Flash News

ತಂದೆಯ ಹೆಸರಲ್ಲಿ ಮತ ಕೇಳಿ ಯು‌.ಟಿ ಖಾದರ್ ಶಾಸಕರಾದವರು: ಯಶ್‌ಪಾಲ್ ಸುವರ್ಣ

ಉಡುಪಿ: ಅಧಿವೇಶನದಲ್ಲಿ ಉಡುಪಿ ಪರ್ಯಾಯಕ್ಕೆ ಅನುದಾನ ಕೇಳಿದ್ದಕ್ಕಾಗಿ ಸಭಾಧ್ಯಕ್ಷ ಯು.ಟಿ.ಖಾದರ್ ಪೀಠದಿಂದ ಟೀಕಿಸಿರುವುದು ಸರಿಯಲ್ಲ. ಪೀಠಕ್ಕೆ ಗೌರವ ನೀಡಿ ನಾನು ಮೌನವಾಗಿದ್ದೆ. ಆದರೆ ಸ್ಪೀಕರ್ ಅವರು ಹಗುರವಾಗಿ, ಹಿಂದೂ ಧರ್ಮದ ಹರಿಕಥೆ ಬಗ್ಗೆ ಮಾತನಾಡಿದ್ದು ನೋವುಂಟು ಮಾಡಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕನಾಗಿ ನನಗೆ ನನ್ನ ಕ್ಷೇತ್ರದ ಬಗ್ಗೆ ಮಾತನಾಡುವ ಸಂಪೂರ್ಣ ಹಕ್ಕಿದೆ. 15 ದಿನಗಳ ಮುಂಚಿತವಾಗಿ ನಾನು ಸಲ್ಲಿಸಿದ್ದ ಪ್ರಶ್ನೆಯಿದು. ನಾನು ಎಂದಿಗೂ ದಾರಿ ತಪ್ಪುವ […]

ಬಂಟ್ವಾಳ | ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿ ಭೋಜ ಮೂಲ್ಯ ಮನೆ ಜಪ್ತಿ

ಬಂಟ್ವಾಳ: ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು -ತೆಕ್ಕಾರು ರಸ್ತೆಯಲ್ಲಿ ಗೂಡ್ಸ್‌ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಪ್ರಕರಣವನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಮುಂದುವರಿಸಿ ಆರೋಪಿ ಭೋಜ ಮೂಲ್ಯ ಎಂಬವರ ಮನೆ ಹಾಗೂ ಕೊಟ್ಟಿಗೆಯನ್ನು ಜಪ್ತಿ ಮಾಡಿದ್ದಾರೆ. ಅಕ್ರಮ ದನ ಸಾಗಾಟದ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಡಿ.13 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾಜೇಶ್ ಮತ್ತು ಸಿಬ್ಬಂದಿಗಳು KA-70-8686 ನೇ ನೊಂದಣಿಯ […]

ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು: ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (94) ಅವರು ಇಂದು ಸಂಜೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯ ಹಿನ್ನೆಲೆಯಲ್ಲಿ, ಅವರು ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜೂನ್ 16, 1931ರಲ್ಲಿ ದಾವಣಗೆರೆಯ ಶಾಮನೂರು ಗ್ರಾಮದಲ್ಲಿ ಜನಿಸಿದ್ದ ಶಾಮನೂರು ಶಿವಶಂಕರಪ್ಪ ಅವರು 6 ಬಾರಿ ಶಾಸಕರಾಗಿದ್ದರು. ಹಲವು ಮುಖ್ಯಮಂತ್ರಿಗಳ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಶಾಮನೂರು ಅವರು ಅಖಿಲ ಭಾರತೀಯ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ […]

ಮಂಗಳೂರು: ತಲ್ವಾರ್ ಹಿಡಿದು ನೃತ್ಯ ಮಾಡಿದ ವಿಡಿಯೋವನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್; ಆರೋಪಿಗಳ ಬಂಧನ

ಮಂಗಳೂರು: ತಲ್ವಾರ್ ಹಿಡಿದು ನೃತ್ಯ ಮಾಡಿದ ರೀಲ್ಸ್ ವಿಡಿಯೋವನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶೇರ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು, ಬಂದರು ಜೆ.ಡಮ್ ರೋಡ್ ಅಮೀನ್ ಉಲ್ಲಾ 1 ನೇ ಮಹಡಿ ನಿವಾಸಿ ಅಮೀರ್ ಸುಹೇಲ್ (28) ಹಾಗೂ ಮಂಗಳೂರು, ಕಾವೂರಿನ ಉರುಂದಾಡಿಗುಡ್ಡೆ ಧನುಷ್ ಗೌಂಡ್ ಬಳಿ ನಿವಾಸಿ ಸುರೇಶ (29) ಬಂಧಿತ ಆರೋಪಿಗಳು. ಡಿ.13 ರಂದು ಸಾಮಾಜಿಕ ಜಾಲತಾಣ ಫೇಸ್‌ಬುಕ್ ಖಾತೆಯಲ್ಲಿ “Suresh Psy” ಎಂಬ ಹೆಸರಿನ ಖಾತೆ ಹೊಂದಿರುವ […]

ಸಂಪೂರ್ಣ ಗೋಹತ್ಯೆ ನಿಷೇಧಕ್ಕೆ ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್ ಆಗ್ರಹ

ನವದೆಹಲಿ: “ಗೋವನ್ನು ರಾಷ್ಟ್ರಮಾತೆ ಅಥವಾ ರಾಜಮಾತೆ” ಎಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಮೂಲಕ ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್ ಸಂಸತ್ತಿನಲ್ಲಿ ಹಲವರನ್ನು ಅಚ್ಚರಿಗೊಳಿಸಿದರು. ಕಲಾಪದ ಶೂನ್ಯ ವೇಳೆಯಲ್ಲಿ ಅವರು ಈ ವಿಷಯವನ್ನು ಪ್ರಸ್ತಾಪಿಸಿ, “ಭಾರತದ ಸ್ಥಳೀಯ ಗೋ ತಳಿಗಳಿಗೆ ತುರ್ತು ರಕ್ಷಣೆ ಮಾಡಬೇಕು. ಎಲ್ಲ ಜಾನುವಾರುಗಳ ಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು” ಎಂದು ಅವರು ಒತ್ತಾಯಿಸಿದರು. “ದೇಸಿ ಗೋವುಗಳ ಜನಸಂಖ್ಯೆ ವೇಗವಾಗಿ ಕುಸಿಯುತ್ತಿದೆ, ಅವುಗಳ ಗುರುತು ಮತ್ತು ಘನತೆಯನ್ನು ರಕ್ಷಿಸಬೇಕು. ಗೋವು ರಾಷ್ಟ್ರೀಯ ಗುರುತು […]

ಜನವರಿಯಲ್ಲಿ‌ ದರ್ಶನ್‌ ಅಣ್ಣನಿಗೆ ಬೇಲ್‌ ಸಿಗುವ ನಿರೀಕ್ಷೆಯಿದೆ: ಜಮೀರ್‌ ಪುತ್ರ ಝೈದ್‌ ಖಾನ್‌

ಹಾವೇರಿ: ಜನವರಿಯಲ್ಲಿ ದರ್ಶನ್‌ ಅಣ್ಣನಿಗೆ ಜಾಮೀನು ಸಿಗುವ ನಿರೀಕ್ಷೆಯಿದೆ. ಒಂದು ವೇಳೆ ಸಿಗದಿದ್ರೆ ನಾನೇ ಖುದ್ದು ಜೈಲಿಗೆ ಹೋಗಿ ಆಶೀರ್ವಾದ ಪಡೆದು ಬರ್ತೀನಿ ಎಂದು ನಟ ಹಾಗೂ ಸಚಿವ ಜಮೀರ್‌ ಪುತ್ರ ಝೈದ್‌ ಖಾನ್‌ ಹೇಳಿದ್ದಾರೆ. ಹಾವೇರಿಯಲ್ಲಿ ಕಲ್ಟ್‌ ಸಿನಿಮಾ ಪ್ರಮೋಷನ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೋವಿನಲ್ಲೂ ದರ್ಶನ್‌ ಅಭಿಮಾನಿಗಳಿಗೆ ಸಕ್ಸಸ್‌ ಸಿನಿಮಾ ಕೊಟ್ಟಿದ್ದಾರೆ. ʻದರ್ಶನʼ ಎಂಬ ಹೆಸರಿನಿಂದ ಸಿನಿಮಾ ಸಕ್ಸಸ್ ಆಗೇ ಆಗುತ್ತದೆ. ಇವೆರಡನ್ನ ನಾನು ಡೆವಿಲ್ ನೋಡಿ ಕಲಿತುಕೊಂಡೆ. ಸಿನಿಮಾ ತುಂಬಾ ಚೆನ್ನಾಗಿ ಇದೆ. […]

45 ವರ್ಷಗಳ LDF ಆಡಳಿತ ಅಂತ್ಯ: ತಿರುವನಂತಪುರಂ ಪಾಲಿಕೆ ಬಿಜೆಪಿ ತೆಕ್ಕೆಗೆ

ತಿರುವನಂತಪುರಂ: ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು ರಾಜಧಾನಿ ತಿರುವನಂತಪುರಂ ಪಾಲಿಕೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಪ್ರತಿನಿಧಿಸುವ ಸಂಸದೀಯ ಕ್ಷೇತ್ರದಲ್ಲಿ ಬರುವ ತಿರುವನಂತಪುರಂ ಮಹಾನಗರ ಪಾಲಿಕೆಯು ಬಹಳ ಹಿಂದಿನಿಂದಲೂ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಅಥವಾ ಎಲ್‌ಡಿಎಫ್‌ ಪ್ರಾಬಲ್ಯವನ್ನು ಹೊಂದಿತ್ತು. ಎನ್‌ಡಿಎ ಪಾಲಕ್ಕಾಡ್ ಪುರಸಭೆಯಲ್ಲೂ ಮೇಲುಗೈ ಸಾಧಿಸಿದೆ. ಬಿಜೆಪಿ 25 ಸ್ಥಾನಗಳೊಂದಿಗೆ ಪಾಲಕ್ಕಾಡ್ ಪುರಸಭೆಯಲ್ಲಿ ಏಕೈಕ ಅತಿದೊಡ್ಡ […]

UDF ಅಲೆಗೆ ಕೊಚ್ಚಿ ಹೋದ LDF: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ UDFಗೆ ಸ್ಪಷ್ಟ ಬಹುಮತ

ಕೊಟ್ಟಾಯಂ: ಕೇರಳ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಶನಿವಾರ (ಡಿ.13) ಬೆಳಗ್ಗೆ 8ಗಂಟೆಗೆ ಆರಂಭಗೊಂಡಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ, ನಗರ ಪ್ರದೇಶದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಮುನ್ನಡೆ ಸಾಧಿಸಿದ್ದು, ಪಂಚಾಯತ್‌ ಚುನಾವಣೆಯಲ್ಲಿ ಎಲ್‌ ಡಿಎಫ್‌ ಮತ್ತು ಯುಡಿಎಫ್‌ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿರುವುದಾಗಿ ತಿಳಿಸಿದೆ. ಕೇರಳದಾದ್ಯಂತ ಬಿಗಿ ಬಂದೋಬಸ್ತ್‌ ನಲ್ಲಿ 244 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ರಾಜ್ಯ ಚುನಾವಣ ಆಯೋಗದ ವೆಬ್‌ ಸೈಟ್‌ ಮಾಹಿತಿಯಂತೆ, ಎಲ್‌ ಡಿಎಫ್‌ 353 ಗ್ರಾಮ ಪಂಚಾಯತ್‌ ಸ್ಥಾನಗಳಲ್ಲಿ […]

‘ನಂಗೆ ಮಜಾ ಬೇಕು, ನಿಂಗೆ ಹಣ ಬೇಕು’: ಸ್ವಾಮೀಜಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಮೆಳೆಕೋಟೆಯಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸೈಟ್ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದಲ್ಲದೆ, ಅದನ್ನು ವಾಪಸ್ ಕೊಡಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಮಹಿಳೆ ದೂರಿದ್ದಾರೆ. ಮಹಿಳೆ ಮತ್ತು ಆಕೆಯ ಪತಿ ಸ್ವಾಮೀಜಿ ನಿವಾಸದ ಬಳಿಯೇ ವಾಸವಿದ್ದು, ಪರಿಚಯವಾಗಿತ್ತು ಎನ್ನಲಾಗಿದೆ. ಸ್ವಾಮೀಜಿ ತಮ್ಮ ಪರಿಚಯದವರಿಂದ ಕಡಿಮೆ ಬೆಲೆಗೆ ಸೈಟ್ ಕೊಡಿಸುವ ಭರವಸೆ […]

ರಾಜ್ಯದಲ್ಲಿ ಮುಸ್ಲಿಂ ಜನಸಂಖ್ಯೆ 50% ದಾಟಿದರೆ, ಇತರರು ಉಳಿಯುವುದಿಲ್ಲ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ

ಹೊಸದಿಲ್ಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯದಲ್ಲಿ ಜನಸಂಖ್ಯಾ ಆಕ್ರಮಣದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಮುಸ್ಲಿಂ ಜನಸಂಖ್ಯೆಯು 50% ದಾಟಿದರೆ, ಇತರ ಸಮುದಾಯಗಳು ಅಳಿಸಿಹೋಗುತ್ತವೆ ಎಂದಿದ್ದಾರೆ. ದಶಕಗಳಿಂದ ನಿಯಂತ್ರಣವಿಲ್ಲದ ವಲಸೆಯಿಂದಾಗಿ ಸ್ಥಳೀಯ ಅಸ್ಸಾಮಿ ಜನಸಂಖ್ಯೆಯು ಅಸ್ತಿತ್ವದ ಬಿಕ್ಕಟ್ಟನ್ನು ಎದುರಿಸುತ್ತಿದೆ. 2021 ರಲ್ಲಿ ಸುಮಾರು 38% ಇದ್ದ ಮುಸ್ಲಿಂ ಜನಸಂಖ್ಯೆಯು, 1961 ರಿಂದ ಸ್ಥಿರವಾದ 4-5% ದಶಕದ ಬೆಳವಣಿಗೆ ದರದಿಂದಾಗಿ 2027 ರ ವೇಳೆಗೆ 40% ತಲುಪಬಹುದು ಎಂದು ಅವರು ಅಂಕಿಅಂಶಗಳನ್ನು ಉಲ್ಲೇಖಿಸಿ ತಿಳಿಸಿದರು. ಮುಸ್ಲಿಂ […]