ಕೇರಳ | 21 ವರ್ಷದ ದಿಯಾ ನೂತನ ಪಾಲಾ ಪುರಸಭೆಯ ಅಧ್ಯಕ್ಷೆ

ಕೊಟ್ಟಾಯಂ: ಪಾಲಾ ಪುರಸಭೆಯ ಅಧ್ಯಕ್ಷೆಯಾಗಿ ದಿಯಾ ಪುಲಿಕಾಕಂಡಮ್ ಅಧಿಕಾರ ವಹಿಸಿಕೊಂಡಿದ್ದಾರೆ. 21 ವರ್ಷದ ಈಕೆ ದೇಶದ ಅತ್ಯಂತ ಕಿರಿಯ ಪುರಸಭೆಯ ಅಧ್ಯಕ್ಷೆ. ಪುಲಿಕಾಕಂಡಮ್ ಕುಟುಂಬದ ಮೂವರು ಸದಸ್ಯರು ಪಾಲಾ ಪುರಸಭೆಯನ್ನು ಸ್ವತಂತ್ರ ಅಭ್ಯರ್ಥಿಗಳಾಗಿ ಗೆದ್ದಿದ್ದಾರೆ. ಒಂದು ವಾರಕ್ಕೂ ಹೆಚ್ಚು ಕಾಲ ನಡೆದ ಚರ್ಚೆಯ ನಂತರ, ಕುಟುಂಬವು ಯುಡಿಎಫ್ ಅನ್ನು ಬೆಂಬಲಿಸಲು ನಿರ್ಧರಿಸಿದೆ. ಚರ್ಚೆಯ ಸಮಯದಲ್ಲಿ ಕುಟುಂಬವು ಮಂಡಿಸಿದ ಅಂಶಗಳನ್ನು ಪುಲಿಕಾಕಂಡಮ್ ಕುಟುಂಬ ಒಪ್ಪಿಕೊಂಡ ನಂತರ ಯುಡಿಎಫ್ ಸಕಾರಾತ್ಮಕ ನಿರ್ಧಾರವನ್ನು ತೆಗೆದುಕೊಂಡಿತು. ಯಾ ಬಿನು ಪುಲಿಕಾಕಂಡಮ್ ಮೊದಲ ಅವಧಿಗೆ […]
ಮದುವೆಯಾಗು ಎಂದಿದ್ದಕ್ಕೆ ಕತ್ತು ಸೀಳಿ ಕೊಂದ ಪ್ರಿಯಕರ: ನರ್ಸ್ ಮನೆಯಲ್ಲಿ ಹರಿದಿದ್ದು ರಕ್ತದೋಕುಳಿ!

ಬೆಂಗಳೂರು: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಮನೆಯೊಂದರಲ್ಲಿ ಒಂಟಿಯಾಗಿದ್ದ ಸ್ಟಾಫ್ ನರ್ಸ್ ಅನ್ನು ಭೀಕರವಾಗಿ ಹತ್ಯೆಗೈದ ಘಟನೆ ಡಿಸೆಂಬರ್ 24ರ ರಾತ್ರಿ ನಡೆದಿದೆ. ಆಕೆ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿದ ಆಕೆಯ ಪ್ರಿಯಕರ, ಕತ್ತುಕುಯ್ದು ಆಕೆಯ ಹತ್ಯೆ ಮಾಡಿರುವುದು ತಿಳಿದುಬಂದಿದೆ. ಮಾಹಿತಿ ಸಿಕ್ಕ ಕೂಡಲೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಮದುವೆಯಾಗದೇ ಒಂಟಿಯಾಗಿದ್ದ ಸ್ಟಾಫ್ ನರ್ಸ್39 ವರ್ಷವಾದರೂ ಮದುವೆಯಾಗದೆ ಒಂಟಿಯಾಗಿದ್ದ ಮಮತಾ, ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ […]
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಇನ್ಸ್ಟಾದಲ್ಲಿ ಪರಿಚಿತರಾದ ಯುವತಿಯರು!
ಪಾಟ್ನಾ (ಬಿಹಾರ): ಇಲ್ಲಿನ ದೇವಸ್ಥಾನವೊಂದರಲ್ಲಿ ಯುವತಿಯರಿಬ್ಬರು ಸಲಿಂಗ ವಿವಾಹವಾಗಿದ್ದಾರೆ. ಇದರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ತಾವು ಪರಸ್ಪರ ಒಪ್ಪಿಯೇ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಅವರು ಹೇಳಿಕೊಂಡಿದ್ದಾರೆ. ಮಾಧೇಪುರ ಜಿಲ್ಲೆಯ ನಿವಾಸಿಗಳಾದ ಈ ಯುವತಿಯರು ತ್ರಿವೇಣಿಗಂಜ್ ಮುನ್ಸಿಪಲ್ ಕೌನ್ಸಿಲ್ ಪ್ರದೇಶದ ಮಾಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಒಟ್ಟಿಗೆ ವಾಸಿಸುತ್ತಿದ್ದರು. ಇದೀಗ, ಅವರ ಬಂಧಕ್ಕೆ ವಿವಾಹದ ನಂಟು ಬೆಸೆದಿದ್ದಾರೆ. ಈ ಬಗ್ಗೆ ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಇನ್ಸ್ಟಾ ಮೂಲಕ ಪರಿಚಯ: ಈ ಇಬ್ಬರು […]
ಮೈಸೂರು ಸಿಲಿಂಡರ್ ಸ್ಫೋಟಕ್ಕೆ NIA ಎಂಟ್ರಿ: ಸಲೀಂ ಹಿನ್ನೆಲೆ ಕೆದಕಲು ಮುಂದಾದ ಟೀಮ್

ಮೈಸೂರು: ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಈಗ ರಾಷ್ಟ್ರೀಯ ತನಿಖೆ (NIA) ದಳ ಎಂಟ್ರಿಯಾಗಿದೆ. ಇಂದು ಮೈಸೂರಿಗೆ ಎನ್‌ಎಐ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಪೊಲೀಸರ ಜೊತೆ ತನಿಖೆಯ ಮಾಹಿತಿ ಪಡೆಯಲಿದ್ದಾರೆ. ಸಾಧಾರಣವಾಗಿ ಹೀಲಿಯಂ ಸ್ಫೋಟವಾಗುವುದಿಲ್ಲ. ಹೀಗಿದ್ದರೂ ಅರಮನೆಯ ಆವರಣದಲ್ಲೇ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಹಲವಾರು ಅನುಮಾನಗಳು ಈಗ ವ್ಯಕ್ತವಾಗಿದೆ. ಸ್ಫೋಟದ ತೀವ್ರತೆಗೆ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ಬಲೂನ್ ಮಾರುತ್ತಿದ್ದ ಸಲೀಂ (40) ಮೃತಪಟ್ಟಿದ್ದು, ಮೃತದೇಹ ಛಿದ್ರ-ಛಿದ್ರವಾಗಿದೆ. ಆರಂಭದಲ್ಲಿ ಮೃತ ಸಲೀಂ ಕೋಲ್ಕತ್ತಾದ […]
40 ಲಕ್ಷ ರೂ ವೆಚ್ಚದ ಅದ್ಧೂರಿ ಮದುವೆ.. ಹನಿಮೂನ್ ಅರ್ಧಕ್ಕೇ ಮೊಟಕು, ನವವಿವಾಹಿತೆ ಆತ್ಮಹತ್ಯೆ! ಆಗಿದ್ದೇನು?

ಬೆಂಗಳೂರು: ನವವಿವಾಹಿತ ಮಹಿಳೆಯೊಬ್ಬರು ಹನಿಮೂನ್ ಮೊಟಕುಗೊಳಿಸಿ ಮನೆಗೆ ವಾಪಸ್ ಆಗಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಹೌದು.. ಅದ್ಧೂರಿಯಾಗಿ ವಿವಾಹವಾಗಿ ಹನಿಮೂನ್ ಗೆ ಹೋಗಿದ್ದ 26 ವರ್ಷದ ಮಹಿಳೆಯೊಬ್ಬರು ದಿಢೀರ್ ಮನೆಗೆ ವಾಪಸ್ ಆಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಬಾಬಣ್ಣ ಲೇಔಟ್‍ನಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಐಶ್ವರ್ಯಾ ಅವರು ಒಂದು ತಿಂಗಳ ಹಿಂದೆ ಬಾಬಣ್ಣ ಲೇಔಟ್ ನಿವಾಸಿ ಲಿಖಿತ್ ಅವರನ್ನು ಮದುವೆ ಆಗಿದ್ದರು. ಐಶ್ವರ್ಯಾ ಅವರು ಎಂಬಿಎ […]
ನರ್ಸ್ ಬಟ್ಟೆ ಬದಲಿಸುವಾಗ ಕದ್ದುಮುಚ್ಚಿ ವಿಡಿಯೋ: ಕಾಮುಕ ಸಿಬ್ಬಂದಿ ಅರೆಸ್ಟ್

ಬೆಂಗಳೂರು: ಆಸ್ಪತ್ರೆಯಲ್ಲಿ ನರ್ಸ್ ಬಟ್ಟೆ ಬದಲಿಸುವಾಗ ಕದ್ದುಮುಚ್ಚಿ ವಿಡಿಯೋ ಮಾಡಿಕೊಳ್ಳುತ್ತಿದ್ದ ಅಲ್ಲಿನ ಸಿಬ್ಬಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಸುವೆಂದು ಮೊಹಂತ ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದಿಂದ ನಾಗರಭಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಆಪರೇಷನ್ ಥಿಯೇಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸುವುದನ್ನ ನರ್ಸ್ ಒಬ್ಬರು ಗಮನಿಸಿದ್ದರು. ಬಳಿಕ ಈ ಕುರಿತು ಆಸ್ಪತ್ರೆಯ ವೈದ್ಯರ ಗಮನಕ್ಕೆ ತಂದಿದ್ದರು. ಅದರಂತೆ ಆಸ್ಪತ್ರೆಯ ಹಿರಿಯ ವೈದ್ಯ ಚೇತನ್ ಆರೋಪಿಯ ವಿರುದ್ಧ ದೂರು […]
ಮೌಲಾನಾರು 4 ಪತ್ನಿಯರು, 19 ಮಕ್ಕಳನ್ನು ಹೊಂದಿರುವಾಗ ಹಿಂದೂಗಳು ಕನಿಷ್ಠ 4 ಮಕ್ಕಳನ್ನು ಮಾಡಿಕೊಳ್ಳಬೇಕು: BJP ನಾಯಕಿ !

ನವದೆಹಲಿ: ಬಿಜೆಪಿ ನಾಯಕಿ ನವನೀತ್ ರಾಣಾ ಅವರು ದೇಶದ ಹಿಂದೂ ಜನರಲ್ಲಿ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ದೇಶದ ಜನಸಂಖ್ಯಾ ರಚನೆಯು ಪಾಕಿಸ್ತಾನದಂತೆ ಬದಲಾಗದಿರಲು ಹಿಂದೂಗಳು ಕನಿಷ್ಠ ಮೂರರಿಂದ ನಾಲ್ಕು ಮಕ್ಕಳನ್ನು ಹೊಂದುವಂತೆ ಕೇಳಿಕೊಂಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡುತ್ತಿರುವ ಸಂದರ್ಭದಲ್ಲಿ ನವನೀತ್ ರಾಣಾ, ಕೆಲವರು ನಮ್ಮ ದೇಶದಲ್ಲಿ ಬಹು ಪತ್ನಿಯರು ಮತ್ತು ಹಲವಾರು ಮಕ್ಕಳನ್ನು ಹೊಂದಿದ್ದಾರೆ, ಇದರಿಂದಾಗಿ ಅವರ ಜನಸಂಖ್ಯೆಯು ಬೆಳೆಯುತ್ತಾ ಹೋಗುತ್ತಿದೆ, ಅವರನ್ನು ಸೋಲಿಸಲು, ಹಿಂದೂಸ್ತಾನವನ್ನು ರಕ್ಷಿಸಲು ಹಿಂದೂಗಳು ಕನಿಷ್ಠ ಮೂರರಿಂದ ನಾಲ್ಕು ಮಕ್ಕಳನ್ನು ಹೊಂದಬೇಕೆಂದು ಒತ್ತಾಯಿಸಿದರು. […]
ಚಿತ್ರದುರ್ಗ ದುರಂತ: ಮದುವೆ ಫಿಕ್ಸ್ ಆಗಿದ್ದ ಜೀವದ ಗೆಳತಿಯರಿಬ್ಬರ ಕೊನೆಯ ಪ್ರಯಾಣ!

ಓದಿದ್ದೂ ಜೊತೆಯಲ್ಲೇ ಜೀವ ಹೋಗಿದ್ದೂ ಒಟ್ಟಿಗೆ! ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಸಮೀಪ ಸಂಭವಿಸಿದ ಭೀಕರ ಬಸ್ ಅಪಘಾತ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಈ ದುರಂತದಲ್ಲಿ ಲಾರಿ ಡ್ರೈವರ್ ಸೇರಿ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ನವ್ಯ ಹಾಗೂ ಮಾನಸ ಅವರ ಪೋಷಕರ ನೋವಿನ ಕಥೆ ಕರುಳು ಹಿಂಡುವಂತಿದೆ. ಜೀವದ ಗೆಳತಿಯರಿಬ್ಬರು ಸಿಗಂದೂರಿಗೆ ಪ್ರಯಾಣಿಸುತ್ತಿದ್ದರು. ಮಾನಸ ಮತ್ತು ನವ್ಯ ಎಂಬ ಇಬ್ಬರಿಗೂ ಮದುವೆ ನಿಶ್ಚಯವಾಗಿತ್ತು. ಈಗ ಇಬ್ಬರ ದುರ್ಮರಣ […]
ಹಿಂದೂ ಯುವಕನನ್ನು ಮದುವೆ ಮಾಡಿಕೊಂಡಿದ್ದಕ್ಕೆ ದ್ವೇಷ: ಮೊಮ್ಮಗಳ 40 ದಿನದ ಶಿಶುವನ್ನೇ ಕೊಂದಳೇ ಅಜ್ಜಿ?

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 40 ದಿನದ ನವಜಾತ ಗಂಡು ಶಿಶು ಸಾವಿನ ಪ್ರಕರಣ ಇದೀಗ ತೀವ್ರ ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆಯಲ್ಲಿ ಮರ್ಯಾದೆ ಹತ್ಯೆ ಶಂಕೆ ವ್ಯಕ್ತವಾಗಿದ್ದು, ಶಿಶುವಿನ ಸಾವಿನಲ್ಲಿ ಅಜ್ಜಿಯ ಕೈವಾಡವಿರಬಹುದೆಂಬ ಆರೋಪ ಕೇಳಿಬಂದಿದೆ. ಅಪ್ರಾಪ್ತ ಮೊಮ್ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಕ್ಕೆ ದ್ವೇಷ ಹೊಂದಿದ್ದ ಅನ್ಯಕೋಮಿಗೆ ಸೇರಿದ ಅಜ್ಜಿ, ಮೊಮ್ಮಗಳ 40 ದಿನದ ನವಜಾತ ಶಿಶುವನ್ನು ಕೊಂದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಪ್ರೀತಿಸಿ ಮದುವೆಯಾದ ದಂಪತಿಗೆ ಜನಸಿದ್ದ ಗಂಡು ಮಗು ಡಿಸೆಂಬರ್ […]
ಚಿತ್ರದುರ್ಗ | ‘ಎದುರಿನಿಂದ ಅತಿ ವೇಗದಲ್ಲಿ ಟ್ರಕ್ ಬರುವುದು ಕಂಡಿತು’, ಬಸ್ ಚಾಲಕ ರಫೀಕ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ಬಸ್ ಅಪಘಾತ ಹೇಗಾಯಿತು ಎಂದು ಖಾಸಗಿ ಬಸ್‌ನ ಚಾಲಕ ಮಾತನಾಡಿದ್ದಾರೆ. ಅತಿ ವೇಗದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿರುವುದನ್ನು ನೋಡಿ ನನಗೆ ಬಸ್ಸನ್ನು ನಿಯಂತ್ರಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ. ಇಂದು ನಸುಕಿನ ಜಾವ 2 ಗಂಟೆಗೆ ಹಿರಿಯೂರು ಬಳಿ ವೇಗವಾಗಿ ಬಂದ ಕಂಟೇನರ್ ಟ್ರಕ್ ಖಾಸಗಿ ಐಷಾರಾಮಿ ಸ್ಲೀಪರ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಕನಿಷ್ಠ ಒಂಬತ್ತು ಜನರು ಮೃತಪಟ್ಟಿದ್ದಾರೆ […]