ಮಂಡ್ಯ to ಮಡಿಕೇರಿ: Facebook ಗೆಳತಿ ಭೇಟಿಗೆ ಹೋಗಿದ್ದ ಉದ್ಯಮಿಯ ಸುಲಿಗೆ ಹಾಗೂ ಹಲ್ಲೆ ಕೇಸ್; ನಾಲ್ವರು ಬಂಧನ!

ಮಡಿಕೇರಿ: ಸಾಮಾಜಿಕ ಮಾಧ್ಯಮದಲ್ಲಿ ಹನಿಟ್ರ್ಯಾಪ್ ಮೂಲಕ ಆಮಿಷಕ್ಕೆ ಒಳಗಾಗಿ 39 ವರ್ಷದ ಉದ್ಯಮಿಯೊಬ್ಬರ ಮೇಲೆ ಹಲ್ಲೆ, ಅಕ್ರಮ ಬಂಧನ ಮತ್ತು ಹಣ ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ರಚನಾ, ಮಾಲತಿ, ದರ್ಶನ್ ಮತ್ತು ರವಿ ಎಂದು ಗುರುತಿಸಲಾಗಿದೆ. ಡಿಸೆಂಬರ್ 12ರಂದು ಕೊಡಗಿನ ಮಡಿಕೇರಿಯಲ್ಲಿ ಈ ಘಟನೆ ನಡೆದಿತ್ತು. ಇನ್ನು ಈ ಕೃತ್ಯದಲ್ಲಿ ಭಾಗಿಯಾಗಿರುವ ಉಳಿದ ಶಂಕಿತರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನ ಪ್ರಕಾರ, ಮಂಡ್ಯ ಜಿಲ್ಲೆಯ ಮದ್ದೂರು […]
AKMS ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಬಂಧನ

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರಿನಲ್ಲಿ ನಡೆದ AKMS ಬಸ್ ಮಾಲೀಕ ಸೈಫುದ್ದೀನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 108/2025 ಕಲಂ 103 ಹಾಗೂ 3(5)ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರಕರಣದಲ್ಲಿ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದ ಇನ್ನೋರ್ವ ಆರೋಪಿಯಾದ ಮಾಲಿ ಮೊಹಮ್ಮದ್ ಸಿಯಾನ್ (31) ಇತನನ್ನು […]
ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ಎದುರಿಸಿ, ಗೆಲ್ಲಿ ನೋಡೋಣ: ಬಿಜೆಪಿಗೆ ಪ್ರಿಯಾಂಕಾ ಗಾಂಧಿ ಸವಾಲ್!

ನವದೆಹಲಿ: ಬ್ಯಾಲೆಟ್ ಪೇಪರ್ ಮೂಲಕ ನಡೆಯುವ ನ್ಯಾಯಸಮ್ಮತ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಬಿಜೆಪಿ ತನ್ನ ಶಕ್ತಿಯನ್ನು ಸಾಬೀತುಪಡಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸವಾಲು ಹಾಕಿದ್ದಾರೆ. ಜನರ ಮತದಾನದ ಹಕ್ಕನ್ನು ದುರ್ಬಲಗೊಳಿಸಲು ಚುನಾವಣಾ ಪ್ರಕ್ರಿಯೆಯನ್ನು ಉದ್ದೇಶಪೂರ್ವಕವಾಗಿ ಅನುಮಾನ ಬರುವಂತೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್‌ನ ‘ವೋಟ್ ಚೋರ್, ಗಡ್ಡಿ ಛೋಡ್’ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಚುನಾವಣಾ ಆಯೋಗದ (EC) ಬೆಂಬಲವಿಲ್ಲದೆ ಬಿಜೆಪಿ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು. ಆಡಳಿತರೂಢ […]
Mangaluru | TEAM SDPI ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ ಪ್ರಚೋದನಕಾರಿ ಪೋಸ್ಟ್ ; ವಿದೇಶದಲ್ಲಿ ಕುಳಿತು ಇನ್ ಸ್ಟಾಗ್ರಾಮ್ ಪೋಸ್ಟ್ ಹಾಕಿದ್ದ ವ್ಯಕ್ತಿ ಅರೆಸ್ಟ್

ಮಂಗಳೂರು: ಸಾಮಾಜಿಕ ಜಾಲತಾಣ ಇನ್ ಸ್ಟಾ ಗ್ರಾಮ್ ನಲ್ಲಿ ಟೀಮ್ ಎಸ್ಡಿಪಿಐ ಹೆಸರಲ್ಲಿ ಅನ್ಯಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದು ಈ ಪೋಸ್ಟ್ ಹಾಕಿದ್ದ ವಿದೇಶದಲ್ಲಿ ಉದ್ಯೋಗ ಮಾಡುತ್ತಿದ್ದ ಆರೋಪಿಯನ್ನು ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಾಗಲೇ ಅರೆಸ್ಟ್ ಮಾಡಲಾಗಿದೆ. ಕಳೆದ ಅಕ್ಟೋಬರ್ 11ರಂದು ಟೀಮ್ ಎಸ್ಡಿಪಿಐ ಹೆಸರಲ್ಲಿ ಉಳಾಯಿಬೆಟ್ಟು ನಿವಾಸಿ ಅಬ್ದುಲ್ ಖಾದರ್ ಈ ಪೋಸ್ಟ್ ಹಾಕಿದ್ದ. ಪ್ರಕರಣದಲ್ಲಿ ತಾಂತ್ರಿಕ ವಿಧಾನದ […]
Mangaluru: ಯುವತಿ ಸಹಿತ ಮೂವರ ಸೆರೆ; 87.35 ಗ್ರಾಂ ಎಂಡಿಎಂಎ ವಶ

ಮಂಗಳೂರು: ನಗರದಲ್ಲಿರುವ ಹಲವು ಮಾದಕ ದ್ರವ್ಯ ಮಾರಾಟಗಾರರಿಗೆ ಬಹಳಷ್ಟು ಸಮಯದಿಂದ ಬೆಂಗಳೂರಿನಿಂದ ವ್ಯವಸ್ಥಿತವಾಗಿ ಮಾದಕ ಪದಾರ್ಥಗಳನ್ನು ಪೂರೈಸುತ್ತಿದ್ದ ತಂಡವೊಂದನ್ನು ಬಂಧಿಸುವಲ್ಲಿ ಮಂಗಳೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 87.35 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಉಳಾಯಿಬೆಟ್ಟು ಮೂಳೂರು ಬದ್ರಿಯಾನಗರ ಮೂಲದ ಪ್ರಸ್ತುತ ಬಿ.ಸಿ.ರೋಡ್ ಶಾಂತಿಯಂಗಡಿ ನಿವಾಸಿ ಅಹ್ಮದ್ ಸಾಬಿತ್ (35), ಬಿ.ಸಿ.ರೋಡ್ ಕೈಕಂಬ ಜೋಡುಮಾರ್ಗ ಬಿ.ಮೂಡ ಗ್ರಾಮದ ಮೊಹಮ್ಮದ್ ಶಂಶೀರ್ ಮತ್ತು ಬಂಟ್ವಾಳ ಸರಪಾಡಿ ಮಠದಬೆಟ್ಟು ನಿವಾಸಿ ನೌಶೀನಾ (27) ಬಂಧಿತರು. ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು […]
ತಂದೆಯ ಹೆಸರಲ್ಲಿ ಮತ ಕೇಳಿ ಯು.ಟಿ ಖಾದರ್ ಶಾಸಕರಾದವರು: ಯಶ್‌ಪಾಲ್ ಸುವರ್ಣ

ಉಡುಪಿ: ಅಧಿವೇಶನದಲ್ಲಿ ಉಡುಪಿ ಪರ್ಯಾಯಕ್ಕೆ ಅನುದಾನ ಕೇಳಿದ್ದಕ್ಕಾಗಿ ಸಭಾಧ್ಯಕ್ಷ ಯು.ಟಿ.ಖಾದರ್ ಪೀಠದಿಂದ ಟೀಕಿಸಿರುವುದು ಸರಿಯಲ್ಲ. ಪೀಠಕ್ಕೆ ಗೌರವ ನೀಡಿ ನಾನು ಮೌನವಾಗಿದ್ದೆ. ಆದರೆ ಸ್ಪೀಕರ್ ಅವರು ಹಗುರವಾಗಿ, ಹಿಂದೂ ಧರ್ಮದ ಹರಿಕಥೆ ಬಗ್ಗೆ ಮಾತನಾಡಿದ್ದು ನೋವುಂಟು ಮಾಡಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕನಾಗಿ ನನಗೆ ನನ್ನ ಕ್ಷೇತ್ರದ ಬಗ್ಗೆ ಮಾತನಾಡುವ ಸಂಪೂರ್ಣ ಹಕ್ಕಿದೆ. 15 ದಿನಗಳ ಮುಂಚಿತವಾಗಿ ನಾನು ಸಲ್ಲಿಸಿದ್ದ ಪ್ರಶ್ನೆಯಿದು. ನಾನು ಎಂದಿಗೂ ದಾರಿ ತಪ್ಪುವ […]
ಬಂಟ್ವಾಳ | ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿ ಭೋಜ ಮೂಲ್ಯ ಮನೆ ಜಪ್ತಿ

ಬಂಟ್ವಾಳ: ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು -ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಪ್ರಕರಣವನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಮುಂದುವರಿಸಿ ಆರೋಪಿ ಭೋಜ ಮೂಲ್ಯ ಎಂಬವರ ಮನೆ ಹಾಗೂ ಕೊಟ್ಟಿಗೆಯನ್ನು ಜಪ್ತಿ ಮಾಡಿದ್ದಾರೆ. ಅಕ್ರಮ ದನ ಸಾಗಾಟದ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಡಿ.13 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾಜೇಶ್ ಮತ್ತು ಸಿಬ್ಬಂದಿಗಳು KA-70-8686 ನೇ ನೊಂದಣಿಯ […]
ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು: ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (94) ಅವರು ಇಂದು ಸಂಜೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯ ಹಿನ್ನೆಲೆಯಲ್ಲಿ, ಅವರು ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜೂನ್ 16, 1931ರಲ್ಲಿ ದಾವಣಗೆರೆಯ ಶಾಮನೂರು ಗ್ರಾಮದಲ್ಲಿ ಜನಿಸಿದ್ದ ಶಾಮನೂರು ಶಿವಶಂಕರಪ್ಪ ಅವರು 6 ಬಾರಿ ಶಾಸಕರಾಗಿದ್ದರು. ಹಲವು ಮುಖ್ಯಮಂತ್ರಿಗಳ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಶಾಮನೂರು ಅವರು ಅಖಿಲ ಭಾರತೀಯ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ […]
ಮಂಗಳೂರು: ತಲ್ವಾರ್ ಹಿಡಿದು ನೃತ್ಯ ಮಾಡಿದ ವಿಡಿಯೋವನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್; ಆರೋಪಿಗಳ ಬಂಧನ

ಮಂಗಳೂರು: ತಲ್ವಾರ್ ಹಿಡಿದು ನೃತ್ಯ ಮಾಡಿದ ರೀಲ್ಸ್ ವಿಡಿಯೋವನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶೇರ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು, ಬಂದರು ಜೆ.ಡಮ್ ರೋಡ್ ಅಮೀನ್ ಉಲ್ಲಾ 1 ನೇ ಮಹಡಿ ನಿವಾಸಿ ಅಮೀರ್ ಸುಹೇಲ್ (28) ಹಾಗೂ ಮಂಗಳೂರು, ಕಾವೂರಿನ ಉರುಂದಾಡಿಗುಡ್ಡೆ ಧನುಷ್ ಗೌಂಡ್ ಬಳಿ ನಿವಾಸಿ ಸುರೇಶ (29) ಬಂಧಿತ ಆರೋಪಿಗಳು. ಡಿ.13 ರಂದು ಸಾಮಾಜಿಕ ಜಾಲತಾಣ ಫೇಸ್‌ಬುಕ್ ಖಾತೆಯಲ್ಲಿ “Suresh Psy” ಎಂಬ ಹೆಸರಿನ ಖಾತೆ ಹೊಂದಿರುವ […]
ಸಂಪೂರ್ಣ ಗೋಹತ್ಯೆ ನಿಷೇಧಕ್ಕೆ ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್ ಆಗ್ರಹ

ನವದೆಹಲಿ: “ಗೋವನ್ನು ರಾಷ್ಟ್ರಮಾತೆ ಅಥವಾ ರಾಜಮಾತೆ” ಎಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಮೂಲಕ ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್ ಸಂಸತ್ತಿನಲ್ಲಿ ಹಲವರನ್ನು ಅಚ್ಚರಿಗೊಳಿಸಿದರು. ಕಲಾಪದ ಶೂನ್ಯ ವೇಳೆಯಲ್ಲಿ ಅವರು ಈ ವಿಷಯವನ್ನು ಪ್ರಸ್ತಾಪಿಸಿ, “ಭಾರತದ ಸ್ಥಳೀಯ ಗೋ ತಳಿಗಳಿಗೆ ತುರ್ತು ರಕ್ಷಣೆ ಮಾಡಬೇಕು. ಎಲ್ಲ ಜಾನುವಾರುಗಳ ಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು” ಎಂದು ಅವರು ಒತ್ತಾಯಿಸಿದರು. “ದೇಸಿ ಗೋವುಗಳ ಜನಸಂಖ್ಯೆ ವೇಗವಾಗಿ ಕುಸಿಯುತ್ತಿದೆ, ಅವುಗಳ ಗುರುತು ಮತ್ತು ಘನತೆಯನ್ನು ರಕ್ಷಿಸಬೇಕು. ಗೋವು ರಾಷ್ಟ್ರೀಯ ಗುರುತು […]