ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಕೇಸ್?

ಮಂಗಳೂರು: ಸಾಕಷ್ಟು ವಿವಾದಗಳಿಂದ ಸುದ್ದಿಯಾದ ಚೈತ್ರಾ ಕುಂದಾಪುರ ಅವರು ಈಗ ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ವಿರುದ್ಧ ಕೋರ್ಟ್ ಆದೇಶ ಬಂದಿದೆ. ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಚೈತ್ರಾ ವಿರುದ್ಧ ಕೇಸ್ ಹಾಕಿದ್ದರು. ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ ಎಂದು ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ದೂರು ನೀಡಿದ್ದರು. ತಮಗೆ ನ್ಯಾಯ ದೊರಕಿಸಿಕೊಡುವಂತೆ ಬಾಲಕೃಷ್ಣ ಅವರು ಹಿರಿಯ ನಾಗರಿಕರ ನ್ಯಾಯಾಲಯದ ಮೊರೆ ಹೋಗಿದ್ದರು. ಈಗ ಚೈತ್ರಾ ಕುಂದಾಪುರ […]
ಓಮನ್ ಭೇಟಿ ವೇಳೆ ಪ್ರಧಾನಿ ಕಿವಿಯಲ್ಲಿ ಆಭರಣ: ಮೋದಿ ಹೊಸ ಸ್ಟೈಲ್ ಬಗ್ಗೆ ಭಾರೀ ಚರ್ಚೆ, ಏನಿದು?

ಮಸ್ಕತ್: ಪ್ರಧಾನಿ ಮೋದಿ ಓಮನ್‌ಗೆ ಬಂದಿಳಿಯುತ್ತಿದ್ದಂತೆ ವಿಚಾರವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ಕಿವಿಯಲ್ಲಿ ಆಭರಣ ಕಂಡುಬಂದಿದ್ದು, ಇದು ಹೊಸ ಸ್ಟೈಲಾ ಎಂಬ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಮೂರು ದೇಶಗಳ ಪ್ರವಾಸ ಕೈಗೊಂಡಿದ್ದ ಮೋದಿ ಎರಡು ದಿನಗಳ ಕಾಲ ಓಮನ್‌ಗೆ ಭೇಟಿ ನೀಡಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲಿ ಓಮಾನ್‌ನ ಉಪಪ್ರಧಾನಿ ಸಯ್ಯದ್ ಶಿಹಾಬ್ ಬಿನ್ ತಾರಿಕ್ ಅಲ್ ಸೈದ್ ಅವರನ್ನು ಭೇಟಿಯಾದಾಗ ಪ್ರಧಾನಿ ಮೋದಿ ಕಿವಿಯೋಲೆ ರೀತಿಯ ಸಾಧನವನ್ನು ಧರಿಸಿದ್ದರು. ಈ ಕುರಿತು ಸಾಮಾಜಿಕ […]
ಬಾಂಗ್ಲಾದಲ್ಲಿ ಹಿಂದೂಗಳ ವಿರುದ್ಧ ಮತ್ತೆ ಭುಗಿಲೆದ್ದ ಹಿಂಸಾಚಾರ; ಹಲ್ಲೆ, ಬೆಂಕಿ ಹಚ್ಚಿ ವ್ಯಕ್ತಿಯ ಕೊಲೆ!

ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಮೇಲೆ ಗುಂಪು ಹಿಂಸಾಚಾರ ನಡೆದಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗತೊಡಗಿದೆ. ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ, ಘಟನೆಯನ್ನು ಖಂಡಿಸಿದ್ದು, ಗುಂಪು ಹಿಂಸಾಚಾರದ ಕೃತ್ಯಗಳನ್ನು ವಿರೋಧಿಸುವಂತೆ ಜನರನ್ನು ಒತ್ತಾಯಿಸಿದೆ. ಎಲ್ಲಾ ರೀತಿಯ ಹಿಂಸೆ, ಬೆದರಿಕೆ, ಬೆಂಕಿ ಹಚ್ಚುವಿಕೆ ಮತ್ತು ಆಸ್ತಿ ನಾಶವನ್ನು ‘ಬಲವಾಗಿ ಮತ್ತು ನಿಸ್ಸಂದಿಗ್ಧವಾಗಿ’ ಖಂಡಿಸುವುದಾಗಿ ಯೂನಸ್ ಸರ್ಕಾರ ಹೇಳಿದೆ. ಅಂತಹ ಕ್ರಮಗಳು ದೇಶದ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಹಳಿತಪ್ಪಿಸುವ ಬೆದರಿಕೆಯನ್ನುಂಟುಮಾಡುತ್ತವೆ ಎಂದು ಎಚ್ಚರಿಸಿದೆ. ಬಾಂಗ್ಲಾದೇಶದಲ್ಲಿ ಭಾರತ […]
UAEಯಾದ್ಯಂತ ಮುಂದುವರಿದ ಗುಡುಗು ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ; ಕೇರಳದ ಯುವಕ ಮೃತ್ಯು

ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಪ್ರಮುಖ ನಗರಗಳಾದ ದುಬೈ, ಶಾರ್ಜಾ ಸೇರಿದಂತೆ ಯುಎಇಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ನಡುವೆಯೇ ಅವಘಡವೊಂದು ಸಂಭವಿಸಿದ ಪರಿಣಾಮ ಭಾರತೀಯ ಯುವಕನೋರ್ವ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಭಾರೀ ಗುಡುಗು ಸಹಿತ ಮಳೆ ಮುಂದುವರಿದಿದ್ದು, ಹವಾಮಾನ ವೈಪರೀತ್ಯದಿಂದಾಗಿ ನಿವಾಸಿಗಳು ಮನೆಯೊಳಗೆ ಇರಲು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಗತ್ಯವಿದ್ದರೆ ಮಾತ್ರ ಸಂಚರಿಸುವಂತೆ ಯುಎಇ ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಹವಾಮಾನದಿಂದಾಗಿ ಎಮಿರೇಟ್ಸ್ ಮತ್ತು ಫ್ಲೈದುಬೈ ಸೇರಿ ಹಲವಾರು ವಿಮಾನಗಳನ್ನು ರದ್ದುಗೊಳಿಸಿದೆ. ಡಿಸೆಂಬರ್ 19 […]
ರಕ್ತ ನಿಧಿಯಿಂದ ರಕ್ತ ಪಡೆದಿದ್ದ ನಾಲ್ವರು ಮಕ್ಕಳಿಗೆ HIV ಸೋಂಕು

ಭೋಪಾಲ್: ರಕ್ತ ನಿಧಿಯಿಂದ ರಕ್ತ ಪಡೆದಿದ್ದ ನಾಲ್ವರು ಮಕ್ಕಳಿಗೆ ಎಚ್ಐವಿ ಸೋಂಕು ತಗುಲಿರುವ ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯಿಂದ ರಕ್ತ ವರ್ಗಾವಣೆ ಬಳಿಕ ಮಕ್ಕಳಲ್ಲಿ ಸೋಂಕು ದೃಢ ಪಟ್ಟಿದ್ದು, ರಕ್ತ ನಿಧಿಯ ಉಸ್ತುವಾರಿ ವೈದ್ಯರು ಹಾಗೂ ಪ್ರಯೋಗಾಲಯದ ಇಬ್ಬರು ಸಿಬ್ಬಂದಿ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಡಿ.16ರಂದು ಮಕ್ಕಳಲ್ಲಿ ಹೆಚ್ಐವಿ ಸೋಂಕು ಇರೋದು ಬೆಳಕಿಗೆ ಬಂದಿತ್ತು. ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆ ವೇಳೆ ಸೋಂಕು ದೃಢಪಟ್ಟಿತ್ತು.ಮಕ್ಕಳು ಥಲಸ್ಸೇಮಿಯಾ ಎಂಬ ಅನುವಂಶಿಕ […]
ಭಾರತದ ಪ್ರಗತಿಗೆ ಅಲ್ಪಸಂಖ್ಯಾತರು ಒಗ್ಗೂಡಿ: ಶಾಸಕ ರಿಜ್ವಾನ್ ಅರ್ಷದ್ ಕರೆ

ಬೆಂಗಳೂರು: ಆಹಾರ, ಉಡುಪು, ಭಾಷೆ ಮತ್ತು ಸಂಸ್ಕೃತಿಯ ಆಯ್ಕೆಯ ವಿಚಾರದಲ್ಲಿ ಭಾರತದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಲಾಗುತ್ತಿದೆ. ಈ ಸತ್ಯವನ್ನು ಒಪ್ಪಿಕೊಂಡು ಮುಂದುವರೆಯದಿದ್ದರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ ಎಂದು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರು ಗುರುವಾರ ಹೇಳಿದ್ದಾರೆ. ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗವು ಗುರುವಾರ ನಗರದಲ್ಲಿ ಆಯೋಜಿಸಿದ್ದ ಅಲ್ಪಸಂಖ್ಯಾತ ಹಕ್ಕುಗಳ ದಿನಾಚರಣೆಯ ಕಾರ್ಯಕ್ರಮದಲ್ಲಿ ರಿಜ್ವಾನ್ ಅರ್ಷದ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಇಂತಹ ಸೂಕ್ಷ್ಮ ಸಮಯದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಡಿತಗೊಳಿಸದೆ ಸಂವಿಧಾನವನ್ನು ಸರಿಯಾಗಿ ಜಾರಿಗೆ ತರುತ್ತಿದ್ದಾರೆಯೇ […]
Mangalore | 22 ದೇಶಗಳನ್ನು ಮಣಿಸಿ ಗೆದ್ದ ಕುಡ್ಲದ ಚೆಲುವೆ, ಮಗನ ʼಮಮ್ಮಿʼ ಈಗ ʼಮಿಸೆಸ್ ಅರ್ಥ್ ಇಂಟರ್ ನ್ಯಾಷನಲ್!

ಮಂಗಳೂರು: ಮನೆ, ಸಂಸಾರ, ಮಗ, ಉದ್ಯಮವನ್ನೂ ನಿಭಾಯಿಸುತ್ತಾ, ಮಾಡೆಲಿಂಗ್ ಜಗತ್ತಿನಲ್ಲಿ ಛಾಪು ಮೂಡಿಸಿದ ಮಂಗಳೂರಿನ ಬೆಡಗಿಯೋರ್ವರು ಫಿಲಿಫೈನ್ಸ್ನಲ್ಲಿ ನಡೆದ ಮಿಸೆಸ್ ಅರ್ಥ್ ಇಂಟರ್ ನ್ಯಾಷನಲ್ ಸ್ಪರ್ಧೆಯಲ್ಲಿ ಕ್ರೌನ್ ಮುಡಿಗೇರಿಸಿದ್ದಾರೆ. ಮಂಗಳೂರಿನ ಚಿತ್ರಾಪುರದಲ್ಲಿ ಸೂಪರ್ ಮಾರ್ಕೆಟ್ ಉದ್ಯಮಿಯಾಗಿರುವ ವಿದ್ಯಾ ಸಂಪತ್ ಈ ಸಾಧನೆ ಮಾಡಿದವರು. ಬೆಂಗಳೂರಿನಲ್ಲಿ ನಡೆದ ಸ್ಪರ್ಧೆಯಲ್ಲಿ ಅವರು ವಿವಿಧ ರೌಂಡ್‌ಗಳ ಮೂಲಕ ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಡಿ. 2 ರಿಂದ ಡಿ.10ರವರೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಭಾರತದಿಂದ ಆಯ್ಕೆಯಾದ ಏಕೈಕ ಸ್ಪರ್ಧಿ. […]
‘ಆಕೆ ನರಕಕ್ಕೆ ಹೋಗಲಿ, ನಿತೀಶ್ ಕುಮಾರ್ ಕ್ರಮ ಸರಿ ಇದೆ’: ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂನ್ನು ಸಮರ್ಥಿಸಿಕೊಂಡ BJP ಸಚಿವ

ನವದೆಹಲಿ: ನೇಮಕಾತಿ ಪತ್ರ ಪಡೆಯಲು ಬಂದ ಮುಸ್ಲಿಂ ವೈದ್ಯೆಯ ಹಿಜಾಬ್ ಹಿಡಿದೆಳೆದ ಬಿಹಾರ ಸಿಎಂ ನಿತೀಶ್ ಕುಮಾರ್ ಪರ ಕೇಂದ್ರ ಸಚಿವ ಗಿರಿರಾದ್ ಸಿಂಗ್ ಮಾತನಾಡಿದ್ದಾರೆ. ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಮೊನ್ನೆ ಸೋಮವಾರ ಪಾಟ್ನಾದಲ್ಲಿ ನಡೆದ ಘಟನೆಗೆ ಪ್ರತಿಕ್ರಿಯಿಸಿದ ಸಚಿವ ಗಿರಿರಾಜ್ ಸಿಂಗ್, ಘಟನೆಯಿಂದ ಉಂಟಾದ ಆಘಾತದಿಂದಾಗಿ ಮಹಿಳೆ ಕೆಲಸ ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಹೇಳಿದಾಗ ಪರವಾಗಿಲ್ಲ, ಅವರು ನರಕಕ್ಕೆ ಹೋಗಬಹುದು […]
Mangaluru: ಇನ್ಸ್ಟಾಗ್ರಾಮ್ ಪೇಜ್‌ನಲ್ಲಿ ಕೋಮು ಪ್ರಚೋದನಕಾರಿ ಸಂದೇಶ: ಕುಖ್ಯಾತ ಕ್ರಿಮಿನಲ್ ಪೊಲೀಸ್ ಬಲೆಗೆ

ಮಂಗಳೂರು: ಇನ್ಸ್ಟಾಗ್ರಾಮ್ ಪೇಜ್‌ನಲ್ಲಿ ಪ್ರಚೋದನಕಾರಿ ಸಂದೇಶ ಹರಿಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು, ಕಾಟಿಪಾಳ್ಳ ನಿವಾಸಿ ಅಭಿಷೇಕ್ ಎಮ್(23) ಬಂಧಿತ ಆರೋಪಿ. ಆರೋಪಿಯ ವಿರುದ್ಧ ಬಜಪೆ ಪೊಲೀಸ್ ಠಾಣಾ ಅ.ಕ್ರ. 84/2025 ಕಲಂ. 353(1) (ಸಿ), 353(2) 56,57 ಜೊತೆಗೆ 189 ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ, mr_a_titude ಎಂಬ ಇನ್ಸ್ಟಾಗ್ರಾಮ್ ಪೇಜ್ ಮುಖಾಂತರ ಹೋಟೆಲ್ ನಿಸರ್ಗ ಎಂಬ ಫೋಟೋವನ್ನು ಹಾಕಿ ಅದರ ಮೇಲೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ […]
ಶಿವಮೊಗ್ಗ | ಕಾಂಗ್ರೆಸ್ ಪ್ರತಿಭಟನೆಯಲ್ಲಿ ಎಎಸ್ಐ ಮಾಂಗಲ್ಯ ಸರ ಕಳುವು: ಕಣ್ಣೀರಿಟ್ಟ ಅಧಿಕಾರಿ, ಕದ್ದವರು ಯಾರು?

ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಪ್ರತಿಭಟನೆ ವೇಳೆ ಬಂದೋಬಸ್ತ್ ಡ್ಯೂಟಿಯಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಕೊರಳಲ್ಲಿದ್ದ 40 ಗ್ರಾಂ ತೂಕದ ಮಾಂಗಲ್ಯ ಸರವನ್ನೇ ಕಳ್ಳರು ಎಗರಿಸಿದ ಆಘಾತಕಾರಿ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬದ ವಿರುದ್ಧದ ಪಿತೂರಿ ಕಾನೂನುಬಾಹಿರ ಎಂದು ಸಾಬೀತಾದ ಹಿನ್ನೆಲೆಯಲ್ಲಿ, ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ದರು. ಈ ವೇಳೆ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಎಎಸ್‌ಐ ಅಮೃತಾ ಅವರು ಪ್ರತಿಭಟನಾಕಾರರನ್ನು […]