ಭಾರತ ಹಿಂದೂರಾಷ್ಟ್ರ, ಈ ಸತ್ಯಕ್ಕೆ ಸಂವಿಧಾನಾತ್ಮಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಕೊಲ್ಕತ್ತಾ: ಭಾರತ ಹಿಂದೂರಾಷ್ಟ್ರ. ಈ ಸತ್ಯಕ್ಕೆ ಸಂವಿಧಾನಾತ್ಮಕ ಅನುಮೋದನೆಯ ಅಗತ್ಯವಿಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಆರೆಸ್ಸೆಸ್ ಶತಮಾನೋತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ಈಗಲೂ ಹಿಂದೂರಾಷ್ಟ್ರ. ಭಾರತೀಯ ಸಂಸ್ಕೃತಿ ಇರುವವರೆಗೂ ಹಿಂದೂರಾಷ್ಟ್ರವಾಗಿಯೇ ಮುಂದುವರಿಯಲಿದೆ ಎಂದು ಹೇಳಿದರು. “ಸೂರ್ಯ ಪೂರ್ವದಲ್ಲಿ ಉದಯಿಸುತ್ತಾನೆ. ಯಾವಾಗದಿಂದ ಇದು ಘಟಿಸುತ್ತಿದೆ ಎನ್ನುವುದು ನಮಗೆ ಗೊತ್ತಿಲ್ಲ. ಆದ್ದರಿಂದ ಇದಕ್ಕೂ ಸಂವಿಧಾನಾತ್ಮಕ ಅನುಮೋದನೆ ಬೇಕೇ? ಹಿಂದೂಸ್ತಾನ ಎನ್ನುವುದು ಹಿಂದೂ ದೇಶ. ಭಾರತ ನಮ್ಮ ಮಾತೃಭೂಮಿ ಎಂದು ಪರಿಗಣಿಸಿ ಭಾರತೀಯ […]
Uppinangady: ಜೇನು ಕೃಷಿ ಕಲಿಸುವೆನೆಂದು ಬಾಲಕಿ ಮೇಲೆ ಅತ್ಯಾಚಾರ

ಉಪ್ಪಿನಂಗಡಿ: ಬೆಳಗಾವಿ ಮೂಲದ ಕೂಲಿ ಕಾರ್ಮಿಕ ಕುಟುಂಬವೊಂದರ 13ರ ಹರೆಯದ ಬಾಲಕಿಯನ್ನು ಜೇನು ಕೃಷಿ ಕಲಿಸಿಕೊಡುವೆನೆಂದು ತನ್ನ ಮನೆಯಲ್ಲಿರಿಸಿ ನಿರಂತರ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ 34ನೇ ನೆಕ್ಕಿಲಾಡಿಯ ಬೇರಿಕೆ ನಿವಾಸಿ ಅಬ್ದುಲ್ ಗಫೂರ್ (50) ಎಂಬಾತನನ್ನು ಪೋಕ್ಸೋ ಕಾಯಿದೆಯಡಿ ಉಪ್ಪಿನಂಗಡಿ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕೂಲಿ ಕೆಲಸಕ್ಕೆಂದು ಬಂದು ಪರಿಸರದಲ್ಲಿ ವಾಸವಾಗಿದ್ದ ಕುಟುಂಬವೊಂದರ ಬಾಲಕಿಗೆ ಜೇನು ಕೃಷಿ ಕಲಿಸಿಕೊಡುವ ಭರವಸೆ ನೀಡಿ ಆರೋಪಿಯು ತನ್ನ ಮನೆಯಲ್ಲಿಯೇ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಿದ್ದ. ಬಾಲಕಿಯ ಹೆತ್ತವರು ಆರೋಪಿಯನ್ನು […]
ನಿಧಿ ಅಗರ್ವಾಲ್ ಬೆನ್ನಲ್ಲೇ ನಟಿ ಸಮಂತಾಗೆ ಮೇಲೆ ಮುಗಿಬಿದ್ದ ಫ್ಯಾನ್ಸ್, ಹುಚ್ಚಾಟದ ದೃಶ್ಯ ಸೆರೆ

ಹೈದರಾಬಾದ್: ಸಿನಿಮಾ ನಟ ನಟಿಯರ ಮೇಲಿನ ಅಭಿಮಾನ ಒಂದು ಹಂತದವರೆಗೆ ಉತ್ತಮ. ಆದರೆ ಅತಿರೇಖದ ಅಭಿಮಾನ ಇದೀಗ ಹಲವೆಡೆ ವ್ಯಕ್ತವಾಗುತ್ತಿದೆ. ಈ ಪೈಕಿ ಹೈದರಾಬಾದ್‌ನಲ್ಲಿ ಪದೇ ಪದೇ ಅಭಿಮಾನಿಗಳಿಂದ ಅತಿರೇಖದ ವರ್ತನೆಗಳು ವರದಿಯಾಗುತ್ತಿದೆ. ಇತ್ತೀಚೆಗೆ ನಟಿ ನಿಧಿ ಅಗರ್ವಾಲ್ ಮೇಲೆ ಅಭಿಮಾನಿಗಳು ತೋರಿದ ಅತೀರೇಖದ ವರ್ತನೆ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ನಟಿ ಸಮಂತ್ ರುತ್ ಪ್ರಭು ಮೇಲೆ ಅಭಿಮಾನಿಗಳು ಮುಗಿ ಬಿದ್ದ ಘಟನೆ ನಡೆದಿದೆ. ಫ್ಯಾನ್ಸ್‌ನಿಂದ ನಟಿ ಸಮಂತಾ ಸುರಕ್ಷಿತವಾಗಿ ಹೊರತರಲು […]
Mangaluru | SDPI ಪ್ರತಿಭಟನಾ ವೀಡಿಯೊದಲ್ಲಿ ತಪ್ಪು ಮಾಹಿತಿ ಆರೋಪ: ಸ್ವಯಂಪ್ರೇರಿತ ದೂರು ದಾಖಲು

ಮಂಗಳೂರು: ಎಸ್‌ಡಿಪಿಐ ಮಂಗಳೂರಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯ ವೀಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾದ ನಂತರ ಪೊಲೀಸರು ಸ್ವಯಂಪ್ರೇರಿತ ದೂರನ್ನು ದಾಖಲಿಸಿದ್ದಾರೆ. ವೀಡಿಯೊ ತುಣುಕುಗಳಲ್ಲಿ ದಾರಿತಪ್ಪಿಸುವ ಮಾಹಿತಿ ಮತ್ತು ನ್ಯಾಯಾಲಯದ ತೀರ್ಪುಗಳ ಆಯ್ದ ಉಲ್ಲೇಖಗಳಿವೆ ಎಂದು ಆರೋಪಿಸಲಾಗಿದೆ. ಪೊಲೀಸ್ ಪತ್ರಿಕಾ ಪ್ರಕಟಣೆಯ ಪ್ರಕಾರ, ಡಿಸೆಂಬರ್ 19, ಶುಕ್ರವಾರ ಮಂಗಳೂರಿನಲ್ಲಿ ಎಸ್.ಡಿ.ಪಿ.ಐ ಪ್ರತಿಭಟನಾ ಸಭೆ ನಡೆಸಲಾಗಿತ್ತು. ವೀಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆದ ನಂತರ, ಅಧಿಕಾರಿಗಳು ವಿಷಯವನ್ನು ಪರಿಶೀಲಿಸಿದಾಗ, ಕೆಲವು ಹೇಳಿಕೆಗಳು ವಿವಿಧ ನ್ಯಾಯಾಲಯಗಳು ನೀಡಿದ […]
ಮಹಿಳೆಯರಿಗೆ ಸಿಹಿ ಸುದ್ದಿ: ನಾಳೆಯಿಂದಲೇ ಬ್ಯಾಂಕ್ ಖಾತೆಗೆ ʻಗೃಹಲಕ್ಷ್ಮಿʼ ಹಣ

ಬೆಂಗಳೂರು: ರಾಜ್ಯದ ಪ್ರತಿ ಮನೆ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ʻಗೃಹಲಕ್ಷ್ಮಿʼಯರ ಖಾತೆಗಳಿಗೆ 1 ಕಂತಿನ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವಾಗಲೂ ಕಂತು ಅಂತ ಹೇಳ್ತೀನಿ. ತಿಂಗಳ ಹೆಸರು ಹೇಳಲ್ಲ. ಈಗಾಗಲೇ ಆರ್ಥಿಕ ಇಲಾಖೆ ಅವರು ನಮಗೆ 24ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. ಸೋಮವಾರದಿಂದ (ಡಿ.22) ಮುಂದಿನ ಶನಿವಾರದ ಒಳಗೆ 24ನೇ ಕಂತಿನ ಹಣ […]
ಸಮುದಾಯದ ಆಧಾರದ ಮೇಲೆ ಪ್ರಕರಣ ದಾಖಲಿಸುತ್ತಿಲ್ಲ: SDPI ಆರೋಪಕ್ಕೆ ಪೊಲೀಸ್ ಕಮಿಷನರ್ ಸ್ಪಷ್ಟನೆ

ಮಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯ ನೆಪದಲ್ಲಿ ಸತ್ಯಗಳನ್ನು ಮರೆಮಾಚಿಸಬೇಡಿ. ಪ್ರಚೋದನಾಕಾರಿ ಭಾಷಣ ಮೂಲಕ ಮುಗ್ಧ ಜನರಲ್ಲಿ ಗೊಂದಲ ಸೃಷ್ಟಿಸಬೇಡಿ. ನಾವು ಯಾವುದೇ ಘಟನೆಯಲ್ಲೂ ಸಮುದಾಯಗಳ ಆಧಾರದ ಮೇಲೆ ಪ್ರಕರಣಗಳನ್ನು ದಾಖಲಿಸುವುದಿಲ್ಲ. ವಾಸ್ತವಾಂಶಗಳ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತೇವೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದ.ಕ.ಜಿಲ್ಲಾ ಎಸ್‌ಡಿಪಿಐ ನಗರದ ಕ್ಲಾಕ್ ಟವರ್ ಬಳಿ ಶುಕ್ರವಾರ ನಡೆಸಿದ ಪ್ರತಿಭಟನೆಯ ವೇಳೆ ಭಾಷಣಕಾರರು ಪೊಲೀಸರು ಪ್ರಕರಣ ದಾಖಲಿಸುವಾಗ ತಾರತಮ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿದ್ದರು. […]
ವಿಟ್ಲ | ಸಂಪ್ರದಾಯ ನೆಪದಲ್ಲಿ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಿದ್ದ ಅಶೋಕ ರೈ: ಕಾನೂನು ಬಾಹಿರ ಕೃತ್ಯವೆಂದು ಪ್ರಕರಣ ದಾಖಲು

ವಿಟ್ಲ: ಕೇಪು ಗ್ರಾಮದಲ್ಲಿ ಅನುಮತಿ ರಹಿತ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದು, ಅಕ್ರಮಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ಒಟ್ಟು 17 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶನಿವಾರ (ಡಿ.20) ಮಧ್ಯಾಹ್ನ ಕೇಪು ಗ್ರಾಮದ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ […]
ಬಿಹಾರದ ಫಲಿತಾಂಶ ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ ‘ರಹದಾರಿ’: ಪ್ರಧಾನಿ ಮೋದಿ

ಕೋಲ್ಕತ್ತಾ: ಇತ್ತೀಚಿಗೆ ಮುಕ್ತಾಯವಾದ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ ರಹದಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ದಟ್ಟವಾದ ಮಂಜು ಕವಿದಿದ್ದರಿಂದ ಕಡಿಮೆ ಗೋಚರತೆಯಿಂದಾಗಿ ಪಶ್ಚಿಮ ಬಂಗಾಳದ ತಾಹೆರ್ ಪುರ ಹೆಲಿಪ್ಯಾಡ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಇಳಿಯಲು ವಿಫಲವಾದ ನಂತರ ವರ್ಚಯಲ್ ಮೂಲಕ ಬಿಜೆಪಿ ರಾಜಕೀಯ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ದೇಶವು ಕ್ಷಿಪ್ರ ಅಭಿವೃದ್ಧಿಯನ್ನು ಬಯಸುತ್ತಿದೆ. ಬಿಹಾರ ಮತ್ತೊಮ್ಮೆ ಎನ್‌ಡಿಎ ಸರ್ಕಾರಕ್ಕೆ ಅಭಿವೃದ್ಧಿಗಾಗಿ ಬೃಹತ್ […]
ಡಿ.21ರಂದು ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ‘ಕ್ರೀಡೋತ್ಸವ’: ಪ್ರಭಾಕರ ಭಟ್

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ 2025ನೇ ಸಾಲಿನ ಹೊನಲು-ಬೆಳಕಿನ ಕ್ರೀಡೋತ್ಸವವು ಡಿ.21ರಂದು ಸಂಜೆ 6ರಿಂದ ಸಂಸ್ಥೆಯ ವಿದ್ಯಾರ್ಥಿಗಳ ಹಲವು ಬಗೆಯ ಸಾಹಸಮಯ ಪ್ರದರ್ಶನಗಳೊಂದಿಗೆ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರಭಾಕರ ಭಟ್ ಕಲ್ಲಡ್ಕ ತಿಳಿಸಿದ್ದಾರೆ. ಅವರು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, . ಪ್ರತಿವರ್ಷ ನಡೆಯುವ ಕ್ರೀಡಾಕೂಟದಲ್ಲಿ ಮಕ್ಕಳ ಸಾಹಸಮಯ ಪ್ರದರ್ಶನವು ಶಿಕ್ಷಣ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿದ್ದು, ಈ ಬಾರಿ ಸುಮಾರು 4 ಸಾವಿರದಷ್ಟು ಮಕ್ಕಳು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಶಿಶು ನೃತ್ಯ, ಸಂಚಲನ, […]
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಕ್ರೂರ ಹತ್ಯೆ: 7 ಮಂದಿ ಅರೆಸ್ಟ್, ಮೊಹಮ್ಮದ್ ಯೂನಸ್ ಹೇಳಿಕೆ

ಢಾಕಾ: ಬಾಂಗ್ಲಾದೇಶದ ಮೈಮನ್‌ಸಿಂಗ್ ಜಿಲ್ಲೆಯ ಭಾಲುಕಾ ಪ್ರದೇಶದಲ್ಲಿ ನಡೆದ ಹಿಂದೂ ಯುವಕನ ಕ್ರೂರ ಹತ್ಯೆ ಪ್ರಕರಣ ಸಂಬಂಧ 7 ಮಂದಿಯನ್ನ ಬಂಧಿಸಲಾಗಿದೆ ಎಂದು ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ದೃಢಪಡಿಸಿದ್ದಾರೆ. ದೀಪು ಚಂದ್ರ ದಾಸ್ ಎನ್ನುವ ಗಾರ್ಮೆಂಟ್ ಕಾರ್ಖಾನೆ ಕಾರ್ಮಿಕನನ್ನ ಗುರುವಾರ ರಾತ್ರಿ ಸ್ಥಳೀಯರ ಗುಂಪೊಂದು ಥಳಿಸಿ ಕೊಂದಿತ್ತು. ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದನೆಂದು ಆರೋಪಿಸಿ ಸ್ಥಳೀಯ ನಿವಾಸಿಗಳ ಗುಂಪು ಹತ್ಯೆ ಮಾಡಿತ್ತು. ಬಳಿಕ ಮರಕ್ಕೆ ಕಟ್ಟಿ ಬೆಂಕಿ ಹಚ್ಚಿತ್ತು ಎಂದು ಪೊಲೀಸರು […]