UDUPI | ನೀರು ಸೇದುವಾಗ ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದ ಮಗು ಸಾವು..!

►ಮಗುವಿನ ರಕ್ಷಣೆಗಾಗಿ ಬಾವಿಗೆ ಇಳಿದಿದ್ದ ತಾಯಿ..! ಉಡುಪಿ: ನೀರು ಸೇದುತ್ತಿದ್ದಾಗ ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಕಂದಮ್ಮ ದಾರುಣವಾಗಿ ಸಾವನ್ನಪ್ಪಿದ ಘಟನೆ ಉಡುಪಿಯ ಕಿನ್ನಿಮೂಲ್ಕಿಯಲ್ಲಿ ಮಂಗಳವಾರ (ಡಿ.16) ನಡೆದಿದೆ. ಒಂದೂವರೆ ವರ್ಷದ ಕೀರ್ತನಾ ಮೃತಪಟ್ಟ ಮಗು. ಮಗುವಿನ ತಾಯಿ ನಯನಾ ಕರ್ಕಡ ಎಂಬವರು ಮಗುವನ್ನು ಎತ್ತಿಕೊಂಡು ಮನೆ ಸಮೀಪದ ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ಮಗು ಆಯತಪ್ಪಿ ಬಾವಿಗೆ ಬಿದ್ದಿದೆ. ತಕ್ಷಣ ಮಗುವಿನ ತಾಯಿ ಹಗ್ಗದ ಸಹಾಯದಿಂದ ಬಾವಿಗೆ ಇಳಿದಿದ್ದಾರೆ. ಆದರೆ ಅದಾಗಲೇ […]
ಮಸೀದಿಗಳಲ್ಲಿ ಕೂಗುವ ಆಜಾನ್‌ನಿಂದ ಶಬ್ದಮಾಲಿನ್ಯ: ಪರಿಷತ್‌ನಲ್ಲಿ ಆಡಳಿತ-ವಿಪಕ್ಷಗಳ ನಡುವೆ ಗದ್ದಲ ಗಲಾಟೆ

ಬೆಳಗಾವಿ: ಮಸೀದಿಗಳಲ್ಲಿ ಕೂಗುವ ಆಜಾನ್‌ನಿಂದ ಶಬ್ದಮಾಲಿನ್ಯ ಆಗ್ತಿದೆ ಎಂಬ ವಿಚಾರ ವಿಧಾನ ಪರಿಷತ್‌ನಲ್ಲಿಂದು ಆಡಳಿತ-ವಿಪಕ್ಷಗಳ ನಡುವೆ ಗದ್ದಲ ಗಲಾಟೆಗೆ ಕಾರಣವಾಗಿದೆ. ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಡಿ.ಎಸ್ ಅರುಣ್ ಈ ಬಗ್ಗೆ ಪ್ರಶ್ನೆ ಕೇಳಿದ್ರು. ಆಜಾನ್ ಕೂಗುವಾಗ ಶಬ್ದಮಾಲಿನ್ಯ ಆಗ್ತಿದೆ. ನಿಯಮದ ಪ್ರಕಾರ ಬೆಳಗ್ಗೆ 6ರಿಂದ 10ರ ತನಕ ಯಾವುದೇ ಶಬ್ದಮಾಲಿನ್ಯ ಆಗಬಾರದು. ನನ್ನ ಮನೆಯ ಹಿಂದೆಯೇ ಮಸೀದಿ ಇದೆ. 4:45ಕ್ಕೆ ಆಜಾನ್ ಶುರುವಾಗುತ್ತೆ. ನಮ್ಮ ತಂದೆಗೆ 86 ವರ್ಷ ಆ ಆಜಾನ್ ಸೌಂಡ್‌ಗೆ ಎದ್ದು ಕೂರಬೇಕು. […]
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಡಿಕೆಶಿ, ಇನಾಯತ್ ಅಲಿಗೆ ಬಿಗ್ ರಿಲೀಫ್

►ಇ.ಡಿ ಜಾರ್ಜ್ ಶೀಟ್ ಪರಿಗಣಿಸಲು ಕೋರ್ಟ್ ನಕಾರ ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಹಣ ವರ್ಗಾವಣೆ ಆರೋಪಪಟ್ಟಿಯನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ. ಚಾರ್ಜ್‌ಶೀಟ್‌ಅನ್ನು ತಿರಸ್ಕರಿಸಿದೆ. ಪ್ರಕರಣದ ವಿಚಾರಣೆ ನಡೆಸಿರುವ ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗ್ನೆ, “ಹಣ ವರ್ಗಾವಣೆ ತಡೆ […]
ಉಪ್ಪಿನಂಗಡಿ | ಅಂಪೈರ್ ಮೇಲೆ ಹಲ್ಲೆಗೆ ಯತ್ನ : ಕ್ಷಮೆ ಕೇಳುವ ಮೂಲಕ ಬಗೆಹರಿದ ಪ್ರಕರಣ

ಉಪ್ಪಿನಂಗಡಿ: ಉಬಾರ್ ಸ್ಪೋರ್ಟಿಂಗ್ ಕ್ಲಬ್ ಆಯೋಜಿಸಿದ ಉಬಾರ್ ಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಅಂಪೈರ್ ನೀಡಿದ ತೀರ್ಪಿಗೆ ಅಸಮಾಧಾನಗೊಂಡ ಪ್ರೇಕ್ಷಕರಿಬ್ಬರು ಏಕಾಏಕಿ ಮೈದಾನಕ್ಕೆ ನುಗ್ಗಿ ಹಲ್ಲೆಗೆ ಮುಂದಾದ ಘಟನೆ ನಡೆದಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಇವರ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಹಲ್ಲೆಗೆ ಮುಂದಾದ ಯುವಕರು ಅಂಪೈರ್ ಅವರ ಬಳಿಕ ಕ್ಷಮೆ ಕೇಳುವ ಮೂಲಕ ಈ ಪ್ರಕರಣ ಸುಖಾಂತ್ಯಗೊಂಡಿದೆ. ಉಬಾರ್ ಸ್ಪೋರ್ಟಿಂಗ್ ಕ್ಲಬ್ ಉಪ್ಪಿನಂಗಡಿಯಲ್ಲಿ ಅದ್ದೂರಿಯಾಗಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಪಂದ್ಯಾಟವನ್ನು ಆಯೋಜಿಸಿತ್ತು. ರಾತ್ರಿ […]
ಬೆಳ್ತಂಗಡಿ | ಪೃಥ್ವಿ ಆಭರಣ ಮಳಿಗೆಯ ವ್ಯವಸ್ಥಾಪಕನಿಂದ ವಿದ್ಯಾರ್ಥಿಗಳಿಗೆ ಹಲ್ಲೆ ಆರೋಪ: ಪ್ರಕರಣ ದಾಖಲು

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಂ ವಿದ್ಯಾರ್ಥಿಗಳಿಗೆ ಆಭರಣ ಮಳಿಗೆಯ ವ್ಯವಸ್ಥಾಪಕನೋರ್ವ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ ವ್ಯವಸ್ಥಾಪಕನಾಗಿರುವ ಅಶೋಕ್ ಬಂಗೇರ ಹಾಗೂ ಸಿಬ್ಬಂದಿಗಳು ಮೂವರು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೇಣೂರು ಸಮೀಪದ ಮೂವರು ವಿದ್ಯಾರ್ಥಿಗಳು ಶಾಲೆಗೆ ರಜೆ ಹಾಕಿ, ಬೆಳ್ತಂಗಡಿ ಪೇಟೆಯಲ್ಲಿ ಪ್ರತಿ ಸೋಮವಾರ ನಡೆಯುವ […]
ಮಂಡ್ಯ to ಮಡಿಕೇರಿ: Facebook ಗೆಳತಿ ಭೇಟಿಗೆ ಹೋಗಿದ್ದ ಉದ್ಯಮಿಯ ಸುಲಿಗೆ ಹಾಗೂ ಹಲ್ಲೆ ಕೇಸ್; ನಾಲ್ವರು ಬಂಧನ!

ಮಡಿಕೇರಿ: ಸಾಮಾಜಿಕ ಮಾಧ್ಯಮದಲ್ಲಿ ಹನಿಟ್ರ್ಯಾಪ್ ಮೂಲಕ ಆಮಿಷಕ್ಕೆ ಒಳಗಾಗಿ 39 ವರ್ಷದ ಉದ್ಯಮಿಯೊಬ್ಬರ ಮೇಲೆ ಹಲ್ಲೆ, ಅಕ್ರಮ ಬಂಧನ ಮತ್ತು ಹಣ ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ರಚನಾ, ಮಾಲತಿ, ದರ್ಶನ್ ಮತ್ತು ರವಿ ಎಂದು ಗುರುತಿಸಲಾಗಿದೆ. ಡಿಸೆಂಬರ್ 12ರಂದು ಕೊಡಗಿನ ಮಡಿಕೇರಿಯಲ್ಲಿ ಈ ಘಟನೆ ನಡೆದಿತ್ತು. ಇನ್ನು ಈ ಕೃತ್ಯದಲ್ಲಿ ಭಾಗಿಯಾಗಿರುವ ಉಳಿದ ಶಂಕಿತರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನ ಪ್ರಕಾರ, ಮಂಡ್ಯ ಜಿಲ್ಲೆಯ ಮದ್ದೂರು […]
AKMS ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಬಂಧನ

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರಿನಲ್ಲಿ ನಡೆದ AKMS ಬಸ್ ಮಾಲೀಕ ಸೈಫುದ್ದೀನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 108/2025 ಕಲಂ 103 ಹಾಗೂ 3(5)ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರಕರಣದಲ್ಲಿ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದ ಇನ್ನೋರ್ವ ಆರೋಪಿಯಾದ ಮಾಲಿ ಮೊಹಮ್ಮದ್ ಸಿಯಾನ್ (31) ಇತನನ್ನು […]
ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ಎದುರಿಸಿ, ಗೆಲ್ಲಿ ನೋಡೋಣ: ಬಿಜೆಪಿಗೆ ಪ್ರಿಯಾಂಕಾ ಗಾಂಧಿ ಸವಾಲ್!

ನವದೆಹಲಿ: ಬ್ಯಾಲೆಟ್ ಪೇಪರ್ ಮೂಲಕ ನಡೆಯುವ ನ್ಯಾಯಸಮ್ಮತ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಬಿಜೆಪಿ ತನ್ನ ಶಕ್ತಿಯನ್ನು ಸಾಬೀತುಪಡಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸವಾಲು ಹಾಕಿದ್ದಾರೆ. ಜನರ ಮತದಾನದ ಹಕ್ಕನ್ನು ದುರ್ಬಲಗೊಳಿಸಲು ಚುನಾವಣಾ ಪ್ರಕ್ರಿಯೆಯನ್ನು ಉದ್ದೇಶಪೂರ್ವಕವಾಗಿ ಅನುಮಾನ ಬರುವಂತೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್‌ನ ‘ವೋಟ್ ಚೋರ್, ಗಡ್ಡಿ ಛೋಡ್’ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಚುನಾವಣಾ ಆಯೋಗದ (EC) ಬೆಂಬಲವಿಲ್ಲದೆ ಬಿಜೆಪಿ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು. ಆಡಳಿತರೂಢ […]
Mangaluru | TEAM SDPI ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ ಪ್ರಚೋದನಕಾರಿ ಪೋಸ್ಟ್ ; ವಿದೇಶದಲ್ಲಿ ಕುಳಿತು ಇನ್ ಸ್ಟಾಗ್ರಾಮ್ ಪೋಸ್ಟ್ ಹಾಕಿದ್ದ ವ್ಯಕ್ತಿ ಅರೆಸ್ಟ್

ಮಂಗಳೂರು: ಸಾಮಾಜಿಕ ಜಾಲತಾಣ ಇನ್ ಸ್ಟಾ ಗ್ರಾಮ್ ನಲ್ಲಿ ಟೀಮ್ ಎಸ್ಡಿಪಿಐ ಹೆಸರಲ್ಲಿ ಅನ್ಯಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದು ಈ ಪೋಸ್ಟ್ ಹಾಕಿದ್ದ ವಿದೇಶದಲ್ಲಿ ಉದ್ಯೋಗ ಮಾಡುತ್ತಿದ್ದ ಆರೋಪಿಯನ್ನು ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಾಗಲೇ ಅರೆಸ್ಟ್ ಮಾಡಲಾಗಿದೆ. ಕಳೆದ ಅಕ್ಟೋಬರ್ 11ರಂದು ಟೀಮ್ ಎಸ್ಡಿಪಿಐ ಹೆಸರಲ್ಲಿ ಉಳಾಯಿಬೆಟ್ಟು ನಿವಾಸಿ ಅಬ್ದುಲ್ ಖಾದರ್ ಈ ಪೋಸ್ಟ್ ಹಾಕಿದ್ದ. ಪ್ರಕರಣದಲ್ಲಿ ತಾಂತ್ರಿಕ ವಿಧಾನದ […]
Mangaluru: ಯುವತಿ ಸಹಿತ ಮೂವರ ಸೆರೆ; 87.35 ಗ್ರಾಂ ಎಂಡಿಎಂಎ ವಶ

ಮಂಗಳೂರು: ನಗರದಲ್ಲಿರುವ ಹಲವು ಮಾದಕ ದ್ರವ್ಯ ಮಾರಾಟಗಾರರಿಗೆ ಬಹಳಷ್ಟು ಸಮಯದಿಂದ ಬೆಂಗಳೂರಿನಿಂದ ವ್ಯವಸ್ಥಿತವಾಗಿ ಮಾದಕ ಪದಾರ್ಥಗಳನ್ನು ಪೂರೈಸುತ್ತಿದ್ದ ತಂಡವೊಂದನ್ನು ಬಂಧಿಸುವಲ್ಲಿ ಮಂಗಳೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 87.35 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಉಳಾಯಿಬೆಟ್ಟು ಮೂಳೂರು ಬದ್ರಿಯಾನಗರ ಮೂಲದ ಪ್ರಸ್ತುತ ಬಿ.ಸಿ.ರೋಡ್ ಶಾಂತಿಯಂಗಡಿ ನಿವಾಸಿ ಅಹ್ಮದ್ ಸಾಬಿತ್ (35), ಬಿ.ಸಿ.ರೋಡ್ ಕೈಕಂಬ ಜೋಡುಮಾರ್ಗ ಬಿ.ಮೂಡ ಗ್ರಾಮದ ಮೊಹಮ್ಮದ್ ಶಂಶೀರ್ ಮತ್ತು ಬಂಟ್ವಾಳ ಸರಪಾಡಿ ಮಠದಬೆಟ್ಟು ನಿವಾಸಿ ನೌಶೀನಾ (27) ಬಂಧಿತರು. ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು […]