Flash News

ಗಂಡ ದುಬೈಯಲ್ಲಿ, ಪತ್ನಿ ನಶಾ ಲೋಕದಲ್ಲಿ: ಖಾಕಿ ಬಲೆಗೆ ನಶೆರಾಣಿ ಬಿದ್ದಿದ್ದೇಗೆ?

ತುಮಕೂರು: ಹೊಸವರ್ಷ 2026ಕ್ಕೆ ಕೌಂಟ್​​ಡೌನ್​​ ಶುರುವಾಗಿದೆ. ಇದಕ್ಕೆಂದೇ ಬೆಂಗಳೂರಿನಲ್ಲಿ ಭಾರಿ ತಯಾರಿ ನಡೆದಿದ್ದು, ಸಿಟಿ ಪಾರ್ಟಿ ಹಬ್ ಆಗಿ ಬದಲಾಗುತ್ತಿದೆ. ಈ‌ ನಡುವೆ ಮಾದಕ ಜಗತ್ತಿನ ಚಟುವಟಿಕೆಗಳೂ ಗರಿಗೆದರಿದ್ದು, ಬೆಂಗಳೂರು ಬಿಟ್ಟು ತುಮಕೂರಿನತ್ತ ಒಂದಷ್ಟು ಡ್ರಗ್ ಡೀಲರ್​​ಗಳು ಎಂಟ್ರಿ ಕೊಟ್ಟಿದ್ದಾರೆ. ಮಾಹಿತಿಯ ಆಧಾರದಲ್ಲಿ ಅಲರ್ಟ್​​ ಆಗಿರೋ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಹತ್ತಕ್ಕೂ ಅಧಿಕ ಪೆಡ್ಲರ್​​ಗಳನ್ನು ಲಾಕ್ ಮಾಡಿದ್ದಾರೆ. ತುಮಕೂರು ನಗರ ಪೊಲೀಸರು ಆಯಿಷಾ ಎಂಬ ಮಹಿಳೆ ಸೇರಿ ಆಕೆಯ ಗ್ಯಾಂಗ್​​ ಹೆಡೆಮುರಿ ಕಟ್ಟಿದ್ದು, ಒಂದು ಲಕ್ಷ ಮೌಲ್ಯದ […]

ನಿವೃತ್ತಿಯಿಂದ ಹಿಂದೆ ಸರಿದ ವಿನೇಶ್ ಫೋಗಟ್: 2028ರ ಒಲಿಂಪಿಕ್ಸ್‌ನಲ್ಲಿ ಅಖಾಡಕ್ಕಿಳಿಯುವುದಾಗಿ ಘೋಷಣೆ

ನವದೆಹಲಿ: ಕಳೆದ ವರ್ಷ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 150 ಗ್ರಾಂ ಹೆಚ್ಚುವರಿ ತೂಕದಿಂದ ಪದಕ ವಂಚಿತರಾಗಿದ್ದ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಇದ್ದಕ್ಕಿದ್ದಂತೆ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದರು. ಕೂದಲೆಳೆ ಅಂತರದಲ್ಲಿ ಪದಕ ವಂಚಿತರಾದ ನಿರಾಶೆಯಿಂದ ಈ ಆಘಾತಕ್ಕಾರಿ ನಿರ್ಧಾರ ತೆಗೆದುಕೊಂಡಿರು. ಇದೀಗ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದಿದ್ದು, ಮತ್ತೆ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಹೌದು.. 2028 ರ ಲಾಸ್‌ಏಂಜಲೀಸ್‌ ಒಲಿಂಪಿಕ್ಸ್‌ನತ್ತ ಚಿತ್ತ ಹರಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದಾರೆ ಪ್ಯಾರಿಸ್‌ ಬಳಿಕ ಎಲ್ಲವೂ […]

ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ: ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಪತ್ರ

ನವದೆಹಲಿ: ಕಾಂಗ್ರೆಸ್‌ನಲ್ಲಿ ಎಲ್ಲೆಡೆ ಕೋಲಾಹಲ ಶುರುವಾಗಿದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿ ಅಲುಗಾಡುತ್ತಿದ್ದರೆ, ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುರ್ಚಗೂ ಆಪತ್ತು ಎದುರಾಗಿದೆ. ಇದೀಗ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಬದಲಾವಣೆ ಕೂಗು ಕೇಳಿಬರುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಬದಲು ಪ್ರಿಯಾಂಕಾ ವಾದ್ರಾ ಗಾಂಧಿಯನ್ನು ಕರೆತರಲು ಹೋರಾಟ ಆರಂಭಗೊಂಡಿದೆ. ಕಾಂಗ್ರೆಸ್ ಮುನ್ನಡೆಸಲು ಗಾಂಧಿ ಕುಟುಂಬವೇ ಬೇಕು ಎಂಬ ಜೋರಾದ ಕೂಗು ಕೇಳಿಬಂದಿದೆ. ಈ ಸಂಬಂಧ ಕಾಂಗ್ರೆಸ್ ಮಾಜಿ ಶಾಸಕ ಮೊಹಮ್ಮದ್ ಮೊಖಿಮ್ ಪತ್ರ ಬರೆದಿದ್ದಾರೆ.ಸೋನಿಯಾ ಗಾಂಧಿಗೆ ಪತ್ರ […]

ಬೆಳ್ತಂಗಡಿ | ಅಂಗಡಿಗೆ ಬಂದ ಬಾಲಕಿಗೆ ಲೈಂಗಿಕ ಕಿರುಕುಳ: ಪ್ರಕರಣ ದಾಖಲು

ಬೆಳ್ತಂಗಡಿ: ಅಂಗಡಿಗೆ ಬರುತ್ತಿದ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಅಂಗಡಿ ಮಾಲಕನೊಬ್ಬನ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದೆ. ಟಿಕ್ಕಾ ಮುಹಮ್ಮದ್ ಗೇರುಕಟ್ಟೆ ಎಂಬಾತ ಆರೋಪಿಯಾಗಿದ್ದು, ಆತನ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೊಂದ ಬಾಲಕಿ ಅಂಗಡಿಗೆ ಹೋದಾಗ ಆರೋಪಿಯು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ಆರೋಪಿಸಲಾಗಿದೆ. ಮೂರ್ನಾಲ್ಕು ಬಾರಿ ಇದೇ ರೀತಿ ದೌರ್ಜನ್ಯ ಎಸಗಿರುವ ಆರೋಪಿ, ಈ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಹಾಕಿದ್ದ ಎಂದು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದ ಚಳಿ: ಸಾಂಕ್ರಾಮಿಕ ರೋಗದ ಎಚ್ಚರ ಇರಲಿ

►’ಜಿಲ್ಲೆಯಲ್ಲಿ ಸರಾಸರಿ 2 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಇಳಿಕೆ’ ಮಂಗಳೂರು: ಕರಾವಳಿ ಭಾಗದಲ್ಲಿ ಬೆಳಗ್ಗಿನ ಜಾವ ಚಳಿಯ ಪ್ರಮಾಣದಲ್ಲಿ ಏರಿಕೆ ಉಂಟಾಗುತ್ತಿದೆ. ಇದರಿಂದ ವಾತಾವರಣ ತಂಪಾಗಿದ್ದು, ಸಾಂಕ್ರಾಮಿಕ ರೋಗಬಾಧೆ ಬಗ್ಗೆ ಎಚ್ಚರದಿಂದ ಇರಬೇಕಾದ ಅನಿವಾರ್ಯತೆ ಇದೆ. ಕಳೆದ ಕೆಲವು ದಿನಗಳ ಹಿಂದೆ ಸುರಿದ ಅಕಾಲಿಕ ಮಳೆಯ ಬಳಿಕ ಚಳಿ ಏರಿಕೆಯಾಗಿದ್ದು, ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶದಲ್ಲಿ ಸಾಕಷ್ಟು ಏರಿಳಿತ ಉಂಟಾಗುತ್ತಿದೆ. ಬೆಳಗ್ಗಿನ ಹೊತ್ತು ಬಿಸಿಲು ಕಾಣಿಸಿದ್ದರೂ ಕೂಡ ಮಧ್ಯಾಹ್ನದವರೆಗೆ ವಾತಾವರಣ ಸ್ವಲ್ಪ ಮಟ್ಟಿಗೆ ತಂಪಾಗಿರುತ್ತದೆ. ಬಳಿಕ ತುಸು […]

ಹೈವೇಗಳಲ್ಲಿ ರಾತ್ರಿ ವಾಹನ ಓಡಿಸೋವಾಗ ಎಚ್ಚರವಾಗಿರಿ: ಭಯ ಹುಟ್ಟಿಸುತ್ತೆ ಸರ್ಕಾರಿ ಅಂಕಿ-ಅಂಶಗಳು

►ಹೆದ್ದಾರಿ ದರೋಡೆ ನಿಯಂತ್ರಿಸುವುದೇ ದೊಡ್ಡ ಸವಾಲು ಬೆಂಗಳೂರು: ಹೆದ್ದಾರಿಯಲ್ಲಿ ರಾತ್ರಿ ಪ್ರಯಾಣ ಬಹಳ ಸುರಕ್ಷಿತ. ಘನ ವಾಹನಗಳು ಬಿಟ್ಟರೆ ಯಾವುದೇ ಟ್ರಾಫಿಕ್‌ ಕಿರಿಕಿರಿ ಇಲ್ಲದೇ ಸುಲಭವಾಗಿ ಗಮ್ಯ ಸ್ಥಳಗಳನ್ನು ತಲುಪಬಹುದು ಎನ್ನುವುದು ಹಲವರ ಲೆಕ್ಕಾಚಾರ. ಆದರೆ ರಾಜ್ಯದಲ್ಲಿ ರಾತ್ರಿ ಪ್ರಯಾಣ ಅಪಾಯಕಾರಿ ಎಂಬ ಸ್ಫೋಟಕ ವಿಚಾರ ಸರ್ಕಾರಿ ಅಂಕಿ ಸಂಖ್ಯೆಯಿಂದ ಬಹಿರಂಗವಾಗಿದೆ. ರಾಜ್ಯದಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಯಲ್ಲಿ ಸುಲಿಗೆ, ದರೋಡೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದ್ದರೂ ಸಂಖ್ಯೆ ಮಾತ್ರ ಆತಂಕ ಹುಟ್ಟಿಸಿದೆ. ಕಳೆದ 3 ವರ್ಷಗಳಲ್ಲಿ […]

ಬಂಟ್ವಾಳ | ಅಬ್ದುಲ್‌ ರೆಹಮಾನ್ ಕೊಲೆ ಪ್ರಕರಣ: 14ನೇ ಆರೋಪಿಗೆ ಜಾಮೀನು

ಬಂಟ್ವಾಳ: ಕೊಳತ್ತಮಜಲು ಅಬ್ದುಲ್‌ ರೆಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 14ನೇ ಆರೋಪಿಗೆ ಜಾಮೀನು ಮಂಜೂರಾಗಿದೆ. ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ರವಿ ಸಂಜಯ್ ನನ್ನು ಪೊಲೀಸರು ಬಂಧಿಸಿದ್ದರು. ಇಂದು ನ್ಯಾಯಾಲಯ ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 2 ಲಕ್ಷ ವೈಯಕ್ತಿಕ ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ಜೊತೆ ಹಲವು ಷರತ್ತು ವಿಧಿಸಲಾಗಿದ್ದು, A14 ಆರೋಪಿಯು ಕೇಸ್ ಮುಗಿಯುವ ತನಕ ನಿರಂತರ ಕೋರ್ಟ್‌ಗೆ ಹಾಜರಾಗಬೇಕು, ಅಪರಾಧಗಳಲ್ಲಿ ಭಾಗಿಯಾಗಬಾರದು, ನ್ಯಾಯಾಲಯಕ್ಕೆ ಪಾಸ್‌ಪೋರ್ಟ್ […]

ಶೀಘ್ರವೇ ಪ್ರತ್ಯೇಕ ಸಚಿವಾಲಯ ಸ್ಥಾಪನೆ: NRI ನಿಯೋಗಕ್ಕೆ ಸಿಎಂ ಸಿದ್ದರಾಮಯ್ಯ ಭರವಸೆ

ಬೆಳಗಾವಿ: ಅನಿವಾಸಿ ಕನ್ನಡಿಗರ ಬಹುಕಾಲದ ಅತ್ಯಂತ ಪ್ರಮುಖ ಬೇಡಿಕೆಯಾಗಿರುವ ಪ್ರತ್ಯೇಕ ಸಚಿವಾಲಯವನ್ನು ಶೀಘ್ರವೇ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಖ್ಯಾತ ಅನಿವಾಸಿ ಉದ್ಯಮಿ ಡಾ.ರೋನಾಲ್ಡ್ ಕೊಲಾಸೊ ಅವರ ನೇತೃತ್ವದಲ್ಲಿ ರೂಪುಗೊಂಡ ಹತ್ತಕ್ಕೂ ಹೆಚ್ಚು ದೇಶಗಳ 45 ಮಂದಿ ಕನ್ನಡಿಗ ಪ್ರತಿನಿಧಿಗಳ NRI ನಿಯೋಗವು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಭೇಟಿ ಮಾಡಿ ಅನಿವಾಸಿ ಕನ್ನಡಿಗರ ಸಮಸ್ಯೆ ಹಾಗು ಪ್ರತ್ಯೇಕ ಸಚಿವಾಲಯ-ಇಲಾಖೆಯನ್ನು ಸ್ಥಾಪಿಸುವಂತೆ ಮನವಿ ಸಲ್ಲಿಸಿದ್ದು, […]

ಮಡಿಕೇರಿ | ಮಗು ಸೇರಿ ನಾಲ್ವರನ್ನು ಕೊಚ್ಚಿ ಕೊಂದ ದುರುಳನಿಗೆ ಶಾಕ್​​: ಮರಣ ದಂಡನೆ ಶಿಕ್ಷೆ, ಪ್ರಕರಣ ಏನು?

ಮಡಿಕೇರಿ: ತಾನು ಸಂಬಂಧ ಹೊಂದಿದ್ದ ಮಹಿಳೆ ಮೇಲೆ ಅನುಮಾನ ಮತ್ತು ಕಾಫಿ ಬೆಳೆಯ ಆಸೆಗೆ ಮಗು ಸೇರಿ ನಾಲ್ವರನ್ನು ಬರ್ಬರವಾಗಿ ಕೊಚ್ಚಿ ಕೊಂದಿದ್ದ ಆರೋಪಿಗೆ ವಿರಾಜಪೇಟೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಧೀಶ ಎಸ್. ನಟರಾಜ್, ಇದೊಂದು ಅಪರೂಪದಲ್ಲಿ ಅಪರೂಪದ ಪ್ರಕರಣ ಎಂದು ಪರಿಗಣಿಸಿ ಶಿಕ್ಷೆ ವಿಧಿಸಿದ್ದಾರೆ. ಘಟನೆ ನಡೆದು ಕೇವಲ 9 ತಿಂಗಳಲ್ಲಿ ವಿಚಾರಣೆ ಪೂರ್ಣಗೊಂಡು ಶಿಕ್ಷೆ ಘೋಷಣೆಯಾಗಿರುವುದು ಕೂಡ ಇಲ್ಲಿ ಗಮನಾರ್ಹ. […]

MeToo ನಂತರ ಹೆಚ್ಚಾಯ್ತು ಕಿರುಕುಳ: ಗಾಯಕಿಯ ನಗ್ನ ಫೋಟೋ ವೈರಲ್

ದಕ್ಷಿಣ ಭಾರತದ ಜನಪ್ರಿಯ ಹಿನ್ನೆಲೆ ಗಾಯಕಿ ಮತ್ತು ಉದ್ಯಮಿ ಚಿನ್ಮಯಿ ಶ್ರೀಪಾದ ಅವರಿಗೆ ಯಾರೋ ಮಾರ್ಫ್ ಮಾಡಿದ ನಗ್ನ ಫೋಟೋ ಕಳುಹಿಸಿ ಬೆದರಿಕೆ ಹಾಕುತ್ತಿದ್ದು ಅವರು ಆಘಾತಕ್ಕೊಳಗಾಗಿದ್ದಾರೆ. ಇದಲ್ಲದೆ ದುಷ್ಕರ್ಮಿಗಳು ತಮ್ಮ ಮಕ್ಕಳನ್ನು ಕೊಲ್ಲುವುದಾಗಿಯೂ ಬೆದರಿಕೆ ಹಾಕಿದರು. ಡಿಸೆಂಬರ್ 10ರಂದು ಈ ಘಟನೆ ನಡೆದಿದ್ದು ಈ ವಿಷಯವನ್ನು ಚಿನ್ಮಯಿ ಶ್ರೀಪಾದರು ತಕ್ಷಣವೇ ಹೈದರಾಬಾದ್ ನಗರ ಪೊಲೀಸ್ ಆಯುಕ್ತ ವಿ.ಸಿ. ಸಜ್ಜನರ್ ಅವರ ಗಮನಕ್ಕೆ ತಂದಿದ್ದಾರೆ. ಅಲ್ಲದೇ ತಾವು ಎದುರಿಸುತ್ತಿರುವ ಆನ್‌ಲೈನ್ ನಿಂದನೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾತನಾಡಿದರು. […]