ಊರಿನ ಜನರು, ಸಂಘಟನೆಗಳು ಶಿಕ್ಷಣಕ್ಕೆ ಒತ್ತು ಕೊಟ್ಟರೆ ಖಂಡಿತವಾಗಿಯೂ ಸರ್ಕಾರಿ ಶಾಲೆಗಳು ಉಳಿಯುತ್ತದೆ: ಉಮರ್ ಫಾರೂಕ್

‘ಸುಜೀರು ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಮಕ್ಕಳ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ಕಲಿಕಾ ಹಬ್ಬ’ ಬಂಟ್ವಾಳ: ಊರಿನ ಜನರು, ಸಂಘಟನೆಗಳು ಶಿಕ್ಷಣಕ್ಕೆ ಒತ್ತು ಕೊಟ್ಟರೆ ಖಂಡಿತವಾಗಿಯೂ ಸರ್ಕಾರಿ ಶಾಲೆಗಳು ಉಳಿಯುತ್ತದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಉಮರ್ ಫಾರೂಕ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಮಗ್ರ ಶಿಕ್ಷಣ ಕರ್ನಾಟಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ, ಬಂಟ್ವಾಳ ಸಮೂಹ ಸಂಪನ್ಮೂಲ ಕೇಂದ್ರ, ತುಂಬೆ ಇದರ ಆಶ್ರಯದಲ್ಲಿ […]
ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕವನ್ನು ಆತುರದಲ್ಲಿ ಅಂಗೀಕರಿಸಿಲ್ಲ’: ಸ್ಪೀಕರ್ ಯು.ಟಿ.ಖಾದರ್

‘ ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕವನ್ನು ವಿಧಾನಸಭೆಯಲ್ಲಿ ಆತುರದಲ್ಲಿ ಅಂಗೀಕರಿಸಿಲ್ಲ ಎಂದು ಸ್ಪೀಕರ್ ಯು.ಟಿ.ಖಾದರ್ ಸ್ಪಷ್ಟಪಡಿಸಿದರು. ವಿಧಾನಸೌಧದಲ್ಲಿ ಅಧಿವೇಶನದ ಕಾರ್ಯಕಲಾಪಗಳ ಕುರಿತು ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕದ ಕುರಿತು ಚರ್ಚೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಅಲ್ಲಿ ಬೇರೆ ಬೇರೆ ವಿಷಯದ ಬಗ್ಗೆ ಚರ್ಚೆಗಳನ್ನು ಮಾಡಿದ್ದರಿಂದ ಗೊಂದಲ ಉಂಟಾಯಿತು ಎಂದು ಹೇಳಿದರು. ಅತ್ಯಂತ ಮಹತ್ವದ ವಿಧೇಯಕದ ಕುರಿತು ಚರ್ಚೆ ನಡೆಯುವ […]
ಗಾಂಧಿಯನ್ನು ಕಾಂಗ್ರೆಸ್ ಒಂದಲ್ಲ ಹಲವಾರು ಬಾರಿ ಕೊಲೆ ಮಾಡಿದೆ: ಬೊಮ್ಮಾಯಿ

ಬೀದರ್: ಮಹಾತ್ಮಾ ಗಾಂಧೀಜಿಯವರನ್ನು ಕಾಂಗ್ರೆಸ್ ಒಂದಲ್ಲ ಹಲವಾರು ಬಾರಿ ಕೊಲೆ ಮಾಡಿದೆ. ಕಾಂಗ್ರೆಸ್ ಪಕ್ಷ ಗಾಂಧಿ ಹೆಸರನ್ನು ಹೇಳಿ ಲಾಭ ಪಡೆಯುತ್ತದೆ. ಅದೆಲ್ಲಿ ಹೋಗಿಬಿಡುತ್ತದೆ ಎನ್ನುವ ಭಯದಲ್ಲಿ ಗಾಂಧೀಜಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬೀದರ್‌ನಲ್ಲಿ ನರೇಗಾ ಯೋಜನೆಯಲ್ಲಿ ಗಾಂಧೀಜಿ ಹೆಸರು ಕೈ ಬಿಟ್ಟಿರುವ ಕುರಿತು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಗಾಂಧೀಜಿಯವರು ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಲು ಹೇಳಿದ್ದರು. ಆದರೆ ನೆಹರು ಅವರು ವಿಸರ್ಜನೆ ಮಾಡಲಿಲ್ಲ, ಅವತ್ತೇ ಗಾಂಧಿ ಕೊಲೆ ಆಯ್ತು. […]
ಮಂಗಳೂರು | ಕಾರ್ಮಿಕನ ಮೃತದೇಹ ಪತ್ತೆ

ಮಂಗಳೂರು: ನಗರದ ಕಂಕನಾಡಿ-ಪಂಪ್ವೆಲ್ ಹಳೆಯ ರಸ್ತೆಯ ಚರಂಡಿಯಲ್ಲಿ ಗದಗ ಮೂಲದ ಕಾರ್ಮಿಕನ ಮೃತದೇಹ ಸೋಮವಾರ ಪತ್ತೆಯಾಗಿದೆ. ಮೃತರನ್ನು ಗದಗ ಜಿಲ್ಲೆಯ ಪಡಿಯಪ್ಪ ಎಂದು ಗುರುತಿಸಲಾಗಿದೆ. ಮೃತದೇಹದ ಮೇಲೆ ಗಾಯಗಳು ಕಂಡು ಬಂದಿದ್ದು, ಸೂಕ್ತ ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿರುವ ಇವರು ಶನಿವಾರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟಿದ್ದರು. ಬಳಿಕ ನಾಪತ್ತೆಯಾಗಿದ್ದರು. ಅದರಂತೆ ಮನೆಮಂದಿ, ಕುಟುಂಬದ ಇತರ ಸದಸ್ಯರು ಸದಸ್ಯರು ಪಡಿಯಪ್ಪರಿಗಾಗಿ ಹುಡುಕಾಟ ನಡೆಸಿದ್ದರು. ಸೋಮವಾರ ಸಂಜೆಯ ವೇಳೆಗೆ ಚರಂಡಿಯಲ್ಲಿ ಪಡಿಯಪ್ಪರ […]
ಗಂಡನ ಬಿಟ್ಟು ಮತ್ತೊಬ್ಬನ ಜೊತೆ ಲವ್ವಿಡವ್ವಿ; ವಿಡಿಯೋ ಕಾಲ್ ಲೈವ್ ನಲ್ಲೇ ಆತ್ಮಹತ್ಯೆಗೆ ಶರಣಾದ ಮುನ್ನಿ!

ಬಳ್ಳಾರಿ: 23 ವರ್ಷದ ಮಹಿಳೆಯೊಬ್ಬಳು ವಿಡಿಯೋ ಮಾಡುತ್ತಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿಯ ಹುಸೇನ್ ನಗರದಲ್ಲಿ ನಡೆದಿದೆ. ಮುನ್ನಿ (23) ಆತ್ಮಹತ್ಯೆಗೆ ಶರಣಾದ ಮಹಿಳೆ. ಮದುವೆಯಾಗಿ ಎರಡು ಮಕ್ಕಳನ್ನ ಹೊಂದಿದ್ದ ಮುನ್ನಿ ಆರು ತಿಂಗಳಿಂದ ಪತಿಯಿಂದ ದೂರ ಇದ್ದಳು. ಈ ಮಧ್ಯೆ ವಿವಾಹಿತ ಮೊಹಮ್ಮದ್ ಶೇಕ್ ಪ್ರೀತಿಗೆ ಬಿದ್ದಿದ್ದಳು. ಮುನ್ನಿಗೆ ಶೇಖ್ ಸಂಬಂಧದಲ್ಲಿ ಅಣ್ಣ ಆಗಿದ್ದರೂ ಇಬ್ಬರು ಪ್ರೀತಿ ಮಾಡುತ್ತಿದ್ದರು. ಪ್ರೀತಿಯ ನಂತರ ನನ್ನನ್ನು ಮದುವೆಯಾಗು ಎಂದು ಮುನ್ನಿ ಒತ್ತಾಯ ಮಾಡುತ್ತಿದ್ದಳು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮುನ್ನಿ […]
ದುಬೈನ ಬುರ್ಜ್ ಖಲೀಫಾಗೆ ಬಡಿದ ಸಿಡಿಲು: ಫೋಟೋ ವೈರಲ್

ಕೆಲ ದಿನಗಳ ಹಿಂದೆ ಅರಬ್ ದೇಶಗಳಲ್ಲಿ ಹಿಮಾಲಯದಂತೆ ಮಂಜು ಬಿದ್ದು ಅಚ್ಚರಿ ಸೃಷ್ಟಿಸಿತ್ತು. ಅದಕ್ಕೂ ಮೊದಲು ಮಳೆಯೇ ಇಲ್ಲದ ಆ ಮರಳುಗಾಡಿನಲ್ಲಿ ಧಾರಾಕಾರ ಮಳೆ ಸುರಿದು ಪ್ರವಾಹ ಸೃಷ್ಟಿಯಾದಂತಹ ಘಟನೆ ನಡೆದಿದ್ದವು. ಈಗ ಮತ್ತೊಂದು ಅಚ್ಚರಿ ಎಂಬಂತೆ ಅಲ್ಲಿನ ವಿಶ್ವ ವಿಖ್ಯಾತ ಬುರ್ಜ್ ಖಲೀಫಾಗೆ ಸಿಡಿಲು ಬಡಿದಿದ್ದು, ಈ ಸಿಡಿಲಿನ ಬೆಳಕು ಸೊಗಸಾದ ಚಿತ್ತಾರ ಸೃಷ್ಟಿಸಿದೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗ್ತಿದೆ. ಒಮನ್ ದೊರೆ ಶೇಕ್ ಹಮ್ದನ್ ಬಿನ್ ಮೊಹಮ್ಮದ್ ಬಿನ್ […]
Mangaluru | ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ: ಪೊಲೀಸರಿಂದ ತಡೆ, ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮಂಗಳೂರು: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ತನಿಖಾ ಸಂಸ್ಥೆಗಳ ದುರುಪಯೋಗವನ್ನು ಖಂಡಿಸಿ ಮಂಗಳೂರಿನ ಬಿಜೆಪಿ ಕಚೇರಿಗೆ ಘೇರಾವ್ ಹಾಕಲು ಮುಂದಾದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಇಂದು ವಶಕ್ಕೆ ಪಡೆದರು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (MGNREGA) ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ಪ್ರತಿಭಟನಾಕಾರರು ತೀವ್ರವಾಗಿ ವಿರೋಧಿಸಿದರು. ಅಲ್ಲದೆ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ […]
ಕಿಚ್ಚು ಹಚ್ಚಿದ ಹುಬ್ಬಳ್ಳಿಯಲ್ಲಿ ಸುದೀಪ್ ಆಡಿದ ಮಾತು: ದರ್ಶನ್ ಪತ್ನಿ ವಿಜಯಲಕ್ಷ್ಮಿ ಗುಡುಗು

ಕನ್ನಡ ಚಿತ್ರರಂಗದಲ್ಲಿ ಈ ತಲೆಮಾರಿನ ಹೀರೋಗಳ ನಡುವೆ ಕುಚಿಕ್ಕು ಗೆಳೆಯರೆಂದೇ ಪ್ರಸಿದ್ಧರಾಗಿದ್ದವರು ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್. ಆದರೆ ಈ ಸ್ನೇಹ ಕಳೆದ ಎಂಟೂವರೆ ವರ್ಷಗಳಿಂದ ಗ್ರಹಣ ಕವುಚಿಕೊಂಡಂತೆ ಮಂಕಾಗಿದೆ. ಒಂದು ವೇಳೆ ರೆಬೆಲ್ ಸ್ಟಾರ್ ಅಂಬರೀಶ್ ಇಂದು ಜೀವಂತವಾಗಿದ್ದಿದ್ದರೆ ಪರಸ್ಪರ ವಿರುದ್ಧ ದಿಕ್ಕುಗಳಂತಾಗಿದ್ದ ಸುದೀಪ್ ಮತ್ತು ದರ್ಶನ್ ಮತ್ತೆ ಒಂದೇ ಬಿಂದುವಿನಲ್ಲಿ ಸಂಧಿಸೋ ಕಾಲ ಕೂಡಿರುತ್ತಿತ್ತು. ಯಾಕೆಂದರೆ, ಅಂಬರೀಶ್ ಅವರಿಗೆ ಇಬ್ಬರನ್ನೂ ಮತ್ತೆ ಜೊತೆಯಾಗಿ ನೋಡಬೇಕೆಂಬ ಹೆಬ್ಬಯಕೆ ಇತ್ತು. ಆದರೆ ಕೊನೆಯವರೆಗೆ ಅದಾಗಲೇ […]
ಭಾರತ ಹಿಂದೂರಾಷ್ಟ್ರ, ಈ ಸತ್ಯಕ್ಕೆ ಸಂವಿಧಾನಾತ್ಮಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಕೊಲ್ಕತ್ತಾ: ಭಾರತ ಹಿಂದೂರಾಷ್ಟ್ರ. ಈ ಸತ್ಯಕ್ಕೆ ಸಂವಿಧಾನಾತ್ಮಕ ಅನುಮೋದನೆಯ ಅಗತ್ಯವಿಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಆರೆಸ್ಸೆಸ್ ಶತಮಾನೋತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ಈಗಲೂ ಹಿಂದೂರಾಷ್ಟ್ರ. ಭಾರತೀಯ ಸಂಸ್ಕೃತಿ ಇರುವವರೆಗೂ ಹಿಂದೂರಾಷ್ಟ್ರವಾಗಿಯೇ ಮುಂದುವರಿಯಲಿದೆ ಎಂದು ಹೇಳಿದರು. “ಸೂರ್ಯ ಪೂರ್ವದಲ್ಲಿ ಉದಯಿಸುತ್ತಾನೆ. ಯಾವಾಗದಿಂದ ಇದು ಘಟಿಸುತ್ತಿದೆ ಎನ್ನುವುದು ನಮಗೆ ಗೊತ್ತಿಲ್ಲ. ಆದ್ದರಿಂದ ಇದಕ್ಕೂ ಸಂವಿಧಾನಾತ್ಮಕ ಅನುಮೋದನೆ ಬೇಕೇ? ಹಿಂದೂಸ್ತಾನ ಎನ್ನುವುದು ಹಿಂದೂ ದೇಶ. ಭಾರತ ನಮ್ಮ ಮಾತೃಭೂಮಿ ಎಂದು ಪರಿಗಣಿಸಿ ಭಾರತೀಯ […]
Uppinangady: ಜೇನು ಕೃಷಿ ಕಲಿಸುವೆನೆಂದು ಬಾಲಕಿ ಮೇಲೆ ಅತ್ಯಾಚಾರ

ಉಪ್ಪಿನಂಗಡಿ: ಬೆಳಗಾವಿ ಮೂಲದ ಕೂಲಿ ಕಾರ್ಮಿಕ ಕುಟುಂಬವೊಂದರ 13ರ ಹರೆಯದ ಬಾಲಕಿಯನ್ನು ಜೇನು ಕೃಷಿ ಕಲಿಸಿಕೊಡುವೆನೆಂದು ತನ್ನ ಮನೆಯಲ್ಲಿರಿಸಿ ನಿರಂತರ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ 34ನೇ ನೆಕ್ಕಿಲಾಡಿಯ ಬೇರಿಕೆ ನಿವಾಸಿ ಅಬ್ದುಲ್ ಗಫೂರ್ (50) ಎಂಬಾತನನ್ನು ಪೋಕ್ಸೋ ಕಾಯಿದೆಯಡಿ ಉಪ್ಪಿನಂಗಡಿ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕೂಲಿ ಕೆಲಸಕ್ಕೆಂದು ಬಂದು ಪರಿಸರದಲ್ಲಿ ವಾಸವಾಗಿದ್ದ ಕುಟುಂಬವೊಂದರ ಬಾಲಕಿಗೆ ಜೇನು ಕೃಷಿ ಕಲಿಸಿಕೊಡುವ ಭರವಸೆ ನೀಡಿ ಆರೋಪಿಯು ತನ್ನ ಮನೆಯಲ್ಲಿಯೇ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಿದ್ದ. ಬಾಲಕಿಯ ಹೆತ್ತವರು ಆರೋಪಿಯನ್ನು […]