Flash News

SIR: ಕಾಸರಗೋಡಿನಲ್ಲಿ 63,114 ಮತದಾರರು ಹೊರಕ್ಕೆ

ಕಾಸರಗೋಡು : ಬಿಹಾರ ನಂತರ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣಾ ಪ್ರಕ್ರಿಯೆ ಕೇರಳದಲ್ಲಿ ನಡೆಯುತ್ತಿದ್ದು, ಅಂತಿಮ ಹಂತದಲ್ಲಿದೆ. ಎಸ್‌ಐಆರ್‌ ಕಾರ್ಯವಿಧಾನಗಳು ಕೊನೆಗೊಳ್ಳಲು ಕೆಲವೇ ದಿನಗಳು ಬಾಕಿ ಇದೆ. ಇಲ್ಲಿವರೆಗೆ ಮತದಾರರ ಪಟ್ಟಿಯಿಂದ 25 ಲಕ್ಷಕ್ಕೂ ಹೆಚ್ಚು ಮತದಾರರು ಹೊರಗುಳಿದಿದ್ದು, ಸಿಪಿಎಂ, ಕಾಂಗ್ರೆಸ್‌ ಮತ್ತು ಮುಸ್ಲಿಂ ಲೀಗ್‌ ಸೇರಿದಂತೆ ವಿರೋಧ ಪಕ್ಷಗಳು ಚುನಾವಣಾ ಆಯೋಗಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಪ್ರಸ್ತುತ ಕೇರಳದಲ್ಲಿ ಶೇ.99.96 ಎಸ್‌ಐಆರ್‌ ಅರ್ಜಿ ನಮೂನೆಗಳನ್ನು ಹಿಂತಿರುಗಿಸಲಾಗಿದೆ ಮತ್ತು ಶೇ.99.77 ಡಿಜಿಟಲೀಕರಣಗೊಳಿಸಲಾಗಿದೆ. ಇದರ ಪ್ರಕಾರ ಸುಮಾರು 25 […]

ವೈದ್ಯೆಯೊಬ್ಬರ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್; ಬಿಹಾರ ಮುಸ್ಲಿಂ ಸಚಿವ ಮೊಹಮ್ಮದ್ ಜಮಾ ಖಾನ್ ಸ್ಪಷ್ಟನೆ ಏನು?

ಪಾಟ್ನಾ: ನೇಮಕಾತಿ ಪತ್ರ ಪಡೆಯಲು ಬಂದ ಮುಸ್ಲಿಂ ವೈದ್ಯೆಯ ಹಿಜಾಬ್ ಹಿಡಿದೆಳೆದ ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಲೇ ಅವರ ಪರವಾಗಿ ಅವರದ್ದೇ ಕ್ಯಾಬಿನೆಟ್ ಮುಸ್ಲಿಂ ಸಚಿವರೊಬ್ಬರು ಬ್ಯಾಟ್ ಬೀಸಿದ್ದಾರೆ. ಹೌದು.. ನಿತೀಶ್ ಕುಮಾರ್ ಸಂಪುಟದ ಏಕೈಕ ಮುಸ್ಲಿಂ ಸಚಿವ ಮೊಹಮ್ಮದ್ ಜಮಾ ಖಾನ್ ಅವರು ಹಿಜಾಬ್ ವಿವಾದಕ್ಕೆ ಸ್ಪಷ್ಟನೆ ನೀಡಿದ್ದು, ‘ನಿತೀಶ್ ಕುಮಾರ್ ತಂದೆ ಸ್ವರೂಪರು.. ಮಗಳ ಮೇಲೆ ಪ್ರೀತಿ ತೋರಿದಂತೆ ಆಕೆಯ ಮೇಲೆ ತೋರಿದ್ದಾರೆ. ಇದರಲ್ಲಿ ಅಪಾರ್ಥ ಬೇಡ ಎಂದು ಹೇಳಿದ್ದಾರೆ. […]

Mangalore | ಮಹಿಳೆ ಮೃತಪಟ್ಟ ಪ್ರಕರಣ: ಬಸ್ ಚಾಲಕನಿಗೆ ಆರು ತಿಂಗಳ ಜೈಲು ಶಿಕ್ಷೆ..!

ಮಂಗಳೂರು: ಬಸ್‌ನಿಂದ ಕೆಳಗೆ ಬಿದ್ದು ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ಬಸ್ ಚಾಲಕ ಸೈಯದ್ ಇರ್ಫಾನ್ ಅಲಿಗೆ ಮಂಗಳೂರಿನ ಜೆಎಂಎಫ್‌ಸಿ ಎಂಟನೆ ನ್ಯಾಯಾಲಯವು ಆರು ತಿಂಗಳ ಸಾದಾ ಜೈಲು ಶಿಕ್ಷೆ ಮತ್ತು 3, 500 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಎಂಟು ವರ್ಷಗಳ ಹಿಂದೆ ಬಸ್ ಚಾಲಕನು ತನ್ನ ಬಸ್‌ನ್ನು ಅತಿ ವೇಗದಿಂದ ಚಲಾಯಿಸಿಕೊಂಡು ಬಂದು ತನ್ನ ಮುಂದೆ ನಿಂತಿದ್ದ ಬಸ್‌ನ್ನು ಓವರ್‌ಟೇಕ್ ಮಾಡಿ ನಂತರ ಜಂಕ್ಷನ್ ಬಳಿ ಪದವು ಕಡೆಯಿಂದ ಪಂಪು ವೆಲ್ […]

Mangaluru | ನಸೀಬ್ ಕೆಟ್ಟ ಪೆಡ್ಲರ್‌ಗಳ ಕಾರು: ಟ್ಯಾಂಕರ್ ಗೆ ಕಾರು ಡಿಕ್ಕಿ; ತಪಾಸಣೆ ವೇಳೆ ಕಾರಿನಲ್ಲಿತ್ತು ಲಕ್ಷಾಂತರ ಮೌಲ್ಯದ ಡ್ರಗ್ಸ್

ಉಳ್ಳಾಲ: ತಲಪಾಡಿಯಲ್ಲಿ ಮಂಗಳವಾರ ಮುಂಜಾನೆ ಕಾರೊಂದು ಟ್ಯಾಂಕರ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಕಾರಿನೊಳಗೆ ಹಲವಾರು ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ ಎಂಡಿಎಂಎ ಪತ್ತೆಯಾಗಿದ್ದು, ಘಟನೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಮಂಗಳವಾರ ಬೆಳಗ್ಗೆ 7.30ರ ವೇಳೆ ಮಂಗಳೂರಿನಿಂದ‌ ಉಪ್ಪಳದ ಕಡೆಗೆ ಧಾವಿಸುತ್ತಿದ್ದ ಕಾರು ತಲಪಾಡಿಯ ಆರ್ ಟಿಓ ಚೆಕ್ ಪೋಸ್ಟ್ ಬಳಿ ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಸಹ ಸವಾರ ಆದಮ್‌ ಗಂಭೀರ ಗಾಯಗೊಂಡಿದ್ದಾನೆ. […]

Mangaluru | ಲವ್ ಇದ್ದರೂ ಬೇರೊಬ್ಬನ ಜೊತೆ ಮದುವೆ: ನಿಖಾ ಮುಗಿದು ವಿದೇಶದಿಂದ ಬಂದ ಪ್ರಿಯಕರನೊಂದಿಗೆ ವಧು ಎಸ್ಕೇಪ್

“ರಿಸೆಪ್ಷನ್‌ಗೆ ಬಂದು ಊಟ ಮಾಡಿ ಹೋದ ಬಂಧುಗಳು” ಮಂಗಳೂರು: ಮದುವೆ ಮನೆಯ ಸಂಭ್ರಮದಲ್ಲಿ ಇದ್ದ ಮನೆ ಮಂದಿಗೆ ವಧು ಶಾಕ್ ನೀಡಿದ ಘಟನೆಯೊಂದು ಬಂಟ್ವಾಳದಲ್ಲಿ ನಡೆದಿದೆ. ನನಗೊಬ್ಬನ ಜೊತೆಗೆ ಲವ್ ಇದೆ, ಅವನನ್ನೇ ಮದುವೆ ಆಗುತ್ತೇನೆ, ಬೇರೆ ಮದುವೆ ಬೇಡ ಎಂದು ತನ್ನ ಹೆತ್ತವರು ಮತ್ತು ಹುಡುಗನಿಗೆ ಹೇಳಿದರೂ ಮುಸ್ಲಿಂ ಸಂಪ್ರದಾಯದಂತೆ ನಿಖಾ ನಡೆಸಿದ್ದು ಒಂದೇ ದಿನದಲ್ಲಿ ವಧು ಎಸ್ಕೇಪ್ ಆಗಿದ್ದು, ರಿಸೆಪ್ಷನ್‌ಗೆ ಬಂದವರು ಊಟ ಮಾಡಿ ಹೋದ ಪ್ರಕರಣ‌ ನಡೆದಿದೆ. ಈ ಬಗ್ಗೆ ಬಂಟ್ವಾಳ ನಗರ […]

UDUPI | ನೀರು ಸೇದುವಾಗ ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದ ಮಗು ಸಾವು..!

►ಮಗುವಿನ ರಕ್ಷಣೆಗಾಗಿ ಬಾವಿಗೆ ಇಳಿದಿದ್ದ ತಾಯಿ..! ಉಡುಪಿ: ನೀರು ಸೇದುತ್ತಿದ್ದಾಗ ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಕಂದಮ್ಮ ದಾರುಣವಾಗಿ ಸಾವನ್ನಪ್ಪಿದ ಘಟನೆ ಉಡುಪಿಯ ಕಿನ್ನಿಮೂಲ್ಕಿಯಲ್ಲಿ ಮಂಗಳವಾರ (ಡಿ.16) ನಡೆದಿದೆ. ಒಂದೂವರೆ ವರ್ಷದ ಕೀರ್ತನಾ ಮೃತಪಟ್ಟ ಮಗು. ಮಗುವಿನ ತಾಯಿ ನಯನಾ ಕರ್ಕಡ ಎಂಬವರು ಮಗುವನ್ನು ಎತ್ತಿಕೊಂಡು ಮನೆ ಸಮೀಪದ ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ಮಗು ಆಯತಪ್ಪಿ ಬಾವಿಗೆ ಬಿದ್ದಿದೆ. ತಕ್ಷಣ ಮಗುವಿನ ತಾಯಿ ಹಗ್ಗದ ಸಹಾಯದಿಂದ ಬಾವಿಗೆ ಇಳಿದಿದ್ದಾರೆ. ಆದರೆ ಅದಾಗಲೇ […]

ಮಸೀದಿಗಳಲ್ಲಿ ಕೂಗುವ ಆಜಾನ್‌ನಿಂದ ಶಬ್ದಮಾಲಿನ್ಯ: ಪರಿಷತ್‌ನಲ್ಲಿ ಆಡಳಿತ-ವಿಪಕ್ಷಗಳ ನಡುವೆ ಗದ್ದಲ ಗಲಾಟೆ

ಬೆಳಗಾವಿ: ಮಸೀದಿಗಳಲ್ಲಿ ಕೂಗುವ ಆಜಾನ್‌ನಿಂದ ಶಬ್ದಮಾಲಿನ್ಯ ಆಗ್ತಿದೆ ಎಂಬ ವಿಚಾರ ವಿಧಾನ ಪರಿಷತ್‌ನಲ್ಲಿಂದು ಆಡಳಿತ-ವಿಪಕ್ಷಗಳ ನಡುವೆ ಗದ್ದಲ ಗಲಾಟೆಗೆ ಕಾರಣವಾಗಿದೆ. ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಡಿ.ಎಸ್ ಅರುಣ್ ಈ ಬಗ್ಗೆ ಪ್ರಶ್ನೆ ಕೇಳಿದ್ರು. ಆಜಾನ್ ಕೂಗುವಾಗ ಶಬ್ದಮಾಲಿನ್ಯ ಆಗ್ತಿದೆ. ನಿಯಮದ ಪ್ರಕಾರ ಬೆಳಗ್ಗೆ 6ರಿಂದ 10ರ ತನಕ ಯಾವುದೇ ಶಬ್ದಮಾಲಿನ್ಯ ಆಗಬಾರದು. ನನ್ನ ಮನೆಯ ಹಿಂದೆಯೇ ಮಸೀದಿ ಇದೆ. 4:45ಕ್ಕೆ ಆಜಾನ್ ಶುರುವಾಗುತ್ತೆ. ನಮ್ಮ ತಂದೆಗೆ 86 ವರ್ಷ ಆ ಆಜಾನ್ ಸೌಂಡ್‌ಗೆ ಎದ್ದು ಕೂರಬೇಕು. […]

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಡಿಕೆಶಿ, ಇನಾಯತ್ ಅಲಿಗೆ ಬಿಗ್ ರಿಲೀಫ್

►ಇ.ಡಿ ಜಾರ್ಜ್ ಶೀಟ್ ಪರಿಗಣಿಸಲು ಕೋರ್ಟ್ ನಕಾರ ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಹಣ ವರ್ಗಾವಣೆ ಆರೋಪಪಟ್ಟಿಯನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ. ಚಾರ್ಜ್‌ಶೀಟ್‌ಅನ್ನು ತಿರಸ್ಕರಿಸಿದೆ. ಪ್ರಕರಣದ ವಿಚಾರಣೆ ನಡೆಸಿರುವ ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗ್ನೆ, “ಹಣ ವರ್ಗಾವಣೆ ತಡೆ […]

ಉಪ್ಪಿನಂಗಡಿ | ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಬಗೆಹರಿದ ಪ್ರಕರಣ

ಉಪ್ಪಿನಂಗಡಿ: ಉಬಾರ್ ಸ್ಪೋರ್ಟಿಂಗ್ ಕ್ಲಬ್ ಆಯೋಜಿಸಿದ ಉಬಾರ್ ಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಅಂಪೈರ್ ನೀಡಿದ ತೀರ್ಪಿಗೆ ಅಸಮಾಧಾನಗೊಂಡ ಪ್ರೇಕ್ಷಕರಿಬ್ಬರು ಏಕಾಏಕಿ ಮೈದಾನಕ್ಕೆ ನುಗ್ಗಿ ಹಲ್ಲೆಗೆ ಮುಂದಾದ ಘಟನೆ ನಡೆದಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಇವರ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಹಲ್ಲೆಗೆ ಮುಂದಾದ ಯುವಕರು ಅಂಪೈರ್ ಅವರ ಬಳಿಕ ಕ್ಷಮೆ ಕೇಳುವ ಮೂಲಕ ಈ ಪ್ರಕರಣ ಸುಖಾಂತ್ಯಗೊಂಡಿದೆ. ಉಬಾರ್ ಸ್ಪೋರ್ಟಿಂಗ್ ಕ್ಲಬ್ ಉಪ್ಪಿನಂಗಡಿಯಲ್ಲಿ ಅದ್ದೂರಿಯಾಗಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಪಂದ್ಯಾಟವನ್ನು ಆಯೋಜಿಸಿತ್ತು. ರಾತ್ರಿ […]

ಬೆಳ್ತಂಗಡಿ | ಪೃಥ್ವಿ ಆಭರಣ ಮಳಿಗೆಯ ವ್ಯವಸ್ಥಾಪಕನಿಂದ ವಿದ್ಯಾರ್ಥಿಗಳಿಗೆ ಹಲ್ಲೆ ಆರೋಪ: ಪ್ರಕರಣ ದಾಖಲು

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಂ ವಿದ್ಯಾರ್ಥಿಗಳಿಗೆ ಆಭರಣ ಮಳಿಗೆಯ ವ್ಯವಸ್ಥಾಪಕನೋರ್ವ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ ವ್ಯವಸ್ಥಾಪಕನಾಗಿರುವ ಅಶೋಕ್ ಬಂಗೇರ ಹಾಗೂ ಸಿಬ್ಬಂದಿಗಳು ಮೂವರು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೇಣೂರು ಸಮೀಪದ ಮೂವರು ವಿದ್ಯಾರ್ಥಿಗಳು ಶಾಲೆಗೆ ರಜೆ ಹಾಕಿ, ಬೆಳ್ತಂಗಡಿ ಪೇಟೆಯಲ್ಲಿ ಪ್ರತಿ ಸೋಮವಾರ ನಡೆಯುವ […]