Flash News

ಸಿರಿಯಾದ ಐಸಿಸ್ ನೆಲೆಗಳ ಮೇಲೆ ಅಮೆರಿಕದಿಂದ ವಾಯು ದಾಳಿ, ಹೊಸ ಯುದ್ಧಕ್ಕೆ ನಾಂದಿ ಹಾಡಿದರೇ ಟ್ರಂಪ್?

ಸಿರಿಯಾ: ಅಮೆರಿಕವು ಮಧ್ಯರಾತ್ರಿ ಸಿರಿಯಾದ 70 ಐಸಿಸ್ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಿರಿಯಾದಲ್ಲಿ ಅಮೆರಿಕದ ಸೈನಿಕರ ಮೇಲಿನ ದಾಳಿಯ ನಂತರ ಅಮೆರಿಕವು ಈ ಪ್ರತೀಕಾರದ ಕ್ರಮವನ್ನು ಕೈಗೊಂಡಿದೆ. ಅಮೆರಿಕದ ಅಧಿಕಾರಿಗಳ ಪ್ರಕಾರ, ಕಳೆದ ವಾರ ಅಮೆರಿಕದ ಮಿಲಿಟರಿ ಸಿಬ್ಬಂದಿಯ ಮೇಲಿನ ದಾಳಿಗೆ ಪ್ರತೀಕಾರವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದರು. ಡಿಸೆಂಬರ್ 13 ರಂದು ಮಧ್ಯ ಸಿರಿಯಾದ ಪಾಲ್ಮಿರಾ ಪ್ರದೇಶದಲ್ಲಿ ಅಮೆರಿಕ […]

ನಿಮ್ಮಪ್ಪನಾಣೆ ನೀವು ಅಧಿಕಾರಕ್ಕೆ ಬರುವುದಿಲ್ಲ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಗುಡುಗು

ಬೆಳಗಾವಿ: ನಾಯಕತ್ವ ಬದಲಾವಣೆ ವಿಷಯ ಚರ್ಚೆ ನಡೆಯುತ್ತಿದ್ದಾಗ ಸಚಿವರು ಹಾಗೂ ಕಾಂಗ್ರೆಸ್ ಸದಸ್ಯರು ಸಿದ್ದರಾಮಯ್ಯ ಬೆಂಬಲಕ್ಕೆ ನಿಂತರು. ‘ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಯಾವುದೇ ಚರ್ಚೆ ಆಗಿಲ್ಲ. ಈ ಚರ್ಚೆಯೇ ಅನವಶ್ಯಕ’ ಎಂದು ಪ್ರತಿಪಾದಿಸಿದರು. ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್‌ನ ಆರ್‌.ವಿ. ದೇಶಪಾಂಡೆ, ‘ಎರಡೂವರೆ ವರ್ಷ ಎಂಬುದೆಲ್ಲ ಇಲ್ಲ. ಉಳಿದೆಲ್ಲವೂ ಅನವಶ್ಯಕ ಚರ್ಚೆ. ಇದನ್ನು ಇಲ್ಲಿಗೆ ನಿಲ್ಲಿಸಿ’ ಎಂದು ಸಲಹೆ ನೀಡಿದರು. ಅವರಿಗೆ ದನಿಗೂಡಿಸಿದ ಕಾಂಗ್ರೆಸ್‌ನ ಅಪ್ಪಾಜಿ ಸಿ.ಎಸ್‌. ನಾಡಗೌಡ, ‘ಮುಖ್ಯಮಂತ್ರಿ ಸ್ಥಾನ ಬದಲಾವಣೆ […]

ಉದ್ಯಮಿ ಮನೆಮುಂದೆ ಬಿಜೆಪಿ ಕಾರ್ಯಕರ್ತೆ ನಿಗೂಢ ಸಾವು; ಇದು ಆತ್ಮಹತ್ಯೆಯಲ್ಲ ಕೊಲೆ ಎಂದ ಕುಟುಂಬಸ್ಥರು

ಕಲಬುರಗಿ: ಜಿಲ್ಲೆಯ ನಂದಿಕೂರ ಗ್ರಾಮದ ಬಳಿ ಬಿಜೆಪಿ ಕಾರ್ಯಕರ್ತೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ವರದಿಯಾಗಿದೆ. ಮೃತರನ್ನು ಕಲಬುರಗಿಯ ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಪಾಟೀಲ್ (35) ಎಂದು ಗುರುತಿಸಲಾಗಿದೆ. ಆದರೆ, ಈ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಜ್ಯೋತಿ ಪಾಟೀಲ್ ಅವರು ನಂದಿಕೂರ ಗ್ರಾಮದ ನಿವಾಸಿ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಮಲ್ಲಿನಾಥ್ […]

ಜೈಲಿನಿಂದ ಹೊರಬರುತ್ತಲೇ ಹೋರಾಟಗಾರರ ವಿರುದ್ಧವೇ ತಿರುಗಿ ಬಿದ್ದ ಚಿನ್ನಯ್ಯ!

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಮಾಸ್ಕ್​ ಮ್ಯಾನ್ ಚಿನ್ನಯ್ಯ ಜೈಲಿನಿಂದ ಹೊರಬಂದಕೂಡಲೇ ಹೊಸ ಬುರುಡೆ ಬಿಡುತ್ತಿದ್ದಾನೆ. ಜೈಲಿನಿಂದ ಬಿಡುಗಡೆಯಾಗಿ ಹೊರಬಂದ ತಕ್ಷಣವೇ ಪೊಲೀಸ್ ಠಾಣೆಗೆ ಹಾಜರಾದ ಚಿನ್ನಯ್ಯ, ತಮಗೂ ಹಾಗೂ ಪತ್ನಿಗೂ ಜೀವ ಬೆದರಿಕೆ ಇರುವುದಾಗಿ ಹೋರಾಟಗಾರರ ವಿರುದ್ಧವೇ ದೂರು ನೀಡಿದ್ದಾನೆ. ಬುರುಡೆ ಪ್ರಕರಣದಲ್ಲಿ ನಾಲ್ಕು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನಿಗೆ ನವೆಂಬರ್ 24ರಂದು ಜಾಮೀನು ಸಿಕ್ಕಿತ್ತು. 1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ 12 ಷರತ್ತು ವಿಧಿಸಿ ಕೋರ್ಟ್‌ ಜಾಮೀನು ಮಂಜೂರು […]

ಪ್ರವೀಣ್ ಪೂಜಾರಿಯನ್ನು ಕೊಲೆ ಮಾಡಿದ್ದು ಹಿಂದೂ ಜಾಗರಣ ಸಮಿತಿಯವರು: ಬಿಕೆ ಹರಿಪ್ರಸಾದ್ ಅಬ್ಬರ

ಬೆಳಗಾವಿ: ವಿಧಾನ ಪರಿಷತ್‌ನಲ್ಲಿ ಬಿಕೆ ಹರಿಪ್ರಸಾದ್ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು. ಪ್ರವೀಣ್ ಪೂಜಾರಿಯನ್ನು ಕೊಲೆ ಮಾಡಿದ್ದು ಹಿಂದೂ ಜಾಗರಣ ಸಮಿತಿಯವರು ಎಂದು ಆಕ್ರೋಶ ವ್ಯಕ್ತಪಡಿಸಿದರು. ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆ ಬಗ್ಗೆ ಸದನದಲ್ಲಿ ಬಿಕೆ ಹರಿಪ್ರಸಾದ್ ಭಾಷಣ ಮಾಡಿ, ”ಗಾಂಧಿಯನ್ನು ಕೊಲೆ ಮಾಡಿದವನನ್ನು ಇನ್ನೂ ಕೊಲೆಗಾರ ಅನ್ನಲ್ಲ”, ”ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ಭಾಷಣ ಮಾಡುವ ಬಿಜೆಪಿಯ ಗುರುವಿನ ಮೇಲೆ 13 ಕೇಸ್ ಇದೆ” ಪ್ರವೀಣ್ ಪೂಜಾರಿಯನ್ನು ಕೊಲೆ […]

ದ್ವೇಷ ಭಾಷಣ ಮಸೂದೆಯಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ

ಶೋಭಾ ಕರಂದ್ಲಾಜೆಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಕರ್ನಾಟಕ ವಿಧಾನಸಭೆಯಲ್ಲಿ ಇತ್ತೀಚೆಗೆ ಅಂಗೀಕೃತಗೊಂಡ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆಗಟ್ಟುವಿಕೆ) ಮಸೂದೆ-2025 ಗಂಭೀರ ಸಾಂವಿಧಾನಿಕ ಕಳವಳಗಳನ್ನು ಹುಟ್ಟುಹಾಕಿದೆ. ಈ ಮಸೂದೆಯನ್ನು ಸಂವಿಧಾನದ ಆರ್ಟಿಕಲ್‌ 200ರ ಅಡಿಯಲ್ಲಿ, ರಾಷ್ಟ್ರಪತಿಗಳ ಪರಿಶೀಲನೆಗೆ ಕಾಯ್ದಿರಿಸಬೇಕು ಎಂಬ ಒತ್ತಾಯಗಳು ಎದ್ದಿವೆ. ಇದು ದ್ವೇಷ ಭಾಷಣ ಮತ್ತು ಅಪರಾಧಗಳನ್ನು ತಡೆಯುವ ಉದ್ದೇಶ ಹೊಂದಿದ್ದರೂ, ಇದರಿಂದ ಪ್ರಜಾಪ್ರಭುತ್ವದ ಸ್ವಾತಂತ್ರ್ಯಗಳಿಗೆ ಧಕ್ಕೆಯಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ. ಈ ಮಸೂದೆಯನ್ನು ಸೂಕ್ಷ್ಮವಾಗಿ ಪರೀಕ್ಷಿಸಿದಾಗ, ಇದು ಸರ್ಕಾರಿ […]

ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಕೇಸ್?

ಮಂಗಳೂರು: ಸಾಕಷ್ಟು ವಿವಾದಗಳಿಂದ ಸುದ್ದಿಯಾದ ಚೈತ್ರಾ ಕುಂದಾಪುರ ಅವರು ಈಗ ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ವಿರುದ್ಧ ಕೋರ್ಟ್ ಆದೇಶ ಬಂದಿದೆ. ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಚೈತ್ರಾ ವಿರುದ್ಧ ಕೇಸ್ ಹಾಕಿದ್ದರು. ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ ಎಂದು ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ದೂರು ನೀಡಿದ್ದರು. ತಮಗೆ ನ್ಯಾಯ ದೊರಕಿಸಿಕೊಡುವಂತೆ ಬಾಲಕೃಷ್ಣ ಅವರು ಹಿರಿಯ ನಾಗರಿಕರ ನ್ಯಾಯಾಲಯದ ಮೊರೆ ಹೋಗಿದ್ದರು. ಈಗ ಚೈತ್ರಾ ಕುಂದಾಪುರ […]

ಓಮನ್ ಭೇಟಿ ವೇಳೆ ಪ್ರಧಾನಿ ಕಿವಿಯಲ್ಲಿ ಆಭರಣ: ಮೋದಿ ಹೊಸ ಸ್ಟೈಲ್‌ ಬಗ್ಗೆ ಭಾರೀ ಚರ್ಚೆ, ಏನಿದು?

ಮಸ್ಕತ್: ಪ್ರಧಾನಿ ಮೋದಿ ಓಮನ್‌ಗೆ ಬಂದಿಳಿಯುತ್ತಿದ್ದಂತೆ ವಿಚಾರವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ಕಿವಿಯಲ್ಲಿ ಆಭರಣ ಕಂಡುಬಂದಿದ್ದು, ಇದು ಹೊಸ ಸ್ಟೈಲಾ ಎಂಬ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಮೂರು ದೇಶಗಳ ಪ್ರವಾಸ ಕೈಗೊಂಡಿದ್ದ ಮೋದಿ ಎರಡು ದಿನಗಳ ಕಾಲ ಓಮನ್‌ಗೆ ಭೇಟಿ ನೀಡಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲಿ ಓಮಾನ್‌ನ ಉಪಪ್ರಧಾನಿ ಸಯ್ಯದ್ ಶಿಹಾಬ್ ಬಿನ್ ತಾರಿಕ್ ಅಲ್ ಸೈದ್ ಅವರನ್ನು ಭೇಟಿಯಾದಾಗ ಪ್ರಧಾನಿ ಮೋದಿ ಕಿವಿಯೋಲೆ ರೀತಿಯ ಸಾಧನವನ್ನು ಧರಿಸಿದ್ದರು. ಈ ಕುರಿತು ಸಾಮಾಜಿಕ […]

ಬಾಂಗ್ಲಾದಲ್ಲಿ ಹಿಂದೂಗಳ ವಿರುದ್ಧ ಮತ್ತೆ ಭುಗಿಲೆದ್ದ ಹಿಂಸಾಚಾರ; ಹಲ್ಲೆ, ಬೆಂಕಿ ಹಚ್ಚಿ ವ್ಯಕ್ತಿಯ ಕೊಲೆ!

ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಮೇಲೆ ಗುಂಪು ಹಿಂಸಾಚಾರ ನಡೆದಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗತೊಡಗಿದೆ. ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ, ಘಟನೆಯನ್ನು ಖಂಡಿಸಿದ್ದು, ಗುಂಪು ಹಿಂಸಾಚಾರದ ಕೃತ್ಯಗಳನ್ನು ವಿರೋಧಿಸುವಂತೆ ಜನರನ್ನು ಒತ್ತಾಯಿಸಿದೆ. ಎಲ್ಲಾ ರೀತಿಯ ಹಿಂಸೆ, ಬೆದರಿಕೆ, ಬೆಂಕಿ ಹಚ್ಚುವಿಕೆ ಮತ್ತು ಆಸ್ತಿ ನಾಶವನ್ನು ‘ಬಲವಾಗಿ ಮತ್ತು ನಿಸ್ಸಂದಿಗ್ಧವಾಗಿ’ ಖಂಡಿಸುವುದಾಗಿ ಯೂನಸ್ ಸರ್ಕಾರ ಹೇಳಿದೆ. ಅಂತಹ ಕ್ರಮಗಳು ದೇಶದ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಹಳಿತಪ್ಪಿಸುವ ಬೆದರಿಕೆಯನ್ನುಂಟುಮಾಡುತ್ತವೆ ಎಂದು ಎಚ್ಚರಿಸಿದೆ. ಬಾಂಗ್ಲಾದೇಶದಲ್ಲಿ ಭಾರತ […]

UAEಯಾದ್ಯಂತ ಮುಂದುವರಿದ ಗುಡುಗು ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ; ಕೇರಳದ ಯುವಕ ಮೃತ್ಯು

ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಪ್ರಮುಖ ನಗರಗಳಾದ ದುಬೈ, ಶಾರ್ಜಾ ಸೇರಿದಂತೆ ಯುಎಇಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ನಡುವೆಯೇ ಅವಘಡವೊಂದು ಸಂಭವಿಸಿದ ಪರಿಣಾಮ ಭಾರತೀಯ ಯುವಕನೋರ್ವ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಭಾರೀ ಗುಡುಗು ಸಹಿತ ಮಳೆ ಮುಂದುವರಿದಿದ್ದು, ಹವಾಮಾನ ವೈಪರೀತ್ಯದಿಂದಾಗಿ ನಿವಾಸಿಗಳು ಮನೆಯೊಳಗೆ ಇರಲು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಗತ್ಯವಿದ್ದರೆ ಮಾತ್ರ ಸಂಚರಿಸುವಂತೆ ಯುಎಇ ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಹವಾಮಾನದಿಂದಾಗಿ ಎಮಿರೇಟ್ಸ್ ಮತ್ತು ಫ್ಲೈದುಬೈ ಸೇರಿ ಹಲವಾರು ವಿಮಾನಗಳನ್ನು ರದ್ದುಗೊಳಿಸಿದೆ. ಡಿಸೆಂಬರ್ 19 […]