ಹೊಸ ವಿಮಾನಯಾನ ಸಂಸ್ಥೆಗಳಿಗೆ ಪರವಾನಗಿ ನೀಡುತ್ತೇವೆ: ಸಚಿವ ರಾಮ್ಮೋಹನ್ ನಾಯ್ಡು

ನವದೆಹಲಿ: ಭಾರತಕ್ಕೆ ಐದಾರು ದೊಡ್ಡ ವಿಮಾನಯಾನ ಸಂಸ್ಥೆಗಳ ಅಗತ್ಯವಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ರಾಜ್ಯಸಭೆಯಲ್ಲಿ ಹೇಳಿದ್ದಾರೆ. ಇಂಡಿಗೋ ಬಿಕ್ಕಟ್ಟಿನ ಕುರಿತು ಮಾತನಾಡಿದ ಅವರು, ಭಾರತೀಯ ವಿಮಾನಯಾನ ಉದ್ಯಮದಲ್ಲಿ ಹೆಚ್ಚುತ್ತಿರುವ ಸಾಮರ್ಥ್ಯ ಮತ್ತು ಬೇಡಿಕೆಯನ್ನು ಪರಿಗಣಿಸಿ ಮುಂದಿನ ದಿನಗಳಲ್ಲಿ ಈ ವಲಯದಲ್ಲಿ ಐದು ದೊಡ್ಡ ವಿಮಾನಯಾನ ಕಂಪನಿಗಳಿಗೆ ಪರವಾನಗಿ ನೀಡಲಾಗುವುದು ಎಂದು ಹೇಳಿದ್ದಾರೆ. ಇಂಡಿಗೋ ಬಿಕ್ಕಟ್ಟಿನ ಬಗ್ಗೆ ಸರ್ಕಾರ ಕಠಿಣ ನಿಲುವು ತೆಗೆದುಕೊಂಡಿದೆ, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿಯೂ ಈ ವಿಷಯವನ್ನು ಬಲವಾಗಿ ಎತ್ತಿದೆ. […]
ಮಂಗಳೂರು | ಯುವಕನ ಕೊಲೆ ಪ್ರಕರಣ: ಆರೋಪಿಯ ಬಂಧನ

ಪಣಂಬೂರು: ಮದ್ಯ ಸೇವನೆಗೆ ಹಣ ನೀಡಿಲ್ಲ ಎಂದು ಜಗಳವಾಡಿರುವುದಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ರವಿವಾರ ತಡರಾತ್ರಿ ಬೈಕಂಪಾಡಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಉತ್ತರ ಪ್ರದೇಶ ಮೂಲದ ನಿವಾಸಿ, ಸದ್ಯ ಬೈಕಂಪಾಡಿಯಲ್ಲಿ ವಾಸವಿರುವ ಸಚಿನ್ ಕುಮಾರ್ ಎಂದು ಗುರುತಿಸಲಾಗಿದೆ. ಮೂಲತಃ ಬೆಳಗಾವಿ ಜಿಲ್ಲೆ, ಪ್ರಸಕ್ತ ಬೈಕಂಪಾಡಿಯ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಪ್ರವೀಣ್ ಶಿವಶಂಕರಪ್ಪ ಕೊಲೆ ಆರೋಪಿ ಎಂದು ತಿಳಿದು ಬಂದಿದೆ. ಸಚಿನ್ ಕುಮಾರ್ ಮತ್ತು ಪ್ರವೀಣ್ ಶಿವಶಂಕರಪ್ಪ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ರವಿವಾರ ಸಚಿನ್ ಮದ್ಯ ಖರೀದಿಸಲೆಂದು […]
‘ಅಹಿಂದ ಕಿಂಗ್ ಸಿದ್ದರಾಮಯ್ಯ’ ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್

ಬೆಂಗಳೂರು: ಕಾಂಗ್ರೆಸ್ ಪಕ್ಷದೊಳಗೆ ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ವರ್ಗ ಮತ್ತು ದಲಿತ) ನಾಯಕತ್ವದ ಕುರಿತು ಹೊಸ ಚರ್ಚೆಯೊಂದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರ ಮತ್ತು ವಿರೋಧ ಹೇಳಿಕೆಗಳು ಮುನ್ನೆಲೆಗೆ ಬಂದಿವೆ. ಪ್ರಸ್ತುತ ಸಿದ್ದರಾಮಯ್ಯನವರೇ ಅಹಿಂದ ಸಮುದಾಯದ ನಿರ್ವಿವಾದ ನಾಯಕರಾಗಿರುವಾಗ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಮುಂದಿನ ನಾಯಕ ಎಂದು ಬಿ.ಕೆ. ಹರಿಪ್ರಸಾದ್ ಅವರು ಬೆಂಬಲಿಸಿ ನೀಡಿದ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ […]
ತುಂಬೆ: B.A ವಿದ್ಯಾ ಸಂಸ್ಥೆಗಳ 37ನೇ ವಾರ್ಷಿಕೋತ್ಸವ

ತುಂಬೆ: ಶಾಲೆ ಅಥವಾ ಕಾಲೇಜು ಎನ್ನುವುದು ವಿದ್ಯಾರ್ಥಿಗಳಿಗೆ ಮನೆಯಂತೆ ಇರಬೇಕು. ಆಗ ವಿದ್ಯಾರ್ಥಿಗಳು ಬಹಳ ಉತ್ಸುಕತೆಯಿಂದ ಆತಂಕವಿಲ್ಲದೆ ಕಲಿಯುತ್ತಾರೆ, ಬೆಳೆಯುತ್ತಾರೆ. ಇಂತಹ ಮನೆಯ ವಾತಾವರಣವನ್ನು ಇಂದು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತುಂಬೆಯ ಬಿ.ಎ ಸಂಸ್ಥೆಯು ಒದಗಿಸಿಕೊಟ್ಟಿದೆ ಎಂಬುದಾಗಿ ಪದುವಾ ಕಾಲೇಜಿನ ಪ್ರಾಂಶುಪಾಲ ರೇ. ಫಾ. ಅರುಣ್ ವಿಲ್ಸನ್ ಲೋಬೋ ಅವರು ಹೇಳಿದರು. ಅವರು ತುಂಬೆಯ ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ನ ಪ್ರಾರ್ಥಮಿಕ, ಪ್ರೌಢ ಮತ್ತು ಕಾಲೇಜು ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳು ಹಾಗೂ […]
ಕರ್ನಾಟಕದ ಅರಣ್ಯ ಪ್ರದೇಶಗಳಲ್ಲಿ ಭಾರಿ ಚಿನ್ನದ ನಿಕ್ಷೇಪ ಪತ್ತೆ!

ಬೆಂಗಳೂರು: ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಚಿನ್ನ ಮತ್ತು ಇತರ ಅಪರೂಪದ ಖನಿಜಗಳ ಅಧ್ಯಯನ ಮತ್ತು ಶೋಧನೆ ನಡೆಯುತ್ತಿರುವ 65 ಸ್ಥಳಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಕೊಪ್ಪಳ ಮತ್ತು ರಾಯಚೂರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಮತ್ತು ಲಿಥಿಯಂ ಕಂಡುಬಂದಿದೆ ಎಂದು ಹೇಳಲಾಗಿದೆ. ಆದರೆ ಈ ಪ್ರದೇಶಗಳು ಸಂರಕ್ಷಿತ ಅರಣ್ಯ ವ್ಯಾಪ್ತಿಯಲ್ಲಿ ಬರುವುದರಿಂದ ಖನಿಜಗಳ ಉತ್ಖನನ ಮತ್ತು ವಿವರವಾದ ಸಂಶೋಧನೆ ಸ್ಥಗಿತಗೊಂಡಿದೆ. ರಾಜ್ಯದ ಗಣಿ ಮತ್ತು ಭೂವಿಜ್ಞಾನ ಇಲಾಖೆಯು 57 ಸ್ಥಳಗಳಲ್ಲಿ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ ಮತ್ತು ಎಂಟು […]
ದ್ವೇಷ ಭಾಷಣ ತಡೆಗೆ ಹೊಸ ಕಾನೂನು ತನ್ನನ್ನು ಗುರಿಯಾಗಿಸಿಕೊಂಡೇ ಬರುತ್ತಿದೆ ಎಂದ ಯತ್ನಾಳ್

ವಿಜಯಪುರ: ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಚೋದನಕಾರಿ ಭಾಷಣಗಳನ್ನು ನಿಯಂತ್ರಿಸಲು ಹೊಸ ಕಾನೂನನ್ನು ಜಾರಿಗೆ ತರುವ ಸರ್ಕಾರದ ಚಿಂತನೆ ಕುರಿತು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತೀವ್ರವಾಗಿ ವಿರೋಧಿಸಿದ್ದು, ಆ ಕಾಯ್ದೆ ತನ್ನನ್ನು ಗುರಿಯಾಗಿಸಿಕೊಂಡೇ ಬರುತ್ತಿದೆ ಎಂದು ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್ ಅವರು, ಆ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ. ಹಿಂದೂಗಳ ಪರವಾಗಿ ಯಾರು ಮಾತನಾಡುತ್ತಾರೋ ಅವರನ್ನು ಟಾರ್ಗೆಟ್ ಮಾಡಬೇಕು ಅನ್ನೋದು ಅವರ (ಸರ್ಕಾರದ) ಉದ್ದೇಶ. ಅವರು ವಿಜಯೇಂದ್ರ, ಆರ್ […]
ಮುಸ್ಲಿಮರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ವಂದೇ ಮಾತರಂ ಹಾಡನ್ನು ಒಡೆದು ತುಂಡು ಮಾಡಿತು: ನರೇಂದ್ರ ಮೋದಿ

ನವದೆಹಲಿ: ಮುಸ್ಲಿಮರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ವಂದೇ ಮಾತರಂ ಹಾಡನ್ನು ಒಡೆದು ತುಂಡು ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಸಿಟ್ಟು ಹೊರಹಾಕಿದ್ದಾರೆ. ವಂದೇ ಮಾತರಂ ಹಾಡಿಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಇಂದು ಚರ್ಚೆ ಆರಂಭಿಸಿದ ಮೋದಿ, ವಂದೇ ಮಾತರಂ ವಿರುದ್ಧ ಜಿನ್ನಾ ನಡೆಸಿದ ಪ್ರತಿಭಟನೆಯನ್ನು ನೆಹರು ಬೆಂಬಲಿಸಿದರು. ಕೊನೆಗೆ ಕಾಂಗ್ರೆಸ್ ಮುಸ್ಲಿಂ ಲೀಗ್‌ಗೆ ತಲೆಬಾಗಿ ತುಂಡು ಮಾಡಿದರು ಎಂದು ವಾಗ್ದಾಳಿ ನಡೆಸಿದರು. ವಂದೇ ಮಾತರಂ ವಿರುದ್ಧ ಮುಸ್ಲಿಂ ಲೀಗ್ ನೆಹರು ಅವರಿಗೆ ಪತ್ರ ಬರೆದು ಆಕ್ಷೇಪ […]
ಇಂಡಿಗೋ ಏರ್ಲೈನ್ಸ್ ದಿಢೀರ್ ಬಿಕ್ಕಟ್ಟಿಗೆ ಸಿಲುಕಲು ಕಾರಣ ಏನು?

ನವದೆಹಲಿ: ಭಾರತದ ಅತಿದೊಡ್ಡ ಏರ್ಲೈನ್ಸ್ ಸಂಸ್ಥೆ ಎನಿಸಿರುವ ಮತ್ತು ಜಾಗತಿಕವಾಗಿಯೂ ದೈತ್ಯ ಏರ್ಲೈನ್ ಕಂಪನಿಗಳಲ್ಲಿ ಒಂದೆನಿಸಿರುವ ಇಂಡಿಗೋ ಏರ್ಲೈನ್ಸ್ ಕಳೆದ ಕೆಲ ದಿನಗಳಿಂದ ವಿಲವಿಲ ಒದ್ದಾಡುತ್ತಿದೆ. ದಿನವೂ ನೂರಾರು ಫ್ಲೈಟ್ಗಳು ರದ್ದಾಗುತ್ತಿವೆ. ಫ್ಲೈಟ್ ತಪ್ಪಿರುವ ಸಾವಿರಾರು ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಸರ್ಕಾರ ಕೂಡ ತನಿಖೆ ನಡೆಸತೊಡಗಿದೆ. ಉಗುರಿನಲ್ಲಿ ಹೋಗಬೇಕಾದ ಸಮಸ್ಯೆಗೆ ಕೊಡಲಿ ಎತ್ತಬೇಕಾದ ಸ್ಥಿತಿ ಬಂತೆಂದು ಹಲವು ಹೇಳತೊಡಗಿದ್ದಾರೆ. ಅಷ್ಟಕ್ಕೂ ಇಂಡಿಗೋ ಏರ್ಲೈನ್ಸ್ನ ಬಿಕ್ಕಟ್ಟಿಗೆ ಕಾರಣಗಳೇನು? ಇಂಡಿಗೋ ಏರ್ಲೈನ್ಸ್ನ ಬಿಕ್ಕಟ್ಟಿಗೆ ಕಾರಣಗಳೇನು?ಪೈಲಟ್ಗಳ ಲಭ್ಯತೆ ಇಲ್ಲದೇ ಹೋಗಿದ್ದು ಇಂಡಿಗೋ […]
ಮಂಗಳೂರು | ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

ಸುರತ್ಕಲ್: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯೊಬ್ಬನನ್ನು ಸುರತ್ಕಲ್ ಪೊಲೀಸರು ಬಂಧಿಸಿ ಪೋಕ್ಸೋ ಕೇಸು ದಾಖಲಿಸಿದ್ದಾರೆ. ಸುರತ್ಕಲ್ ಬಳಿಯ ಚೊಕ್ಕಬೆಟ್ಟು ಜುಮ್ಮಾ ಮಸೀದಿ ಬಳಿಯಿರುವ ಹನಿ ಫ್ಯಾಶನ್ ಶಾಪ್, ಜನರಲ್ ಸ್ಟೋರ್ ಅಂಗಡಿ ಮಾಲಕ ಮೊಹಮ್ಮದ್ ಇಸ್ಮಾಯಿಲ್ ಬಂಧಿತ ಆರೋಪಿ. 6ನೇ ತರಗತಿ ಬಾಲಕ ಶನಿವಾರ ಚಾಕೊಲೇಟ್ ಖರೀದಿಸಲು ಹೋದಾಗ ಅಂಗಡಿಯಲ್ಲಿರುವ ರೂಂವೊಂದರಲ್ಲಿ ಕೂಡಿ ಹಾಕಿ ಬಾಲಕನ ಕೈ-ಕಾಲನ್ನು ಹಗ್ಗದಿಂದ ಕಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ನೊಂದ ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ […]
ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ

ಬೀದರ್: ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ನಡೆದ ಸೂಫಿ-ಸಂತರ ಸಮಾವೇಶದಲ್ಲಿ ಭಾಗಿಯಾಗಿದ್ದ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಬಿ.ಜಿ ಕೋಲ್ಸೆ ಪಾಟೀಲ್ ಅವರು ನೀಡಿದ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭಾನುವಾರ ರಾತ್ರಿ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ವೇಳೆ ಮಾತನಾಡಿದ ಬಿ.ಜಿ ಕೋಲ್ಸೆ ಪಾಟೀಲ್, ಹಿಂದೂ ಅನ್ನುವುದು ಧರ್ಮವೇ ಅಲ್ಲ, ಅದು ಪರ್ಷಿಯನ್ ಪದ, ಅದರ ಅರ್ಥ ಬೈಗುಳ ಇದೆ. ಬ್ರಾಹ್ಮಣರು ಅವರ ಬುದ್ಧಿಯಿಂದ ನಮ್ಮನು ಗುಲಾಮರನ್ನಾಗಿಸಿ ಹಿಂದೂ ಧರ್ಮ […]