ರತ್ನಗಿರಿಯಲ್ಲಿ ಭೀಕರ ಅಪಘಾತ: ಮಂಗಳೂರಿನ ಯುವಕ ಮೃತ್ಯು

ಮಂಗಳೂರು: ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಮುಡಿಪು ಸಮೀಪದ ಬೋಳಿಯಾರ್ ನಿವಾಸಿಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಮುಹಮ್ಮದ್ ರಿಝ್ವಾನ್ (28) ಮೃತ ವಿವಾಹಿತ ಯುವಕ ಎಂದು ತಿಳಿದು ಬಂದಿದೆ. ಕಳೆದ ಹಲವಾರು ವರ್ಷಗಳಿಂದ ಕಂಪೆನಿಯೊಂದರ ಮೂಲಕ ಮೀನಿನ ಲಾರಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ರಿಝ್ವಾನ್ ಅವರು ಮಹಾರಾಷ್ಟ್ರಕ್ಕೆ ಮೀನಿನ ಲಾರಿ ಚಲಾಯಿಸುತ್ತಿದ್ದು, ಮಹಾರಾಷ್ಟ್ರದ ರತ್ನಗಿರಿ ಎಂಬಲ್ಲಿ ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಝ್ವಾನ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ, 15 ಲಕ್ಷ ಪರಿಹಾರ ಘೋಷಣೆ

ಶಿವಮೊಗ್ಗ: ಶಿವಮೊಗ್ಗದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಬಾಲಕನ ಕೊಲೆಯಾಗಿದ್ದು, ಆ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಘಟನೆಯ ನಂತರ, ನಗರದಲ್ಲಿ ದೊಡ್ಡ ಪೊಲೀಸ್ ಪಡೆ ನಿಯೋಜಿಸಲಾಗಿತ್ತು. ಉರಗದೂರಿನ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ (16) ಪರೀಕ್ಷೆಗೆ ಮುನ್ನ ವಿಶೇಷ ತರಗತಿಗೆ ಹಾಜರಾದ ನಂತರ ಈ ಘಟನೆ ಸಂಭವಿಸಿದೆ. ಸಂಕೇತ್ ತನ್ನ ಶಾಲೆಯ ಹೊರಗೆ ಹುಡುಗರ ಗುಂಪಿನ ನಡುವೆ ನಡೆದ ವಾಗ್ವಾದದಲ್ಲಿ ಮಧ್ಯಪ್ರವೇಶಿಸಿದ್ದರು. ಈ ವೇಳೆ ವಾಗ್ವಾದ ನಡೆದು ಎಂದು […]
ಮಹಾತ್ಮ ಗಾಂಧಿ ಅವರನ್ನು ರಾಷ್ಟ್ರಪಿತ ಎಂದು ಒಪ್ಪಿಕೊಳ್ಳುವುದಿಲ್ಲ, ನೆಹರೂ ಅಯೋಗ್ಯ ಪ್ರಧಾನಿ : ನಾಲಿಗೆ ಹರಿಯಬಿಟ್ಟ ಯತ್ನಾಳ್

ಯಾದಗಿರಿ : ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಶಿವಾಜಿ ಜಯಂತಿ ಅಂಗವಾಗಿ ಶನಿವಾರ ರಾತ್ರಿ ನಡೆದ ಬಹಿರಂಗ ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ದೇಶದಲ್ಲಿ ಇರಬೇಕಾದರೆ ಒಂದೇ ಮಾತು ಮಾತನಾಡಬೇಕು ಎಂಬ ಮನಸ್ಥಿತಿ ಇದೆ. ನಾನು ಮಹಾತ್ಮ ಗಾಂಧಿ ಅವರನ್ನು ರಾಷ್ಟ್ರಪಿತ ಎಂದು ಒಪ್ಪಿಕೊಳ್ಳುವುದಿಲ್ಲ. ನಮ್ಮ ದೇಶದ ಇತಿಹಾಸವೇ ಬೇರೆ ರೀತಿಯಲ್ಲಿದೆ ಎಂದು ಯತ್ನಾಳ್ ಹೇಳಿದ್ದಾರೆ. ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡಿದ ಯತ್ನಾಳ್, ಮನೆ ಮೇಲೆ ಕಲ್ಲು ಹೊಡೆದರೆ ಬೂಲ್ಡೋಝರ್ ಬರುತ್ತದೆ. […]
ವಿದ್ಯಾರ್ಥಿನಿಯ ಗುಪ್ತಾಂಗಕ್ಕೆ ಸ್ಯಾನಿಟೈಸರ್ ಹಾಕಿ ಬೆಂಕಿ ಹಚ್ಚಿದ ಯುವಕ!

ಗುರುಗ್ರಾಮ್: ಲಿವ್-ಇನ್ ಸಂಗಾತಿ 19 ವರ್ಷದ ವಿದ್ಯಾರ್ಥಿನಿಗೆ ದ್ರೋಹ ಮಾಡಿದ್ದಲ್ಲದೆ ಕ್ರೂರ ಚಿತ್ರಹಿಂಸೆಗೆ ಒಳಪಡಿಸಲಾಗಿದೆ. ಆರೋಪಿ ತನ್ನ ಸಂಗಾತಿಯ ದೇಹದ ಮೇಲೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ್ದಾನೆ. ಗುರುಗ್ರಾಮ್ ಪೊಲೀಸರು ಆರೋಪಿ ಶಿವಮ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ತ್ರಿಪುರ ನಿವಾಸಿಯಾಗಿರುವ ಸಂತ್ರಸ್ತೆಗೆ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಕೆಗೆ ತೀವ್ರ ಸುಟ್ಟಗಾಯಗಳಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ. ತ್ರಿಪುರಾ ಬಾಲಕಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಜೀವಕ್ಕಾಗಿ ಹೋರಾಡುತ್ತಿದ್ದಾಳೆ. ಈ ಮಧ್ಯೆ ಆಕೆಯ ತಾಯಿಗೆ ಸಮಾಧಾನ […]
ಮಂಗಳೂರು | ದೈಹಿಕ ಹಲ್ಲೆ, ಮಾನಸಿಕ ನಿಂದನೆ: ಕಾಂಗ್ರೆಸ್’ಗೆ ನವನೀತ್ ಉಳ್ಳಾಲ್ ರಾಜೀನಾಮೆ

ಮಂಗಳೂರು: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತನಕ್ಕೆ ರಾಜೀನಾಮೆ ಸಲ್ಲಿಸಿದ ಯುವ ನಾಯಕ ನವನೀತ್ ಉಳ್ಳಾಲ್ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆ ಪತ್ರದಲ್ಲಿ. ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನಲ್ಲಿ ಕಳೆದ ಒಂದುವರೆ ವರ್ಷಗಳಿಂದ ಅತ್ಯಂತ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಪ್ರಾಥಮಿಕ ಸದಸ್ಯ ಹಾಗೂ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಆದರೆ ಕಳೆದ ಕೆಲವು ತಿಂಗಳುಗಳಿಂದ ನನ್ನ ವಿರುದ್ಧ ಮಾರಣಾಂತಿಕ ಹಲ್ಲೆಗೆ ಷಡ್ಯಂತ್ರ, ಪಿತೂರಿ, ಕೊಲೆ ಸಂಚನ್ನು ಸ್ವಪಕ್ಷದ ಬ್ಲಾಕ್ ನಾಯಕರುಗಳಾದ ಉಸ್ಮಾನ್ ಕಲ್ಲಾಪು, […]
ಚಿನ್ನಾಭರಣ ಕಳವು ಆರೋಪ: ನಾನು ಚಿನ್ನ ಕದ್ದಿಲ್ಲ, ಕುರಾನ್ ಮೇಲೆ ಕೈಯಿಟ್ಟು ಹೇಳಿದರೂ ಕೇಳುತ್ತಿಲ್ಲ; ಎರಡು ಮಕ್ಕಳ ತಾಯಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ

ಕಾಸರಗೋಡು: ಕಳ್ಳತನ ದೂರಿನಲ್ಲಿ ತನ್ನ ಹೆಸರು ಉಲ್ಲೇಖಿಸಲ್ಪಟ್ಟಿದ್ದರಿಂದ ಮಾನಸಿಕವಾಗಿ ನೊಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರು ಕಾಸರಗೋಡು ಆಲಂಬಾಡಿಯ ನಲ್ತಡುಕ್ಕದ ಜಸೀಲಾ. ಇತ್ತೀಚೆಗೆ ನಡೆದ ಚಿನ್ನ ಕಳ್ಳತನ ದೂರಿನಲ್ಲಿ ಜಸೀಲಾ ಅವರ ಹೆಸರು ಇತ್ತು. ಘಟನೆಯಲ್ಲಿ ವಿಚಾರಣೆಗೆ ಅವರನ್ನು ಕರೆಸಲಾಗಿದ್ದರೂ ಪ್ರಕರಣ ದಾಖಲಾಗಿಲ್ಲ. ಜಸೀಲಾ ಅವರ ಸ್ನೇಹಿತೆ ಮನೆಯಿಂದ ಒಂಬತ್ತು ಪವನ್ ಚಿನ್ನದ ತುಂಡುಗಳು ಕಾಣೆಯಾಗಿವೆ ಎಂದು ದೂರು ದಾಖಲಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಜಸೀಲಾ ಅವರ ಮರಣದ ಹೇಳಿಕೆಯನ್ನು […]
ಮಂಗಳೂರು: Ludo ಆಟದ ಕಾಯ್ನ್ ನುಂಗಿ ಬಾಲಕಿ ಸಾವು

ಉಳ್ಳಾಲ: ಮನೆಯಲ್ಲಿ ಲ್ಯುಡೊ ಆಟದಲ್ಲಿ ತೊಡಗಿದ್ದ ಎಂಟು ವರ್ಷದ ಬಾಲಕಿ ಆಟಕ್ಕೆ ಬಳಸುವ ಶಂಕಾಕೃತಿಯ ಪ್ಲಾಸ್ಟಿಕ್ ಕಾಯ್ನ್ ಅನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ ಎಂಬಲ್ಲಿ ಶನಿವಾರ ನಡೆದಿದೆ. ಕಾಸರಗೋಡು ಜಿಲ್ಲೆಯ ಮಧೂರು ಉಳಿಯತಡ್ಕ ನಿವಾಸಿ ರಾಜೇಶ್ ಗಟ್ಟಿ ಮತ್ತು ರಾಜೇಶ್ವರಿ ದಂಪತಿಯ ಎರಡನೇ ಪುತ್ರಿ ತನುಷ್ಕಾ ಮೃತ ದುರ್ದೈವಿ. ತನುಷ್ಕಾ ತಾಯಿ ಉಳ್ಳಾಲದ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು ಉದ್ಯೋಗಕ್ಕೆ ತೆರಳಲು ಅನುಕೂಲವಾಗುವಂತೆ ಕೊಲ್ಯದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಶನಿವಾರ ಮಧ್ಯಾಹ್ನ ಶಾಲೆಗೆ ರಜೆ […]
ಟೆಕ್ಕಿ ಸಾವಿಗೆ ಬಿಗ್ ಟ್ವಿಸ್ಟ್: ಯುವಕನ ಕಾಮೋನ್ಮಾದಕ್ಕೆ ಶರ್ಮಿಳಾ ಬಲಿ

ಬೆಂಗಳೂರು: ಬೆಂಗಳೂರಿನ ರಾಮಮೂರ್ತಿ ಇದೇ ಜನವರಿ 16ರಂದು ನಡೆದಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಮಂಗಳೂರು ಮೂಲದ ಶರ್ಮಿಳಾ ಅವರ ನಿಗೂಢ ಸಾವು ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅತ್ಯಾಚಾರಕ್ಕೆ ಯತ್ನಿಸಿ ವಿಫಲನಾದ ನೆರೆಮನೆಯ 18 ವರ್ಷದ ಯುವಕನೇ ಆಕೆಯನ್ನು ಕೊಲೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ. ಬಳಿಕ ಪೊಲೀಸರು ಮತ್ತಷ್ಟು ತನಿಖೆ ನಡೆಸಿದಾಗ ಆರೋಪಿ ಕರ್ನಲ್ ಕುರೈ ತನ್ನ ವಿಕೃತ ಮನಸ್ಥಿತಿಯನ್ನು ಬಿಚ್ಚಿಟ್ಟಿದ್ದಾನೆ. ಶರ್ಮಿಳಾ ಫ್ಲಾಟ್ ಗೆ ನುಗ್ಗುವ ಮುನ್ನ ನಾಲ್ಕೈದು ಬಾರಿ ರೆಕ್ಕಿ ಮಾಡಿದ್ದನಂತೆ. ಇದು ಸುಲಭವಾಗಿ ಶರ್ಮಿಳಾ ಮನೆಗೆ […]
ಬಾಗಲಕೋಟೆ ಕಲ್ಲು ತೂರಾಟ; ತಪ್ಪಿತ್ತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ‘ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕವಾಗಿದ್ದು ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ‘ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ’ ಎಂದು ಹೇಳಿದ್ದಾರೆ. ‘ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ’ […]
ಝಕರಿಯಾ ಜೋಕಟ್ಟೆಗೆ Entrepreneur Middle Eastನ ʼThe 100 NRIʼs ಪಟ್ಟಿಯಲ್ಲಿ ಸ್ಥಾನ

ಜುಬೈಲ್ (ಸೌದಿ ಅರೇಬಿಯ): ದಕ್ಷಿಣ ಕನ್ನಡ ಜಿಲ್ಲೆಯ ಜೋಕಟ್ಟೆ ಮೂಲದ ಉದ್ಯಮಿ ಹಾಗೂ ALMUZAIN ಗಲ್ಫ್ ಸೌದಿ ಕಾಂಟ್ರಾಕ್ಟಿಂಗ್ ಕಂಪೆನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸಂಸ್ಥಾಪಕರಾದ ಝಕರಿಯಾ ಜೋಕಟ್ಟೆ ಅವರು Entrepreneur Middle Eastನ ಈ ವರ್ಷದ ಮಧ್ಯಪ್ರಾಚ್ಯದ ಪ್ರತಿಷ್ಠಿತ “The 100 NRIʼSʼ ” ಪಟ್ಟಿಯಲ್ಲಿಸ್ಥಾನ ಪಡೆದಿದ್ದಾರೆ. ಎಂಟ್ರಪ್ರೈನರ್ ಮಿಡ್ಲ್ ಈಸ್ಟ್ ಪ್ರಕಟಿಸುವ ವಾರ್ಷಿಕ ವಿಶೇಷ ಪಟ್ಟಿಯಲ್ಲಿ ವಿಶ್ವದ ವಿವಿಧ ಭಾಗಗಳಲ್ಲಿ ಸಾಧನೆ ಮಾಡಿರುವ 100 ಅತ್ಯುತ್ತಮ ಅನಿವಾಸಿ ಭಾರತೀಯ ಉದ್ಯಮಿಗಳನ್ನು ಗುರುತಿಸಲಾಗುತ್ತದೆ. ಈ […]