Flash News

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಹಿರಂಗ ಅಧಿವೇಶನ, ಸಾಧಕರಿಗೆ ಸನ್ಮಾನ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ 29ನೇ ವಾರ್ಷಿಕ ಮಹಾಸಭೆ ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಂಟ್ಸ್ ಹಾಸ್ಟೆಲ್ ಬಳಿಯ ಬಂಟರ ಯಾನೆ ನಾಡವರ ಮಾತೃ ಸಂಘದ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು, ಸುಸಂಸ್ಕೃತ ಸಮಾಜಕ್ಕೆ ಇನ್ನೊಂದು ಹೆಸರೇ ನಮ್ಮ ಬಂಟ ಸಮಾಜ. ಲಕ್ಷ್ಮಿ, ಜ್ಞಾನ ಶಕ್ತಿ, ಕ್ರಿಯಾ ಶಕ್ತಿ ಎಲ್ಲವೂ ಒಗ್ಗೂಡಿದಾಗ ಸಮಾಜದ ಶ್ರೇಯಸ್ಸು ಸಾಧ್ಯ. […]

ದೇವಸ್ಥಾನದ ಗರ್ಭಗುಡಿಯನ್ನು ಪ್ರವೇಶಿಸಲು ನಿರಾಕರಿಸಿದ್ದ ಕ್ರಿಶ್ಚಿಯನ್ ಅಧಿಕಾರಿಯ ವಜಾ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ದೇವಸ್ಥಾನವೊಂದರ ಗರ್ಭಗುಡಿಯನ್ನು ಪ್ರವೇಶಿಸಲು ನಿರಾಕರಿಸಿದ್ದ ಕ್ರಿಶ್ಚಿಯನ್ ಸೇನಾಧಿಕಾರಿಯನ್ನು ವಜಾಗೊಳಿಸಿದ್ದನ್ನು ಮಂಗಳವಾರ ಎತ್ತಿ ಹಿಡಿದಿರುವ ಸರ್ವೋಚ್ಚ ನ್ಯಾಯಾಲಯವು, ಒಂದು ಸಂಸ್ಥೆಯಾಗಿ ಸೇನೆಯು ಜಾತ್ಯತೀತವಾಗಿದೆ ಮತ್ತು ಅದರ ಶಿಸ್ತನ್ನು ಉಲ್ಲಂಘಿಸುವಂತಿಲ್ಲ ಎಂದು ಹೇಳಿದೆ. ಅಶಿಸ್ತಿಗಾಗಿ ಅಧಿಕಾರಿ ಸ್ಯಾಮ್ಯುಯೆಲ್ ಕಮಲೇಶನ್ ಅವರನ್ನು ತೀವ್ರ ತರಾಟೆಗೆತ್ತಿಕೊಂಡ ಸರ್ವೋಚ್ಚ ನ್ಯಾಯಾಲಯವು, ನೀವು ನಿಮ್ಮ ಯೋಧರ ಭಾವನೆಗಳಿಗೆ ನೋವನ್ನುಂಟು ಮಾಡಿದ್ದೀರಿ,ನೀವು ಸೇನೆಯಲ್ಲಿರಲು ಸಂಪೂರ್ಣ ಅನರ್ಹರಾಗಿದ್ದೀರಿ ಎಂದು ಹೇಳಿತು. ಸಿಖ್ ಸ್ಕ್ವಾಡ್ರನ್‌ಗೆ ನಿಯೋಜಿಸಲ್ಪಟ್ಟಿದ್ದ ಕಮಲೇಶನ್ ದೇವಸ್ಥಾನವನ್ನು ಪ್ರವೇಶಿಸುವಂತೆ ಒತ್ತಾಯಿಸುವುದು ತನ್ನ ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಎಂಬ […]

ಅಪರೂಪದ ಕಾಯಿಲೆಯಿಂದ ಬೇಸತ್ತು ದಯಾಮರಣಕ್ಕೆ ಮುಂದಾದ 25 ವರ್ಷದ ಯುವತಿ

ದಕ್ಷಿಣ ಆಸ್ಟ್ರೇಲಿಯಾದ ಅಡಿಲೇಡ್‌ನ ಅನ್ನಾಲೀಸ್ ಹಾಲೆಂಡ್ ಎಂಬ 25 ವರ್ಷದ ಯುವತಿ ಹಲವು ವರ್ಷಗಳಿಂದ ಅಪರೂಪದ ಹಾಗೂ ಗುಣಪಡಿಸಲಾಗದ ನರವೈಜ್ಞಾನಿಕ ರೋಗದಿಂದ ಬಳಲುತ್ತಿದ್ದಾರೆ. ಇದೀಗ ಈ ರೋಗದಿಂದ ಬೇಸತ್ತು ದಯಾಮರಣಕ್ಕೆ ಮುಂದಾಗಿದ್ದಾರೆ. ನ್ಯೂಯಾರ್ಕ್ ಪೋಸ್ಟ್ ಪ್ರಕಾರ, ಅವರಿಗೆ 18ನೇ ವಯಸ್ಸಿನಲ್ಲಿ ಆಟೋಇಮ್ಯೂನ್ ಆಟೋನೊಮಿಕ್ ಗ್ಯಾಂಗ್ಲಿಯೊಪತಿ (AAG) ಇರುವುದು ಪತ್ತೆಯಾಯಿತು. ಈ ಕಾಯಿಲೆ ಇರುವ ಜನರಲ್ಲಿ ರೋಗನಿರೋಧಕ ವ್ಯವಸ್ಥೆಯು ಸರಿಯಾಗಿ ಕೆಲಸ ಮಾಡುವುದಿಲ್ಲ. ಇದು ನರಕೋಶಗಳ ಮೇಲೆ ದಾಳಿಯನ್ನು ಮಾಡಿ. ಹೃದಯ ಬಡಿತ, ರಕ್ತದೊತ್ತಡ ಮತ್ತು ಜೀರ್ಣಕ್ರಿಯೆ ಮೇಲೆ […]

ದತ್ತಪೀಠ ಹಿಂದೂಗಳದ್ದು, ಮೈಸೂರು ಅರಸರು ಸಾವಿರಾರು ಎಕರೆ ದಾನ ನೀಡಿದ ದಾಖಲೆಗಳಿವೆ: ವಿಹೆಚ್‌ಪಿ

ಚಿಕ್ಕಮಗಳೂರು: ಕಳೆದ ಮೂರು ದಶಕಗಳಿಂದ ಚಿಕ್ಕಮಗಳೂರಿನ ದತ್ತಪೀಠದ ಉಮೇದುವಾರಿಕೆಗಾಗಿ ಹೋರಾಡ್ತಿದ್ದ ಹಿಂದೂ ಸಂಘಟನೆಗಳು ಇದೀಗ 1831 ಎಕರೆ ದಾನದ ದಾಖಲೆ ಹಿಡಿದು ದತ್ತಪೀಠ ಹಿಂದೂಗಳದ್ದೇ ಎನ್ನುತಿದ್ದಾರೆ. ಈ ಮಧ್ಯೆ ದತ್ತಪೀಠದ ವಿರುದ್ಧ ಹಾಕಿದ್ದ ಎಲ್ಲಾ ಕೇಸ್‍ಗಳು ವಜಾಗೊಂಡಿದ್ದು ದತ್ತಪೀಠ ಮುಜರಾಯಿ ಸುಪರ್ದಿಗೆ ಬಂದಿದೆ. ಆದರೆ, ಮೂರು ವರ್ಷದ ಹಿಂದೆ ಬಿಜೆಪಿ ಸರ್ಕಾರ ನೇಮಿಸಿದ್ದ ದತ್ತಪೀಠ ವ್ಯವಸ್ಥಾಪನಾ ಸಮಿತಿಯ ಅವಧಿ ಕೂಡ ಮುಗಿದಿದ್ದು, ಹೊಸ ಸಮಿತಿ ರಚಿಸದ ಸರ್ಕಾರ ಎಡಿಸಿಯವರನ್ನ ಆಡಳಿತಾಧಿಕಾರಿಯಾಗಿ ನೇಮಿಸಿದೆ. ಆದರೆ, ಸಮಿತಿ ಸದಸ್ಯರು ಸರ್ಕಾರ […]

ಅಯೋಧ್ಯೆ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದರು. ಮೋದಿ ಅವರು 22 ಅಡಿ ಎತ್ತರದ ಕೇಸರಿ ಧ್ವಜವನ್ನು ಹಾರಿಸಿ, ಸಾಧುಗಳು, ಗಣ್ಯರು ಮತ್ತು ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿದರು. ಪ್ರಧಾನಿಗೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಾಥ್‌ ನೀಡಿದರು. ಧ್ವಜಾರೋಹಣ ಸಮಾರಂಭಕ್ಕೂ ಮುನ್ನ ಪ್ರಧಾನಿ ಮೋದಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ರಾಮ ದರ್ಬಾರ್‌ನಲ್ಲಿ ಪ್ರಾರ್ಥನೆ ಸಲ್ಲಿಸಿದರು. ಗರ್ಭಗುಡಿಯಲ್ಲಿ ಆರತಿ ಬೆಳಗಿದರು. […]

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ಸಂತೋಷ್ ವರ್ಮಾ

ಭೂಪಾಲ್: ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ಆಕೆಯೊಂದಿಗೆ ಆತ ಸಂಬಂಧ ಹೊಂದುವವರೆಗೆ ಮೀಸಲಾತಿ ಮುಂದುವರಿಯಬೇಕು ಎಂದು ಮಧ್ಯಪ್ರದೇಶದ ಹಿರಿಯ ಐಎಎಸ್ ಅಧಿಕಾರಿ ಸಂತೋಷ್ ವರ್ಮಾಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದಾರೆ. ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಸಂಘದ ಸಾಮಾನ್ಯ ಸಭೆ ಭೋಪಾಲ್‌ನ ಅಂಬೇಡ್ಕರ್ ಮೈದಾನದಲ್ಲಿ ಭಾನುವಾರ ನಡೆಯಿತು. ಈ ವೇಳೆ ಮಾತನಾಡಿದ ವರ್ಮಾ, ಬ್ರಾಹ್ಮಣ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಅಥವಾ ನನ್ನ […]

ಬಂಟ್ವಾಳ | ಪೂರ್ವಾನುಮತಿ ಪಡೆಯದೆ ಕಾರ್ಯಕ್ರಮದಲ್ಲಿ ಡಿಜೆ ಬಳಕೆ; ಪ್ರಕರಣ ದಾಖಲು

ಬಂಟ್ವಾಳ: ಭಂಡಾರಿಬೆಟ್ಟು ಎಂಬಲ್ಲಿ ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆಯದೆ ಮದುವೆ ಕಾರ್ಯಕ್ರಮದಲ್ಲಿ ಕರ್ಕಶ ಡಿಜೆ ಬಳಸಿದ್ದಾರೆನ್ನಲಾದ ಘಟನೆ ಶನಿವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಂಡಾರಿಬೆಟ್ಟು ಎಂಬಲ್ಲಿ ನಿಗದಿತ ಪ್ರಮಾಣಕ್ಕಿಂತ ಅಧಿಕವಾಗಿ ಹಾಗೂ ಕರ್ಕಶವಾಗಿ ಸಾರ್ವಜನಿಕ ಶಾಂತಿ ನೆಮ್ಮದಿಗೆ ತೊಂದರೆಯಾಗುವಂತೆ ಧ್ವನಿವರ್ಧಕ ಬಳಸುತ್ತಿರುವ ಬಗ್ಗೆ ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ, ಸದ್ರಿ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮದುವೆ ಕಾರ್ಯಕ್ರಮದಲ್ಲಿ […]

Mangaluru | ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು

ಮಂಗಳೂರು: ರಾ.ಹೆ.75ರ ಅಡ್ಯಾರ್-ವಳಚ್ಚಿಲ್ ಮಧ್ಯೆ ಇರುವ ಸೋಮನಾಥ ಕಟ್ಟೆಯ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಡ್ಯಾರ್ ಕಣ್ಣೂರು ನಿವಾಸಿ ಇಕ್ಬಾಲ್ (42) ಎಂಬವರು ಮೃತರಾಗಿದ್ದಾರೆ. ಇಕ್ಬಾಲ್ ಅವರು ದ್ವಿಚಕ್ರ ವಾಹನದಲ್ಲಿ ವಳಚ್ಚಿಲ್‌ನಿಂದ ಸೋಮನಾಥ ಕಟ್ಟೆ ಬಳಿ ಬರುವಾಗ ಪಂಪ್‌ವೆಲ್‌ನಿಂದ ವಳಚ್ಚಿಲ್‌ನತ್ತ ತೆರಳುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಇಕ್ಬಾಲ್‌ರನ್ನು ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿಕೊಂಡಿರುವ ಸಂಚಾರ ದಕ್ಷಿಣ ಠಾಣೆಯ ಪೊಲೀಸರು […]

ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ 78ನೇ ವರ್ಷದ ಜನ್ಮದಿನದ ಸಂಭ್ರಮ

ಬೆಳ್ತಂಗಡಿ: ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ 78ನೇ ವರ್ಷದ ಜನ್ಮದಿನದ ಸಂಭ್ರಮವು ನ. 25ರಂದು ಕ್ಷೇತ್ರದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಬೆಳಗ್ಗಿನಿಂದಲೇ ಗಣ್ಯರು, ಹೆಗ್ಗಡೆಯವರ ಅಭಿಮಾನಿಗಳು, ಭಕ್ತರು, ಸಂಘ-ಸಂಸ್ಥೆಯವರು, ಕ್ಷೇತ್ರಕ್ಕೆ ಸಂಬಂಧಿಸಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ನೌಕರರು, ಊರ-ಪರವೂರ ನಾಗರಿಕರು, ವರ್ತಕರು ಭೇಟಿ ನೀಡಿ ಗೌರವ ಸಲ್ಲಿಸಲಿದ್ದಾರೆ. ಡಾ| ವೀರೇಂದ್ರ ಹೆಗ್ಗಡೆಯವರು ಧರ್ಮಾಧಿಕಾರಿಗಳಾದ ಬಳಿಕ ಕ್ಷೇತ್ರದ ಚತುರ್ವಿಧ ದಾನ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿರುವ ಜತೆಗೆ ಗ್ರಾಮಾಭಿವೃದ್ಧಿ ಯೋಜನೆ, ಧರ್ಮೋತ್ಥಾನ ಟ್ರಸ್ಟ್‌, […]

ಪ್ರಿಯಕರನಿಗಾಗಿ ಗಂಡನನ್ನು ಕೊಂದು ಡ್ರಮ್​​ನಲ್ಲಿರಿಸಿದ್ದ ಮುಸ್ಕಾನ್​ಗೆ ಹೆಣ್ಣು ಮಗು ಜನನ

ಲಕ್ನೋ: ಪ್ರಿಯಕರನಿಗಾಗಿ ಗಂಡನನ್ನು ಕೊಂದು ಡ್ರಮ್​ನಲ್ಲಿರಿಸಿ ಸಿಮೆಂಟ್​ನಿಂದ ಸೀಲ್​ ಮಾಡಿ ಸಿಕ್ಕಿ ಬಿದ್ದಿದ್ದ ಮಹಿಳೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ. ಕೆಲ ತಿಂಗಳುಗಳ ಹಿಂದೆ ಉತ್ತರ ಪ್ರದೇಶದ ಮೀರತ್​ನಲ್ಲಿ ಗಂಡನನ್ನು ಕೊಲೆ ಮಾಡಿ ಆತನ ದೇಹವನ್ನು ತುಂಡು ತುಂಡು ಮಾಡಿ ಡ್ರಮ್​ನಲ್ಲಿ ತುಂಬಿಸಿ ಜೈಲು ಪಾಲಾಗಿದ್ದ ಆರೋಪಿ ಮುಸ್ಕಾನ್ ರಸ್ತೋಗಿ ಇದೀಗ ಮಗುವಿಗೆ ಜನ್ಮ ನೀಡಿದ್ದಾಳೆ. 27 ವರ್ಷದ ಯುವಕನನ್ನು ಆತನ ಪತ್ನಿ ಮುಸ್ಕಾನ್ ಹಾಗೂ ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ಭೀಕರವಾಗಿ ಕೊಂದಿದ್ದರು. ಬಳಿಕ ದೇಹವನ್ನು ಕತ್ತರಿಸಿ […]