Flash News

ಪತ್ರಕರ್ತ, ಸಾಮಾಜಿಕ ಕಾರ್ಯಕರ್ತ ಲುಕ್ಮಾನ್ ಅಡ್ಯಾರ್ ಕಾಂಗ್ರೆಸ್ ಸೇರ್ಪಡೆ

ಮಂಗಳೂರು: ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ನೂತನ ಬ್ಲಾಕ್ ಕಚೇರಿಯ ಉದ್ಘಾಟನಾ ಸಂದರ್ಭದಲ್ಲಿ ಪತ್ರಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರಾದ ಲುಕ್ಮಾನ್ ಅಡ್ಯಾರ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಬಂಡಾರಿಯವರು ಶಾಲು ಹೊದಿಸಿ ಲುಕ್ಮಾನ್‌ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಮಾಜಿ ಸಚಿವ ರಮಾನಾಥ್ ರೈ, ಮಾಜಿ ಶಾಸಕರಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್ […]

ಮಂಗಳೂರು | ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಇನಾಯತ್ ಅಲಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ

ಗುರುಪುರ: ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಪದ್ಮನಾಭ ಕೋಟ್ಯಾನ್ ಅವರ ಪದಗ್ರಹಣ ಸಮಾರಂಭ ಹಾಗೂ ನೂತನ ಬ್ಲಾಕ್ ಕಾಂಗ್ರೆಸ್ ಕಚೇರಿಯ ಉದ್ಘಾಟನಾ ಸಮಾರಂಭವು ಕೆಪಿಸಿಸಿ ಪ್ರಧಾನ‌ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಶುಕ್ರವಾರ ಗುರುಪುರ ಕೈಕಂಬದ ಪೊಳಲಿ ಕ್ರಾಸ್ ನ ಜಯಲಕ್ಷ್ಮೀ ಸಂಕೀರ್ಣದ ಬಳಿ ನಡೆಯಿತು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್,‌ ಜನರನ್ನು ದಾರಿ ತಪದಪಿಸುತ್ತಾ ಎದುರಾಳಿ ಬಿಲಿಷ್ಠವಾಗುತ್ತಿದ್ದಾರೆ. ಮುಂದಿನ‌ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ರಾಜ್ಯ ದೇಶದಲ್ಲಿ ಅಧಿಕಾರ […]

Mangaluru | ತಾಯಿಗೆ ಹಲ್ಲೆ ನಡೆಸುತ್ತಿರುವ ಮಗಳು: ವೀಡಿಯೋ ವೈರಲ್

ಮಂಗಳೂರು: ಮಗಳು ತನ್ನ ತಾಯಿಗೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ನಗರ ಹೊರವಲಯದ ಮೂಡುಶೆಡ್ಡೆ ಗ್ರಾ.ಪಂ. ಆವರಣದಲ್ಲಿ ನಡೆದಿದ್ದು, ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಡುಶೆಡ್ಡೆಯ ಶಿವನಗರ ಎಂಬಲ್ಲಿ ತಾಯಿ ಮತ್ತು ಮಗಳು ವಾಸಿಸುತ್ತಿದ್ದು, ಇವರ ಮಧ್ಯೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ತಾಯಿ ಕಾವೂರು ಠಾಣೆಗೆ ತೆರಳಿ ದೂರುತ್ತಿದ್ದರು ಎಂದು ತಿಳಿದು ಬಂದಿದೆ. ಪೊಲೀಸರು ತಾಯಿ ಮತ್ತು ಮಗಳಿಗೆ ಬುದ್ಧಿ ಹೇಳಿ ಕಳುಹಿಸಿಕೊಡುತ್ತಿದ್ದರು ಎನ್ನಲಾಗಿದೆ. ಇತ್ತೀಚೆಗೆ […]

ಕೊಲೆ ಆರೋಪಿ, ಗೂಂಡಾ ಪುನೀತ್ ಕೆರೆಹಳ್ಳಿಗೆ ಪ್ರಶಸ್ತಿ ಪ್ರದಾನ ಮಾಡಿದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ; ವ್ಯಾಪಕ ಆಕ್ರೋಶ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೊಲೆ ಆರೋಪಿ ಹಾಗೂ ಸ್ವಘೋಷಿತ ಗೋರಕ್ಷಕ ಪುನೀತ್ ಕೆರೆಹಳ್ಳಿಗೆ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಸನ್ಮಾನ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮದಲ್ಲಿ ಪುನೀತ್ ಕೆರೆಹಳ್ಳಿ ಸೇರಿದಂತೆ ಹತ್ತು ಮಂದಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದ್ದು, ಅನೇಕ ಗಣ್ಯರು ಹಾಜರಿದ್ದರು. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮತ್ತು ಮಾಜಿ ಲೋಕಾಯುಕ್ತ ಎನ್. ಸಂತೋಷ್ ಹೆಗ್ಡೆ, ಕೇರಳ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್.ಆರ್. ಬನ್ನೂರಮಠ್ ಹಾಗೂ ರಾಜ್ಯದ ಮಾಜಿ ಪೊಲೀಸ್ ಮಹಾನಿರ್ದೇಶಕ ಅಜಯ್ ಕುಮಾರ್ […]

ಯುವತಿ ಗರ್ಭಿಣಿ ಮಾಡಿ ಗರ್ಭಪಾತಕ್ಕೆ ಮಾತ್ರೆ ಕೊಟ್ಟ ಕಾಂಗ್ರೆಸ್ ಶಾಸಕ, ಕೇಸ್ ಬೆನ್ನಲ್ಲೇ ನಾಪತ್ತೆ

ತಿರುವನಂತಪುರಂ: ಹಲವು ಯುವತಿಯರ ಜೊತೆ ಚಾಟಿಂಗ್, ಕೆಲವರ ಜೊತೆ ರಿಲೇಶನ್‌ಶಿಪ್ ಇಟ್ಟುಕೊಂಡಿದ್ದಾರೆ ಅನ್ನೋ ಗಂಭೀರ ಆರೋಪಗಳ ನಡುವೆ ಯುವತಿ ತನಗಾದ ಅನ್ಯಾಯದ ವಿರುದ್ದ ಮಾಡುತ್ತಿರುವ ಸತತ ಹೋರಾಟಕ್ಕೆ ಇದೀಗ ಮೊದಲ ಗೆಲುವು ಸಿಕ್ಕಿದೆ. ಕಾಂಗ್ರೆಸ್ ಶಾಸಕ ತನ್ನನ್ನು ಗರ್ಭಿಣಿ ಮಾಡಿ ಬಳಿಕ ಗರ್ಭಪಾತ ಮಾಡುವಂತೆ ಬೆದರಿಸಿದ್ದಾರೆ ಎಂದು ದೂರು ಹಿಡಿದು ಹೊರಟ ಯುವತಿಗೆ ಸೂಕ್ತ ನೆರವು ಸಿಗಲಿಲ್ಲ. ಮುಖ್ಯಮಂತ್ರಿಗೂ ದೂರು ನೀಡಿದ ಬಳಿಕ ಇದೀಗ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ಶಾಸಕನ ವಿರುದ್ಧ ದೂರು ದಾಖಲಾದ ಘಟನೆ […]

ಕಾರ್ಪೋರೇಟ್ ಕೆಲಸಕ್ಕೆ ಗುಡ್ ಬೈ ಹೇಳಿ ಆಟೋ ಓಡಿಸುವ ಯುವಕ..!

ಬೆಂಗಳೂರು: ಬೆಳಗ್ಗೆಯಿಂದ ಸಂಜೆಯವರೆಗೆ ಆಫೀಸ್ ಕೆಲಸದ ಒತ್ತಡದಿಂದ ಬೇಸತ್ತು ಈ ಕೆಲಸ ತೊರೆಯುವ ಅಂದುಕೊಳ್ತಾರೆ. ಮನಸ್ಸಲ್ಲಿ ಅಂದುಕೊಂಡ್ರು ಗಟ್ಟಿ ಧೈರ್ಯ ಯಾರು ಮಾಡಲ್ಲ.. ಆದರೆ ಬೆಂಗಳೂರಿನ ಕಾರ್ಪೋರೇಟ್ ಉದ್ಯೋಗಿ ಒತ್ತಡದ ಕೆಲಸಕ್ಕೆ ಗುಡ್ ಬೈ ಹೇಳಿದ್ದು, ಜೀವನ ನಿರ್ವಹಣೆಗಾಗಿ ಆರಿಸಿಕೊಂಡದ್ದು ಆಟೋ. ಹೊಸ ಜೀವನೋಪಾಯವನ್ನು ಕಂಡುಕೊಳ್ಳುವ ನಿರ್ಧಾರವನ್ನು ವಿವರಿಸುವ ವಿಡಿಯೋ ಸದ್ಯ ವೈರಲ್ ಆಗಿದೆ. ರಾಕೇಶ್ ಎಂಬ ವ್ಯಕ್ತಿ ಬೆಂಗಳೂರಿನಲ್ಲಿ ಆಟೋ ಓಡಿಸುತ್ತಾ ತಮ್ಮ ಆಯ್ಕೆಯನ್ನು ವಿವರಿಸುವ ವಿಡಿಯೋವನ್ನು @rak.shot ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿ ಕೊಂಡಿದ್ದಾರೆ. […]

ಜೋಡಿಗಳಿಬ್ಬರ ದೈಹಿಕ ಸಂಪರ್ಕದ ವಿಡಿಯೋ ಸೋರಿಕೆ: ಸ್ನೇಹಿತನ ಮೇಲೆ ದೂರಿದ ಜೋಡಿ

ಸೋಶಿಯಲ್​​ ಮೀಡಿಯಾದ ಸೋಗಿನಲ್ಲಿ, ಜೋಡಿಗಳಿಬ್ಬರ ದೈಹಿಕ ಸಂಪರ್ಕದ ವಿಡಿಯೋ ಇನ್ಸ್ಟಾಗ್ರಾಮ್​​ ನಲ್ಲಿ ಸೋರಿಕೆಯಾಗಿದೆ. ಇದೀಗ ಈ ಜೋಡಿಗಳು ಪೇಚಿಗೆ ಸಿಲುಕಿಕೊಂಡಿದ್ದಾರೆ. ಸೋಫಿಕ್ ಎಸ್‌ಕೆ ಮತ್ತು ಡಸ್ತು ಸೋನಾಲಿ ಎಂಬ ಇನ್ಸ್ಟಾಗ್ರಾಮ್​​​ ಕ್ರಿಯೆಟರ್​ ಇದೀಗ ವಿವಾದಕ್ಕೆ ಸಿಲುಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್ ಖಾತೆಗಳಲ್ಲಿ ಈ ವಿಡಿಯೋವನ್ನು ಅವರೇ ಹಂಚಿಕೊಂಡು, ಸ್ನೇಹಿತನ ಮೇಲೆ ದೂರಿದ್ದಾರೆ ಎಂದು ಹೇಳಲಾಗಿದೆ. ಇನ್ಸ್ಟಾಗ್ರಾಮ್​​​ ಕಂಟೆಂಟ್ ಕ್ರಿಯೆಟರ್​ಗಳಾಗಿರುವ ಬಂಗಾಳಿಯ ಸೋಫಿಕ್ ಎಸ್‌ಕೆ ಮತ್ತು ದುಸ್ತು ಸೋನಾಲಿ ಸುಮಾರು ಫಾಲೋವರ್ಸ್​​ಗಳನ್ನು ಹೊಂದಿದ್ದಾರೆ. ಇದರಲ್ಲಿ ಸೋಫಿಕ್ ಎಸ್‌ಕೆ 5 ಲಕ್ಷಕ್ಕೂ ಹೆಚ್ಚು […]

ಉಡುಪಿ | ಕನಕನ ಕಿಂಡಿಯಲ್ಲಿ ಶ್ರೀ ಕೃಷ್ಣನ ದರ್ಶನ ಪಡೆದು 4 ಸಂಕಲ್ಪಕ್ಕೆ ಕರೆ ಕೊಟ್ಟ ಮೋದಿ

ಉಡುಪಿ: ಕನಕದಾಸರಿಗೆ ನಮಿಸುವ ಪುಣ್ಯ ಇಂದು ನನಗೆ ಸಿಕ್ಕಿದೆ. ನನ್ನಂಥ ಎಲ್ಲಾ ಭಕ್ತರಿಗೂ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಆಗುವಂತೆ ಮಾಡಿದ್ದು ಕನಕದಾಸರು. ಭಗವಾನ್ ಕೃಷ್ಣನ ಪ್ರೇರಣೆಯಿಂದಲೇ ಕೆಲವೊಂದು ಸಂಕಲ್ಪ ಮಾಡಲಾಗಿದೆ. ನಮ್ಮ ಮೊದಲ ಸಂಕಲ್ಪ ʻನೀರು ನದಿಯ ರಕ್ಷಿಸೋದುʼ ಆಗಲಿ. ಒಬ್ಬ ಬಡವನ ಉದ್ಧಾರ ಮಾಡಲು ಪ್ರಯತ್ನಿಸೋಣ. ಉತ್ತಮ ಆರೋಗ್ಯ, ಯೋಗ ಸಂಕಲ್ಪ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ಉಡುಪಿ ಲಕ್ಷ ಕಂಠ ಭಗವದ್ಗೀತಾ ಉಡುಪಿ (Udupi) ಕ್ಷೇತ್ರ ಭಕ್ತಿ ಹಾಗೂ […]

ಟಿಪ್ಪು ಸುಲ್ತಾನ್​​ ಇಲ್ಲದಿದ್ದರೆ ಪ್ರತಾಪ್​​ ಸಿಂಹ ಬ್ರಿಟಿಷರ ನಾಯಿ ತೊಳೆಯಬೇಕಿತ್ತು, ಯತ್ನಾಳ್​​ ಒಬ್ಬ ಭಯೋತ್ಪಾದಕ: SDPI ನಾಯಕ

ವಿಜಯಪುರ: ಮಾಜಿ ಸಂಸದ ಪ್ರತಾಪ್​​ ಸಿಂಹ ಮತ್ತು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​​ ವಿರುದ್ಧ SDPI ನಾಯಕ ಮೌಲಾನಾ ನೂರುದ್ದೀನ್ ಹೇಳಿರುವ ವಿಡಿಯೋವೊಂದು ವೈರಲ್​​ ಆಗಿದೆ. ರಾಮನಗರದ ರೈಲ್ವೇ ಸ್ಪೇಷನ್ ಸರ್ಕಲ್ ಬಳಿ ನಡೆದ ಕನ್ನಡ ರಾಜೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮೌಲಾನಾ ನೂರುದ್ದೀನ್, ಮಾಜಿ ಸಂಸದ ಪ್ರತಾಪ್​​ ಸಿಂಹ ವಿರುದ್ಧವೂ ವಾಗ್ದಾಳಿ ನಡೆಸಿದ್ದರು. ಬಸನಗೌಡ ಪಾಟೀಲ್​ ಯತ್ನಾಳ್​​ ಒಬ್ಬ ಭಯೋತ್ಪಾದಕ ಎಂದಿರುವ ಮೌಲಾನಾ ನೂರುದ್ದೀನ್, ಪ್ರತಾಪ್​​ ಸಿಂಹ ಬಗ್ಗೆಯೂ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಅಲ್ಲದೆ, ಟಿಪ್ಪು […]

“ವೈದ್ಯನಾಗುವ ಕನಸು ಕಂಡಿದ್ದೆ, ಇಂದು ‘ಡಾಕ್ಟರೇಟ್’ ಒಲಿದಿದೆ”: ಸ್ಪೀಕರ್ ಯು.ಟಿ. ಖಾದರ್

ಬೆಂಗಳೂರು ವಿವಿಯಿಂದ ಯು‌‌.ಟಿ.ಖಾದರ್‌ ಅವರಿಗೆ ʼಗೌರವ ಡಾಕ್ಟರೇಟ್ʼ ಪ್ರದಾನ ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್‌ ಅವರು ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು “ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಸ್ವೀಕರಿಸಿರುವುದು ಸಾಕಷ್ಟು ಹೆಮ್ಮೆ ಮತ್ತು ಸಂತಸದ ವಿಷಯವಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದ […]