Flash News

ರೋಚಕ ಘಟ್ಟ ತಲುಪಿದ ‘ಸಿಎಂ ಬದಲಾವಣೆ’ ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ರೋಚಕ ಘಟ್ಟ ತಲುಪಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಬಲಿತ ಓರ್ವ ಸಚಿವರು ಹಾಗೂ ಕೆಲವು ಶಾಸಕರು ಗುರುವಾರ ದಿಢೀರ್ ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಅಧಿಕಾರ ಹಂಚಿಕೆ ವಿಚಾರ ಕಾಂಗ್ರೆಸ್ ನಲ್ಲಿ ಭುಗಿಲೆದಿದ್ದು, ಡಿಕೆ ಶಿವಕುಮಾರ್ ಪರವಾಗಿರುವ ಶಾಸಕರು ದೆಹಲಿಗೆ ತೆರಳಿದ್ದು, ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ ಎಂದು ಮೂಲಗಳು ಹೇಳಿವೆ. ಇನ್ನೂ ಎರಡೂವರೆ ವರ್ಷಗಳ ಕಾಲ […]

ರಾಜ್ಯದ ವಾಹನ ಸವಾರರಿಗೆ ಭರ್ಜರಿ ಆಫರ್: ಮತ್ತೊಮ್ಮೆ ಟ್ರಾಫಿಕ್ ಫೈನ್ 50% ರಿಯಾಯಿತಿ ಘೋಷಣೆ

ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಮಹತ್ವದ ರಿಯಾಯಿತಿ ಘೋಷಿಸಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿಯಾಗಿರುವ ದಂಡ ಮೊತ್ತದ ಮೇಲೆ 50% ರಿಯಾಯಿತಿ ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ತೀರ್ಮಾನದಿಂದ ಲಕ್ಷಾಂತರ ವಾಹನಚಾಲಕರಿಗೆ ಖುಷಿಯ ಸುದ್ದಿ ಸಿಕ್ಕಿದಂತಾಗಿದೆ ಸರ್ಕಾರದ ಆದೇಶದಂತೆ ನಾಳೆಯಿಂದಲೇ ಅಂದರೆ ಸೆಪ್ಟೆಂಬರ್ 21ದಿಂದಲೇ ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದೆ. ಈ ವಿಶೇಷ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ […]

ಡಾ.ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹುದ್ದೆಯಿಂದ ತೆಗೆದು ಹಾಕಿ: ಶಾಸಕ ಡಾ. ಭರತ್ ಶೆಟ್ಟಿ ಆಗ್ರಹ

ಮಂಗಳೂರು: ಯಕ್ಷಗಾನಕ್ಕೆ ಸಂಬಂಧಪಡದ ಕಾರ್ಯಕ್ರಮವೊಂದರಲ್ಲಿ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಡಾ.ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹುದ್ದೆಯಿಂದ ತೆಗೆದು ಹಾಕಬೇಕು ಮತ್ತು ಅವರ ಮೇಲೆ ಕೇಸ್ ದಾಖಲಿಸಬೇಕು ಎಂದು ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಸರಕಾರವನ್ನು ಆಗ್ರಹಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಿಳಿಮಲೆ ಅವರು ಆಡಿರುವ ಮಾತಿನಿಂದಾಗಿ ಯಕ್ಷಗಾನ ಕಲಾವಿದರಿಗೆ, ಯಕ್ಷಗಾನ ಮೇಳವವರಿಗೆ, ಯಕ್ಷಗಾನ ಅಭಿಮಾನಿಗಳಿಗೆ ಸೇರಿದಂತೆ ಎಲ್ಲರಿಗೂ ನೋವಾಗಿದೆ” ಎಂದರು. […]

ಸುರತ್ಕಲ್ – ಕಾಟಿಪಳ್ಳದಲ್ಲಿ‌ ಮತ್ತೊಂದು ಲಕ್ಕಿ ಸ್ಕೀಮ್ ಲೂಟಿ: ಸಾವಿರಾರು ಜನರಿಗೆ ಟೋಪಿ

ಮಂಗಳೂರು: ಸುರತ್ಕಲ್, ಕಾಟಿಪಳ್ಳ, ಕೃಷ್ಣಾಪುರ ಪರಿಸರದಲ್ಲಿ ಲಕ್ಕಿ ಸ್ಕೀಮ್ ಗಳ ಹಾವಳಿ ಮಿತಿಮೀರಿದ್ದು ಈಗಾಗಲೇ ಕೆಲವರು ಸ್ಕೀಮ್ ಗಳ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಹಣವನ್ನು ಗ್ರಾಹಕರಿಗೆ ಪಂಗನಾಮ ಹಾಕಿ ಎಸ್ಕೇಪ್ ಆಗಿದ್ದಾರೆ. ಇವುಗಳ ಸಾಲಿಗೆ ಹೊಸತಾಗಿ ಬಿಎಂಆರ್ ಗ್ರೂಪ್ ಸೇರ್ಪಡೆಯಾಗಿದ್ದು ಹಣ ಹಿಂತಿರುಗಿಸದ ಹಿನ್ನೆಲೆಯಲ್ಲಿ ಗ್ರಾಹಕರು ಬಿಎಂಆರ್ ಗ್ರೂಪ್ ಕಚೇರಿಗೆ ಮುತ್ತಿಗೆ ಹಾಕಿ ದಾಂಧಲೆಗೈದ ಘಟನೆ ಕೃಷ್ಣಾಪುರದಲ್ಲಿ ನಡೆದಿದೆ. ಬಿಎಂಆರ್ ಗ್ರೂಪಿನ ದಾವೂದ್ ಹಕೀಮ್ ಎಂಬಾತ ಈ ವಂಚನೆ ಎಸಗಿದ್ದು ದುಬಾರಿ ಗಿಫ್ಟ್ ನೀಡುವುದಾಗಿ ಹೇಳಿ 4-5 […]

Chikkamagaluru: ರಸ್ತೆ ಇಲ್ಲದೆ ಪರದಾಟ: ಮೃತದೇಹ ಕೊಂಡೊಯ್ಯಲು ನರಳಾಟ

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಸಂಕ್ಲಾಪುರ ಗ್ರಾಮದ ಜನರು ಸುಮಾರು 40 ವರ್ಷಗಳಿಂದ ನಿತ್ಯ ಸಂಚಾರ ಮಾಡಲು ಸರಿಯಾದ ರಸ್ತೆ ಇಲ್ಲದೇ ಪರದಾಡುವಂತಾಗಿದೆ. ಗ್ರಾಮದ ಸರ್ಫುಲ್ಲಾ (65) ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಅವರ ಮೃತದೇಹವನ್ನು ಮನೆಯಿಂದ ಮಸೀದಿಗೆ ಕೊಂಡೊಯ್ಯಲು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ರಸ್ತೆ ಇಲ್ಲದೆ ನರಳಾಡಬೇಕಾಯಿತು. ಕೊನೆಗೆ, ಗ್ರಾಮಸ್ಥರು ಮೃತದೇಹವನ್ನು ಗುಡ್ಡದ ದಾರಿಯಲ್ಲಿ ಕಷ್ಟಪಟ್ಟು ಹೊತ್ತು ತಂದರು. ಈ ರಸ್ತೆ ಸಮಸ್ಯೆ ಮಲೆನಾಡಿನ ಜನರ ಮೂಲಸೌಕರ್ಯಗಳ ಕೊರತೆಯನ್ನು ಎತ್ತಿ ಹಿಡಿದಿದೆ. ಗುಡ್ಡದ ಮೇಲಿರುವ 20-25 ಮನೆಗಳ ಈ ಗ್ರಾಮವು […]

ಸ್ಪೀಕರ್‌ ಯುಟಿ ಖಾದರ್‌ ಅವರಿಗೆ ʼಸಿಲ್ವರ್ ಎಲಿಫೆಂಟ್ʼ ರಾಷ್ಟ್ರೀಯ ಪ್ರಶಸ್ತಿ

ನವದೆಹಲಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನೀಡುವ ಸಿಲ್ವರ್ ಎಲಿಫೆಂಟ್ ರಾಷ್ಟ್ರೀಯ ಪ್ರಶಸ್ತಿಗೆ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಅವರು ಆಯ್ಕೆಯಾಗಿದ್ದಾರೆ. ಭಾರತ್‌ ಸ್ಕೌಟ್ಸ್ ಮತ್ತು ಗೈಡ್ಸ್ ಗೆ ನೀಡಿದ ಅಸಾಧಾರಣ ಕೊಡುಗೆಯನ್ನು ಗುರುತಿಸಿ ಸ್ಕೌಟ್ಸ್ ಮತ್ತು ಗೈಡ್ಸ್ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಸಿಲ್ವರ್ ಎಲಿಫೆಂಟ್ ಪ್ರಶಸ್ತಿಯನ್ನು ಯುಟಿ ಖಾದರ್ ಅವರಿಗೆ ನೀಡುತ್ತಿದ್ದೇವೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ ಸಮಿತಿಯು ತಿಳಿಸಿದೆ. ನವೆಂಬರ್ 28ರಂದು ಲಕ್ನೋದಲ್ಲಿ ನಡೆಯಲಿರುವ ಭಾರತ್ ಸ್ಕೌಟ್ಸ್ ಮತ್ತು […]

ಬಿಜೆಪಿಯ ರಾಷ್ಟ್ರೀಯತೆಯಿಂದ ಆಕರ್ಷಿತನಾಗಿ ಪಕ್ಷಕ್ಕೆ ಸೇರಿದ್ದೇನೆ: ಮುಸ್ಲಿಂ ಲೀಗ್ ನಾಯಕ ಬಿಜೆಪಿಗೆ ಸೇರ್ಪಡೆ

ಕಣ್ಣೂರು: ಮುಸ್ಲಿಂ ಲೀಗ್ ಸ್ಥಳೀಯ ನಾಯಕ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಲೀಗ್‌ನ ಪಾನೂರು ಪುರಸಭೆ ಸಮಿತಿ ಸದಸ್ಯ ಉಮ್ಮರ್ ಫಾರೂಕ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿಯ ರಾಷ್ಟ್ರೀಯತೆಯಿಂದ ಆಕರ್ಷಿತರಾಗಿ ಅವರು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂಬುದು ವಿವರಣೆ. ಅವರು 40 ವರ್ಷಗಳ ಕಾಲ ಲೀಗ್‌ನ ಕಾರ್ಯಕರ್ತರಾಗಿದ್ದರು. ಪ್ರಸ್ತುತ, ಲೀಗ್ ಸ್ಥಳೀಯ ಮಟ್ಟದ ಪಕ್ಷವಾಗಿದ್ದು, ರಾಷ್ಟ್ರಮಟ್ಟಕ್ಕೆ ಏರಲು ಸಾಧ್ಯವಾಗಿಲ್ಲ. ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡಲು ಸಹ ಸಾಧ್ಯವಾಗುತ್ತಿಲ್ಲ. ಹೆಚ್ಚಿನ ಜನರು ಬಿಜೆಪಿಗೆ ಬರಬೇಕು ಎಂದು ಉಮ್ಮರ್ ಫಾರೂಕ್ ಹೇಳಿದರು. ಬಿಜೆಪಿ ಕಣ್ಣೂರು ದಕ್ಷಿಣ ಜಿಲ್ಲಾ […]

ಬಿಜೆಪಿ ಪಕ್ಷ ʼವೋಟ್ ಚೋರಿʼ ಮಾಡಿ ಅಧಿಕಾರದ ಗದ್ದುಗೆಗೇರಿದೆ: ಇನಾಯತ್ ಅಲಿ

ಸುರತ್ಕಲ್: ಯುವ ಕಾಂಗ್ರೆಸ್ ಮಂಗಳೂರು ಉತ್ತರ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ‌ ನೇತೃತ್ವದಲ್ಲಿ ದಿಲ್ಲಿಯಲ್ಲಿ ಇತ್ತೀಚಿಗೆ ನಡೆದ ವಿಧ್ವಂಸಕ ಕೃತ್ಯ ಮತ್ತು ʼವೋಟ್ ಚೋರಿʼ ವಿರುದ್ಧ ಬೃಹತ್ ಪಂಜಿನ ಮೆರವಣಿಗೆ ಬುಧವಾರ ಸಂಜೆ ಕೃಷ್ಣಾಪುರ ಕ್ರಾಸ್ ನಿಂದ ಸುರತ್ಕಲ್ ಪೇಟೆಯವರೆಗೆ ನಡೆಯಿತು. ಬಳಿಕ ನಡೆದ ಸಭೆಯಲ್ಲಿ ಮಾತಾಡಿದ ಇನಾಯತ್ ಅಲಿ ಅವರು, “ಬಿಜೆಪಿ ಪಕ್ಷ ದೇಶದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ವಾಮಮಾರ್ಗವನ್ನು ಅನುಸರಿಸುತ್ತಿರುವುದು ಖಂಡನೀಯ. ಮತಗಳ್ಳತನ ಈಗಾಗಲೇ ಬಯಲಾಗಿದ್ದು, ಒಂದೇ ಹೆಸರಲ್ಲಿ ಹತ್ತಾರು […]

ರೈಲಿನಲ್ಲಿ ಯುವಕನೋರ್ವ ಖಾಸಗಿ ಭಾಗ ಮುಟ್ಟಿದ್ದ, ತಿರುಗಿ ನೋಡುವಷ್ಟರಲ್ಲಿ..: ಕರಾಳ ಘಟನೆ ತೆರದಿಟ್ಟ ನಟಿ ನಟಿ ಗಿರಿಜಾ ಓಕ್

ಮರಾಠಿ ನಟಿ ಗಿರಿಜಾ ಓಕ್ ಇತ್ತೀಚಿನ ತಮ್ಮ ಸಂದರ್ಶನದ ಮೂಲಕ ಕಳೆದ ಕೆಲವೊಂದು ದಿನಗಳಿಂದ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. ಆಕೆಯ ಸರಳತೆ, ಮಾತನಾಡುವ ಶೈಲಿ ಸಿನಿಮಾಗಳಿಗಿಂತ ಆಕೆಗೆ ಹೆಚ್ಚಿನ ಜನಪ್ರಿಯತೆ ತಂದುಕೊಟ್ಟಿದೆ. ಈಗ ಮತ್ತೆ ಆಕೆಯ ಹೇಳಿಕೆಯೊಂದು ಸುದ್ದಿಯಲ್ಲಿದೆ. ಹಲವು ವರ್ಷಗಳ ಹಿಂದೆ ತಾವು ಲೋಕಲ್ ಟ್ರೈನ್ ನಲ್ಲಿ ಎದುರಿಸಿದ ಕರಾಳ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. ಲಲನ್ ಟಾಪ್ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಗಿರಿಜಾ ಓಕ್, ಸ್ಥಳೀಯ ರೈಲುಗಳಲ್ಲಿ ಜನರು ನಿಮ್ಮನ್ನು ದುರುದ್ದೇಶದಿಂದ ಮುಟ್ಟಿ ಓಡಿಹೋಗುತ್ತಾರೆ, ಉದ್ದೇಶಪೂರ್ವಕವಾಗಿ ನಿಮ್ಮ […]

ಹಾಸನ | ಮನೆಯಲ್ಲಿ ನಗ್ನವಾಗಿ ಒಂಟಿ ಮಹಿಳೆಯ ಶವ ಪತ್ತೆ: ಕೊಲೆ ಶಂಕೆ

ಹಾಸನ: ಬೇಲೂರು ಪಟ್ಟಣದ ಗಾಣಿಗರ ಬೀದಿಯ ಮನೆಯೊಂದರಲ್ಲಿ ನಗ್ನ ಸ್ಥಿತಿಯಲ್ಲಿ ಒಂಟಿ ಮಹಿಳೆಯ ಶವ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಸ್ಪಂದನ (34) ಎಂದು ಗುರುತಿಸಲಾಗಿದೆ. ಮಹಿಳೆ ಪತಿಯಿಂದ ದೂರಾಗಿ 8 ದಿನಗಳ ಹಿಂದೆ ಬೇಲೂರಿನಲ್ಲಿ ಬಾಡಿಗೆ ಮನೆಗೆ ಬಂದು ನೆಲೆಸಿದ್ದಳು. ಎರಡು ದಿನಗಳಿಂದ ಮನೆಯಲ್ಲಿ ಯಾರೂ ಇಲ್ಲದ್ದನ್ನ ಸ್ಥಳೀಯರು ಗಮನಿಸಿದಾಗ ಈ ಪ್ರಕರಣ ಬಯಲಾಗಿದೆ. ಮನೆಯ ಬಾಗಿಲು ತೆರೆದಿದ್ದರೂ ಯಾರ ಸುಳಿವು ಇಲ್ಲದೇ ಇದ್ದಿದ್ದರಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು […]