ್ರನಿಗೆ ಕೂಡಿಬಂತು ಕಂಕಣ ಭಾಗ್ಯ: ಅವಿವಾ ಬೇಗ್ ಜೊತೆ ರೈಹಾನ್ ವಾದ್ರಾ ನಿಶ್ಚಿತಾರ್ಥ

ನವದೆಹಲಿ: ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್ ವಾದ್ರಾ ಈಗ ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. 25 ವರ್ಷದ ರೈಹಾನ್ ವಾದ್ರಾ ತನ್ನ ಬಹುಕಾಲದ ಗೆಳತಿ ಅವಿವಾ ಬೇಗ್ ಜೊತೆ ಹಸೆಮಣೆ ಏರೋದಕ್ಕೆ ಸಿದ್ಧರಾಗಿದ್ದಾರೆ. ಈ ಜೋಡಿ ಮದುವೆಗೆ ಎರಡೂ ಕಡೆ ಕುಟುಂಬದವರು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಅವಿವಾ ಬೇಗ್ ಮತ್ತು ಅವರ ಕುಟುಂಬ ದೆಹಲಿಯಲ್ಲಿ ನೆಲೆಸಿದ್ದು, ಎರಡೂ ಕುಟುಂಬಗಳು ನಿಕಟ ಸಂಪರ್ಕದಲ್ಲಿವೆ. ರೈಹಾನ್ ವಾದ್ರಾ […]
ರೈಲ್ವೆಯ ನಿವೃತ್ತ ಉದ್ಯೋಗಿ ಸಾವು: ಮಗಳ ದೇಹದಲ್ಲಿ ಮಾಂಸವೇ ಇಲ್ಲ..!

ಮಹೋಬಾ: ಕೆಲವು ವರ್ಷಗಳ ಹಿಂದೆ ಪತ್ನಿ ತೀರಿಕೊಂಡಿದ್ದರು. ಮಗಳು ಮಾನಸಿಕ ಅಸ್ವಸ್ಥೆ, ಏನು ಮಾಡಬೇಕೆಂದು ತೋಚದೆ ರೈಲ್ವೆಯ ನಿವೃತ್ತ ಉದ್ಯೋಗಿ ಕೇರ್ ಟೇಕರ್ ನೇಮಿಸಿಕೊಂಡಿದ್ದರು. ಅವರು ಆರೈಕೆದಾರರಾಗಿರಲಿಲ್ಲ, ಬದಲಾಗಿ ಪ್ರಾಣವನ್ನೇ ತೆಗೆಯುವ ಹಂತಕರಾಗಿದ್ದರು. ಸುಮಾರು ಐದು ವರ್ಷಗಳ ಕಾಲ ಕೇರ್ ಟೇಕರ್ ಅವರನ್ನು ಬಂಧಿಸಿ ಚಿತ್ರಹಿಂಸೆ ನೀಡಿದ್ದರು. ಹೀಗಾಗಿ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅವರ ಮಗಳ ಸ್ಥಿತಿ ಚಿಂತಾಜನಕವಾಗಿದೆ. ಮಗಳ ದೇಹದಲ್ಲಿ ಒಂದಿಷ್ಟು ಮಾಂಸವೂ ಇಲ್ಲದೆ ನಿತ್ರಾಣಳಾಗಿದ್ದಾಳೆ. ಓಂಪ್ರಕಾಶ್ ಸಿಂಗ್ ರಾಥೋಡ್ (70), ಭಾರತೀಯ ರೈಲ್ವೆಯಲ್ಲಿ ಮಾಜಿ […]
ಕೋಗಿಲು ಅಕ್ರಮ ನಿವಾಸಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ: ನೈಜ ಫಲಾನುಭವಿಗಳಿಗೆ ಪರ್ಯಾಯ ವ್ಯವಸ್ಥೆ!

ಬೆಂಗಳೂರು: ಯಲಹಂಕದ ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಜಾಗ ತೆರವು ಕಾರ್ಯಾಚರಣೆಯಿಂದ ನಿರಾಶ್ರಿತರಾದ ನೈಜ ವ್ಯಕ್ತಿಗಳಿಗೆ ಸರ್ಕಾರವು ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ‘ಕೋಗಿಲು ಬಡಾವಣೆಯಲ್ಲಿ ಸುಮಾರು 15 ಎಕರೆ ಸರ್ಕಾರಿ ಜಾಗವನ್ನು ಕಸ ವಿಲೇವಾರಿ ಘಟಕಕ್ಕಾಗಿ ನಗರ ಪಾಲಿಕೆಗೆ ಹಸ್ತಾಂತರಿಸಲಾಗಿತ್ತು. ಆದರೆ, 2020-21ರಿಂದ ಅಲ್ಲಿ ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸ ಮಾಡಲಾಗುತ್ತಿತ್ತು. ಸರ್ಕಾರಿ ಜಾಗವನ್ನು ಅಕ್ರಮವಾಗಿ ಆಕ್ರಮಿಸಿಕೊಳ್ಳಲು ಅವಕಾಶ ನೀಡಲಾಗದು. ಹೀಗಾಗಿ 167 […]
ಕೋಗಿಲು ಬಡಾವಣೆಯಲ್ಲಿ ಮನೆ ಧ್ವಂಸ: ಪಾಕಿಸ್ತಾನ ತೀವ್ರ ಕಳವಳ

ಇಸ್ಲಾಮಾಬಾದ್: ಬೆಂಗಳೂರಿನ ಯಲಹಂಕದ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮುಸ್ಲಿಮರ 200 ಮನೆಗಳನ್ನು ಕರ್ನಾಟಕ ಸರ್ಕಾರ ನೆಲಸಮ ಮಾಡಿದ್ದಕ್ಕೆ ಕೇರಳ ಸರ್ಕಾರ ಬೇಸರ ವ್ಯಕ್ತಪಡಿಸಿತ್ತು. ಇದೀಗ ಪಾಕಿಸ್ತಾನ ಕೂಡ ಕಳವಳ ವ್ಯಕ್ತಪಡಿಸಿದೆ. ಹೇಳಿಕೆ ನೀಡಿರುವ ಪಾಕ್ ವಿದೇಶಾಂಗ ಇಲಾಖೆ, ‘ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ಕಿರುಕುಳವು ತೀವ್ರ ಕಳವಳದ ವಿಷಯವಾಗಿದೆ. ಅಲ್ಲಿ ಕ್ರಿಸ್‌ಮಸ್ ಆಚರಣೆ ಮೇಲೆ ದಾಳಿಗಳು ಆಗಿವೆ. ಸರ್ಕಾರಿ ಪ್ರಾಯೋಜಕತ್ವದಿಂದ ಮುಸ್ಲಿಮರ ಮನೆಗಳನ್ನು ಧ್ವಂಸಗೊಳಿಸಲಾಗಿದೆ ಹಾಗೂ ಮುಸ್ಲಿಮರ ಗುಂಪು ಹತ್ಯೆ ನಡೆದಿವೆ’ ಎಂದು ಆರೋಪಿಸಿದೆ ಬೆಂಗಳೂರು ಘಟನೆಯನ್ನು […]
ಶಿವಮೊಗ್ಗ: ಕಬ್ಬಿಣದ ರಾಡ್ ನಿಂದ ಹೊಡೆದು ಯುವಕನ ಭೀಕರ ಹತ್ಯೆ

ಶಿವಮೊಗ್ಗ: ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯ ಮುಂಭಾಗದಲ್ಲಿ ಯುವಕನೋರ್ವನನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಕಾಶೀಪುರದ ನಿವಾಸಿ ಅರುಣ್ ಯಾನೆ ಬೋಂಡಾ (26) ಕೊಲೆಯಾದ ದುರ್ದೈವಿ. ಅರುಣ್ ಶ್ರೀನಿಧಿ ವೈನ್ಸ್ ಮುಂದೆ ನಿಂತಿದ್ದ ಸಂದರ್ಭದಲ್ಲಿ ಏಕಾಏಕಿ ಬಂದ ಕಿಡಿಗೇಡಿಗಳು ಕಬ್ಬಿಣದ ರಾಡಿನಿಂದ ತಲೆಗೆ ಹಲ್ಲೆ ನಡೆಸಿದ್ದಾರೆ. ಕೇವಲ 30 ಸೆಕೆಂಡ್‌ಗಳ ಅಂತರದಲ್ಲಿ ಈ ಕೃತ್ಯ ನಡೆದಿದ್ದು, ತೀವ್ರ ರಕ್ತಸ್ರಾವದಿಂದ ಅರುಣ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಘಟನೆ ನಡೆದ […]
Bangalore | ನಟಿ ನಂದಿನಿ ಆತ್ಮ*ಹತ್ಯೆ; ಸರ್ಕಾರಿ ನೌಕರಿ ಬೇಡವೆಂದು ಸಾವಿನ ನಿರ್ಧಾರ?

ಬೆಂಗಳೂರು: ಕನ್ನಡ ಹಾಗೂ ತಮಿಳು ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದ ನಟಿ ನಂದಿನಿ (27) ಬೆಂಗಳೂರಿನ ಕೆಂಗೇರಿ ಉಪನಗರದ ಪಿಜಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ವೈಯಕ್ತಿಕ ಸಮಸ್ಯೆಗಳು ಹಾಗೂ ವೃತ್ತಿಜೀವನದ ಒತ್ತಡದಿಂದ ನೊಂದು ನಟಿ ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ನಂದಿನಿ ಅವರು ಕೆಲವು ಸಮಯದಿಂದ ವೈಯಕ್ತಿಕ ಸಮಸ್ಯೆಗಳು ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದರು. ಇವರ ತಂದೆ ಹಾಗೂ ತಾಯಿ ಇಬ್ಬರೂ ಸರ್ಕಾರಿ ಶಾಲಾ ಶಿಕ್ಷಕರಾಗಿದ್ದಾರೆ. ಆದರೆ ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ […]