ಮೇಕ್ ಎ ಚೇಂಜ್ ಫೌಂಡೇಶನ್ ಮತ್ತು ನಗರ ಪೊಲೀಸ್ ಸಹಭಾಗಿತ್ವದಲ್ಲಿ ಡಿ. 27ರಂದು ‘ನಶೆ ಮುಕ್ತ’ ಅಭಿಯಾನ

ಮಂಗಳೂರು: ಮೇಕ್ ಎ ಚೇಂಜ್ ಫೌಂಡೇಶನ್ ವತಿಯಿಂದ ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ನಶೆ ಮುಕ್ತ ಮಂಗಳೂರು ಅಭಿಯಾನವನ್ನು ಆಯೋಜಿಸಲಾಗಿದೆ. ಯುವಜನರಲ್ಲಿ ಮಾದಕ ದ್ರವ್ಯಗಳ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಸೃಜನಾತ್ಮಕ ಸಮಾಜ ಕಟ್ಟುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಅಭಿಯಾನವನ್ನು ಡಿ. 27ರಂದು ಟಿಎಂಎ ಪೈ ಇಂಟರ್‌ನ್ಯಾಷನಲ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಮೇಕ್ ಎ ಚೇಂಜ್ ಫೌಂಡೇಶನ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಸುಹೈಲ್ ಕಂದಕ್ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, […]
ಮಂಗಳೂರಿನಲ್ಲಿ ಮತ್ತೆ ಪ್ರತೀಕಾರದ ಪೋಸ್ಟ್: 16 Instagram ಖಾತೆ ವಿರುದ್ಧ FIR

ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಮತ್ತೆ ಪ್ರತೀಕಾರದ ಸಂದೇಶಗಳು ಓಡಾಡುತ್ತಿದ್ದು, Target 900, Team Target Boys, Immu Bai ಇನ್ಸ್ಟಾಗ್ರಾಮ್ ಪೇಜ್ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. Revange Is Loading , Target Set One By One ಎಂಬ ಸಂದೇಶ ಇರುವ ಪೋಸ್ಟ್ ಮಾಡಲಾಗಿದ್ದು, ಕೈಯಲ್ಲಿ ತಲವಾರು ಮತ್ತು ಪಿಸ್ತೂಲ್ ಹಿಡಿದು ಮುಖ ಮರೆಮಾಚಿ ಮಾಡಿರುವ ರೀಲ್ಸ್ ಕೂಡ ಪೋಸ್ಟ್ ಮಾಡಲಾಗಿದೆ. ಇತ್ತೀಚೆಗೆ ಕೇರಳದಲ್ಲಿ ಹತ್ಯೆಯಾದ ರೌಡಿಶೀಟರ್ ನೌಫಾಲ್ ಸಾವಿಗೂ ಪ್ರತೀಕಾರದ […]
ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ ಆಚರಣೆ ಕೂಗು: ‘ಕೈ’ ಶಾಸಕ ಪ್ರಸ್ತಾಪ, ಕಾಂಗ್ರೆಸ್-ಬಿಜೆಪಿ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಈ ವಿಚಾರವನ್ನು ಸದನದಲ್ಲಿ ಸರ್ಕಾರದ ಗಮನಕ್ಕೆ ತರಲು ಶಾಸಕ ವಿಜಯಾನಂದ ಕಾಶಪ್ಪನವರ್ ಮುಂದಾಗಿದ್ದಾರೆ. ಆದರೆ, ಟಿಪ್ಪು ಜಯಂತಿಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಮತ್ತೆ ಟಿಪ್ಪು ಜಯಂತಿಗೆ ಪ್ರಸ್ತಾಪ ವಿಚಾರವನ್ನು ಕಾಶಪ್ಪನವರ್ ಸಮರ್ಥಿಸಿಕೊಂಡಿದ್ದಾರೆ. ಎಲ್ಲಾ ಜಾತಿ, ಜನಾಂಗ ಇರುವ ಜಾತ್ಯತೀತ ರಾಷ್ಟ್ರದಲ್ಲಿ ಯಾಕೆ ವಿರೋಧ? ಅಲ್ಪಸಂಖ್ಯಾತರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ವಾ? ಯಡಿಯೂರಪ್ಪ, ಶೆಟ್ಟರ್ ಟಿಪ್ಪು ವೇಷ ಹಾಕಿರಲಿಲ್ವಾ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಸಚಿವ ಜಮೀರ್ ಅಹ್ಮದ್ […]
ಹೊಸ ವಿಮಾನಯಾನ ಸಂಸ್ಥೆಗಳಿಗೆ ಪರವಾನಗಿ ನೀಡುತ್ತೇವೆ: ಸಚಿವ ರಾಮ್ಮೋಹನ್ ನಾಯ್ಡು

ನವದೆಹಲಿ: ಭಾರತಕ್ಕೆ ಐದಾರು ದೊಡ್ಡ ವಿಮಾನಯಾನ ಸಂಸ್ಥೆಗಳ ಅಗತ್ಯವಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ರಾಜ್ಯಸಭೆಯಲ್ಲಿ ಹೇಳಿದ್ದಾರೆ. ಇಂಡಿಗೋ ಬಿಕ್ಕಟ್ಟಿನ ಕುರಿತು ಮಾತನಾಡಿದ ಅವರು, ಭಾರತೀಯ ವಿಮಾನಯಾನ ಉದ್ಯಮದಲ್ಲಿ ಹೆಚ್ಚುತ್ತಿರುವ ಸಾಮರ್ಥ್ಯ ಮತ್ತು ಬೇಡಿಕೆಯನ್ನು ಪರಿಗಣಿಸಿ ಮುಂದಿನ ದಿನಗಳಲ್ಲಿ ಈ ವಲಯದಲ್ಲಿ ಐದು ದೊಡ್ಡ ವಿಮಾನಯಾನ ಕಂಪನಿಗಳಿಗೆ ಪರವಾನಗಿ ನೀಡಲಾಗುವುದು ಎಂದು ಹೇಳಿದ್ದಾರೆ. ಇಂಡಿಗೋ ಬಿಕ್ಕಟ್ಟಿನ ಬಗ್ಗೆ ಸರ್ಕಾರ ಕಠಿಣ ನಿಲುವು ತೆಗೆದುಕೊಂಡಿದೆ, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿಯೂ ಈ ವಿಷಯವನ್ನು ಬಲವಾಗಿ ಎತ್ತಿದೆ. […]
ಮಂಗಳೂರು | ಯುವಕನ ಕೊಲೆ ಪ್ರಕರಣ: ಆರೋಪಿಯ ಬಂಧನ

ಪಣಂಬೂರು: ಮದ್ಯ ಸೇವನೆಗೆ ಹಣ ನೀಡಿಲ್ಲ ಎಂದು ಜಗಳವಾಡಿರುವುದಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ರವಿವಾರ ತಡರಾತ್ರಿ ಬೈಕಂಪಾಡಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಉತ್ತರ ಪ್ರದೇಶ ಮೂಲದ ನಿವಾಸಿ, ಸದ್ಯ ಬೈಕಂಪಾಡಿಯಲ್ಲಿ ವಾಸವಿರುವ ಸಚಿನ್ ಕುಮಾರ್ ಎಂದು ಗುರುತಿಸಲಾಗಿದೆ. ಮೂಲತಃ ಬೆಳಗಾವಿ ಜಿಲ್ಲೆ, ಪ್ರಸಕ್ತ ಬೈಕಂಪಾಡಿಯ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಪ್ರವೀಣ್ ಶಿವಶಂಕರಪ್ಪ ಕೊಲೆ ಆರೋಪಿ ಎಂದು ತಿಳಿದು ಬಂದಿದೆ. ಸಚಿನ್ ಕುಮಾರ್ ಮತ್ತು ಪ್ರವೀಣ್ ಶಿವಶಂಕರಪ್ಪ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ರವಿವಾರ ಸಚಿನ್ ಮದ್ಯ ಖರೀದಿಸಲೆಂದು […]
‘ಅಹಿಂದ ಕಿಂಗ್ ಸಿದ್ದರಾಮಯ್ಯ’ ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್

ಬೆಂಗಳೂರು: ಕಾಂಗ್ರೆಸ್ ಪಕ್ಷದೊಳಗೆ ‘ಅಹಿಂದ’ (ಅಲ್ಪಸಂಖ್ಯಾತ, ಹಿಂದುಳಿದ ವರ್ಗ ಮತ್ತು ದಲಿತ) ನಾಯಕತ್ವದ ಕುರಿತು ಹೊಸ ಚರ್ಚೆಯೊಂದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರ ಮತ್ತು ವಿರೋಧ ಹೇಳಿಕೆಗಳು ಮುನ್ನೆಲೆಗೆ ಬಂದಿವೆ. ಪ್ರಸ್ತುತ ಸಿದ್ದರಾಮಯ್ಯನವರೇ ಅಹಿಂದ ಸಮುದಾಯದ ನಿರ್ವಿವಾದ ನಾಯಕರಾಗಿರುವಾಗ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಮುಂದಿನ ನಾಯಕ ಎಂದು ಬಿ.ಕೆ. ಹರಿಪ್ರಸಾದ್ ಅವರು ಬೆಂಬಲಿಸಿ ನೀಡಿದ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ […]
ತುಂಬೆ: B.A ವಿದ್ಯಾ ಸಂಸ್ಥೆಗಳ 37ನೇ ವಾರ್ಷಿಕೋತ್ಸವ

ತುಂಬೆ: ಶಾಲೆ ಅಥವಾ ಕಾಲೇಜು ಎನ್ನುವುದು ವಿದ್ಯಾರ್ಥಿಗಳಿಗೆ ಮನೆಯಂತೆ ಇರಬೇಕು. ಆಗ ವಿದ್ಯಾರ್ಥಿಗಳು ಬಹಳ ಉತ್ಸುಕತೆಯಿಂದ ಆತಂಕವಿಲ್ಲದೆ ಕಲಿಯುತ್ತಾರೆ, ಬೆಳೆಯುತ್ತಾರೆ. ಇಂತಹ ಮನೆಯ ವಾತಾವರಣವನ್ನು ಇಂದು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತುಂಬೆಯ ಬಿ.ಎ ಸಂಸ್ಥೆಯು ಒದಗಿಸಿಕೊಟ್ಟಿದೆ ಎಂಬುದಾಗಿ ಪದುವಾ ಕಾಲೇಜಿನ ಪ್ರಾಂಶುಪಾಲ ರೇ. ಫಾ. ಅರುಣ್ ವಿಲ್ಸನ್ ಲೋಬೋ ಅವರು ಹೇಳಿದರು. ಅವರು ತುಂಬೆಯ ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ನ ಪ್ರಾರ್ಥಮಿಕ, ಪ್ರೌಢ ಮತ್ತು ಕಾಲೇಜು ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳು ಹಾಗೂ […]
ಕರ್ನಾಟಕದ ಅರಣ್ಯ ಪ್ರದೇಶಗಳಲ್ಲಿ ಭಾರಿ ಚಿನ್ನದ ನಿಕ್ಷೇಪ ಪತ್ತೆ!

ಬೆಂಗಳೂರು: ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಚಿನ್ನ ಮತ್ತು ಇತರ ಅಪರೂಪದ ಖನಿಜಗಳ ಅಧ್ಯಯನ ಮತ್ತು ಶೋಧನೆ ನಡೆಯುತ್ತಿರುವ 65 ಸ್ಥಳಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಕೊಪ್ಪಳ ಮತ್ತು ರಾಯಚೂರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಮತ್ತು ಲಿಥಿಯಂ ಕಂಡುಬಂದಿದೆ ಎಂದು ಹೇಳಲಾಗಿದೆ. ಆದರೆ ಈ ಪ್ರದೇಶಗಳು ಸಂರಕ್ಷಿತ ಅರಣ್ಯ ವ್ಯಾಪ್ತಿಯಲ್ಲಿ ಬರುವುದರಿಂದ ಖನಿಜಗಳ ಉತ್ಖನನ ಮತ್ತು ವಿವರವಾದ ಸಂಶೋಧನೆ ಸ್ಥಗಿತಗೊಂಡಿದೆ. ರಾಜ್ಯದ ಗಣಿ ಮತ್ತು ಭೂವಿಜ್ಞಾನ ಇಲಾಖೆಯು 57 ಸ್ಥಳಗಳಲ್ಲಿ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ ಮತ್ತು ಎಂಟು […]
ದ್ವೇಷ ಭಾಷಣ ತಡೆಗೆ ಹೊಸ ಕಾನೂನು ತನ್ನನ್ನು ಗುರಿಯಾಗಿಸಿಕೊಂಡೇ ಬರುತ್ತಿದೆ ಎಂದ ಯತ್ನಾಳ್

ವಿಜಯಪುರ: ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಚೋದನಕಾರಿ ಭಾಷಣಗಳನ್ನು ನಿಯಂತ್ರಿಸಲು ಹೊಸ ಕಾನೂನನ್ನು ಜಾರಿಗೆ ತರುವ ಸರ್ಕಾರದ ಚಿಂತನೆ ಕುರಿತು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತೀವ್ರವಾಗಿ ವಿರೋಧಿಸಿದ್ದು, ಆ ಕಾಯ್ದೆ ತನ್ನನ್ನು ಗುರಿಯಾಗಿಸಿಕೊಂಡೇ ಬರುತ್ತಿದೆ ಎಂದು ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್ ಅವರು, ಆ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ. ಹಿಂದೂಗಳ ಪರವಾಗಿ ಯಾರು ಮಾತನಾಡುತ್ತಾರೋ ಅವರನ್ನು ಟಾರ್ಗೆಟ್ ಮಾಡಬೇಕು ಅನ್ನೋದು ಅವರ (ಸರ್ಕಾರದ) ಉದ್ದೇಶ. ಅವರು ವಿಜಯೇಂದ್ರ, ಆರ್ […]
ಮುಸ್ಲಿಮರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ವಂದೇ ಮಾತರಂ ಹಾಡನ್ನು ಒಡೆದು ತುಂಡು ಮಾಡಿತು: ನರೇಂದ್ರ ಮೋದಿ

ನವದೆಹಲಿ: ಮುಸ್ಲಿಮರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ವಂದೇ ಮಾತರಂ ಹಾಡನ್ನು ಒಡೆದು ತುಂಡು ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಸಿಟ್ಟು ಹೊರಹಾಕಿದ್ದಾರೆ. ವಂದೇ ಮಾತರಂ ಹಾಡಿಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಇಂದು ಚರ್ಚೆ ಆರಂಭಿಸಿದ ಮೋದಿ, ವಂದೇ ಮಾತರಂ ವಿರುದ್ಧ ಜಿನ್ನಾ ನಡೆಸಿದ ಪ್ರತಿಭಟನೆಯನ್ನು ನೆಹರು ಬೆಂಬಲಿಸಿದರು. ಕೊನೆಗೆ ಕಾಂಗ್ರೆಸ್ ಮುಸ್ಲಿಂ ಲೀಗ್‌ಗೆ ತಲೆಬಾಗಿ ತುಂಡು ಮಾಡಿದರು ಎಂದು ವಾಗ್ದಾಳಿ ನಡೆಸಿದರು. ವಂದೇ ಮಾತರಂ ವಿರುದ್ಧ ಮುಸ್ಲಿಂ ಲೀಗ್ ನೆಹರು ಅವರಿಗೆ ಪತ್ರ ಬರೆದು ಆಕ್ಷೇಪ […]