Flash News

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ: ಅಬ್ದುಲ್ ರಝಾಕ್

ಮಂಡ್ಯ: ಶ್ರೀರಂಗಪಟ್ಟಣದ ಐತಿಹಾಸಿಕ ಜಾಮಿಯಾ ಮಸೀದಿಯನ್ನು ದೇವಸ್ಥಾನದ ಮೇಲೆ ಕಟ್ಟಲಾಗಿದೆ ಎಂದು ಹೊರಗಿನವರು ಬಂದು ಸುಳ್ಳು ಹೇಳಿದ್ದಾರೆ. ಇವರು ಡಿಸೆಂಬರ್ 6 ಗೊತ್ತಾ, ಮಸೀದಿ ಕೆಡವಿಬಿಡುತ್ತೇವೆ ಎಂದರೆ, ನಾವು ಕೈಗೆ ಬಳೆ ಹಾಕಿಕೊಂಡು ಕೂತಿದ್ದೀವಾ? ಎಂದು ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಖಾನ್ ಸವಾಲು ಹಾಕಿದ್ದಾರೆ. ಜೊತೆಗೆ, ಸಂಕೀರ್ತನ ಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದವರ ಮೇಲೆ ಎಫ್‌ಐಆರ್ ಹಾಕುವಂತೆ ಪಟ್ಟು ಹಿಡಿದಿದ್ದಾರೆ. ಶುಕ್ರವಾರದ ನಮಾಜ್‌ಗಾಗಿ ಶ್ರೀರಂಗಪಟ್ಟಣಕ್ಕೆ ಬಂದಿದ್ದ ಅಬ್ದುಲ್ ರಜಾಕ್, ಜನದಟ್ಟಣೆ ಹೆಚ್ಚಾದ ಕಾರಣ ಪೊಲೀಸರ […]

ದ್ವೇಷ ಭಾಷಣ ವಿರೋಧಿ ಮಸೂದೆ | ಹಿಂದುತ್ವ ನಾಯಕರನ್ನು ಮುಗಿಸುವ ಷಡ್ಯಂತ್ರ: ಮುತಾಲಿಕ್ ಆರೋಪ

ದಾವಣಗೆರೆ: ರಾಜ್ಯ ಸರಕಾರ ದ್ವೇಷ ಭಾಷಣ, ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಕಾಯ್ದೆಯ ಮೂಲಕ ಹಿಂದೂಗಳನ್ನು ಗುರಿಯಾಗಿಸಿ ಹಿಂದುತ್ವ ಸಂಘಟನೆ, ನಾಯಕರನ್ನು ಮುಗಿಸುವ ಷಡ್ಯಂತ್ರ ನಡೆಸಿದೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಮಸೂದೆಯನ್ನು ಶ್ರೀರಾಮಸೇನೆ ಉಗ್ರವಾಗಿ ಖಂಡಿಸುತ್ತದೆ. ಸರಕಾರ ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡಿ, ಮುಸ್ಲಿಮರ ಓಟ್ ಗಾಗಿ ಈ ಮಸೂದೆ ಜಾರಿಗೆ ತರಲು ಹೊರಟಿದೆ. ಗೋಹತ್ಯೆ ನಿಷೇಧ ಜಾರಿಯಲ್ಲಿದ್ದಾಗಲೂ ಹಲವೆಡೆ ಗೋಹತ್ಯೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ […]

ಮದುವೆ ವಯಸ್ಸು ತಲುಪದಿದ್ದರೂ ವಯಸ್ಕರು ಲಿವ್-ಇನ್ ಸಂಬಂಧದಲ್ಲಿರಬಹುದು: ರಾಜಸ್ಥಾನ ಹೈಕೋರ್ಟ್

ಜೈಪುರ: ಮದುವೆಯಾಗಲು ಕಾನೂನಾತ್ಮಕವಾಗಿ ನಿಗದಿಯಾಗಿರುವ ವಯಸ್ಸನ್ನು ತಲುಪದ ಇಬ್ಬರು ವಯಸ್ಕರು, ಸಹಮತದ ಆಧಾರದ ಮೇಲೆ ಸಹಜೀವನ ನಡೆಸಲು ಅರ್ಹರು ಎಂದು ಮಹತ್ವದ ತೀರ್ಪು ಪ್ರಕಟಿಸಿರುವ ರಾಜಸ್ಥಾನ ಹೈಕೋರ್ಟ್‌, ಅವರ ಸಾಂವಿಧಾನಿಕ ಹಕ್ಕನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದೆ. ಪರಸ್ಪರ ಒಪ್ಪಿಗೆಯ ಮೇರೆಗೆ ನಾವಿಬ್ಬರೂ ಒಟ್ಟಿಗೆ ವಾಸಿಸುತ್ತಿದ್ದೇವೆ. ನಮಗೆ ರಕ್ಷಣೆ ನೀಡಬೇಕು’ ಎಂದು ಕೋರಿ ಕೋಟಾದ 18ರ ಯುವತಿ ಹಾಗೂ 19ರ ಯುವಕ ಸಲ್ಲಿಸಿದ್ದ ಅರ್ಜಿಯ ಮೇಲ್ವಿಚಾರಣೆ ನಡೆಸಿದ ಬಳಿಕ ನ್ಯಾಯಮೂರ್ತಿ ಅನೂಪ್‌ ಧಂದ್‌ ಈ ತೀರ್ಪು […]

ತನಗಿಂತ ಅಂದವಾಗಿರುವ ಮಕ್ಕಳನ್ನು ಕೊಂದ ಪ್ರಕರಣಕ್ಕೆ ಟ್ವಿಸ್ಟ್: ಮಹಿಳೆಯ ಕುಟುಂಬ ಹೇಳಿದ್ದೇನು?

ಹರಿಯಾಣ, ಡಿಸೆಂಬರ್ 05: ಹರಿಯಾಣದಲ್ಲಿ ನಡೆದ ಮಕ್ಕಳ ಸರಣಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಮಹಿಳೆಯೊಬ್ಬಳು ತನಗಿಂತ ಅಂದವಾಗಿರುವ ಮಕ್ಕಳನ್ನು ಹತ್ಯೆ ಮಾಡಿದ್ದಳು. ಆಕೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಮಕ್ಕಳ ಕುಟುಂಬದವರ ಹೇಳಿಕೆ ಬೆಚ್ಚಿಬೀಳಿಸಿದೆ. ವಿಚಾರಣೆಯ ಸಮಯದಲ್ಲಿ ಮಹಿಳೆ ಹಲವಾರು ವರ್ಷಗಳಿಂದ ತನ್ನ ಕುಟುಂಬ ಮತ್ತು ಸಂಬಂಧಿಕರ ಸುಂದರ ಹುಡುಗಿಯರನ್ನು ಗುರಿಯಾಗಿಸಿಕೊಂಡು ಕೊಲೆ ಮಾಡುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾಳೆ. ಅಲ್ಲದೇ, ಇಲ್ಲಿಯವರೆಗೆ ತನ್ನ ಸ್ವಂತ ಮಗ ಸೇರಿದಂತೆ ನಾಲ್ವರು ಮಕ್ಕಳನ್ನು ಕೊಂದಿದ್ದಾಗಿ ಬಾಯ್ಬಿಟ್ಟಿದ್ದಾಳೆ ಎಂದು […]

ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣೆ; ಪಕ್ಷದ ಶಿಸ್ತು ಉಲ್ಲಂಘನೆ, ಕಾರಣ ಕೇಳಿ ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ನೋಟಿಸ್ ಜಾರಿ

ಮಂಗಳೂರು: ಎಐಸಿಸಿ ಸೆಕ್ರಟರಿ ಕೆ.ಸಿ ವೇಣುಗೋಪಾಲ್ ಮೊನ್ನೆ ಮಂಗಳೂರಿಗೆ ಬಂದಿದ್ದಾಗ ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದಲ್ಲಿ ಡಿಕೆ ಡಿಕೆ ಎಂದು ಘೋಷಣೆ ಕೂಗಿ ಮುಜುಗರ ಸೃಷ್ಟಿಸಿದ ಘಟನೆ ನಡೆದಿದ್ದು, ಈ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಾರಣ ಕೇಳಿ ಮಿಥುನ್ ರೈಗೆ ನೋಟಿಸ್ ಜಾರಿ ಮಾಡಿದೆ. ಡಿ.3ರಂದು ಮಂಗಳೂರಿನಲ್ಲಿ ನಡೆದ ಗಾಂಧಿ- ಗುರು ಸಂವಾದ ಶತಾಬ್ದಿ ಕಾರ್ಯಕ್ರಮಕ್ಕೆ ಕೆಸಿ ವೇಣುಗೋಪಾಲ್ ಆಗಮಿಸಿದ್ದರು. ಈ ವೇಳೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೊರ ಬರುತ್ತಿದ್ದಂತೆ ಕಾಂಗ್ರೆಸ್ ಮುಖಂಡ ಮಿಥುನ್ ರೈ […]

ಮುಸ್ಲಿಮರು ಈಶ್ವರ ಅಲ್ಹಾ ತೇರೇ ನಾಮ್ ಅಂತ ಎಲ್ಲೂ ಹೇಳಿಲ್ಲ: ಸಿ.ಟಿ ರವಿ

ಚಿಕ್ಕಮಗಳೂರು: ಮುಸ್ಲಿಮರು ಎಲ್ಲೂ ಈಶ್ವರ ಅಲ್ಹಾ ತೇರೇ ನಾಮ್ ಅಂತ ಹೇಳಿಲ್ಲ, ನಾನಂತೂ ಹೇಳಿದ್ದನ್ನು ಕೇಳಿಲ್ಲ. ಮಸೀದಿಗಳಲ್ಲೂ ಹೇಳಿಕೊಟ್ಟಿಲ್ಲ. ಮದ್ರಾಸಗಳಲ್ಲಿ ಹೇಳಿಕೊಟ್ಟಿದ್ರೆ ಭಯೋತ್ಪಾದಕರುಗಳೇ ಇರುತ್ತಿರಲಿಲ್ಲ ಎಂದು ಎಂಎಲ್‌ಸಿ ಸಿ.ಟಿ ರವಿ ಹೇಳಿದರು. ದತ್ತಪೀಠದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಹಿಂದೂಗಳು ರಾಮ್ ರಹೀಮ್ ಒಂದೇ ಎಂದು ಹೇಳ್ತಿದ್ದೀವಿ, ಮುಸ್ಲಿಮರು ಹೇಳ್ತಿಲ್ಲ. ರಾಮ್ ರಹೀಮ್ ಒಂದೇ ಎಂದು ಅವರು ಹೇಳಿಕೊಟ್ಟಿದ್ರೆ ಜಗಳಗಳು ಆಗ್ತಿರಲಿಲ್ಲ. ನಾವು ಅಲ್ಹಾ ದೇವ್ರು ಅನ್ನೋಕೆ ತೊಂದರೆ ಇಲ್ಲ. ನಮ್ಮ ಪರಂಪರೆ ಅದಕ್ಕೆ ಅವಕಾಶ […]

ಕೋಮು ದ್ವೇಷ: ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಪುತ್ತೂರು: ಕೋಮು ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟು ಮಾಡುವ ಭಾಷಣ ಮಾಡಿದ ಆರೋಪದಲ್ಲಿ ತನ್ನ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ನಿರೀಕ್ಷಣಾ ಜಾಮೀನು ಕೋರಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ ಭಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮಂಗಳವಾರ ನಡೆಯಿತು. ಪ್ರಕರಣದ ದೂರುದಾರರಾದ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಪ್ರಾಸಿಕ್ಯೂಶನ್ ಜತೆ ವಾದ ಮಂಡನೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ […]

‘ಬ್ಯಾರಿ ಎಲ್ತ್‌ಗಾರ್ತಿಮಾರೊ ಕೂಟ’ ಮೂರನೇಯ ಸಮ್ಮಿಲನ

ಮಂಗಳೂರು: “ಒರ್ಮೆಪ್ಪಾಡ್-3,” ನವೆಂಬರ್ ತಿಂಗಳ 30 ಭಾನುವಾರದಂದು ಮಂಗಳೂರು ಅಶೋಕ ನಗರದ ಪ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ನಡೆಯಿತು. ಈ ಕೂಟದ ನಿರ್ವಾಹಕಿ ಝುಲೈಕ ಮುಮ್ತಾಝ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಾ.ಜುವೇರಿಯಾ ಮುಫೀದ ಇವರ ಸಂಯೋಜನೆಯಲ್ಲಿ ನಡೆದ ಕವಿಗೋಷ್ಟೀಯಲ್ಲಿ ಕವತ್ರಿಯರಾದ ರಮೀಝ ಯಂ.ಬಿ, ರಹ್ಮತ್ ಪುತ್ತೂರು, ಹಸೀನ ಮಲ್ನಾಡ್, ಅಸ್ಮತ್ ವಗ್ಗ, ನಸೀಮ ಸಿಧ್ದಕಟ್ಟೆ, ನಸೀಬ ಗಡಿಯಾರ್, ಮುನೀರ ತೊಕೊಟ್ಟು, ಕಲಂದರ್ ಬೀವಿ, ಸಲ್ಮಾ ಮೈಕಾಲ, ಮುಝಾಹಿದ, ಸಾರ ಅಲಿ, ರೇಶ್ಮ ಎಸ್ ಐ, ಮರಿಯಂ ಇಸ್ಮಾಯಿಲ್ ಭಾಗವಹಿಸಿದರು.ಬಳಿಕ […]

ಬಾಬರಿ ಮಸೀದಿ ನಿರ್ಮಿಸುವ ಯೋಜನೆ ಘೋಷಿಸಿದ್ದ ತೃಣಮೂಲ ಕಾಂಗ್ರೆಸ್ ಶಾಸಕ ಸಸ್ಪೆಂಡ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬಾಬರಿ ಮಸೀದಿ ನಿರ್ಮಿಸುವ ಯೋಜನೆ ಘೋಷಿಸಿದ್ದ ಶಾಸಕ ಹುಮಾಯೂನ್ ಕಬೀರ್‌ನನ್ನ ಆಡಳಿತರೂಢ ತೃಣಮೂಲ ಕಾಂಗ್ರೆಸ್ ಅಮಾನತುಗೊಳಿಸಿದೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕಬೀರ್‌, ಬಾಬರಿ ಮಸೀದಿ ಕೆಡವಿದ ವಾರ್ಷಿಕೋತ್ಸವ ದಿನವಾದ ಡಿಸೆಂಬರ್ 6ರಂದೇ ಬೆಲ್ದಂಗಾದಲ್ಲಿ ಮಸೀದಿಗೆ ಅಡಿಪಾಯ ಹಾಕುವುದಾಗಿ ಘೋಷಿಸಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಟಿಎಂಸಿ ನಾಯಕ ಮತ್ತು ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್, ಕಬೀರ್‌ ಬಿಜೆಪಿ ಬೆಂಬಲದೊಂದಿಗೆ ಕೋಮುವಾದ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಪಕ್ಷವೂ ಈ ಹಿಂದೆ ಹಲವು ಬಾರಿ […]

YouTube ವಿಡಿಯೋ ನೋಡಿ ಕಳ್ಳತನ: ಪರಿಚಯಸ್ಥ ಉದ್ಯಮಿ ಮನೆಯಲ್ಲಿ 1.14 ಕೋಟಿ ರೂ. ದರೋಡೆ..!

ಬೆಂಗಳೂರು: ಯೂಟ್ಯೂಬ್‍ನಲ್ಲಿ ವಿಡಿಯೋ ನೋಡಿ ಪರಿಚಯಸ್ಥ ಉದ್ಯಮಿಯೊಬ್ಬರ ಮನೆಯಲ್ಲಿ 1 ಕೋಟಿ ರೂ.ಗೂ ಅಧಿಕ ಹಣ ಹಾಗೂ ಚಿನ್ನಾಭರಣ ದೋಚಿದ್ದ ಇಬ್ಬರು ಆರೋಪಿಗಳನ್ನು ಹೆಬ್ಬಗೋಡಿ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ. ಚಿಕ್ಕಪೇಟೆಯಲ್ಲಿ ಬಟ್ಟೆ ಅಂಗಡಿ ಹೊಂದಿರುವ ಬೆಂಗಳೂರು ದಕ್ಷಿಣ ಜಿಲ್ಲೆಯ ವಿಘ್ನೇಶ್ವರ ನಗರದ ನಿವಾಸಿ ಎಚ್‌ಕೆ ಶ್ರೀನಿವಾಸಮೂರ್ತಿ (39) ಮತ್ತು ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿರುವ ಮಾಗಡಿ ಮುಖ್ಯ ರಸ್ತೆಯ ನಿವಾಸಿ ಬಿಎನ್ ಅರುಣ್ ಕುಮಾರ್ (39) ಬಂಧಿತರು. ಹುಲಿಮಂಗಲದ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಉದ್ಯಮಿ ಸುನೀಲ್ ಕುಮಾರ್ ಆರ್ […]