Flash News

ಪ್ರಿಯಾಂಕಾ ಗಾಂಧಿ ಪುತ್ರನಿಗೆ ಕೂಡಿಬಂತು ಕಂಕಣ ಭಾಗ್ಯ: ಅವಿವಾ ಬೇಗ್ ಜೊತೆ ರೈಹಾನ್ ವಾದ್ರಾ ನಿಶ್ಚಿತಾರ್ಥ

ನವದೆಹಲಿ: ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್ ವಾದ್ರಾ ಈಗ ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. 25 ವರ್ಷದ ರೈಹಾನ್ ವಾದ್ರಾ ತನ್ನ ಬಹುಕಾಲದ ಗೆಳತಿ ಅವಿವಾ ಬೇಗ್‌ ಜೊತೆ ಹಸೆಮಣೆ ಏರೋದಕ್ಕೆ ಸಿದ್ಧರಾಗಿದ್ದಾರೆ. ಈ ಜೋಡಿ ಮದುವೆಗೆ ಎರಡೂ ಕಡೆ ಕುಟುಂಬದವರು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಅವಿವಾ ಬೇಗ್ ಮತ್ತು ಅವರ ಕುಟುಂಬ ದೆಹಲಿಯಲ್ಲಿ ನೆಲೆಸಿದ್ದು, ಎರಡೂ ಕುಟುಂಬಗಳು ನಿಕಟ ಸಂಪರ್ಕದಲ್ಲಿವೆ. ರೈಹಾನ್ ವಾದ್ರಾ […]

ರೈಲ್ವೆಯ ನಿವೃತ್ತ ಉದ್ಯೋಗಿ ಸಾವು: ಮಗಳ ದೇಹದಲ್ಲಿ ಮಾಂಸವೇ ಇಲ್ಲ..!

ಮಹೋಬಾ: ಕೆಲವು ವರ್ಷಗಳ ಹಿಂದೆ ಪತ್ನಿ ತೀರಿಕೊಂಡಿದ್ದರು. ಮಗಳು ಮಾನಸಿಕ ಅಸ್ವಸ್ಥೆ, ಏನು ಮಾಡಬೇಕೆಂದು ತೋಚದೆ ರೈಲ್ವೆಯ ನಿವೃತ್ತ ಉದ್ಯೋಗಿ ಕೇರ್ ಟೇಕರ್ ನೇಮಿಸಿಕೊಂಡಿದ್ದರು. ಅವರು ಆರೈಕೆದಾರರಾಗಿರಲಿಲ್ಲ, ಬದಲಾಗಿ ಪ್ರಾಣವನ್ನೇ ತೆಗೆಯುವ ಹಂತಕರಾಗಿದ್ದರು. ಸುಮಾರು ಐದು ವರ್ಷಗಳ ಕಾಲ ಕೇರ್ ಟೇಕರ್ ಅವರನ್ನು ಬಂಧಿಸಿ ಚಿತ್ರಹಿಂಸೆ ನೀಡಿದ್ದರು. ಹೀಗಾಗಿ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅವರ ಮಗಳ ಸ್ಥಿತಿ ಚಿಂತಾಜನಕವಾಗಿದೆ. ಮಗಳ ದೇಹದಲ್ಲಿ ಒಂದಿಷ್ಟು ಮಾಂಸವೂ ಇಲ್ಲದೆ ನಿತ್ರಾಣಳಾಗಿದ್ದಾಳೆ. ಓಂಪ್ರಕಾಶ್ ಸಿಂಗ್ ರಾಥೋಡ್ (70), ಭಾರತೀಯ ರೈಲ್ವೆಯಲ್ಲಿ ಮಾಜಿ […]

ಕೋಗಿಲು ಅಕ್ರಮ ನಿವಾಸಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ: ನೈಜ ಫಲಾನುಭವಿಗಳಿಗೆ ಪರ್ಯಾಯ ವ್ಯವಸ್ಥೆ!

ಬೆಂಗಳೂರು: ಯಲಹಂಕದ ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಜಾಗ ತೆರವು ಕಾರ್ಯಾಚರಣೆಯಿಂದ ನಿರಾಶ್ರಿತರಾದ ನೈಜ ವ್ಯಕ್ತಿಗಳಿಗೆ ಸರ್ಕಾರವು ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ‘ಕೋಗಿಲು ಬಡಾವಣೆಯಲ್ಲಿ ಸುಮಾರು 15 ಎಕರೆ ಸರ್ಕಾರಿ ಜಾಗವನ್ನು ಕಸ ವಿಲೇವಾರಿ ಘಟಕಕ್ಕಾಗಿ ನಗರ ಪಾಲಿಕೆಗೆ ಹಸ್ತಾಂತರಿಸಲಾಗಿತ್ತು. ಆದರೆ, 2020-21ರಿಂದ ಅಲ್ಲಿ ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸ ಮಾಡಲಾಗುತ್ತಿತ್ತು. ಸರ್ಕಾರಿ ಜಾಗವನ್ನು ಅಕ್ರಮವಾಗಿ ಆಕ್ರಮಿಸಿಕೊಳ್ಳಲು ಅವಕಾಶ ನೀಡಲಾಗದು. ಹೀಗಾಗಿ 167 […]

ಕೋಗಿಲು ಬಡಾವಣೆಯಲ್ಲಿ ಮನೆ ಧ್ವಂಸ: ಪಾಕಿಸ್ತಾನ ತೀವ್ರ ಕಳವಳ

ಇಸ್ಲಾಮಾಬಾದ್‌: ಬೆಂಗಳೂರಿನ ಯಲಹಂಕದ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮುಸ್ಲಿಮರ 200 ಮನೆಗಳನ್ನು ಕರ್ನಾಟಕ ಸರ್ಕಾರ ನೆಲಸಮ ಮಾಡಿದ್ದಕ್ಕೆ ಕೇರಳ ಸರ್ಕಾರ ಬೇಸರ ವ್ಯಕ್ತಪಡಿಸಿತ್ತು. ಇದೀಗ ಪಾಕಿಸ್ತಾನ ಕೂಡ ಕಳವಳ ವ್ಯಕ್ತಪಡಿಸಿದೆ. ಹೇಳಿಕೆ ನೀಡಿರುವ ಪಾಕ್ ವಿದೇಶಾಂಗ ಇಲಾಖೆ, ‘ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ಕಿರುಕುಳವು ತೀವ್ರ ಕಳವಳದ ವಿಷಯವಾಗಿದೆ. ಅಲ್ಲಿ ಕ್ರಿಸ್‌ಮಸ್‌ ಆಚರಣೆ ಮೇಲೆ ದಾಳಿಗಳು ಆಗಿವೆ. ಸರ್ಕಾರಿ ಪ್ರಾಯೋಜಕತ್ವದಿಂದ ಮುಸ್ಲಿಮರ ಮನೆಗಳನ್ನು ಧ್ವಂಸಗೊಳಿಸಲಾಗಿದೆ ಹಾಗೂ ಮುಸ್ಲಿಮರ ಗುಂಪು ಹತ್ಯೆ ನಡೆದಿವೆ’ ಎಂದು ಆರೋಪಿಸಿದೆ ಬೆಂಗಳೂರು ಘಟನೆಯನ್ನು […]

ಶಿವಮೊಗ್ಗ: ಕಬ್ಬಿಣದ ರಾಡ್ ನಿಂದ ಹೊಡೆದು ಯುವಕನ ಭೀಕರ ಹತ್ಯೆ

ಶಿವಮೊಗ್ಗ: ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯ ಮುಂಭಾಗದಲ್ಲಿ ಯುವಕನೋರ್ವನನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಕಾಶೀಪುರದ ನಿವಾಸಿ ಅರುಣ್ ಯಾನೆ ಬೋಂಡಾ (26) ಕೊಲೆಯಾದ ದುರ್ದೈವಿ. ಅರುಣ್ ಶ್ರೀನಿಧಿ ವೈನ್ಸ್ ಮುಂದೆ ನಿಂತಿದ್ದ ಸಂದರ್ಭದಲ್ಲಿ ಏಕಾಏಕಿ ಬಂದ ಕಿಡಿಗೇಡಿಗಳು ಕಬ್ಬಿಣದ ರಾಡಿನಿಂದ ತಲೆಗೆ ಹಲ್ಲೆ ನಡೆಸಿದ್ದಾರೆ. ಕೇವಲ 30 ಸೆಕೆಂಡ್‌ಗಳ ಅಂತರದಲ್ಲಿ ಈ ಕೃತ್ಯ ನಡೆದಿದ್ದು, ತೀವ್ರ ರಕ್ತಸ್ರಾವದಿಂದ ಅರುಣ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಘಟನೆ ನಡೆದ […]

Bangalore | ನಟಿ ನಂದಿನಿ ಆತ್ಮ*ಹತ್ಯೆ; ಸರ್ಕಾರಿ ನೌಕರಿ ಬೇಡವೆಂದು ಸಾವಿನ ನಿರ್ಧಾರ?

ಬೆಂಗಳೂರು: ಕನ್ನಡ ಹಾಗೂ ತಮಿಳು ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದ ನಟಿ ನಂದಿನಿ (27) ಬೆಂಗಳೂರಿನ ಕೆಂಗೇರಿ ಉಪನಗರದ ಪಿಜಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ವೈಯಕ್ತಿಕ ಸಮಸ್ಯೆಗಳು ಹಾಗೂ ವೃತ್ತಿಜೀವನದ ಒತ್ತಡದಿಂದ ನೊಂದು ನಟಿ ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ನಂದಿನಿ ಅವರು ಕೆಲವು ಸಮಯದಿಂದ ವೈಯಕ್ತಿಕ ಸಮಸ್ಯೆಗಳು ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದರು. ಇವರ ತಂದೆ ಹಾಗೂ ತಾಯಿ ಇಬ್ಬರೂ ಸರ್ಕಾರಿ ಶಾಲಾ ಶಿಕ್ಷಕರಾಗಿದ್ದಾರೆ. ಆದರೆ ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ […]

ದಾರುನ್ನೂರ್ ಎಜುಕೇಶನಲ್ ಸೆಂಟರ್ ಕಾಶಿಪಟ್ನದ ನೂತನ ಉಪಾಧ್ಯಕ್ಷರಾಗಿ ಯುವ ಉದ್ಯಮಿ ಡಾ. ಅಬ್ದುಲ್ ಶಕೀಲ್ ಆಯ್ಕೆ

ಮಂಗಳೂರು: ದಾರುನ್ನೂರ್ ಎಜುಕೇಶನಲ್ ಸೆಂಟರ್ ಕಾಶಿಪಟ್ನ ಇದರ ನೂತನ ಉಪಾಧ್ಯಕ್ಷರಾಗಿ ಉದ್ಯಮಿ ಡಾ. ಅಬ್ದುಲ್ ಶಕೀಲ್ ಅವರು ಆಯ್ಕೆಯಾಗಿದ್ದಾರೆ. ದಾರುನ್ನೂರ್ ಎಜುಕೇಶನಲ್ ಸೆಂಟರ್ ಕಾಶಿಪಟ್ನದ ಗೌರವಾಧ್ಯಕ್ಷರಾದ ಶೈಖುನಾ ತ್ವಾಖಾ ಉಸ್ತಾದ್ ಅವರು ನೇಮಕ ಪತ್ರವನ್ನು ನೀಡಿದರು. ಈ ಸಂದರ್ಭದಲ್ಲಿ ದಾರುನ್ನೂರ್ ಎಜುಕೇಶನಲ್ ಇದರ ಅಧ್ಯಕ್ಷರಾದ ಶೇರಿಫ್ ಹಾಜಿ ಜೋಕಟ್ಟೆ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಹಲವಾರು ದೀನೀ ಸ್ಥಾಪನೆಗಳ ಹಿತೈಷಿಗಳು, ಯುವ ಉದ್ಯಮಿಯೂ ಆಗಿರುವಡಾ ಅಬ್ದುಲ್ ಶಕೀಲ್ ದೇರಳಕಟ್ಟೆ ನಿಸ್ವಾರ್ಥ ಸಮಾಜ ಸೇವಕರೂ ಆಗಿದ್ದು, ಹಲವಾರು ಸಮಾಜಮುಖಿ ಕಾರ್ಯದಲ್ಲಿ […]

ಗೃಹಸಚಿವ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಒತ್ತಾಯ…!

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ದಂಧೆ ಪ್ರಕರಣ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್ ತಕ್ಷಣವೇ ತಮ ಸ್ಥಾನಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಬಿಜೆಪಿ ಒತ್ತಾಯಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್‌ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಂತಿ ಸುವ್ಯವಸ್ಥೆಗೆ ಹೆಸರಾಗಿದ್ದ ಕರ್ನಾಟಕ ಇಂದು ಬೇರೆ ಬೇರೆ ಕಾರಣಗಳಿಂದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಇದಕ್ಕೆ ಗೃಹ ಇಲಾಖೆ ಮತ್ತು ಗೃಹಸಚಿವರು ವಿಫಲರಾಗಿರುವುದೇ ಸಾಕ್ಷಿ ಎಂದು ದೂರಿದರು. ರಾಜ್ಯದಲ್ಲಿ ಡ್ರಗ್‌ ಫ್ಯಾಕ್ಟರಿಗಳು ತಲೆ ಎತ್ತುತ್ತಿವೆ. […]

ಬೊಲೆರೊ ಮೇಲೆ ಉರುಳಿಬಿದ್ದ ಹುಲ್ಲಿನ ಟ್ರಕ್; ಮೃತ ಚಾಲಕನ ವಿವರ ರಿವೀಲ್ ಮಾಡಿದ ಸರ್ಕಾರ!

ಉತ್ತರ ಪ್ರದೇಶದ ರಾಂಪುರದಲ್ಲಿ ಭಾನುವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ವಿದ್ಯುತ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ವಾಹನದ ಮೇಲೆ ಹುಲ್ಲು ತುಂಬಿದ ಟ್ರಕ್ ಉರುಳಿಬಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಬಿಲಾಸ್‌ಪುರ ಕಡೆಗೆ ಹೋಗುತ್ತಿದ್ದ ಹುಲ್ಲಿನ ಟ್ರಕ್, ಸ್ಥಳೀಯ ಪವರ್ ಹೌಸ್ ಬಳಿಯ ಪಹಾಡಿ ಗೇಟ್ ಸಮೀಪದ ನೈನಿತಾಲ್ ರಸ್ತೆಯಲ್ಲಿ ತಿರುವು ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ. ರಾಂಪುರದ ಹೊಸ ವೈರಲ್ ವಿಡಿಯೋವೊಂದು ಆನ್‌ಲೈನ್‌ನಲ್ಲಿ ಭಾರಿ ಗಮನ ಸೆಳೆಯುತ್ತಿದೆ. ಇದನ್ನು ರಸ್ತೆ ಸುರಕ್ಷತಾ ಜಾಗೃತಿ ಖಾತೆಯಾದ @motordave2 […]

ವಿಶ್ವ ಕಲ್ಯಾಣಕ್ಕಾಗಿ ಭಾರತ ವಿಶ್ವಗುರು ಆಗಲೇಬೇಕು; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹೈದರಾಬಾದ್: “ವಿಶ್ವಗುರು” ಆಗುವ ಭಾರತದ ಪ್ರಯಾಣವು ಕೇವಲ ರಾಷ್ಟ್ರೀಯ ಮಹತ್ವಾಕಾಂಕ್ಷೆಯ ವಿಷಯವಲ್ಲ, ಅದು ಜಾಗತಿಕ ಅವಶ್ಯಕತೆಯಾಗಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಒತ್ತಿ ಹೇಳಿದ್ದಾರೆ. ಈ ಗುರಿಗೆ ಕಠಿಣ ಪರಿಶ್ರಮ, ಬದ್ಧತೆ ಮತ್ತು ಮಾನವ ಮೌಲ್ಯಗಳು ಮತ್ತು ಸಾಮಾಜಿಕ ಬದಲಾವಣೆಯನ್ನು ಅಭಿವೃದ್ಧಿಪಡಿಸುವತ್ತ ಅಚಲ ಗಮನದ ಅಗತ್ಯವಿದೆ ಎಂದು ಹೇಳಿದ್ದಾರೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋಹನ್ ಭಾಗವತ್, ವಿಶ್ವಗುರುವಾಗಿ ಭಾರತದ ಪಾತ್ರವು ಕೇವಲ ಒಂದು ಆಕಾಂಕ್ಷೆಯಲ್ಲ. ಆರ್‌ಎಸ್‌ಎಸ್ ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಯತ್ನಗಳ […]