Flash News

ಮಂಗಳೂರು | ಏ.4ಕ್ಕೆ ಇನಾಯತ್ ಅಲಿ ನೇತೃತ್ವದ ಗುರುಪುರ ಕಂಬಳ

ಮಂಗಳೂರು : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ನಡೆಯುವ ಗುರುಪುರ ಕಂಬಳ ಎಂದು ಪ್ರಸಿದ್ಧಿ ಪಡೆದಿರುವ ಮೂಳೂರು-ಅಡ್ಡೂರು ಜೋಡುಕರೆ ಕಂಬಳ ಏಪ್ರಿಲ್ 4 ಶನಿವಾರ ಆರಂಭಗೊಂಡು ಏ.5ರ ಭಾನುವಾರ ತನಕ ನಡೆಯಲಿದೆ. ತೃತೀಯ ವರ್ಷದ ಹೊನಲು ಬೆಳಕಿನ ಗುರುಪುರ ಕಂಬಳದ ಆಮಂತ್ರಣ ಪತ್ರಿಕೆಯನ್ನು ಇಂದು ಮಧ್ಯಾಹ್ನ ನಗರದ ಖಾಸಗಿ ಹೋಟೆಲ್‌ನಲ್ಲಿ ಬಿಡುಗಡೆಗೊಳಿಸಲಾಯಿತು. ಈ ವೇಳೆ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಕಂಬಳ ಸಮಿತಿ ಅಧ್ಯಕ್ಷ ಇನಾಯತ್ ಅಲಿ, ತುಳುನಾಡಿನ ಮಣ್ಣಿಗೂ ಕಂಬಳಕ್ಕೂ ಅವಿನಾಭವ ಸಂಬಂಧ ಇದ್ದು, ನಮ್ಮ […]

ಮಂಜೇಶ್ವರ: SDPI ಅಭ್ಯರ್ಥಿ ಕೆ. ಎಂ ಅಶ್ರಫ್ ನಾಮಪತ್ರ ವಾಪಸ್; ಪಕ್ಷಕ್ಕೆ ರಾಜೀನಾಮೆ, ಕಾರ್ಯಕರ್ತರಲ್ಲಿ ಭುಗಿಲೆದ್ದ ಅಸಮಾಧಾನ

ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸದಿರಲು ಎಸ್‌ಡಿಪಿಐ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಕೆ. ಎಂ ಅಶ್ರಫ್ ತಮ್ಮ ನಾಮಪತ್ರವನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ. ರಾಜ್ಯ ಘಟಕದ ನಿರ್ದೇಶನದ ಮೇರೆಗೆ ತಾವು ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿರುವುದಾಗಿ ಅಶ್ರಫ್ ಸ್ಪಷ್ಟಪಡಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಅಶ್ರಫ್ ಅವರು ಪಕ್ಷದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯತ್ವ ಸೇರಿದಂತೆ ತಮ್ಮ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿದ್ದು, ಅವರು ಜಿಲ್ಲಾಧಿಕಾರಿಗಳ ಕಚೇರಿಗೆ […]

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಓರ್ವ ಆರೋಪಿಗೆ ಜಾಮೀನು

ಮಂಗಳೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ರಿಯಾಜ್ ಎಚ್ . ವೈ ಎಂಬಾತನಿಗೆ ಜಾಮೀನು ಮಂಜೂರಾಗಿದೆ. ಉಚ್ಛ ನ್ಯಾಯಾಲಯ ಜಾಮೀನು ಅರ್ಜಿ ಪುರಸ್ಕರಿಸಿದೆ. ಜುಲೈ 27 ರಂದು ಬೆಳ್ಳಾರೆ ಪೇಟೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು.‌ ಪ್ರಕರಣದಲ್ಲಿ ಒಟ್ಟು ಹತ್ತು ಮಂದಿ ಆರೋಪಿಗಳನ್ನು ರಾಜ್ಯ ಪೊಲೀಸರು ಮತ್ತು ಎನ್ ಐ ಎ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿತ್ತು.‌ ಈ ನಡುವೆ, ಸೆ.28ರಂದು ಪಿಎಫ್ಐ ಸಂಘಟನೆಯನ್ನು ದೇಶಾದ್ಯಂತ ನಿಷೇಧಿಸಲಾಗಿತ್ತು. ‌ಪಿಎಫ್ಐ ನಿಷೇಧ […]

ದಾವಣಗೆರೆ ಫೈಟ್: SDPI ಅಭ್ಯರ್ಥಿ ಪರ ಪ್ರಚಾರ ನಡೆಸಲು ಓವೈಸಿ ಅಖಾಡಕ್ಕೆ!

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಉಪಚುನಾವಣೆ ದಿನದಿಂದ ದಿನಕ್ಕೆ ಕುತೂಹಲಕಾರಿ ತಿರುವುಗಳನ್ನು ಪಡೆಯುತ್ತಿದೆ. ಎಸ್‌ಡಿಪಿಐ (SDPI) ಅಭ್ಯರ್ಥಿ ಪರ ಪ್ರಚಾರ ನಡೆಸಲು ಎಐಎಂಐಎಂ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಆಗಮಿಸುವ ಸಾಧ್ಯತೆ ದಟ್ಟವಾಗಿದ್ದು, ಇದು ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ. ಎಸ್‌ಡಿಪಿಐನಿಂದ ಕಣಕ್ಕಿಳಿದಿರುವ ಅಪ್ಸರ್ ಕೂಡ್ಲಿಪೇಟೆ ಅವರ ಪರವಾಗಿ ಅಸಾದುದ್ದೀನ್ ಓವೈಸಿ ಪ್ರಚಾರಕ್ಕೆ ಬಂದರೆ ಮುಸ್ಲಿಂ ಮತಗಳು ದೊಡ್ಡ ಮಟ್ಟದಲ್ಲಿ ವಿಭಜನೆಯಾಗುವ ಆತಂಕ ಕಾಂಗ್ರೆಸ್ ಪಾಳಯದಲ್ಲಿದೆ. ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಬೆನ್ನಿಗೆ ನಿಲ್ಲುತ್ತಿದ್ದ ಅಲ್ಪಸಂಖ್ಯಾತ ಮತಗಳು ಚದುರಿ ಹೋದರೆ, […]

ಸಜೀಪ‌ | ಮಸೀದಿ‌ ಆಡಳಿತ ವಿಚಾರದಲ್ಲಿ ಎರಡು ತಂಡಗಳ ಮಧ್ಯೆ ಬೀದಿ ಕಾಳಗ, ತಲವಾರು, ದೊಣ್ಣೆ ಹಿಡಿದು ಮಾರಾಮಾರಿ

ಮಂಗಳೂರು: ಸಜಿಪನಡು ಗ್ರಾಮದ ತಲೆಮೊಗರು ಮಸೀದಿಯಲ್ಲಿ ಆಡಳಿತ ವಿಚಾರದಲ್ಲಿ ತಕರಾರು ಏರ್ಪಟ್ಟು ಎರಡು ತಂಡಗಳು ಬೀದಿಯಲ್ಲಿ ಹೊಡೆದಾಡಿಕೊಂಡಿದ್ದು, ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧಿಸಿ ಮೂರು ಪ್ರತ್ಯೇಕ ಪ್ರಕರಣ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.  ಉಳ್ಳಾಲ ಸಜಿಪ ಪಡು ನಿವಾಸಿ ಅಬ್ದುಲ್‌ ನವಾಝ್‌ (42) ಎಂಬವರ ದೂರಿನಂತೆ, ಮಾ.22ರಂದು ಬೆಳಗ್ಗೆ ತಾನು ಮತ್ತು ಸಂಬಂಧಿ ದಾವೂದ್‌ ಜೊತೆಯಲ್ಲಿ ತಲೆಮೊಗರು ಮಸೀದಿಗೆ ಹೋಗಿ ವಾಪಾಸ್ಸು ಬರುತ್ತಿರುವಾಗ  ಸದ್ರಿ ಮಸೀದಿಗೆ ಸಂಬಂಧಿಸಿದ ಕಟ್ಟಡದಲ್ಲಿರುವ ಶೌಕತ್‌ ಎಂಬಾತನ ಅಂಗಡಿಯ ಬಳಿ ಆರೋಪಿತರಾದ […]

ಉಡುಪಿ: ಕ್ರಿಕೆಟಿಗ , ಸಂಘಟಕ ಸಮೀರ್ ಶರೀಫ್ ಅಲ್ಪಕಾಲದ ಅಸೌಖ್ಯದಿಂದ ನಿಧನ

ಕಟಪಾಡಿ: ಕ್ರಿಕೆಟಿಗ , ಸಂಘಟಕ ಉದ್ಯಾವರ ಪಾಂದೆ ನಿವಾಸಿ ಸಮೀರ್ ಶರೀಫ್ (43) ಸೋಮವಾರ ಬೆಳಿಗ್ಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅದ್ಭುತ ಕ್ರಿಕೆಟಿಗ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಉದ್ಯಾವರ ಫ್ರೆಂಡ್ಸ್ ಸರ್ಕಲ್ ಇದರ ಸಕ್ರಿಯ ಸದಸ್ಯ, ಉದ್ಯಾವರ ಮೊಹಿಯುದ್ದೀನ್ ಜುಮ್ಮಾ ಮಸೀದಿ ಜಮಾತಿನ ಸದಸ್ಯ, ಸಮೀ‌ರ್ ಶರೀಫ್‌ ಪಾಂದೆ ದುಬೈಯಲ್ಲಿ ಉದ್ಯೋಗಿಯಾಗಿದ್ದು ದುಬೈ ಕನ್ನಡ ಸಂಘ, ಬ್ಯಾರಿ ಸಂಘಟನೆ ಸಾಹಿತಿ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಸಕ್ರಿಯ ಸದಸ್ಯರಾಗಿ ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಪುತ್ರ, […]

ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿದ ಮುಸ್ಲಿಂ ಸಮುದಾಯ; ದಾವಣಗೆರೆಯಲ್ಲಿ ಹಲವು ಮಂದಿ SDPI ಸೇರ್ಪಡೆ

ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪಸಮರಕ್ಕೂ ಮುನ್ನವೇ ರಾಜಕೀಯ ವಲಯದಲ್ಲಿ ಬಿರುಗಾಳಿ ಎದ್ದಿದೆ. ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ ಪಕ್ಷದಿಂದ ಟಿಕೆಟ್‌ ಸಿಗದ ಹಿನ್ನೆಲೆ ಮುಸ್ಲಿಮ್ ಮುಖಂಡರು, ಯುವನಾಯಕರು ಎಸ್‌ಡಿಪಿಐ, ಬಿಜೆಪಿ ಸೇರ್ಪಡೆಯಾಗಿದ್ದಾರೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಕಡೆಗಣಿಸಿದ್ದಕ್ಕೆ ಮುಸ್ಲಿಂ ಮುಖಂಡರು ಕೆಂಡಾಮಂಡಲವಾಗಿದ್ದಾರೆ. ಈ ಬಾರಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸ್ತೀವಿ ಎಂದು ಎಚ್ಚರಿಕೆ ನೀಡಿರುವ ಮುಖಂಡರು, ಇಂದು ಸಾಮೂಹಿಕವಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ ದಾವಣಗೆರೆ ದಕ್ಷಿಣ ಅಂದ್ರೆ ಅದು ಶಾಮನೂರು ಕುಟುಂಬದ ಸಾಮ್ರಾಜ್ಯ ಎಂಬ ಮಾತಿದೆ. ಇದೇ […]

ಬೆಳ್ತಂಗಡಿ: ಜಾತ್ರೆಗೆ ಬಂದಿದ್ದ ಬಾಲಕನನ್ನು ಅಪಹರಿಸಿ, ಭಯಾನಕ ಹಿಂಸೆ ನಡೆಸಿ ಹಲ್ಲೆ : ಪ್ರಕರಣ ದಾಖಲು

ಬೆಳ್ತಂಗಡಿ: ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಗೆಳೆಯರೊಂದಿಗೆ ಬಂದಿದ್ದ ಅಪ್ರಾಪ್ತ ವಯಸ್ಸಿನ ಮುಸ್ಲಿಂ ಬಾಲಕನ ಮೇಲೆ ಬಜರಂಗ ದಳದ ಕಾರ್ಯಕರ್ತರೆನ್ನಲಾದ ತಂಡವೊಂದು ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆಯ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಬಾಲಕ, ಮಾರ್ಚ್ 11ರಂದು ತನ್ನ ಸ್ನೇಹಿತರೊಂದಿಗೆ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಹೋಗಿದ್ದಾನೆ. ರಾತ್ರಿ 8.30ರ ಸುಮಾರಿಗೆ […]

ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ: ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಸೋಫಿಯಾ ಫಿರ್ದೌಸ್ ಪಕ್ಷದಿಂದಲೇ ಉಚ್ಛಾಟನೆ

ಭುವನೇಶ್ವರ : ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ ಚಲಾಯಿಸಿದ್ದಕ್ಕೆ ಕಾಂಗ್ರೆಸ್ ಶಾಸಕಿ ಸೋಫಿಯಾ ಫಿರ್ದೌಸ್ ಅವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಲಾಗಿದೆ. ವಿಪ್‌ ಜಾರಿ ಮಾಡಿದ್ದರೂ ಅಡ್ಡ ಮತದಾನ ಮಾಡಿದ್ದಕ್ಕೆ ಸೋಫಿಯಾ ಫಿರ್ದೌಸ್ ಜೊತೆ ಸನಾ ಖೇಮುಂಡಿ ಶಾಸಕ ರಮೇಶ್ ಜೆನಾ, ಮೊಹನ್ನಾ ಶಾಸಕ ದಶರತ್ ಗಮಾಂಗೊ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಪಕ್ಷಕ್ಕೆ ದ್ರೋಹ ಮಾಡಿದವರು ರಾಷ್ಟ್ರಕ್ಕೆ ದ್ರೋಹ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಆಕ್ರೋಶ ಹೊರಹಾಕಿದ್ದಾರೆ. ಚುನಾವಣೆಗೆ ಮೊದಲೇ ಸೋಫಿಯಾ ಅವರು ಕಾಂಗ್ರೆಸ್‌ ಪಕ್ಷದ ವಿರುದ್ಧವೇ […]

ಯುಎಇ; ಸಂಕಷ್ಟದ ವೇಳೆ ಪ್ರವಾಸಿಗರಿಗೆ ಆಪತ್ಬಾಂಧವನಾದ ‘ಕನ್ನಡಿಗಾಸ್ ಹೆಲ್ಪ್ ಲೈನ್’

ಹಗಲಿರುಳು ಕಾರ್ಯನಿರ್ವಹಿಸಿದ್ದಕ್ಕೆ ಅನಿವಾಸಿಗಳಿಂದ ಮೆಚ್ಚುಗೆ ದುಬೈ: ಅಮೇರಿಕ-ಇಸ್ರೇಲ್ ಹಾಗು ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧದಿಂದ ಯುಎಇಯಲ್ಲಿ ಸಂಕಷ್ಟಕ್ಕೀಡಾಗಿದ್ದ ಪ್ರವಾಸಿ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸುವ ಜೊತೆಗೆ ವಿಸಿಟ್ ವೀಸಾ ಮೂಲಕ ಉದ್ಯೋಗವನ್ನು ಹರಸಿಬಂದ ಜನರಿಗೆ ವಸತಿ, ಊಟದ ವ್ಯವಸ್ಥೆ ಮಾಡುವ ಮೂಲಕ ‘ಕನ್ನಡಿಗಾಸ್ ಹೆಲ್ಪ್ ಲೈನ್’ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದೆ. ಯುಎಇಯಲ್ಲಿ ಕೊರೋನಾ ಹಾಗು ಪ್ರವಾಹದ ವೇಳೆ ಸಂಕಷ್ಟದಕ್ಕಿದ್ದ ಕನ್ನಡಿಗರಿಗೆ ಸಹಾಯಹಸ್ತ ನೀಡುವ ಉದ್ದೇಶದಿಂದ ಹುಟ್ಟಿಕೊಂಡ ‘ಕನ್ನಡಿಗಾಸ್ ಹೆಲ್ಪ್ ಲೈನ್’, ಈ ಬಾರಿಯ ಯುದ್ಧದಿಂದ ಸಂಕಷ್ಟಕ್ಕೀಡಾದ ಕನ್ನಡಿಗರನ್ನು […]