ಶುಕ್ರವಾರದ ನಮಾಜ್ ವರ್ಷಕ್ಕೆ 52 ಬಾರಿ ಬರುತ್ತೆ, ಹೋಳಿ ಒಮ್ಮೆ ಬರೋದು..’ ಎಂದಿದ್ದ ASP ವಿರುದ್ಧ FIR

‘ ಮೀರತ್: ಜಾಮಾ ಮಸೀದಿ ಸಮೀಕ್ಷೆಗೆ ಸಂಬಂಧಿಸಿದ ಸಂಭಾಲ್ ಹಿಂಸಾಚಾರದ ಸಂದರ್ಭದಲ್ಲಿ ಯುವಕನೊಬ್ಬನಿಗೆ ಗುಂಡು ಹಾರಿಸಿದ ಆರೋಪದ ಮೇಲೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಅನುಜ್ ಚೌಧರಿ, ಇನ್ಸ್‌ಪೆಕ್ಟರ್ ಅನುಜ್ ತೋಮರ್ ಮತ್ತು 20 ಅಪರಿಚಿತ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಸಂಭಾಲ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವಿಭಾಂಶು ಸುಧೀರ್ ಅವರ ನ್ಯಾಯಾಲಯವು ಈ ಆದೇಶ ನೀಡಿದೆ. ಸಂಭಾಲ್‌ನ ಆಗಿನ ವೃತ್ತ ಅಧಿಕಾರಿ (ಸಿಒ) ಅನುಜ್ […]
ಜನರ ಕೊಂದು ಮೃತದೇಹ ತಿನ್ನುತ್ತಿದ್ದ ನರಭಕ್ಷಕ ಕೊನೆಗೂ ಸೆರೆ

ಕೋಲ್ಕತಾ: ನರಭೇಟೆಯಾಡುವ ಮೂಲಕ ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಭೀತಿ ಮೂಡಿಸಿದ್ದ ನರಭಕ್ಷಕ ವ್ಯಕ್ತಿಯನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜನರನ್ನು ಕೊಂದು ಮೃತದೇಹವನ್ನು ಎಳೆದುಕೊಂಡು ಹೋಗಿ ತಿನ್ನುತ್ತಿದ್ದ ಖತರ್ನಾಕ್ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಫಿರ್ದೌಸ್ ಆಲಂ ಎಂದು ಗುರುತಿಸಲಾಗಿದ್ದು. ಆರೋಪಿ ಫಿರ್ದೋಸ್ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಿ ನಂತರ ಅವನ ಮಾಂಸವನ್ನು ತಿನ್ನಲು ದೇಹವನ್ನು ಮನೆಗೆ ಎಳೆದುಕೊಂಡು ಹೋಗುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ದಿನ್ಹಾಟಾ ಉಪಜಿಲ್ಲಾ ಪೊಲೀಸ್ ಅಧಿಕಾರಿ ಧಿಮಾನ್ ಮಿತ್ರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, […]
ಮಂಗಳೂರು: ದೇಗುಲಕ್ಕೆಂದು ಹೋದ ಬಾಲಕ ಕೆರೆಯಲ್ಲಿ ಹೆಣವಾಗಿ ಪತ್ತೆ

ಮಂಗಳೂರು: ಧನುರ್ಮಾಸ ಹಿನ್ನೆಲೆ ದೇಗುಲಕ್ಕೆಂದು ಮುಜಾನೆಯೇ ಮನೆಯಿಂದ ಹೊರಟಿದ್ದ 9ನೇ ತರಗತಿಯ ಬಾಲಕನೊಬ್ಬ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಸುಮಂತ್ (15) ಮೃತ ದುರ್ದೈವಿಯಾಗಿದ್ದು, ಬಾಲಕನ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಹೀಗಾಗಿ ಎಲ್ಲಾ ಆಯಾಮಗಳಲ್ಲಿಯೂ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ. ಕುವೆಟ್ಟು ಸಮೀಪದ ಸಂಬೋಳ್ಯ ಬರಮೇಲು ನಿವಾಸಿಯಾದ ಸುಬ್ರಹ್ಮಣ್ಯ ನಾಯಕ್ ಅವರ ಮಗ ಸುಮಂತ್ ಧನುರ್ಮಾಸದ ಹಿನ್ನಲೆಯಲ್ಲಿ ಬೆಳಗ್ಗೆ 4 ಗಂಟೆಗೆ […]
Saudi Arabia | ಸಂಶಯಾಸ್ಪದವಾಗಿ ಮಹಿಳೆ ಮೃತ್ಯು

ಜೆದ್ದಾ: ಲಕ್ನೊ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಸೌದಿ ಅರೇಬಿಯಾದ ಜೆದ್ದಾದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಆಕೆಯ ಪತಿ ಹಾಗೂ ಅತ್ತೆಮಾವಂದಿರು ವರದಕ್ಷಿಣೆಗಾಗಿ ಸುದೀರ್ಘ ಕಾಲ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿ ಪೂರ್ವನಿಯೋಜಿತವಾಗಿ ಹತ್ಯೆಗೈದಿದ್ದಾರೆ ಎಂದು ಮೃತ ಮಹಿಳೆಯ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಈ ಸಂಬಂಧ ಮೃತ ಮಹಿಳೆಯ ತಂದೆ ಶೇರ್ ಅಲಿ ಖಾನ್ ಲಕ್ನೊದಲ್ಲಿನ ಚಿನ್ಹಾಟ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ತನ್ನ ಅಳಿಯ ಮುಹಮ್ಮದ್ ಆಮೀರ್ ಖಾನ್ ಹಾಗೂ ಆತನ ಕುಟುಂಬದ ಸದಸ್ಯರು […]
ಶಬರಿಮಲೆಯಿಂದ ಬಂದ ದಿನವೇ ಪತ್ನಿಯನ್ನ ಕೊಂದು ನದಿಗೆಸೆದ ಪತಿರಾಯ; ಈ ಒಂದು ಪ್ರಶ್ನೆ ಕೇಳಿದ್ದೇ ತಪ್ಪಾಯ್ತಾ?

ಹಾಸನ: ಶಬರಿಮಲೆಗೆ ಹೋಗಿ ಬಂದ ದಿನವೇ ಪತ್ನಿಯನ್ನ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. 4 ವರ್ಷಗಳಿಂದ ಗಂಡನಿಂದ ದೂರವಿದ್ದ ಪತ್ನಿ, ಇದ್ದಕ್ಕಿದ್ದಂತೆ ಗಂಡನ ಬಳಿ ಬಂದು ಎರಡನೇ ಮದುವೆ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಗಂಡನ ಕೋಪ ನೆತ್ತಿಗೇರಿದ್ದು, ಜಗಳ ತಾರಕಕ್ಕೇರಿ ಪತ್ನಿಯನ್ನ ಕೊಲೆಗೈದಿದ್ದಾನೆ ಎನ್ನಲಾಗ್ತಿದೆ. ಎರಡನೇ ಮದುವೆಯಾಗಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ ಮೊದಲ ಪತ್ನಿಯನ್ನೇ ಗಂಡ ಬರ್ಬರವಾಗಿ ಹತ್ಯೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಕುಮಾರ್ ಎಂಬಾತ […]
ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಕಮೆಂಟ್: ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಕಿಡಿ
ಚಿಕ್ಕಮಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಬಗ್ಗೆ ಅಶ್ಲೀಲ ಕಮೆಂಟ್ ಹಾಕಿದವರ ವಿರುದ್ಧ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಕಿಡಿಕಾರಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಹಾಗೂ ಅವಮಾನಕಾರಿ ಕಮೆಂಟ್ ಪ್ರಕರಣ ಸಂಬಂಧ ರಾಮನಗರ ಮೂಲದ ಯಕ್ಷಿತ್ ರಾಜ್ ಎಂಬಾತನನ್ನು ಮೂಡಿಗೆರೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರ್ಸನಲ್ ಮತ್ತು ರಾಜಕೀಯ ವಿಚಾರವಾಗಿ ಎರಡು ಇನ್‌ಸ್ಟಾಗ್ರಾಮ್ ಖಾತೆಗಳನ್ನು ಹೊಂದಿದ್ದೇನೆ. ಪರ್ಸನಲ್ ಖಾತೆಗೆ ಕೆಟ್ಟ ಕಮೆಂಟ್ ಮಾಡುತ್ತಿದ್ದಾರೆ. ವ್ಯಾಯಾಮ ಮಾಡಿದ್ರೂ ತಪ್ಪು, […]
‘ಅಜ್ಮೀರ್’ ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

ಅಜ್ಮೀರ್: ರಾಜಸ್ಥಾನದ ಪ್ರಸಿದ್ಧ ಅಜ್ಮೀರ್ ದರ್ಗಾ ಮೂಲತಃ “ಶಿವನ ದೇವಸ್ಥಾನವಾಗಿತ್ತು ಎಂದು ಪ್ರತಿಪಾದಿಸುವ ಅರ್ಜಿಯೊಂದನ್ನು ಸೋಮವಾರ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈ ಸಂಬಂಧ ಬಲಪಂಥೀಯ ಸಂಘಟನೆ ಮಹಾರಾಣಾ ಪ್ರತಾಪ್ ಸೇನೆಯ ರಾಷ್ಟ್ರೀಯ ಅಧ್ಯಕ್ಷ ರಾಜವರ್ಧನ್ ಸಿಂಗ್ ಪರ್ಮಾರ್ ಅವರು ಅಜ್ಮೀರ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಅಲ್ಲಿ ಪುರಾತತ್ವ ಸಮೀಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಅಜ್ಮೀರ್ ದರ್ಗಾ ಶಿವನ ದೇವಸ್ಥಾನವಾಗಿತ್ತು. ನಂತರ ಅದನ್ನು ದರ್ಗಾ ಮಾಡಲಾಯಿತು. ಈ ವಿವಾದದ ಬಗ್ಗೆ ಬಹಳ ಹಿಂದಿನಿಂದಲೂ ಹೋರಾಡುತ್ತಿದ್ದೇನೆ. ಈ ಹಿಂದೆ ರಾಷ್ಟ್ರಪತಿಗಳಿಗೂ ಮನವಿ ಸಲ್ಲಿಸಲಾಗಿತ್ತು. […]
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!

ಇತ್ತೀಚೆಗೆ ರಿಲೀಸ್ ಆಗಿರುವ ನಟ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಚಿತ್ರದ ಟೀಸರ್ ವಿರುದ್ಧ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ರಾಜ್ಯ ಮಹಿಳಾ ಆಯೋಗಕ್ಕೆ ಅಧಿಕೃತ ದೂರು ಸಲ್ಲಿಸಿದೆ. ಟೀಸರ್‌ನಲ್ಲಿ ಕಾಣಿಸಿರುವ ಕೆಲವು ದೃಶ್ಯಗಳು ಅಶ್ಲೀಲವಾಗಿದ್ದು ಮಹಿಳೆಯರು ಮತ್ತು ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟು ಮಾಡುತ್ತಿವೆ ಎಂದು ಆರೋಪಿಸಿ ಬೆಂಗಳೂರಿನಲ್ಲಿರುವ ರಾಜ್ಯ ಮಹಿಳಾ ಅಯೋಗದ ಕಚೇರಿಗೆ ದೂರು ನೀಡಿದೆ. ಜೊತೆಗೆ ಆ ದೃಶ್ಯವನ್ನ ತೆಗೆದುಹಾಕುವಂತೆ ಮನವಿ ಮಾಡಿದೆ. ಮಹಿಳಾ ಆಯೋಗದ ಅಧ್ಯಕ್ಷೆ […]
Mangaluru | ಬಾಂಗ್ಲಾ ಪ್ರಜೆ ಎಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ: ಮೂವರು ಆರೋಪಿಗಳ ಬಂಧನ

ಮಂಗಳೂರು: ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಕೂಳೂರು ಗ್ರಾಮ ನಿವಾಸಿಗಳಾದ ರತೀಶ್ ದಾಸ್ ಯಾನೆ ಲಾಲು (32), ಧನುಷ್ (24) ಮತ್ತು ಸಾಗರ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಜ. 11ರಂದು ಸಂಜೆ ಸುಮಾರು 6:05ರ ವೇಳೆಗೆ ನಾಲ್ವರು ಆರೋಪಿಗಳು ಜಾರ್ಖಂಡ್ ಮೂಲದ ದಿಲ್ಜಾನ್ […]
ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಆರೋಪಿಗೆ ಜಾಮೀನು

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಅವಹೇಳನಕಾರಿ ಮತ್ತು ಅಶ್ಲೀಲ ಹೇಳಿಕೆ ನೀಡಿರುವ ಆರೋಪದಲ್ಲಿ ಯುವಕನಿಗೆ ಜಾಮೀನು ಮಂಜೂರಾಗಿದೆ. ಶಾರೂಕ್ ಕೊಪ್ಪಳ ಎನ್ನುವವರ ವಿರುದ್ಧ ಬಂಟ್ವಾಳ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಲ್ಲಡ್ಕ ಶ್ರೀರಾಮ ಶಾಲೆಯ ಸಿಬ್ಬಂದಿ ಸೀತಾರಾಮ ಆಚಾರ್ಯ ಅವರ ಮಗ ಕೃಷ್ಣಪ್ಪ ಅನ್ನುವವರು ಕೊಟ್ಟ ದೂರಿನ ಅನ್ವಯ ಬಂಟ್ವಾಳ ಟೌನ್ ಪೊಲೀಸ್ ಠಾಣೆ ಪೊಲೀಸರು FIR ಮಾಡಿ ಕ್ರೈಂ ನಂಬರ್ 129/2025 ರಂತೆ ಕೇಸ್ ಧಾಖಲಿಸಿದ್ದರು. ಈ ಪ್ರಕರಣದಲ್ಲಿ ಆರೋಪಿತರು ಮಂಗಳೂರಿನ ಗೌರವಾನ್ವಿತ […]